Headlines

ಎಡಪಂಥೀಯ ವಿಚಾರಧಾರೆಯಿಂದ ಮಾತ್ರವೇ ಕೋಮುವಾದವನ್ನು ಸೋಲಿಸಲು ಸಾಧ್ಯ – ಸುನಿಲ್ ಕುಮಾರ್ ಬಜಾಲ್

ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದ ಭವ್ಯ ಭಾರತದ ಸೌಹಾರ್ದ ಪರಂಪರೆಗೆ ಕೊಳ್ಳಿ ಇಟ್ಟ ಕೋಮುವಾದ ಇಂದು ತನ್ನ ವಿರಾಟ್ ಸ್ವರೂಪವನ್ನು ತೋರಿಸುತ್ತಿದೆ.ದೇಶದ ಸಂವಿಧಾನವನ್ನೇ ಬುಡಮೇಲುಗೊಳಿಸಲು ಹವಣಿಸುತ್ತಿದೆ.ಅಂತಹ ಕೋಮುವಾದವನ್ನು ಸೋಲಿಸಿ ದೇಶದ ಜಾತ್ಯಾತೀತತೆಯನ್ನು ಹಾಗೂ ಜನತೆಯ ಬದುಕನ್ನು ರಕ್ಷಿಸಲು ಎಡಪಂಥೀಯ ವಿಚಾರಧಾರೆಯಿಂದ ಮಾತ್ರವೇ ಸಾಧ್ಯ.ಇದಕ್ಕೆ ಸಾಕ್ಷಿ ಎಂಬಂತೆ ಎರಡನೆಯ ಮಹಾಯುದ್ಧದ ಸಂದರ್ಭದಲ್ಲಿ ರಷ್ಯಾದ ಕೆಂಪು ಸೇನೆ ಫ್ಯಾಸಿಸ್ಟರ ಮೇಲೆ ವಿಜಯ ಸಾಧಿಸಿ ಜಗತ್ತನ್ನು ರಕ್ಷಿಸಿದ ಪರಿಯನ್ನು ಮತ್ತೆ ನೆನಪಿಸಬೇಕಾಗಿದೆ ಎಂದು DYFI ಮಾಜಿ ರಾಜ್ಯಾಧ್ಯಕ್ಷರಾದ ಸುನಿಲ್ ಕುಮಾರ್ ಬಜಾಲ್…

Read More

ವಾಚನ ವಾರಾಚರಣೆ: ಪುಸ್ತಕಗಳೊಂದಿಗೆ ವಿದ್ಯಾರ್ಥಿಗಳ ಸಂವಾದ

ಕಾಸರಗೋಡು: ಪುಸ್ತಕ ಜ್ಞಾನವು ವ್ಯಕ್ತಿಯ ವಿಕಾಸಕ್ಕೆ ಪೂರಕವಾಗಿದ್ದು, ಯಶಸ್ವಿ ಜೀವನದ ಹಾದಿಯನ್ನು ತೋರಿಸುತ್ತದೆ ಎಂದು ಕನ್ನಡ ಭವನ ಗ್ರಂಥಾಲಯದ ಸ್ಥಾಪಕ ಡಾ. ವಾಮನ್ ರಾವ್ ಬೇಕಲ್ ಹೇಳಿದರು. ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯದಲ್ಲಿ ವಾಚನ ವಾರಾಚರಣೆ ಅಂಗವಾಗಿ ನಗರದ ಭಾಲಭವನ್ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ “ವಿದ್ಯಾರ್ಥಿಗಳಿಗೆ ಪುಸ್ತಕಗಳೊಂದಿಗೆ ಸಂವಾದ” ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಓದಿನಿಂದ ಮನಸ್ಸಿಗೆ ಸಂತೋಷ, ಸಮಾಧಾನ ಹಾಗೂ ವಿಷಯಗಳ ಅರಿವು ಮೂಡುತ್ತದೆ. ಲೋಕಾನುಭವವನ್ನು ಹೆಚ್ಚಿಸುವ ಓದುವ…

Read More

ಪುಂಜಾಲಕಟ್ಟೆ: ಹಿರಿಯ ಕಾಂಗ್ರೆಸ್ ಕಾರ್ಯಕರ್ತರಾಜೇಂದ್ರ ಕೆ.ವಿ.ಇನ್ನಿಲ್ಲ

ಬಂಟ್ವಾಳ: ಹಿರಿಯ ಕಾಂಗ್ರೆಸ್ ಕಾರ್ಯಕರ್ತ, ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ದೈಕಿನಕಟ್ಟೆ ನಿವಾಸಿ ರಾಜೇಂದ್ರ ಕೆ.ವಿ.(64) ಅವರು ಅಸೌಖ್ಯದಿಂದ ಮಂಗಳೂರು ಆಸ್ಪತ್ರೆಯಲ್ಲಿ ಜೂ.23ರಂದು ನಿಧನ ಹೊಂದಿದರು. ಮೃತರು ತಾಯಿ, ಪತ್ನಿ, ಪುತ್ರನನ್ನು ಅಗಲಿದ್ದಾರೆ. ರಾಜೇಂದ್ರ ಅವರು ಮಂಗಳೂರು ಪಣಂಬೂರು ನವಬಂದರು ಮಝ್‌ಗಾಂವ್ ಡಾಕ್ ಲಿಮಿಟೆಡ್ ಸಂಸ್ಥೆಯ ನಿವೃತ್ತ ಉದ್ಯೋಗಿಯಾಗಿದ್ದು, ಬಳಿಕ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ಮಾರುಕಟ್ಟೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದರು. ಕಲೆ, ಸಾಂಸ್ಕೃತಿಕ, ಸಾಮಾಜಿಕ, ರಾಜಕೀಯ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದ ಅವರು,…

Read More

ವಿಟ್ಲ ತಾಲೂಕು ಹಾಗೂ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಜನಜಾಗೃತಿ ಜಾಥಾ

ವಿಟ್ಲ, ಜೂ.23: ವಿಟ್ಲವನ್ನು ತಾಲೂಕು ಕೇಂದ್ರವನ್ನಾಗಿ ಘೋಷಿಸಬೇಕು ಹಾಗೂ ಹಿಂದಿನ ವಿಟ್ಲ ವಿಧಾನಸಭಾ ಕ್ಷೇತ್ರವನ್ನು ಮರುಸ್ಥಾಪಿಸಬೇಕು ಎಂಬ ಬೇಡಿಕೆಗೆ ಜನಬೆಂಬಲ ಒಗ್ಗೂಡಿಸುವ ಉದ್ದೇಶದಿಂದ ವಿಟ್ಲ ತಾಲೂಕು ಹಾಗೂ ವಿಟ್ಲ ವಿಧಾನಸಭಾ ಕ್ಷೇತ್ರ ಮರುಸ್ಥಾಪನಾ ಸಮಿತಿಯ ವತಿಯಿಂದ ಸೋಮವಾರ ಜೈನ ಬಸದಿಯಿಂದ ನಾಡಕಚೇರಿವರೆಗೆ ಸಾಂಕೇತಿಕ ಜಾಥಾ ನಡೆಯಿತು. ಈ ವೇಳೆ ಮಾತನಾಡಿದ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮಾನಾಥ ವಿಟ್ಲ, ವಿಟ್ಲ ತಾಲೂಕು ರಚನೆಗೆ ಸುಮಾರು 60 ವರ್ಷಗಳ ಹಿಂದಿನಿಂದಲೂ ಬೇಡಿಕೆ ಇದ್ದರೂ ಇದುವರೆಗೆ ಅದು ಈಡೇರಿಲ್ಲ ಎಂದು ಹೇಳಿದರು….

Read More

ಎಸ್‌ಐಆರ್ ಮೂಲಕ ನೈಜ ಮತದಾರರನ್ನು ಕೈಬಿಡುವ ಪ್ರಯತ್ನ: ಬಿಜೆಪಿ ವಿರುದ್ಧ ಹರಿಪ್ರಸಾದ್ ಆರೋಪ

ಮಂಗಳೂರು: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಬಿಜೆಪಿ ಹಾಗೂ ಆರ್‌ಎಸ್‌ಎಸ್ ನೈಜ ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಡಲು ಪ್ರಯತ್ನಿಸುತ್ತಿವೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಆರೋಪಿಸಿದರು. ನಗರದಲ್ಲಿ ನಡೆದ ಎಸ್‌ಐಆರ್ ಜನಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು, ಪ್ರತಿವರ್ಷ ಜನವರಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ನಡೆಯುತ್ತಿತ್ತು. ಆದರೆ ಈಗಿನ ಎಸ್‌ಐಆರ್ ಪ್ರಕ್ರಿಯೆಯ ಮೂಲಕ ಕಾಂಗ್ರೆಸ್ ಬೆಂಬಲಿಗರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಸಂಚು ನಡೆಯುತ್ತಿದೆ ಎಂದು ದೂರಿದರು. ಸ್ವಾತಂತ್ರ್ಯ ಪೂರ್ವದಲ್ಲಿ ಸಾಮಾನ್ಯ ಜನರಿಗೆ ಮತದಾನದ…

Read More

ಘನ ತ್ಯಾಜ್ಯ ನಿರ್ವಹಣಾ ನಿಯಮಗಳ ಸಮರ್ಪಕ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು,: ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳು ಘನ ತ್ಯಾಜ್ಯ ನಿರ್ವಹಣಾ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಕಾಲಬದ್ಧ ಕ್ರಿಯಾ ಯೋಜನೆ ರೂಪಿಸಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮನೆ-ಮನೆ ಕಸ ಸಂಗ್ರಹಣೆ ಹಾಗೂ ಮೂಲದಲ್ಲಿಯೇ ತ್ಯಾಜ್ಯ ವಿಂಗಡಣೆಗೆ ಆದ್ಯತೆ ನೀಡಿ ಶೇ.100ರಷ್ಟು ಗುರಿ ಸಾಧಿಸಲು ಕ್ರಮ ಕೈಗೊಳ್ಳಬೇಕು ಎಂದರು. ಸಾರ್ವಜನಿಕರಲ್ಲಿ ತ್ಯಾಜ್ಯ ವಿಂಗಡಣೆ ಹಾಗೂ ಸ್ವಚ್ಛತೆ ಕುರಿತು…

Read More

ಮತದಾರರ ಹೆಸರು ಕೈತಪ್ಪದಂತೆ ಕಾಂಗ್ರೆಸ್‌ನಿಂದ ಬಿಎಲ್-2 ನೇಮಕ: ಬಿ.ಕೆ. ಹರಿಪ್ರಸಾದ್

ಮಂಗಳೂರು, ಮತದಾರರ ಸಮಗ್ರ ವಿಶೇಷ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಅರ್ಹ ಮತದಾರರ ಹೆಸರುಗಳು ಕೈತಪ್ಪದಂತೆ ನೋಡಿಕೊಳ್ಳಲು ಕಾಂಗ್ರೆಸ್ ಪಕ್ಷದಿಂದ ಬಿಎಲ್-2ಗಳನ್ನು ನೇಮಕ ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತಿಳಿಸಿದ್ದಾರೆ. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂನ್ 30ರಿಂದ ಎಸ್‌ಐಆರ್ ಪ್ರಕ್ರಿಯೆ ಆರಂಭವಾಗಲಿದ್ದು, ಬಿಎಲ್-2ಗಳು ಮನೆಮನೆಗೆ ತೆರಳಿ ಮತದಾರರ ಪಟ್ಟಿಯ ಪರಿಷ್ಕರಣೆಗೆ ಸಹಕರಿಸಲಿದ್ದಾರೆ ಎಂದರು. ಪಶ್ಚಿಮ ಬಂಗಾಳ ಹಾಗೂ ಬಿಹಾರ ರಾಜ್ಯಗಳಲ್ಲಿ ಅರ್ಹ ಮತದಾರರ ಹೆಸರುಗಳು ಮತದಾರರ ಪಟ್ಟಿಯಿಂದ…

Read More

ಹೊಸ ಪಡಿತರ ಚೀಟಿ ವಿತರಣೆ ಪುನರಾರಂಭಕ್ಕೆ ಜೆಡಿಎಸ್ ಆಗ್ರಹ

ಮಂಗಳೂರು, ಜೂನ್ 23: ಕಳೆದ ಎರಡು ವರ್ಷಗಳಿಂದ ರಾಜ್ಯದಲ್ಲಿ ಹೊಸ ಪಡಿತರ ಚೀಟಿ (ರೇಷನ್ ಕಾರ್ಡ್) ವಿತರಣೆಯ ಪ್ರಕ್ರಿಯೆ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳ ಬಗ್ಗೆ ಜನತಾದಳ (ಜಾತ್ಯತೀತ) ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ನಿಯೋಗವು ಜಿಲ್ಲಾಧಿಕಾರಿಗಳ ಮೂಲಕ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರಿಗೆ ಮನವಿ ಸಲ್ಲಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿತು. ಮನವಿಯಲ್ಲಿ, ರಾಜ್ಯದಾದ್ಯಂತ ಸಾವಿರಾರು ಅರ್ಹ ಕುಟುಂಬಗಳು ಹೊಸ ಪಡಿತರ ಚೀಟಿ ಪಡೆಯಲು ಎರಡು ವರ್ಷಗಳಿಂದ…

Read More

ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ ಬಲಿದಾನ್ ದಿವಸ್ ಸಂಸ್ಮರಣ ಕಾರ್ಯಕ್ರಮ

ದೇಶದ ಏಕತೆ ಮತ್ತು ಅಖಂಡತೆಗಾಗಿ ತಮ್ಮ ಪ್ರಾಣವನ್ನೇ ಮುಡುಪಾಗಿಟ್ಟ ಮಹಾನ್ ರಾಷ್ಟ್ರಭಕ್ತ ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ ಬಲಿದಾನ್ ದಿವಸ್ ಸಂಸ್ಮರಣ ಕಾರ್ಯಕ್ರಮವು ಮಂಗಳೂರಿನ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಕಚೇರಿಯಲ್ಲಿ ಜರುಗಿತು. ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡಿದ ಮೂಡಾದ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ರವಿಶಂಕರ್ ಮಿಜಾರ್ ಅವರು, “ಒಂದೇ ದೇಶದಲ್ಲಿ ಎರಡು ಸಂವಿಧಾನ, ಇಬ್ಬರು ಪ್ರಧಾನಿ ಇರಲು…

Read More

ಕೆವಿನ್ ಮಿಸ್ಕಿತ್ ಸಂಗೀತ ರಸಮಂಜರಿಗೆ ಅಭೂತಪೂರ್ವ ಸ್ಪಂದನೆ: ಸ್ನೇಹಾಲಯ ಟ್ರಸ್ಟ್‌ಗೆ ಬೆಂಬಲದ ಮಹಾ ಸಂಗೀತ ಸಂಭ್ರಮ

2009 ರಲ್ಲಿ ಆರಂಭವಾದಾಗಿನಿಂದ, ಸ್ನೇಹಾಲಯ ಚಾರಿಟೇಬಲ್ ಟ್ರಸ್ಟ್, ಮಂಗಳೂರಿನಲ್ಲಿ ಮಾನಸಿಕ ಆರೋಗ್ಯ ಸಮಸ್ಯೆಗಳಿರುವ ವ್ಯಕ್ತಿಗಳನ್ನು ರಕ್ಷಿಸಿ , ಆರೈಕೆ ಮಾಡಿ, ಗುಣಪಡಿಸಿ, ಪುನರ್ವಸತಿ ಕಲ್ಪಿಸುವ ಮೂಲಕ ಅವರಿಗೆ ಹೊಸ ಜೀವನವನ್ನು ನೀಡುವ ಕಾಯಕಕ್ಕೆ ಸಮರ್ಪಿತವಾಗಿದೆ. ಕಳೆದ 17 ವರ್ಷಗಳಲ್ಲಿ, ಸಂಸ್ಥೆಯು 1,800 ಕ್ಕೂ ಹೆಚ್ಚು ರೋಗಿಗಳನ್ನು ಗುಣಪಡಿಸಿ ಮತ್ತು ಅವರ ಕುಟುಂಬಗಳಿಗೆ ಮರಳಿ ಮತ್ತೆ ಒಗ್ಗೂಡಿಸುವಲ್ಲಿ ಯಶಸ್ವಿಯಾಗಿದೆ. ಮಾನಸಿಕ ಅಸ್ವಸ್ಥೆಯ ಆರೋಗ್ಯ ಉಪಕ್ರಮಗಳ ಜೊತೆಗೆ, ಸ್ನೇಹಾಲಯವು ಕಳೆದ ಎರಡು ವರ್ಷಗಳಲ್ಲಿ ಸಮುದಾಯದಲ್ಲಿ ವ್ಯಸನ ಮುಕ್ತ ಕೇಂದ್ರವನ್ನು ಸ್ಥಾಪಿಸಿ…

Read More
error: Content is protected !!