Headlines

ಎಸ್ ಐ ಆರ್ ಸಂದರ್ಭ ಪ್ರತಿಯೊಬ್ಬ ಮತದಾರರ ಸಂವಿಧಾನಿಕ ಹಕ್ಕು ಕಾಪಾಡಲು ಕ್ರಮ ವಹಿಸಲು ದ.ಕ. ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಗಳಿಗೆ ಸಿಪಿಐಎಂ ಮನವಿ

ಜೂನ್ 30 ರಿಂದ ಎಸ್ಐಆರ್ ರಾಜ್ಯದಲ್ಲಿ ಆರಂಭಗೊಳ್ಳುತ್ತಿದ್ದು, ಪೌರತ್ವವನ್ನು ಸ್ವಯಂ ಮತದಾರರೆ ನಿರೂಪಿಸಿಕೊಂಡು ಮತದಾರರ ಪಟ್ಟಿಗೆ ಸೇರ್ಪಡೆಗೊಳ್ಳುವ ತೀವ್ರ ಸಂಕಷ್ಟದ ವಿಧಾನವನ್ನು ಚುನಾವಣಾ ಆಯೋಗ ಅನುಸರಿಸುತ್ತಿರುವುದರಿಂದ ಯಾವೊಬ್ಬ ನಾಗರಿಕನೂ ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ರಾಜ್ಯ ಸರಕಾರ ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಿಪಿಐಎಂ ರಾಜ್ಯ ಸಮಿತಿಯು ದ.ಕ. ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದೆ. ಚುನಾವಣಾ ಆಯೋಗ ನಿಗದಿ ಪಡಿಸಿರುವ 11 ದಾಖಲೆಗಳ ಪೈಕಿ ಒಂದು ದಾಖಲೆಯೂ ಒದಗಿಸಲು ಸಾಧ್ಯ ಇಲ್ಲದವರಿಗೆ ದಾಖಲೆಗಳನ್ನು ಪಡೆದುಕೊಳ್ಳಲು ನಿಯಮಗಳನ್ನು ಸರಳೀಕರಿಸಿ…

Read More

ಗಂಜಿಮಠದಲ್ಲಿ ಪ್ಲಾಸ್ಟಿಕ್‌ ಪಾರ್ಕ್‌ನ ನಿರ್ಮಾಣ ಕಾಮಗಾರಿ ಚುರುಕುಸ್ಥಳಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ ನೀಡಿ ಪ್ರಗತಿ ಪರಿಶೀಲನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಆರ್ಥಿಕ ಹಾಗೂ ಕೈಗಾರಿಕಾ ರಂಗಕ್ಕೆ ಹೊಸ ಶಕ್ತಿ ತುಂಬಲಿರುವ ಗಂಜಿಮಠದಲ್ಲಿ ನಿರ್ಮಾಣ ಹಂತದಲ್ಲಿರುವ ಮಹತ್ವಾಕಾಂಕ್ಷೆಯ ಪ್ಲಾಸ್ಟಿಕ್ ಪಾರ್ಕ್ ಯೋಜನಾ ಪ್ರದೇಶಕ್ಕೆ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ವೈ. ಭರತ್ ಶೆಟ್ಟಿ ಅವರೊಂದಿಗೆ ಇಂದು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದ್ದಾರೆ. ಭೇಟಿ ವೇಳೆ ಸಂಸದರು ಪಾರ್ಕ್‌ನ ರಸ್ತೆ, ವಿದ್ಯುತ್, ನೀರು ಸರಬರಾಜು ಸೇರಿದಂತೆ ಪ್ರಮುಖ ಮೂಲಸೌಕರ್ಯ…

Read More

ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿರ್ಧಾರ ಸ್ವಾಗತಾರ್ಹ – ಸಭೆಯು ಕರಾವಳಿಯ ಅಭಿವೃದ್ಧಿಯ ಮಂತ್ರವಾಗಲಿ: ಅನ್ವರ್ ಸಾದತ್

ಮಂಗಳೂರು:- ರಾಜ್ಯ ಸರ್ಕಾರದ ಮುಂದಿನ ಸಚಿವ ಸಂಪುಟ ಸಭೆಯನ್ನು ಕರಾವಳಿಯ ರಾಜಧಾನಿಯಾದ ಮಂಗಳೂರಿನಲ್ಲಿ ನಡೆಸಲು ಕರ್ನಾಟಕದ ಮುಖ್ಯಮಂತ್ರಿಗಳಾದ ಗೌರವಾನ್ವಿತ ಡಿ.ಕೆ. ಶಿವಕುಮಾರ್ ಅವರು ತೆಗೆದುಕೊಂಡಿರುವ ನಿರ್ಧಾರವನ್ನು ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ಸ್ವಾಗತಿಸಿದ್ದಾರೆ. ಆಡಳಿತ ಯಂತ್ರವನ್ನು ಜನಸಾಮಾನ್ಯರ ಬಾಗಿಲಿಗೆ ತಲುಪಿಸುವ ಈ ಕ್ರಮವು, ಪ್ರಾದೇಶಿಕ ಅಸಮತೋಲನವನ್ನು ನಿವಾರಿಸುವ ದಿಕ್ಕಿನಲ್ಲಿ ಒಂದು ಧನಾತ್ಮಕ ಹೆಜ್ಜೆಯಾಗಲಿ ಎಂದು ಅವರು ಹಾರೈಸಿದ್ದಾರೆ. ಮುಖ್ಯಮಂತ್ರಿಗಳ ನೇತೃತ್ವದ ಈ ಮಹತ್ವದ ಸಂಪುಟ ಸಭೆಯು ಕೇವಲ ಔಪಚಾರಿಕ ಸಭೆಯಾಗದೆ, ಈ ಭಾಗದ…

Read More

ಕಂಬ್ಳ ವಾರ್ಡಿನ ವೇರ್‌ಹೌಸ್ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 29ನೇ ಕಂಬ್ಳ ವಾರ್ಡಿನ ವೇರ್ ಹೌಸ್ ರಸ್ತೆಯ ಸಮಗ್ರ ಅಭಿವೃದ್ಧಿ ಕಾಮಗಾರಿಗಾಗಿಯು 40ಲಕ್ಷ ರೂ. ವಿಶೇಷ ಅನುದಾನದಲ್ಲಿ ನಡೆಯಲಿದ್ದು ಅದರ ಗುದ್ದಲಿ ಪೂಜೆಯು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಶಾಸಕರು, ಇಲ್ಲಿನ ಸ್ಥಳೀಯರ ಬೇಡಿಕೆಗೆ ಅನುಗುಣವಾಗಿ ಈ ಕಾಮಗಾರಿ ನಡೆಯುತ್ತಿದ್ದು ಶೀಘ್ರದಲ್ಲಿ ಕಾಮಗಾರಿ ನೆರವೇರಲಿದೆ. ಈ ಸಂದರ್ಭದಲ್ಲಿ ಉಂಟಾಗುವ ಅಡಚಣೆಗೆ ಸಾರ್ವಜನಿಕರು ಸಹಕರಿಸುವಂತೆ ಶಾಸಕರು ಮನವಿ ನೀಡಿದರು. ಈ ಸಂದರ್ಭದಲ್ಲಿ ನಿಕಟಪೂರ್ವ ಪಾಲಿಕೆ ಸದಸ್ಯರಾದ…

Read More

ಶಿಕ್ಷಣದಲ್ಲಿ ಮಹಿಳೆಯರ ಸೃಜನಶೀಲತೆ ಮನೆಯನ್ನು ಬೆಳಗಿಸುತ್ತದೆ: ರಾಯಿ ರಾಜಕುಮಾರ್

ಮೂಡುಬಿದಿರೆ: ತಾಲೂಕಿನ ಪಡುಮಾರ್ನಾಡು ಗ್ರಾಮದ ಅಮನಬೆಟ್ಟು ಯುವಕ ಮಂಡಲದಲ್ಲಿ ಯುವಕ-ಯುವತಿ ಮಂಡಲದ ಸದಸ್ಯರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗಾಗಿ ಶಿಕ್ಷಣ ಸಂಬಂಧಿತ ವಿಶೇಷ ಮಾಹಿತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಬೆಂಗಳೂರು ಸ್ಪಾರ್ಕ್ ಅಕಾಡೆಮಿಯ ತರಬೇತುದಾರ ಹಾಗೂ ಪತ್ರಕರ್ತ Rai Rajkumar ಮಾತನಾಡಿ, ಶಿಕ್ಷಣದಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದ್ದು, ಸೃಜನಶೀಲ ಮನೋಭಾವವನ್ನು ಬೆಳೆಸಿಕೊಂಡರೆ ಯಶಸ್ಸು ಸಾಧಿಸಲು ಸಾಧ್ಯ ಎಂದು ಹೇಳಿದರು. ಶಿಸ್ತು, ಸಂಯಮ, ಸರಳ ಜೀವನ ಮತ್ತು ಉನ್ನತ ಜ್ಞಾನದೊಂದಿಗೆ ಯೋಜಿತವಾಗಿ ಕಾರ್ಯನಿರ್ವಹಿಸಿದರೆ ಪ್ರತಿಯೊಬ್ಬರೂ ಜೀವನದಲ್ಲಿ…

Read More

ಕಡೆಕಾರು ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಪುನರ್‌ನಿರ್ಮಾಣಕ್ಕೆ ಶಿಲಾನ್ಯಾಸ

ಮಂಗಳೂರು: ಜಪ್ಪಿನಮೊಗರು ಕಡೆಕಾರು ಶ್ರೀ ಮಲ್ಲಿಕಾರ್ಜುನ ಕ್ಷೇತ್ರದ ಪುನರ್‌ನಿರ್ಮಾಣ ಕಾಮಗಾರಿಗೆ ಬುಧವಾರ ಬ್ರಹ್ಮಶ್ರೀ ವೇದಮೂರ್ತಿ ಉಚ್ಚಿಲತ್ತಾಯ ನೀಲೇಶ್ವರ ಪದ್ಮನಾಭ ತಂತ್ರಿಯವರ ವೈದಿಕ ನೇತೃತ್ವದಲ್ಲಿ ಶಿಲಾನ್ಯಾಸ ನೆರವೇರಿತು. ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಒಂದು ಕಾಲದಲ್ಲಿ ಹಿಂದುಳಿದ ಪ್ರದೇಶವಾಗಿದ್ದ ಈ ಭಾಗ ಇಂದು ಅಭಿವೃದ್ಧಿ ಹೊಂದಿದ್ದು, ದೇವಸ್ಥಾನದ ಪುನರ್‌ನಿರ್ಮಾಣ ಕಾರ್ಯಕ್ಕೆ ಅವಕಾಶ ದೊರೆತಿರುವುದು ಭಕ್ತರ ಸೌಭಾಗ್ಯ ಎಂದರು. ದೇವಸ್ಥಾನ ಪುನರ್‌ನಿರ್ಮಾಣಕ್ಕೆ ಮಾಣಿಲ ಕ್ಷೇತ್ರದಿಂದ ₹1 ಲಕ್ಷ ದೇಣಿಗೆ ನೀಡುವುದಾಗಿ ಹಾಗೂ ಕರಸೇವೆಗೆ…

Read More

ಬಿಳಿನೆಲೆ ಸಿಎ ಬ್ಯಾಂಕ್ ವಿರುದ್ಧದ ಆರೋಪಗಳು ಆಧಾರರಹಿತ: ವಾಡ್ಯಪ್ಪ ಗೌಡ

ಕಡಬ,ಬಿಳಿನೆಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ (ಸಿಎ ಬ್ಯಾಂಕ್) ವ್ಯವಹಾರಗಳ ಕುರಿತು ಕೆಲವರು ಸುಳ್ಳು ಆರೋಪ ಹಾಗೂ ಅಪಪ್ರಚಾರ ನಡೆಸುತ್ತಿದ್ದು, ಸಂಘದಲ್ಲಿ ಯಾವುದೇ ಭ್ರಷ್ಟಾಚಾರ ಅಥವಾ ಅವ್ಯವಹಾರ ನಡೆದಿಲ್ಲ ಎಂದು ಸಂಘದ ಅಧ್ಯಕ್ಷ ವಾಡ್ಯಪ್ಪ ಗೌಡ ಎರ್ಮಾಯಿಲ್ ಸ್ಪಷ್ಟಪಡಿಸಿದರು. ಮಂಗಳವಾರ ಕಡಬದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘದ ಆಡಳಿತ ಮಂಡಳಿಯ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆಧಾರರಹಿತ ಆರೋಪಗಳನ್ನು ಹರಿಬಿಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸತ್ಯ ಬಹಿರಂಗವಾಗಲೆಂದು ಕೋಡಿಂಬಾಳದ ಕಾರಣಿಕ ಕ್ಷೇತ್ರ ಮಜ್ಜಾರು ಶ್ರೀ ರಾಜನ್ ದೈವದ…

Read More

ಅಮೆರಿಕ–ಇರಾನ್ ಶಾಂತಿ ಒಪ್ಪಂದಕ್ಕೆ ಸಿದ್ಧತೆ; ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಪ್ರಭಾವ ಹೆಚ್ಚಳ

ವಾಷಿಂಗ್ಟನ್: ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಅಂತ್ಯದ ಹಂತ ತಲುಪಿದ್ದು, ಉಭಯ ರಾಷ್ಟ್ರಗಳು ಜಿನೀವಾದಲ್ಲಿ ಶಾಂತಿ ಒಪ್ಪಂದಕ್ಕೆ ಸಹಿ ಹಾಕಲು ಸಿದ್ಧತೆ ನಡೆಸಿವೆ ಎಂದು ವರದಿಯಾಗಿದೆ. ಈ ನಡುವೆ, ಯುದ್ಧಾನಂತರ ಹಾರ್ಮುಜ್ ಜಲಸಂಧಿಯನ್ನು ತನ್ನ ಇಚ್ಛೆಯಂತೆ ಬಂದ್ ಮಾಡುವ ಸಾಮರ್ಥ್ಯವನ್ನು ಇರಾನ್ ಪಡೆದುಕೊಂಡಿದೆ ಎಂದು ಅಮೆರಿಕದ ಗುಪ್ತಚರ ಸಂಸ್ಥೆಗಳು ಮೌಲ್ಯಮಾಪನ ಮಾಡಿರುವುದಾಗಿ ವರದಿಗಳು ತಿಳಿಸಿವೆ. ಜಾಗತಿಕ ತೈಲ ಸಾಗಣೆಗೆ ಅತ್ಯಂತ ಪ್ರಮುಖವಾದ ಹಾರ್ಮುಜ್ ಜಲಸಂಧಿಯ ಮೇಲಿನ ಇರಾನ್‌ನ ಪ್ರಭಾವ ಮುಂದುವರಿಯುವ ಸಾಧ್ಯತೆ ಇದ್ದು, ಇದು ಜಾಗತಿಕ…

Read More

ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯೋಪಾಧ್ಯಾಯ ಕೆ.ಸಿ. ಪಾಟಾಳಿ ಪಡುಮಲೆ ನಿಧನ

ಪುತ್ತೂರು,: ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ಪುತ್ತೂರು ಘಟಕದ ಆಜೀವ ಸದಸ್ಯರು ಹಾಗೂ ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯೋಪಾಧ್ಯಾಯ ಕೆ.ಸಿ. ಪಾಟಾಳಿ ಪಡುಮಲೆ (78) ಅವರು ಬುಧವಾರ ಮುಂಜಾನೆ ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಶೈಕ್ಷಣಿಕ ಕ್ಷೇತ್ರದಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ್ದ ಅವರು, ತಮ್ಮ ವೃತ್ತಿಜೀವನವನ್ನು ಸುಳ್ಯ ಪದವು ಅನುದಾನಿತ ಶಾಲೆಯಲ್ಲಿ ಆರಂಭಿಸಿದ್ದರು. ಬಳಿಕ ಈಶ್ವರಮಂಗಲ ಶಾಲೆಗೆ ವರ್ಗಾವಣೆಗೊಂಡು ಸಹ ಶಿಕ್ಷಕರಾಗಿ ಹಾಗೂ ನಂತರ ಮುಖ್ಯೋಪಾಧ್ಯಾಯರಾಗಿ ಕಾರ್ಯನಿರ್ವಹಿಸಿ ಶಿಕ್ಷಣ ಕ್ಷೇತ್ರಕ್ಕೆ ಅಮೂಲ್ಯ ಕೊಡುಗೆ ನೀಡಿದ್ದರು. ಇತ್ತೀಚಿನ…

Read More

ದ.ಕ.ಜಿ.ಪಂ. ಕಿ.ಪ್ರಾ. ಶಾಲೆ ಏಮಾಜೆ: ಸಂಭ್ರಮದ ‘ಸೃಜನೋತ್ಸವ – 2026’ ವಿನೂತನ ಕಾರ್ಯಕ್ರಮ

ಮಾಣಿ : ಮಕ್ಕಳಲ್ಲಿನ ಸುಪ್ತ ಪ್ರತಿಭೆಯನ್ನು ಹೊರತರಲು ಹಾಗೂ ಅವರ ಕನಸುಗಳ ಸಾಕಾರಕ್ಕಾಗಿ ಸಂತಸದಾಯಕ ಕಲಿಕಾ ವಾತಾವರಣ ಅತ್ಯಗತ್ಯ” ಎಂದು ಬಂಟ್ವಾಳ ಬಿ.ಐ.ಆರ್.ಟಿ. ಸುರೇಖಾ ಏರವಾಳ ಅಭಿಪ್ರಾಯಪಟ್ಟರು. ಅವರು ಬಂಟ್ವಾಳ ತಾಲೂಕಿನ ನೆಟ್ಲಾ ಮುಡ್ಡೂರು ಗ್ರಾಮದ ದ. ಕ. ಜಿ. ಪಂ. ಕಿರಿಯ ಪ್ರಾಥಮಿಕ ಶಾಲೆ ಏಮಾಜೆ ಇಲ್ಲಿ ಜೂನ್ 16, ಮಂಗಳವಾರದಂದು ಹಮ್ಮಿಕೊಳ್ಳಲಾಗಿದ್ದ *ಸೃಜನೋತ್ಸವ -2026’ ವಿನೂತನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಇದೇ ಸಂದರ್ಭದಲ್ಲಿ ಅವರು ಶಾಲೆಯ ಮಹತ್ವಾಕಾಂಕ್ಷೆಯ ದ್ವಿ-ಭಾಷಾ ಮಾಧ್ಯಮಕ್ಕೂ ಚಾಲನೆ ನೀಡಿದರು. ವಿವಿಧ ಯೋಜನೆಗಳ…

Read More
error: Content is protected !!