ರಸಗೊಬ್ಬರ ದರ ಏರಿಕೆಯಿಂದ ರೈತರ ದೋಚಾಟ: ಕೆಆರ್‌ಎಸ್ ಗಂಭೀರ ಆರೋಪ
ಪುತ್ತೂರು; ರೈತರಿಗೆ ಅಗತ್ಯವಾದ ರಸಗೊಬ್ಬರಗಳ ಅಭಾವ ಸೃಷ್ಟಿಸಿ ದರ ಏರಿಕೆ ಮಾಡಿ ರೈತರನ್ನು ವಂಚಿಸುವ ಕೆಲಸ ಕಳೆದ ಹಲವಾರು ವರ್ಷಗಳಿಂದ ನಡೆಯುತ್ತಿದೆ. ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯ ಉಂಟು ಮಾಡುವ ಮೂಲಕ ಸಬ್ಸಿಡಿ ವ್ಯಾಪ್ತಿಗೆ ಬರುವ ಯೂರಿಯಾ ಹಾಗೂ ಡಿಎಪಿ ರಸಗೊಬ್ಬರಗಳ ಮೂಲ ಬೆಲೆಯಿಂದ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಮೂಲಕ ರಾಜ್ಯದಲ್ಲಿ ಸುಮಾರು 2 ಸಾವಿರ ಕೋಟಿ ಹಣವನ್ನು ರೈತರಿಂದ ಮಾರಾಟಗಾರರು, ಅಧಿಕಾರಿಗಳು ಮತ್ತು ರಾಜಕಾರಣಿಗಳು ದೋಚುತ್ತಿದ್ದಾರೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಜಿಲ್ಲಾಧ್ಯಕ್ಷ ವೇಣುಗೋಪಾಲ್…
