ಆನ್ ಲೈನ್ ಹೂಡಿಕೆ ಹೆಸರಲ್ಲಿ ವಂಚನೆ ಮಾಡಿದವರು ಜೈಲಿಗೆ!
ಆನ್‌ಲೈನ್ ಹೂಡಿಕೆ ಹೆಸರಲ್ಲಿ ನೇಪಾಳದಲ್ಲಿ ಕುಳಿತು ವಂಚಿಸುತ್ತಿದ್ದ ಉತ್ತರ ಭಾರತ ಮೂಲದ 11 ಮಂದಿಯನ್ನು ಮಂಗಳೂರು ಸೆನ್ ಕೈಂ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಗುಜರಾತ್‌ನ ಮಕವನ್ ವಿಕ್ರಂ (25), ಪಶ್ಚಿಮ ಬಂಗಾಳದ ಸೌಮ್ಯಾಧಿತ್ಯ ಚಟ್ಟೋಪಾಧ್ಯಾಯ (21), ಜಾರ್ಖಂಡ್‌ನ ಪುಪ್ಲ ಶಿವಕುಮಾರ್ ರಾವ್ (32) ಮತ್ತು ರಾಜೇಶ್ ಮಂಡನ್ (30), ಮಿಥುನ್ ಕುಮಾರ್ ಮಂಗರಾಜ್ (38), ಉತ್ತರ ಪ್ರದೇಶದ ಗೌರವ್ ಪಾಂಡೆ (24) ಮತ್ತು ಹರ್ಷ ಮಿಸ್ರಾ (22) ಹಾಗೂ ಮುಹಮ್ಮದ್ ಆಕೀಬ್ ಅಲಿ (27), ನೌಶಾದ್ ಅಲಿ…