ಕಲುಷಿತ ನೀರು ಪೂರೈಕೆ ಆರೋಪ: ಬಟ್ಟಗುಡ್ಡೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ತುರ್ತು ಸಭೆ
ಮಂಗಳೂರು, ಜೂನ್ 20: ನಗರದ ಕೆಲವೆಡೆ ಸಾರ್ವಜನಿಕರಿಗೆ ಕಲುಷಿತ ಕುಡಿಯುವ ನೀರು ಪೂರೈಕೆಯಾಗಿ ಹಲವರು ಅಸ್ವಸ್ಥಗೊಂಡಿರುವ ಹಿನ್ನೆಲೆಯಲ್ಲಿ ಬಿಜೈ 31ನೇ ವಾರ್ಡಿನ ನೋಡು ಬಟ್ಟಗುಡ್ಡೆ ಪರಿಸರದ ರಾಮಕೃಷ್ಣ ಭಜನಾ ಮಂದಿರದ ಆವರಣದಲ್ಲಿ ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಸಾರ್ವಜನಿಕರು ಹಾಗೂ ಪಾಲಿಕೆಯ ಹಿರಿಯ ಅಧಿಕಾರಿಗಳ ತುರ್ತು ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ನೋಡು ಬಟ್ಟಗುಡ್ಡೆ ಪರಿಸರದ ಕೆಳಭಾಗದಲ್ಲಿ ಕುಡಿಯುವ ನೀರಿನ ಪೈಪ್‌ಲೈನ್‌ಗೆ ಡ್ರೈನೇಜ್ ನೀರು ಸೇರಿಕೊಂಡು ಹಲವು ಮನೆಗಳಿಗೆ ಕಲುಷಿತ ನೀರು…
