ಜೂನ್ 23ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ಬಿ.ಕೆ. ಹರಿಪ್ರಸಾದ್
ಮಂಗಳೂರು, ಜೂ.22: ವಿಧಾನ ಪರಿಷತ್ ಸದಸ್ಯರು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ಅವರು ಜೂನ್ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಪ್ರವಾಸ ವೇಳಾಪಟ್ಟಿಯಂತೆ, ಅವರು ಬೆಳಿಗ್ಗೆ 7.15ಕ್ಕೆ ಬೆಂಗಳೂರಿನಿಂದ ಇಂಡಿಗೋ ವಿಮಾನದ ಮೂಲಕ ಪ್ರಯಾಣ ಬೆಳೆಸಿ, ಬೆಳಿಗ್ಗೆ 8.15ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ಬೆಳಿಗ್ಗೆ 11 ಗಂಟೆಗೆ ಮಂಗಳೂರಿನ ಪುರಭವನದಲ್ಲಿ ಆಯೋಜಿಸಲಿರುವ ‘ಎಸ್‌ಐಆರ್ ಜಾಗೃತಿ ಸಮಾವೇಶ’ದಲ್ಲಿ ಭಾಗವಹಿಸಿ ಕಾರ್ಯಕರ್ತರು ಹಾಗೂ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ….
