Headlines

ರಾಮಮಂದಿರ ಅವ್ಯವಹಾರ ಸತ್ಯವಾದರೆ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ: ಪೇಜಾವರ ಶ್ರೀ

ಉಡುಪಿ: ದೇಶ-ವಿದೇಶದ ಕೋಟ್ಯಂತರ ಭಕ್ತರ ಆರಾಧನಾ ಕೇಂದ್ರವಾದ ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಅವ್ಯವಹಾರದಂತಹ ಗಂಭೀರ ಆರೋಪಗಳು ಕೇಳಿಬಂದಿರುವುದು ಅತ್ಯಂತ ದುರದೃಷ್ಟಕರ. ಆರೋಪಗಳು ಸತ್ಯವಾಗಿದ್ದರೆ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ರಾಮಮಂದಿರ ತೀರ್ಥಕ್ಷೇತ್ರ ಟ್ರಸ್ಟ್ ಸದಸ್ಯ ಹಾಗೂ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಒತ್ತಾಯಿಸಿದರು. ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಎಸ್‌ಐಟಿ ತನಿಖೆಯ ಮೇಲೆ ವಿಶ್ವಾಸವಿದ್ದು, ಶೀಘ್ರದಲ್ಲೇ ಸತ್ಯಾಸತ್ಯತೆ ಹೊರಬರಬೇಕು ಎಂದು ಹೇಳಿದರು. 200 ಕೆ.ಜಿ. ಬೆಳ್ಳಿ ದೇಣಿಗೆ ನೀಡಿದರೂ ರಶೀದಿ ನೀಡಿಲ್ಲ…

Read More

ಜುಲೈ 3ರ ದಲಿತ ಜನಾಗ್ರಹ ಸಮಾವೇಶಕ್ಕೆ ಉಡುಪಿಯಿಂದ 500 ಕಾರ್ಯಕರ್ತರು ಭಾಗವಹಣೆ

ಉಡುಪಿ, ಜೂನ್ 27:ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ರಾಜ್ಯ ಸಮಿತಿಯ ಆಶ್ರಯದಲ್ಲಿ ಜುಲೈ 3ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ದಲಿತ ಜನಾಗ್ರಹ ಸಮಾವೇಶ ಆಯೋಜಿಸಲಾಗಿದೆ. ಈ ಸಮಾವೇಶದಲ್ಲಿ ಉಡುಪಿ ಜಿಲ್ಲೆಯಿಂದ ಸುಮಾರು 500 ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ದಸಂಸ ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ತರ್ ತಿಳಿಸಿದ್ದಾರೆ. ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಅವರ ನೇತೃತ್ವದಲ್ಲಿ ನಡೆಯಲಿರುವ ಸಮಾವೇಶದಲ್ಲಿ ದಲಿತ ಸಂಘರ್ಷ…

Read More

ಕಾಂಗ್ರೆಸ್ ಕಚೇರಿ ನನ್ನ ದೇಗುಲ, ಪಕ್ಷವೇ ನನ್ನ ತಾಯಿ: ಪಿ.ವಿ. ಮೋಹನ್

ಮಂಗಳೂರು, : “ಕಾಂಗ್ರೆಸ್ ಕಚೇರಿ ನನ್ನ ದೇಗುಲ. ಪಕ್ಷವೇ ನನ್ನ ತಾಯಿ. ನನಗೆ ಹಾರ-ತುರಾಯಿ ಬೇಡ. ಹೋರಾಟದ ರಾಜಕೀಯದ ಮೂಲಕ ಬೆಳೆದವನಾದ ನಾನು ಸದಾ ನಿಮ್ಮವನಾಗಿರುತ್ತೇನೆ” ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ನೂತನ ವಿಧಾನ ಪರಿಷತ್ ಸದಸ್ಯ ಪಿ.ವಿ. ಮೋಹನ್ ಹೇಳಿದರು. ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ ಅವರನ್ನು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ನಾನು…

Read More

ಮಲ್ಪೆಯಲ್ಲಿ ಎಂಡಿಎಂಎ ಮಾರಾಟ ಆರೋಪ: ಯುವಕನ ಬಂಧನ

ಉಡುಪಿ: ಮಲ್ಪೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದಡಿ 19 ವರ್ಷದ ಯುವಕನನ್ನು ಮಲ್ಪೆ ಪೊಲೀಸರು ಬಂಧಿಸಿದ್ದು, ₹1.52 ಲಕ್ಷ ಮೌಲ್ಯದ ಮಾದಕ ವಸ್ತು, ಸ್ಕೂಟರ್ ಹಾಗೂ ಇತರೆ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತನನ್ನು ಬ್ರಹ್ಮಾವರದ ಸ್ವರ್ಣ ರೆಸಿಡೆನ್ಸಿ ನಿವಾಸಿ, ಮೂಲತಃ ಶಿರೂರಿನ ಸೈಯ್ಯದ್ ಮೊಹಮ್ಮದ್ ಮೆಹರಾಜ್ (19) ಎಂದು ಗುರುತಿಸಲಾಗಿದೆ. ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಬೆಳ್ಳಿಯಪ್ಪ ಕೆ.ಯು. ಹಾಗೂ ಮಲ್ಪೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ನೇತೃತ್ವದ ತಂಡವು…

Read More

ಕಾಸರಗೋಡಿನ ಡಾ. ವಾಮನ್ ರಾವ್ ಬೇಕಲ್ ದಂಪತಿಗೆ ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ

ಬೆಂಗಳೂರು: ನಗರದ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕ ಮಹಾದೇವಿ ಸಭಾಂಗಣದಲ್ಲಿ ನಡೆದ ಅಖಿಲ ಕರ್ನಾಟಕ ಶಿಕ್ಷಕರ ಸಮ್ಮೇಳನದಲ್ಲಿ ಗಡಿನಾಡು ಕಾಸರಗೋಡಿನ ಕನ್ನಡ ಭವನದ ಖ್ಯಾತಿಯ ಡಾ. ವಾಮನ್ ರಾವ್ ಬೇಕಲ್ ಹಾಗೂ ಸಂದ್ಯಾರಾಣಿ ಟೀಚರ್ ದಂಪತಿಗಳಿಗೆ “ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ” ಪ್ರದಾನ ಮಾಡಿ ಗೌರವಿಸಲಾಯಿತು. ಆರ್ಯಭಟ ಚಾರಿಟೇಬಲ್ ಟ್ರಸ್ಟ್, ಬೆಳಗಾವಿ (ಮುಂಬೈ ಪ್ರಾಂತ್ಯ) ಹಾಗೂ ಚೇತನ ಫೌಂಡೇಶನ್ ಸಂಯುಕ್ತ ಆಶ್ರಯದಲ್ಲಿ ನಡೆದ ಸಮಾರಂಭದಲ್ಲಿ, ಶಿಕ್ಷಣ, ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ನೀಡಿದ ಅಮೂಲ್ಯ ಸೇವೆಯನ್ನು ಪರಿಗಣಿಸಿ…

Read More

ತೈಲ ಬೆಲೆ ಏರಿಕೆಯಿಂದ ಆಟೋ ಚಾಲಕರ ಜೀವನ ಸಂಕಷ್ಟ: ಕನಿಷ್ಠ ದರ ₹50 ಹಾಗೂ ಪ್ರತಿ ಕಿ.ಮೀ.ಗೆ ₹30 ನಿಗದಿಪಡಿಸಲು ಎಸ್.ಡಿ.ಟಿ.ಯು ಆಗ್ರಹ

ಮಂಗಳೂರು,: ಪೆಟ್ರೋಲ್, ಡೀಸೆಲ್ ಸೇರಿದಂತೆ ಇಂಧನದ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿರುವುದರಿಂದ ಆಟೋ ರಿಕ್ಷಾ ಚಾಲಕರ ಜೀವನ ತೀವ್ರ ಸಂಕಷ್ಟಕ್ಕೆ ಸಿಲುಕಿದೆ ಎಂದು ಎಸ್.ಡಿ.ಟಿ.ಯು ಮಂಗಳೂರು ನಗರ ಜಿಲ್ಲಾಧ್ಯಕ್ಷ ರಹಿಮಾನ್ ಬೋಳಿಯಾರ್ ಆತಂಕ ವ್ಯಕ್ತಪಡಿಸಿದ್ದಾರೆ. ಇಂಧನ ಬೆಲೆ ಏರಿಕೆಯೊಂದಿಗೆ ವಾಹನಗಳ ನಿರ್ವಹಣೆ, ಬಿಡಿಭಾಗಗಳ ವೆಚ್ಚ, ವಿಮೆ, ಪರವಾನಗಿ ಶುಲ್ಕ ಸೇರಿದಂತೆ ಎಲ್ಲಾ ಖರ್ಚುಗಳು ಗಣನೀಯವಾಗಿ ಹೆಚ್ಚಾಗಿವೆ. ಆದರೆ ಹಲವು ವರ್ಷಗಳಿಂದ ಮಂಗಳೂರಿನ ಆಟೋ ರಿಕ್ಷಾ ದರವನ್ನು ಪರಿಷ್ಕರಿಸದಿರುವುದರಿಂದ ಚಾಲಕರು ತಮ್ಮ ಕುಟುಂಬದ ನಿರ್ವಹಣೆಯನ್ನೇ ಕಷ್ಟದಿಂದ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ….

Read More

ಟ್ವಿಟ್ಟರ್‌ನಲ್ಲಿ ಟ್ರೆಂಡ್ ಆಗುತ್ತಿರುವ ‘NRIMinistry’ ಅಭಿಯಾನ: ವಿದೇಶದಲ್ಲಿರುವ ಕರ್ನಾಟಕ ಭಾರತೀಯರ ಬೇಡಿಕೆಗಳಿಗೆ ಹೆಚ್ಚಿದ ಧ್ವನಿ

ಸೌದಿ ಅರೇಬಿಯಾ: ಸಾಮಾಜಿಕ ಜಾಲತಾಣ ಎಕ್ಸ್ (ಹಳೆಯ ಟ್ವಿಟ್ಟರ್) ನಲ್ಲಿ ‘NRIMinistry’ಕ್ಕೆ ಸಂಬಂಧಿಸಿದ ಅಭಿಯಾನವು ಭಾರತದಲ್ಲಿ, ಗಲ್ಫ್ ನಲ್ಲಿ ನಂಬರ್ ಒನ್ ಟ್ರೆಂಡಿಂಗ್ ಆಗಿ ಎಲ್ಲರ ಗಮನ ಸೆಳೆದಿದೆ. ವಿದೇಶದಲ್ಲಿ ವಾಸಿಸುವ ಕರ್ನಾಟಕ ಭಾರತೀಯರ ಸಮಸ್ಯೆಗಳನ್ನು ಒಂದೇ ವೇದಿಕೆಯಡಿ ಪರಿಹರಿಸಲು ಪ್ರತ್ಯೇಕ ಸಚಿವಾಲಯ ಅಥವಾ ವಿಶೇಷ ವಿಭಾಗವನ್ನು ರಚಿಸಬೇಕು ಎಂಬ ಬೇಡಿಕೆ ಹಲವು ವಲಯಗಳಿಂದ ಕೇಳಿಬರುತ್ತಿದೆ. ಅಭಿಯಾನದ ಸಭೆ ದಮ್ಮಾಮ್ ನ ರಾಯಲ್ ಮಲಬಾರ್ ಹೋಟೆಲ್ ನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತಾಡಿದ ಉಪಾಧ್ಯಕ್ಷರಾದ ಸತೀಶ್ ಕುಮಾರ್…

Read More

ಲಹರಿಮುಕ್ತ ಸಮಾಜಕ್ಕಾಗಿ ಮಂಜೇಶ್ವರದಲ್ಲಿ ‘ತೂಫಾನ್’: ಭವ್ಯ ಜನಜಾಗೃತಿ ಜಾಥಾ

​ಮಂಜೇಶ್ವರ: ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನದ ಅಂಗವಾಗಿ, ಲಹರಿಮುಕ್ತ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ ಮಂಜೇಶ್ವರ ಪೊಲೀಸ್ ಠಾಣೆ ಮತ್ತು ವ್ಯಾಪಾರಿ ಏಕೋಪನ ಸಮಿತಿಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ‘ತೂಫಾನ್: ದಿ ನಾರ್ಕೋ ಹಂಟ್’ ಅಭಿಯಾನವು ಅತ್ಯಂತ ಯಶಸ್ವಿಯಾಗಿ ನಡೆಯಿತು. ​ಉಪ್ಪಳದಿಂದ ತಲಪಾಡಿಯವರೆಗೆ ನಡೆದ ಬೃಹತ್ ಲಹರಿವಿರೋಧಿ ಜಾಗೃತಿ ಜಾಥಾಗೆ ಕಾಸರಗೋಡು ಎಎಸ್‌ಪಿ ಅಚ್ಯುತ್ ಅಶೋಕ್ ಐಪಿಎಸ್ ನೇತೃತ್ವ ವಹಿಸಿದ್ದರು. ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ​ಮಧ್ಯಾಹ್ನ 3 ಗಂಟೆಗೆ ಆರಂಭವಾದ ಈ ಜಾಥಾದಲ್ಲಿ…

Read More

ಗುರುವಪ್ಪ ಬಾಳೆಪುಣಿ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ-ಆರ್ಥಿಕ ನೆರವು ವಿತರಣೆ

ಮಂಗಳೂರು6: ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೆಪುಣಿ ಅವರು ಶಾಲಾ ದಿನಗಳಿಂದಲೇ ನಾಯಕತ್ವ ಗುಣಗಳನ್ನು ಬೆಳೆಸಿಕೊಂಡಿದ್ದು, ಪತ್ರಕರ್ತರಾಗಿಯೂ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಅವರ ಹೆಸರಿನಲ್ಲಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವು ನೀಡುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ನರಿಂಗಾನ ಕಂಬಳ ಸಮಿತಿ ಕಾರ್ಯಾಧ್ಯಕ್ಷ ಪ್ರಶಾಂತ್ ಹೇಳಿದರು. ನಗರದ ಪ್ರೆಸ್ ಕ್ಲಬ್‌ನಲ್ಲಿ ಎಜುಕಾರುಣ್ಯ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್, ಮಂಗಳೂರು ವತಿಯಿಂದ ಹಮ್ಮಿಕೊಂಡಿದ್ದ ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೆಪುಣಿ ಅವರ ಸ್ಮರಣಾರ್ಥ ದತ್ತಿನಿಧಿ ಹಸ್ತಾಂತರ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು…

Read More

ವಾಮದಪದವಿನಲ್ಲಿ 2076ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ

ಬಂಟ್ವಾಳ: ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ, ವಾಮದಪದವು ಬಂಟ್ವಾಳ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಪರಮಪೂಜ್ಯ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮತ್ತು ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ) ಬಂಟ್ವಾಳ ತಾಲೂಕು,ಅಖಿಲ್ಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್‌(ರಿ) ಬೆಳ್ತಂಗಡಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್‌(ರಿ.) ಬಂಟ್ವಾಳ ತಾಲೂಕು.ಪ್ರಗತಿಬಂಧು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟ ಬಂಟ್ವಾಳ,…

Read More
error: Content is protected !!