ಜಿಲ್ಲೆಯಲ್ಲಿ ಹಿಂದೂಗಳ ಧಮನಕಾರಿ ಯತ್ನ ಸಹಿಸುವುದಿಲ್ಲ:- ಶಾಸಕ ಕಾಮತ್

ಹಿಂದೂ ಮುಖಂಡ ಶರಣ್ ಪಂಪ್ವೆಲ್ ರವರ ಬಂಧನದ ಯತ್ನವು ದುರುದ್ದೇಶಪೂರಿತವಾಗಿದ್ದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಹಿಂದೂಗಳನ್ನು ಧಮನಿಸಲೆಂದೇ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿ ಹಿಂದೂ ಮುಖಂಡರನ್ನು ಠಾಣೆಗೆ ಕರೆಸಿ ಕಿರುಕುಳ ನೀಡುತ್ತಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಶರಣ್ ಪಂಪ್ವೆಲ್ ಬಂಧನದ ಯತ್ನ ಸುದ್ದಿ ತಿಳಿಯುತ್ತಿದ್ದಂತೆ ಶಾಸಕ ಕಾಮತ್ ರವರು ಕದ್ರಿ ಠಾಣೆಗೆ ಧಾವಿಸಿ ಪ್ರಕರಣದ ಬಗ್ಗೆ ಸಮರ್ಪಕ ಮಾಹಿತಿ ನೀಡದ ಪೊಲೀಸರ ವಿರುದ್ಧ ಹರಿಹಾಯ್ದರು. ಪೊಲೀಸರು ವಿಚಾರಣೆ ನಡೆಸುವುದಾದರೆ ಸುಪ್ರೀಂ ಕೋರ್ಟ್…

Read More

ಮೀಂಜ : 41ನೇ ಇಂದಿರಾ ಗಾಂಧಿ ಪುಣ್ಯತಿಥಿ ಆಚರಣೆ

ಮೀಯಪದವು : ದಿವಂಗತ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿಯವರ 41ನೇ ಪುಣ್ಯತಿಥಿ ಕಾರ್ಯಕ್ರಮ ಮೀಯಪದವಿನಲ್ಲಿ ಜರುಗಿತು. ಮೀಂಜ ಮಂಡಲ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಕಾಸರಗೋಡು ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಮತಿ ಕಮಲಾಕ್ಷಿ ಪುಷ್ಪಾರ್ಚನೆಗೈದರು.ಮಂಡಲ ಕಾಂಗ್ರೆಸ್ ಸಮಿತಿ ಅಧ್ಯಕ್ಷ ದಾಮೋದರ ಮಾಸ್ತರ್ ಅಧ್ಯಕ್ಷತೆ ವಹಿಸಿದ್ದರು. ಕಾಂಗ್ರೆಸ್ ಮುಖಂಡರಾದ ಪಿ. ಸೋಮಪ್ಪ ಮುಖ್ಯ ಪ್ರಭಾಷಣಗೈದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮಾಜೀ ಸ್ಥಾಯೀ ಸಮಿತಿ ಅಧ್ಯಕ್ಷ ಹರ್ಷಾದ್ ವರ್ಕಾಡಿ, ಮುಖಂಡರುಗಳಾದ ಮೊಹಮ್ಮದ್ ಜೆ, ಜೋಕಿಂ, ಮೊಂತೇರೋ, ಹಮೀದ್ ಮೀಯಪದವು, ಫಿಲೋಮಿನಾ…

Read More

ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ದೊಡ್ಡ ದಡ್ಡನೆಂದು ನನಗೆ ಮೊದಲೇ ಗೊತ್ತಿತ್ತು ; ವಿಧಾನ ಪರಿಷತ್‌ ಶಾಸಕ ಐವನ್ ಡಿ’ಸೋಜಾ

ಮಂಗಳೂರು : ವಿಧಾನಸೌಧ ಮತ್ತು ಶಾಸಕರ ಭವನದ ನವೀಕರಣ ಮತ್ತು ಸೌಂದರ್ಯೀಕರಣಕ್ಕಾಗಿ ಹಣವನ್ನು ದುರುಪಯೋಗಪಡಿಸಿಕೊಂಡ ಬಗ್ಗೆ ಕರ್ನಾಟಕ ವಿಧಾನಸಭೆಯ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಹಾಲಿ ಸ್ಪೀಕ‌ರ್ ಯು.ಟಿ. ಖಾದರ್ ವಿರುದ್ಧ ಮಾಡಿರುವ ಭ್ರಷ್ಟಾಚಾರ ಆರೋಪವು ಆಧಾರರಹಿತ ಮತ್ತು ಸಂವಿಧಾನಬಾಹಿರವಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಐವನ್ ಡಿ’ಸೋಜಾ ಗುಡುಗಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ , ಸ್ಪೀಕರ್ ಆಗಿದ್ದ ಸಮಯದಲ್ಲಿ ಕಾಗೇರಿ ಮಾಡಿರುವ ಆರೋಪಗಳು…

Read More

ಹಿಂದೂ ಮುಖಂಡ ಶರಣ್ ಪಂಪ್‌ವೆಲ್ ಪೊಲೀಸ್‌ ವಶಕ್ಕೆ…. !

ಮಂಗಳೂರು :ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಕಮೆಂಟ್‌ವೊಂದನ್ನು ಟ್ಯಾಗ್ ಮಾಡಿದ ಆರೋಪದ ಮೇಲೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ಅವರನ್ನು ಕದ್ರಿ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. RSS ಮುಖಂಡರ ಒಂದು ಭಾಷಣಕ್ಕೆ ಸಂಬಂಧಿಸಿದ ವಿಡಿಯೋ ತುಣುಕುನ್ನು ವಿಕಾಸ್ ಪುತ್ತೂರು ಎಂಬುವವರು ಸಾಮಾಜಿಕ ಜಾಲತಾಣದಲ್ಲಿ “ಮುಸ್ಲಿಂರ ಜನಸಂಖ್ಯೆ ಜಿಹಾದ್ ಮೆಟ್ಟಿ ನಿಲ್ಲೋಣ” ಎಂಬ ವಾಕ್ಯದೊಂದಿಗೆ ಶೇರ್ ಮಾಡಿದ್ದರು. ಇದನ್ನು ಶರಣ್ ಪಂಪ್‌ವೆಲ್ ಅವರು ಮತ್ತೊಮ್ಮೆ ಶೇರ್ ಮಾಡಿ ಜನಸಂಖ್ಯೆ ಬೆಳವಣಿಗೆಯ ಬಗ್ಗೆ ಚರ್ಚೆಯನ್ನು…

Read More

ನವೆಂಬರ್ 2 ರಂದು ಮಂಗಳೂರು ಆಟೋರಿಕ್ಷಾ ಮತ್ತು ಕಾರು ಚಾಲಕರ ಸಹಕಾರಿ ಸಂಘ ಸುವರ್ಣ ಮಹೋತ್ಸ ಕಾರ್ಯಕ್ರಮ … !

ಮಂಗಳೂರು ಆಟೋರಿಕ್ಷಾ ಮತ್ತು ಕಾರು ಚಾಲಕರ ಸಹಕಾರಿ ಸಂಘ ಮಂಗಳೂರು ಇದರ ಸುವರ್ಣ ಮಹೋತ್ಸವ ಕಾರ್ಯಕ್ರಮವು ನವೆಂಬರ್ 2 ರಂದು ಸಂಜೆ 4.00 ಗಂಟೆಗೆ ನಗರದ “ ಕುದ್ಮಲ್ ರಂಗರಾವ್ ಪುರಭವನ” ಮಂಗಳೂರು ಇಲ್ಲಿ ನಡೆಯಲಿದೆ ಎಂದು ವಿಧಾನ ಪರಿಷತ್‌ ಶಾಸಕರಾದ ಐವನ್‌ ಡಿ’ಸೋಜಾ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ , ಮಂಗಳೂರು ಮಹಾನಗರದಲ್ಲಿ ಆಟೋರಿಕ್ಷಾ ಮತ್ತು ಕಾರು ಚಾಲಕರ ಹಳೆ ವಾಹನಗಳಿಗೆ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಸಾಲ…

Read More

ಆಸ್ಟ್ರೇಲಿಯಾವನ್ನು ಮಣಿಸಿ ಭಾರತ ಮಹಿಳಾ ತಂಡ ವಿಶ್ವಕಪ್ ಫೈನಲ್‌ಗೆ!

ಮುಂಬೈ, : ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಪಂದ್ಯಾವಳಿಯ ಎರಡನೇ ಸೆಮಿಫೈನಲ್ ನಲ್ಲಿ, ಗುರುವಾರ ಭಾರತ ತಂಡವು ರೋಚಕ ಹಣಾಹಣಿಯಲ್ಲಿ ಆಸ್ಟ್ರೇಲಿಯ ತಂಡವನ್ನು ಸೋಲಿಸಿ ಫೈನಲ್ ಪ್ರವೇಶಿಸಿತು. ಆ ಮೂಲಕ ಟೂರ್ನಿಯುದ್ದಕ್ಕೂ ಅಜೇಯರಾಗಿ ಉಳಿದಿದ್ದ ಹಾಲಿ ಚಾಂಪಿಯನ್ ಆಸ್ಪ್ರೇಲಿಯಾ ತಂಡವು ಸೋತು ಹೊರಬಿದ್ದಿತು. ನವೀ ಮುಂಬೈಯ ಡಾ. ಡಿ.ವೈ. ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿ ಮೈದಾನದಲ್ಲಿ ನಡೆದ ಎರಡನೇ ಸೆಮಿ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡವು ಬ್ಯಾಟಿಂಗ್ ಆಯ್ದುಕೊಂಡಿತು. ಸ್ಪೋಟಕ ಆರಂಭ ಪಡೆದ ಆಸ್ಟೇಲಿಯಾ ತಂಡವು…

Read More

 ಕೇರಳದ ಪ್ರಪ್ರಥಮ ಒಲಿಂಪಿಕ್ ಪದಕ ವಿಜೇತ ಹಾಕಿ ಪಟು ಮ್ಯಾನ್ಯುಯೆಲ್ ಫ್ರೆಡ್ರಿಕ್ ನಿಧನ .

ಕಣ್ಣೂರು/ಬೆಂಗಳೂರು: ಕೇರಳದ ಪ್ರಪ್ರಥಮ ಒಲಿಂಪಿಕ್ ಪದಕ ವಿಜೇತ ಹಾಕಿ ಪಟು ಮ್ಯಾನ್ಯುಯೆಲ್ ಫ್ರೆಡ್ರಿಕ್ ಅವರು ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ. ಕ್ಯಾನ್ಸರ್ ಗೆ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಗ್ಗೆ ನಿಧನರಾದರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. ಫ್ರೆಡ್ರಿಕ್ ಮ್ಯಾನ್ಯುಯೆಲ್ ಗೆ 78 ವರ್ಷ ವಯಸ್ಸಾಗಿತ್ತು. ಅವರು ತಮ್ಮ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಕೇರಳದ ಕಣ್ಣೂರು ಜಿಲ್ಲೆಯವರಾದ ಫ್ರೆಡ್ರಿಕ್ ಮ್ಯಾನ್ಯುಯೆಲ್, 1972ರ ಮ್ಯೂನಿಚ್ ಒಲಿಂಪಿಕ್ಸ್ ನಲ್ಲಿ ಹಾಲೆಂಡ್ ಎದುರು ನಡೆದಿದ್ದ ಪಂದ್ಯದಲ್ಲಿ ಭಾರತ ಹಾಕಿ…

Read More

ನ.1ರಂದು ಲೇಡಿಗೋಷನ್ ಆಸ್ಪತ್ರೆಯಲ್ಲಿ ಕಾರುಣ್ಯ ಯೋಜನೆ ಉದ್ಘಾಟನೆ

ಮಂಗಳೂರು: ಮಂಗಳೂರಿನ ಎಂಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸರಕಾರಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಜೊತೆಗಾರರಿಗೆ ರಾತ್ರಿ ಊಟ ನೀಡುವ ಕಾರುಣ್ಯ ಯೋಜನೆಯ ಉದ್ಘಾಟನೆ ನವೆಂಬರ್ 1ರಂದು ಸಂಜೆ 4.00 ಗಂಟೆಗೆ ಲೇಡಿಗೋಷನ್ ಆಸ್ಪತ್ರೆಯ ಯೋಗಾಭ್ಯಾಸ ಧ್ಯಾನ ಕೇಂದ್ರದಲ್ಲಿ ನಡೆಯಲಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ದಿನೇಶ್ ಗುಂಡೂರಾವ್ ಯೋಜನೆಗೆ ಚಾಲನೆ ನೀಡಲಿದ್ದು, ಶಾಸಕರಾದ ಡಿ.ವೇದವ್ಯಾಸ ಕಾಮತ್, ಐವನ್ ಡಿಸೋಜ, ಮಂಜುನಾಥ ಭಂಡಾರಿ, ಲೇಡಿಗೋಷನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ದುರ್ಗಾಪ್ರಸಾದ್…

Read More

ಕದ್ರಿ ಪಾರ್ಕ್ ರಸ್ತೆ ಬದಿಯಲ್ಲಿ ಅನಧಿಕೃತವಾಗಿ ತೆರೆದಿದ್ದ ಗೂಡಂಗಡಿಗಳ ತೆರವು …. !

ಮಂಗಳೂರು: ಅನಧಿಕೃತ ವಾಗಿ ಇದ್ದ ಚುರುಮುರಿ ಸ್ಟಾಲ್, ಕಬ್ಬಿನ ಜ್ಯೂಸ್ ಅಂಗಡಿ, ಪಾನಿಪುರಿ ಅಂಗಡಿಗಳನ್ನ ಮಹಾ ನಗರ ಪಾಲಿಕೆಯ ಅಧಿಕಾರಿಗಳು ತೆರವು ಗೊಳಿಸಿದರು. ಈ ಅಂಗಡಿಗಳಲ್ಲಿ ಸ್ವಚ್ಚತೆ ಪಾಲನೆಯಾಗುತ್ತಿರಲಿಲ್ಲ. ತ್ಯಾಜ್ಯ ವಸ್ತುಗಳ ರಾಶಿಯೇ ಉಳಿದು ಪಾರ್ಕ್ ಸುತ್ತಮುತ್ತಲಿನ ಪ್ರದೇಶದಲ್ಲಿ ದುರ್ವಾಸನೆ ಬೀರುತ್ತಿತ್ತು ಎಂದು ದೂರುಗಳು ಬಂದಿದ್ದವು. ಮಾತ್ರವಲ್ಲದೆ ಇಲ್ಲಿ ಅಂಗಡಿಗಳನ್ನು ಏಲಂ ಮೂಲಕ ಪಡೆದುಕೊಂಡವರು ತಮ್ಮ ವ್ಯವಹಾರಕ್ಕೆ ತೊಂದರೆಯಾಗುತ್ತದೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ಪಾಲಿಕೆ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ.

Read More

ಜಮೀನಿನಲ್ಲಿ ಬಿದ್ದಿದ್ದ ಕರೆಂಟ್‌ ತಂತಿ ಸ್ಪರ್ಶ, ತಾಯಿ- ಮಗ ಬಲಿ .

ಹುಣಸೂರು : ವಿದ್ಯುತ್‌ ತಂತಿ ಸ್ಪರ್ಶಿಸಿ ತಾಯಿ, ಮಗ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರಿನಲ್ಲಿ ನಡೆದಿದೆ. ತಾಲೂಕಿನ ಎಮ್ಮೆ ಕೊಪ್ಪಲು ಗ್ರಾಮದ ನೀಲಮ್ಮ (39), ಮಗ ಹರೀಶ್ (19) ಎಂದು ಗುರುತಿಸಲಾಗಿದೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ ತಾಯಿಗೆ ವಿದ್ಯುತ್ ತಂತಿ ತಗುಲಿದೆ. ತಾಯಿಯ ರಕ್ಷಣೆ ಮಾಡಲು ಹೋದ ಮಗ ಹರೀಶ್ ಸಹ ಕರೆಂಟ್ ಶಾಕ್‌ಗೆ ಬಲಿಯಾಗಿದ್ದಾರೆ. ಚೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅವಘಡ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಹುಣಸೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ…

Read More
error: Content is protected !!