ಪರ್ಕಳ ಹೆದ್ದಾರಿಯಲ್ಲಿ ಕಂಟೇನರ್ ಲಾರಿ ಪಲ್ಟಿ
ಉಡುಪಿ, ಜೂ. 27: ಉಡುಪಿ ಜಿಲ್ಲೆಯ ಪರ್ಕಳದ ಕೆಳಪರ್ಕಳ ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್–169ಎ)ಯ ಕೆನರಾ ಬ್ಯಾಂಕ್ ಸಮೀಪದ ತಿರುವಿನಲ್ಲಿ ಕಂಟೇನರ್ ಲಾರಿಯೊಂದು ಶನಿವಾರ ಬೆಳಗ್ಗೆ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆತ್ರಾಡಿಯಿಂದ ಪೇಪರ್ ಬಾಕ್ಸ್‌ಗಳನ್ನು ತುಂಬಿಕೊಂಡು ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಮಗುಚಿ ಬಿದ್ದಿದೆ. ಅಪಘಾತದ ಪರಿಣಾಮ ಲಾರಿಯಿಂದ ಡೀಸೆಲ್ ಸೋರಿಕೆಯಾಗಿದ್ದು, ತಕ್ಷಣ ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಲಾರಿಯನ್ನು ಮೇಲಕ್ಕೆತ್ತಿದರು. ಪರ್ಕಳದ…
