ಅಶೋಕನಗರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 25ನೇ ದೇರೆಬೈಲ್ ಪಶ್ಚಿಮ ವಾರ್ಡಿನ ಅಶೋಕನಗರ ಆಯುರ್ವೇದಿಕ್ ಕಾಲೇಜು ರಸ್ತೆ, ಅಶೋಕನಗರ ಜಂಕ್ಷನ್ ಬಲ ಬದಿ ರಸ್ತೆ ಅಭಿವೃದ್ಧಿ ಕಾಮಗಾರಿಯು ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಗುದ್ದಲಿ ಪೂಜೆಯು ನಡೆಯಿತು. ಈ ವೇಳೆ ಮಾತನಾಡಿದ ಶಾಸಕರು, ಸ್ಥಳೀಯ ಬೇಡಿಕೆಯಂತೆ ಲೋಕೋಪಯೋಗಿ ಇಲಾಖೆಯಿಂದ 30ಲಕ್ಷ ರೂ. ಅನುದಾನವನ್ನು ಹೊಂದಿಸಿಕೊಂಡು ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ನಿಕಟಪೂರ್ವ ಪಾಲಿಕೆ ಸದಸ್ಯರುಗಳಾದ ಜಯಲಕ್ಷ್ಮಿ ಬಿ.ಶೆಟ್ಟಿ, ಗಣೇಶ್…
