SIR ಪ್ರಕ್ರಿಯೆಯಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ಸುಮ್ಮನಿರಲ್ಲ: ಬ್ರಿಜೇಶ್ ಚೌಟ
ಮಂಗಳೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಕಾರ್ಯದಲ್ಲಿ ತೊಡಗಿರುವ ಬಿಜೆಪಿ ಕಾರ್ಯಕರ್ತರನ್ನು ಬೆದರಿಸುವುದು ಅಥವಾ ಕಿರುಕುಳ ನೀಡುವುದು ಕಂಡು ಬಂದರೆ ಸಹಿಸುವುದಿಲ್ಲ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಎಚ್ಚರಿಕೆ ನೀಡಿದ್ದಾರೆ.ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿ ಶುದ್ಧೀಕರಣವು ಚುನಾವಣಾ ಆಯೋಗದ ನಿಯಮಾನುಸಾರ ನಡೆಯುವ ಪ್ರಕ್ರಿಯೆ. ಈ ಕಾರ್ಯದಲ್ಲಿ ತೊಡಗಿರುವ ಕಾರ್ಯಕರ್ತರಿಗೆ ಯಾವುದೇ ರೀತಿಯ ಒತ್ತಡ ಅಥವಾ ಬೆದರಿಕೆ ಹಾಕುವ ಪ್ರಯತ್ನ ನಡೆದರೆ ಅದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಹೇಳಿದರು….
