ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
ಮೆಸ್ಕಾಂ ವ್ಯಾಪ್ತಿಯಲ್ಲಿ ಸಮಾನಾಂತರ ವಿದ್ಯುತ್ ಪರವಾನಿಗೆಗಾಗಿ ಟಾಟಾ ಪವರ್ ಕಾರ್ಪೊರೇಷನ್ ಸಲ್ಲಿಸಿರುವ ಅರ್ಜಿಯನ್ನು ರದ್ದುಪಡಿಸಲು ಹಾಗೂ ವಿದ್ಯುತ್ ಕ್ಷೇತ್ರದ ಖಾಸಗೀಕರಣ ತಡೆಗಟ್ಟಲು ಕೋರಿ ವಿದ್ಯುತ್ ನೌಕರರ ಒಕ್ಕೂಟದ ಪದಾಧಿಕಾರಿಗಳು ಮಂಗಳೂರು ನಗರ ದಕ್ಷಿಣದ ಶಾಸಕ ಡಿ. ವೇದವ್ಯಾಸ ಕಾಮತ್ ರಿಗೆ ಮನವಿ ಸಲ್ಲಿಸಿದರು. ಟಾಟಾ ಪವರ್ ಕಾರ್ಪೋರೇಷನ್ ಲಿಮಿಟೆಡ್ ಸಂಸ್ಥೆಯು ಮೆಸ್ಕಾಂ ವ್ಯಾಪ್ತಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳ ಮಹಾನಗರ ಪಾಲಿಕೆ, ನಗರಸಭೆಗಳಲ್ಲಿ ಸಮಾನಾಂತರ ವಿದ್ಯುತ್ ವಿತರಣಾ ಪರವಾನಿಗೆಗಾಗಿ ಅರ್ಜಿ ಸಲ್ಲಿಸಿದ್ದು, ನಗರವನ್ನು ಕೇಂದ್ರವಾಗಿಟ್ಟುಕೊಂಡು…
