Headlines

ಜೂನ್ 19ರಂದು ಲಯನ್ಸ್ ಸೇವಾ ಸದನದಲ್ಲಿ ಆರೋಗ್ಯ ಸಚಿವ ಯು.ಟಿ. ಖಾದರ್‌ಗೆ ಸನ್ಮಾನ

ಮಂಗಳೂರು,: ಲಯನ್ಸ್ ಕ್ಲಬ್‌ನ ಹೆಮ್ಮೆಯ ಸದಸ್ಯರು ಹಾಗೂ ಕರ್ನಾಟಕ ಸರ್ಕಾರದ ಆರೋಗ್ಯ ಸಚಿವರಾದ ಯು.ಟಿ. ಖಾದರ್ ಅವರಿಗೆ ಲಯನ್ಸ್ ಸದಸ್ಯರ ಪರವಾಗಿ ಸನ್ಮಾನ ಕಾರ್ಯಕ್ರಮವನ್ನು ಜೂನ್ 19ರಂದು ಬೆಳಿಗ್ಗೆ 10.30ಕ್ಕೆ ಅಸೈಗೋಳಿಯ ಲಯನ್ಸ್ ಸೇವಾ ಸದನದಲ್ಲಿ ಆಯೋಜಿಸಲಾಗಿದೆ. ಲಯನ್ಸ್ ಜಿಲ್ಲೆ ಹಾಗೂ ಲಯನ್ಸ್ ಕ್ಲಬ್ ಮಂಗಳಗಂಗೋತ್ರಿ ಸಂಯುಕ್ತ ಆಶ್ರಯದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಲಯನ್ಸ್ ಕ್ಲಬ್‌ಗಳ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜಿಲ್ಲಾ ರಾಜ್ಯಪಾಲ ಕುಡುಪಿ ಅರವಿಂದ್ ಶೆಣೈ ಹಾಗೂ ಮಾಜಿ ರಾಜ್ಯಪಾಲ ದೇವದಾಸ್…

Read More

ರೈಲ್ವೇ ಲೆವೆಲ್ ಕ್ರಾಸಿಂಗ್ ನಿಯಮ ಉಲ್ಲಂಘನೆಗೆ ಕಠಿಣ ಕ್ರಮ; ಆರು ಚಾಲಕರ ಪರವಾನಿಗೆ ಅಮಾನತು

ಮಂಗಳೂರು: ರೈಲ್ವೇ ಲೆವೆಲ್ ಕ್ರಾಸಿಂಗ್‌ಗಳಲ್ಲಿ ನಿಯಮ ಉಲ್ಲಂಘಿಸಿ ಅಪಘಾತಗಳಿಗೆ ಕಾರಣವಾಗುತ್ತಿರುವ ಪ್ರಕರಣಗಳನ್ನು ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ. ಪಾಲಕ್ಕಾಡ್ ವಿಭಾಗದ ಪ್ರಕಟಣೆಯ ಪ್ರಕಾರ, ರಸ್ತೆ ಬಳಕೆದಾರರ ನಿರ್ಲಕ್ಷ್ಯದಿಂದ 2025 ಮತ್ತು 2026ರ ಅವಧಿಯಲ್ಲಿ ಒಟ್ಟು 79 ಲೆವೆಲ್ ಕ್ರಾಸಿಂಗ್ ಅಪಘಾತಗಳು ಸಂಭವಿಸಿವೆ. ಇದರಲ್ಲಿ 2025ರಲ್ಲಿ 55 ಹಾಗೂ 2026ರಲ್ಲಿ 24 ಪ್ರಕರಣಗಳು ದಾಖಲಾಗಿವೆ. ಗೇಟ್‌ಗಳನ್ನು ಮುಚ್ಚಿದ್ದರೂ ಅಥವಾ ಎಚ್ಚರಿಕೆ ಸಂಕೇತಗಳನ್ನು ನಿರ್ಲಕ್ಷಿಸಿ ರೈಲು ಹಳಿಗಳನ್ನು ದಾಟಲು…

Read More

ಬೆಳೆವಿಮೆ ಪರಿಹಾರಕ್ಕೆ ರೈತರಿಗೆ ಸಿಹಿಸುದ್ದಿ: ಪಕ್ಕದ ಪಂಚಾಯತ್ ಮಳೆ ವರದಿಗೂ ಮಾನ್ಯತೆ

ಬಂಟ್ವಾಳ: ಬೆಳೆವಿಮೆ ಮೌಲ್ಯಮಾಪನಕ್ಕೆ ಮಳೆಮಾಪಕ ಸರಿ ಇಲ್ಲದಿದ್ದರೆ ಹತ್ತಿರದ ಎರಡು ಪಂಚಾಯತ್ ಗಳ ವರದಿ ಪರಿಗಣನೆ ಮಾಡಿಕೊಳ್ಳಲು ಅವಕಾಶವಿದೆ ಎಂದು ತೋಟಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ ಜೋ ಪ್ರದೀಪ್ ಡಿಸೋಜ ಹೇಳಿದ್ದಾರೆ.ಬಂಟ್ವಾಳ ತಾ.ಪಂ. ಆಡಳಿತಾಧಿಕಾರಿ ಇಬ್ರಾಹಿಂ ದೊಡ್ಡಮನಿ ಅವರ ಅಧ್ಯಕ್ಷತೆಯಲ್ಲಿ ಬಂಟ್ವಾಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ನಡೆದ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ತಾಪಂ ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್ ಅವರು ಮಳೆಮಾಪಕಗಳು ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ ಎಂಬ ಬಗ್ಗೆ ದೂರುಗಳ ಕುರಿತು ಪ್ರಸ್ತಾವಿಸಿ, ಈ…

Read More

ಜ್ವರದಿಂದ ಬಳಲುತ್ತಿದ್ದ 5 ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಸಾವು

ಬಂಟ್ವಾಳ,: ಜ್ವರದಿಂದ ಬಳಲುತ್ತಿದ್ದ ಐದು ವರ್ಷದ ಬಾಲಕಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆಯಲ್ಲಿ ನಡೆದಿದೆ. ಅಲ್ಲಿಪಾದೆಯ ಅನೇಜ ಛಾಯ ಅವರ ಪುತ್ರಿ ಅರ್ನಿಕಾ (5) ಮೃತ ಬಾಲಕಿ. ಆಕೆ ಬಂಟ್ವಾಳ ದೇವಳ ಶಾಲೆಯ ಯುಕೆಜಿ ವಿದ್ಯಾರ್ಥಿನಿಯಾಗಿದ್ದಳು. ಕಳೆದ ಶುಕ್ರವಾರ ಶಾಲೆಗೆ ತೆರಳಿದ್ದ ಬಾಲಕಿಗೆ ಬಳಿಕ ಜ್ವರ ಕಾಣಿಸಿಕೊಂಡಿದ್ದು, ಶನಿವಾರ ಶಾಲೆಗೆ ರಜೆ ಇದ್ದ ಕಾರಣ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಳು. ಜ್ವರ ತೀವ್ರಗೊಂಡ ಹಿನ್ನೆಲೆಯಲ್ಲಿ ಭಾನುವಾರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ…

Read More

ಆರ್‌ಎಸ್‌ಎಸ್ ನೋಂದಣಿ ಮಾಡಿಕೊಂಡರೆ ಉತ್ತಮ: ಹರೀಶ್ ಕುಮಾರ್

ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಸೇರಿದಂತೆ ದೇಶದಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಸಂಘಟನೆಗಳು ಕಾನೂನಿನಡಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದ್ದು, ಆರ್‌ಎಸ್‌ಎಸ್ ಕೂಡ ನೋಂದಣಿ ಮಾಡಿಕೊಂಡರೆ ಉತ್ತಮ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಅಭಿಪ್ರಾಯಪಟ್ಟರು. ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ಸಂಘಟನೆ ಸಾರ್ವಜನಿಕವಾಗಿ ಕಾರ್ಯನಿರ್ವಹಿಸುವ ಸಂದರ್ಭದಲ್ಲಿ ಕಾನೂನಿನ ಚೌಕಟ್ಟಿನೊಳಗೆ ಕಾರ್ಯನಿರ್ವಹಿಸಬೇಕು. ಸಂಘಟನೆಯ ಚಟುವಟಿಕೆಗಳಲ್ಲಿ ಪಾರದರ್ಶಕತೆ ಹಾಗೂ ಉತ್ತರದಾಯಿತ್ವ ಕಾಪಾಡಲು ನೋಂದಣಿ ಅಗತ್ಯವಾಗಿದೆ ಎಂದು ಹೇಳಿದರು. ದೇಶದ ವಿವಿಧ ಸಾಮಾಜಿಕ,…

Read More

ಪರಿಸರದ ನಾಶಕ್ಕೆ ಮಾನವನ ಆಸೆ-ದುರಾಸೆಗಳೇ ಕಾರಣ: ಅನಿಲ್ ಪಂಡಿತ್

ಕಲ್ಲಡ್ಕ,: ಪರಿಸರದ ನಾಶಕ್ಕೆ ಮಾನವನ ಅತಿಯಾದ ಆಸೆ ಮತ್ತು ದುರಾಸೆಗಳೇ ಪ್ರಮುಖ ಕಾರಣವಾಗಿದ್ದು, ಪರಿಸರವನ್ನು ಉಳಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಸಂಸ್ಕಾರ ಭಾರತಿ ಜಿಲ್ಲಾ ಉಪಾಧ್ಯಕ್ಷ ಅನಿಲ್ ಪಂಡಿತ್ ಹೇಳಿದರು. ಅವರು ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ (ರಿ) ಹಾಗೂ ಜವಾಹರ ಬಾಲ್ ಮಂಚ್, ದಕ್ಷಿಣ ಕನ್ನಡ ಇವರ ಸಂಯುಕ್ತ ಆಶ್ರಯದಲ್ಲಿ ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ, ವೀರಕಂಭದಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ, ವನಮಹೋತ್ಸವ ಹಾಗೂ ಬಾಲಕಾರ್ಮಿಕ…

Read More

ಬಂಟ್ವಾಳದಲ್ಲಿ ಬಿಜೆಪಿ ವಿಶೇಷ ಸಂಪರ್ಕ ಅಭಿಯಾನ: ಹಿರಿಯ ಕಾರ್ಯಕರ್ತರ ಮನೆಗೆ ಭೇಟಿ ನೀಡಿದ ಸಂಸದ ಬ್ರಿಜೇಶ್ ಚೌಟ

ಪ್ರಧಾನಮಂತ್ರಿ ನರೇಂದ್ರ ಮೋದಿ ಯವರ ಸುದೀರ್ಘ 12 ವರ್ಷಗಳ ಜನಪರ ಆಡಳಿತ, ಅಭಿವೃದ್ಧಿ ಮತ್ತು ಸೇವಾ ಸಂಕಲ್ಪದ ಅಂಗವಾಗಿ ಬಂಟ್ವಾಳ ಮಂಡಲದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಅವರಿಂದ ವಿಶೇಷ ಸಂಪರ್ಕ ಅಭಿಯಾನ ನಡೆಯಿತು.ಈ ಸಂದರ್ಭದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸಂಸದ ಕ್ಯಾ.ಬ್ರಿಜೇಶ್ ಚೌಟ, ಹಿರಿಯರ ಸೂಚನೆಯಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹಾಗೂ ಕಾರ್ಯಕರ್ತರ ಜೊತೆ ಹಿರಿಯ ಬಿಜೆಪಿ ಕಾರ್ಯಕರ್ತರ ಮನೆಗೆ ಬೇಟಿ ನೀಡಿ ಗೌರವಿಸುವ ಕಾರ್ಯ ಮಾಡಿದ್ದೇನೆ‌…

Read More

ಸಾಮರ್ಥ್ಯ ಮೀರಿ ಪ್ರಯಾಣ: ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನ ಪಲ್ಟಿ

ತೊಕ್ಕೊಟ್ಟು, ಜೂ.17: ದ್ವಿಚಕ್ರ ವಾಹನದಲ್ಲಿ ನಾಲ್ವರು ಬಾಲಕಿಯರು ಪ್ರಯಾಣಿಸುತ್ತಿದ್ದ ವೇಳೆ ವಾಹನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ತೊಕ್ಕೊಟ್ಟಿನ ಎಬಿಸಿ ಕ್ಲಬ್ ಸಮೀಪ ನಡೆದಿದೆ. ವಾಹನವು ಏಕಾಏಕಿ ನಿಯಂತ್ರಣ ಕಳೆದುಕೊಂಡು ರಸ್ತೆ ಮಧ್ಯೆ ಮಗುಚಿಬಿದ್ದಿದ್ದು, ಅಪಘಾತಕ್ಕೂ ಮುನ್ನ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಢಿಕ್ಕಿ ಹೊಡೆಯುವ ಅಪಾಯ ಎದುರಾಗಿತ್ತು. ಅದೃಷ್ಟವಶಾತ್ ಯಾವುದೇ ದೊಡ್ಡ ಅನಾಹುತ ಸಂಭವಿಸಿಲ್ಲ. ಘಟನೆಯ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ದ್ವಿಚಕ್ರ ವಾಹನಗಳಲ್ಲಿ ಸಾಮರ್ಥ್ಯ ಮೀರಿ ಪ್ರಯಾಣಿಸುವ ಅಪಾಯದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ…

Read More

ಜೂನ್ 19ರಂದು ಮಂಗಳೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ್ ರೋಜ್‌ಗಾರ್ ಯೋಜನೆ ಕಾರ್ಯಕ್ರಮ

ಮಂಗಳೂರು, ಜೂ.17: ಉದ್ಯೋಗ ಸೃಷ್ಟಿ, ಸಾಮಾಜಿಕ ಭದ್ರತಾ ವ್ಯಾಪ್ತಿ ವಿಸ್ತರಣೆ ಹಾಗೂ ಉದ್ಯೋಗಾರ್ಹತೆ ಹೆಚ್ಚಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪ್ರಧಾನ ಮಂತ್ರಿ ವಿಕಸಿತ ಭಾರತ್ ರೋಜ್‌ಗಾರ್ ಯೋಜನೆ (ಪಿಎಂವಿಬಿಆರ್‌ವೈ) ಕುರಿತ ಜಾಗೃತಿ ಮತ್ತು ಫಲಾನುಭವಿಗಳ ಕಾರ್ಯಕ್ರಮವು ಜೂನ್ 19ರಂದು ಸಂಜೆ 4 ಗಂಟೆಗೆ ನಗರದ ಬಂದರಿನ ಕೆನರಾ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಾದೇಶಿಕ ಪಿಎಫ್ ಆಯುಕ್ತ ಸಂದೀಪ್ ಬಿಸ್ವಾಸ್ ತಿಳಿಸಿದ್ದಾರೆ. ನಗರದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ…

Read More

ಕಾಸರಗೋಡು ಜಿಲ್ಲೆಗೆ ಹೊಸ ಎಸ್ಪಿ: ಇತಿಹಾಸ ನಿರ್ಮಿಸಿದ ನಿತಿನ್ ರಾಜ್

​ಕಾಸರಗೋಡು : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಐಪಿಎಸ್ ಅಧಿಕಾರಿ ನಿತಿನ್ ರಾಜ್ ಪಿ. ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮನ ಎಸ್ಪಿ ಬಿ.ವಿ. ವಿಜಯ್ ಭರತ್ ರೆಡ್ಡಿ ಅವರಿಂದ ಅವರು ಅಧಿಕಾರದ ಹೊಣೆಗಾರಿಕೆಯನ್ನು ವಹಿಸಿಕೊಂಡರು. ​ಈ ನೇಮಕವು ಜಿಲ್ಲೆಯ ಇತಿಹಾಸದಲ್ಲಿ ವಿಶೇಷ ಮಹತ್ವ ಪಡೆದಿದೆ. ಕಾಸರಗೋಡು ಜಿಲ್ಲೆ ಅಸ್ತಿತ್ವಕ್ಕೆ ಬಂದು 44 ವರ್ಷಗಳ ಬಳಿಕ, ಇದೇ ಮೊದಲ ಬಾರಿಗೆ ಸ್ಥಳೀಯರೊಬ್ಬರು ಜಿಲ್ಲೆಯ ಪೊಲೀಸ್ ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ. ರಾವಣೇಶ್ವರಂ ಮೂಲದ ಇವರು ಕಾಞಂಗಾಡು ದುರ್ಗಾ ಹೈಸ್ಕೂಲಿನ ಹಳೆಯ ವಿದ್ಯಾರ್ಥಿಯಾಗಿದ್ದಾರೆ….

Read More
error: Content is protected !!