Headlines

ಸಾಹಿತ್ಯ ಲೋಕದಿಂದ ಬೆಳ್ಳಿಪರದೆಗೆ: ‘ಅದಿತಿ’ ಚಿತ್ರದ ಮೂಲಕ ಹೊಸ ಹೆಜ್ಜೆ ಇಟ್ಟ ಕಥಾಬಿಂದು ಪಿ.ವಿ. ಪ್ರದೀಪ್ ಕುಮಾರ್

ಮಂಗಳೂರು: ಎರಡು ದಶಕಗಳಿಂದ ಸಾಹಿತ್ಯ ಕ್ಷೇತ್ರದಲ್ಲಿ ಸಕ್ರಿಯರಾಗಿರುವ ಖ್ಯಾತ ಲೇಖಕ ಹಾಗೂ ಕಾದಂಬರಿಕಾರ ಪಿ.ವಿ. ಪ್ರದೀಪ್ ಕುಮಾರ್ ಅವರ ಕಲ್ಪನೆ ಮತ್ತು ನಿರ್ದೇಶನದಲ್ಲಿ ಮೂಡಿಬಂದಿರುವ ಬಹುನಿರೀಕ್ಷಿತ ಎ ಐ ಆಧಾರಿತ ‘ಅದಿತಿ’ ಚಲನಚಿತ್ರ ಬುಧವಾರ ನಗರದ ಪತ್ರಿಕಾ ಭವನದಲ್ಲಿ ಬಿಡುಗಡೆಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಪತ್ರಿಕಾ ಭವನದ ಅಧ್ಯಕ್ಷ ಪಿ.ಬಿ. ಹರೀಶ್ ರೈ ಮಾತನಾಡಿ, ಪ್ರದೀಪ್ ಕುಮಾರ್ ಅವರು 50ಕ್ಕೂ ಹೆಚ್ಚು ಕಾದಂಬರಿಗಳನ್ನು ಕನ್ನಡ ಸಾಹಿತ್ಯ ಲೋಕಕ್ಕೆ ನೀಡಿದ್ದು, ಅವುಗಳಲ್ಲಿ 30ಕ್ಕೂ ಅಧಿಕ ಕೃತಿಗಳು ‘ಸುಧಾ’, ‘ತರಂಗ’, ‘ಮಂಗಳ’, ‘ಕರ್ಮವೀರ’…

Read More

ಕನ್ನಡ ಸಾಹಿತ್ಯಾಸಕ್ತರ ವಿಳಾಸ ಕೋರಿಕೆ

ಕಾಸರಗೋಡು: ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ(ರಿ.), ಕನ್ನಡ ಗ್ರಾಮ, ಕಾಸರಗೋಡು ನೇತೃತ್ವದಲ್ಲಿ 2026ರ ನವೆಂಬರ್ 7 ಮತ್ತು 8ರಂದು ನಡೆಯಲಿರುವ ಕೇರಳ ರಾಜ್ಯ 8ನೇ ಕನ್ನಡ ಸಮ್ಮೇಳನ, ಕೇರಳ-ಕರ್ನಾಟಕ ಉತ್ಸವ, ಕನ್ನಡ ರಾಜ್ಯೋತ್ಸವ ಹಾಗೂ ಕೇರಳ ರಾಜ್ಯ ದ್ವಿತೀಯ ಮಕ್ಕಳ ಸಾಹಿತ್ಯ ಸಮ್ಮೇಳನ-2026 ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆ ಕಳುಹಿಸುವ ಉದ್ದೇಶದಿಂದ ಕನ್ನಡ ಸಾಹಿತ್ಯಾಸಕ್ತರ ವಿಳಾಸಗಳನ್ನು ಕೋರಲಾಗಿದೆ. ಕಾಸರಗೋಡು ಜಿಲ್ಲೆಯ ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು, ಕಲಾವಿದರು, ಲೇಖಕರು, ಸಾಹಿತಿಗಳು, ಕವಿಗಳು, ಮಾಧ್ಯಮ ಪ್ರತಿನಿಧಿಗಳು, ಸಾಮಾಜಿಕ ಜಾಲತಾಣಗಳ ಆಡಳಿತಗಾರರು, ಸಾರ್ವಜನಿಕರು…

Read More

ಎತ್ತಿನಹೊಳೆ ಯೋಜನೆ ಕುರಿತು ಕರಾವಳಿ ಭಾಗದ ಆತಂಕಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿ: ಎಎಪಿ ಆಗ್ರಹ

ಮಂಗಳೂರು, ಜೂ.17: ಎತ್ತಿನಹೊಳೆ (ನೇತ್ರಾವತಿ ನದಿ ತಿರುವು) ಯೋಜನೆಯಿಂದ ಕರಾವಳಿ ಭಾಗದ ಪರಿಸರ, ಜೀವವೈವಿಧ್ಯ ಹಾಗೂ ಕುಡಿಯುವ ನೀರಿನ ಭದ್ರತೆಗೆ ಉಂಟಾಗಬಹುದಾದ ಪರಿಣಾಮಗಳ ಕುರಿತು ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಸಾಲಿನ್ಸ್ ಆಗ್ರಹಿಸಿದರು. ನಗರದ ಪತ್ರಿಕಾಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳ ನೀರಿನ ಕೊರತೆ ಮತ್ತು ಫ್ಲೋರೈಡ್ ಸಮಸ್ಯೆ ನಿವಾರಣೆಗೆ 2012ರಲ್ಲಿ ಆರಂಭಗೊಂಡ ಯೋಜನೆಯ ವೆಚ್ಚ ಆರಂಭಿಕ ₹9,000 ಕೋಟಿಯಿಂದ ₹23,000…

Read More

ಜೂ.20-21ರಂದು ಕದ್ರಿ ಕಂಬಳದಲ್ಲಿ ಮಾವು-ಹಲಸು ಮೇಳ

ಮಂಗಳೂರು, ಕಲ್ಕೂರ ಪ್ರತಿಷ್ಠಾನ ಹಾಗೂ ಸಾವಯವ ಕೃಷಿಕ ಗ್ರಾಹಕ ಬಳಗದ ಸಹಯೋಗದಲ್ಲಿ ಸಾವಯವ ಕೃಷಿಕರು ಬೆಳೆಸಿದ ವಿವಿಧ ತಳಿಯ ಮಾವು ಮತ್ತು ಹಲಸಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳವು ಜೂನ್ 20 ಮತ್ತು 21ರಂದು ಕದ್ರಿ ಕಂಬಳದ ಮಲ್ಲಿಕಾ ಬಡಾವಣೆಯಲ್ಲಿರುವ ‘ಮಂಜು ಪ್ರಾಸಾದ’ ಆವರಣದಲ್ಲಿ ನಡೆಯಲಿದೆ ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಡು-ನುಡಿ ಜಾಗೃತಿ ಸಮ್ಮೇಳನ ಸರಣಿಯ ಅಂಗವಾಗಿ ಆಯೋಜಿಸಿರುವ…

Read More

ಮತದಾರರ ಜಾಗೃತಿಗೆ ಕಾಂಗ್ರೆಸ್ ಮನೆಮನೆ ಭೇಟಿ ಅಭಿಯಾನ: ಕೆ.ಜಯಪ್ರಕಾಶ್ ಹೆಗ್ಡೆ

ಉಡುಪಿ: ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಕುರಿತು ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಪ್ರತೀ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮನೆಮನೆ ಭೇಟಿಯ ಮೂಲಕ ಜನಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಜಿಲ್ಲಾ ಕಾಂಗ್ರೆಸ್‌ನಿಂದ ಜೂ. 23ರಿಂದ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ. ಅವರು ಅಂಬಾಗಿಲಿನ ಅಮೃತ್ ಗಾರ್ಡನ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ ಜೂ. 30 ರಿಂದ ಜು. 29 ರ ವರೆಗೆ ನಡೆಯಲಿದೆ. ಚುನಾವಣಾ ಆಯೋಗದ ಮೂಲಕ…

Read More

ಉಡುಪಿಯ ಸರಿಗಮಭಾರತಿ ಸಂಗೀತ ಶಾಲೆಯ ಸಂಸ್ಥಾಪಕಿ, ವಿಧುಷಿ ಶ್ರೀಮತಿ ಉಮಾಶಂಕರಿ ಟಿ. ಕೆ , ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್‌ಗೆ ಆಯ್ಕೆ

ಕಾಸರಗೋಡು: ಗಡಿನಾಡು ಕಾಸರಗೋಡಿನ ಡಾ. ವಾಮನ್ ರಾವ್ ಬೇಕಲ್ ಹಾಗೂ ಸಂಧ್ಯಾರಾಣಿ ಟೀಚರ್ ಸಾರಥ್ಯದ ಕನ್ನಡ ಭವನ ನೀಡುವ ಪ್ರತಿಷ್ಠಿತ “ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್–2026” ಗೆ ಆಯ್ಕೆಯಾಗಿದ್ದಾರೆ. ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ, ಕನ್ನಡ ಭವನ ಪ್ರಕಾಶನ ಹಾಗೂ ಕನ್ನಡ ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಜುಲೈ 26, 2026ರಂದು ನಡೆಯಲಿರುವ “ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ–2026” ಹಾಗೂ ಕನ್ನಡ ಭವನ ರಜತ ಸಂಭ್ರಮ ಸಮಾರೋಪ ಸಮಾರಂಭದಲ್ಲಿ…

Read More

ಎಸ್.ಡಿ.ಪಿ.ಐ ಮಂಗಳೂರು ನಗರ ಜಿಲ್ಲಾ ಪ್ರತಿನಿಧಿ ಸಭೆ : ನೂತನ ಜಿಲ್ಲಾಧ್ಯಕ್ಷರಾಗಿ ಅಶ್ರಫ್ ಅಡ್ಡೂರು ಆಯ್ಕೆ

ಮಂಗಳೂರು, ಜೂನ್ 17: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಮಂಗಳೂರು ನಗರ ಜಿಲ್ಲಾ ಪ್ರತಿನಿಧಿ ಸಭೆಯು ಮಂಗಳೂರಿನ ಬಾಂಬೆಲಕ್ಕಿ ಹೋಟೆಲ್ ಸಭಾಂಗಣದಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರಾಜ್ಯಾಧ್ಯಕ್ಷರು ದೇಶದ ಪ್ರಸ್ತುತ ರಾಜಕೀಯ ಪರಿಸ್ಥಿತಿ, ಸಾಮಾಜಿಕ ನ್ಯಾಯ, ಅಲ್ಪಸಂಖ್ಯಾತರು ಹಾಗೂ ಹಿಂದುಳಿದ ವರ್ಗಗಳ ಹಕ್ಕುಗಳ ರಕ್ಷಣೆ ಮತ್ತು ಪಕ್ಷದ ಸಂಘಟನೆ ಬಲವರ್ಧನೆಯ ಕುರಿತು ಅವರು ಮಾರ್ಗದರ್ಶನ ನೀಡಿದರು.ಪಕ್ಷದ ಸಿದ್ಧಾಂತಗಳನ್ನು ಜನಸಾಮಾನ್ಯರ ಮನೆಮನೆಗೆ ತಲುಪಿಸುವಲ್ಲಿ ಕಾರ್ಯಕರ್ತರ…

Read More

ರಾಮ ಮಂದಿರ ದೇಣಿಗೆ ವಿವಾದಕ್ಕೆ ಹೊಸ ತಿರುವು: 1,250 ಅಮೂಲ್ಯ ಇಟ್ಟಿಗೆಗಳು ನಾಪತ್ತೆ ಆರೋಪ

ಅಯೋಧ್ಯೆ, ಅಯೋಧ್ಯೆಯ ರಾಮ ಮಂದಿರ ದೇಣಿಗೆ ನಿರ್ವಹಣೆ ಕುರಿತ ವಿವಾದಕ್ಕೆ ಹೊಸ ತಿರುವು ಸಿಕ್ಕಿದ್ದು, ರಾಮ ಜನ್ಮಭೂಮಿ ಚಳವಳಿಯ ಕಾರ್ಯಕರ್ತ ಸಂತೋಷ್ ದುಬೆ ಅವರು ಸುಮಾರು 1,250 ಚಿನ್ನ, ಬೆಳ್ಳಿ, ವಜ್ರ ಹಾಗೂ ಅಷ್ಟಧಾತುವಿನಿಂದ ತಯಾರಿಸಲಾದ ಅಮೂಲ್ಯ ಇಟ್ಟಿಗೆಗಳು ನಾಪತ್ತೆಯಾಗಿವೆ ಎಂದು ಆರೋಪಿಸಿ ಪೊಲೀಸ್ ದೂರು ದಾಖಲಿಸಿದ್ದಾರೆ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ಟ್ರಸ್ಟ್ ಸದಸ್ಯ ಅನಿಲ್ ಮಿಶ್ರಾ, ದೇವಾಲಯದ ಆಡಳಿತಾಧಿಕಾರಿ ಗೋಪಾಲ್ ರಾವ್ ಹಾಗೂ ರಾಮ್ ಶಂಕರ್…

Read More

ಧರ್ಮಸ್ಥಳ ಕ್ಷೇತ್ರದ ವಿರುದ್ಧದ ಷಡ್ಯಂತ್ರದ ಆರೋಪ ಆತಂಕಕಾರಿ: ಶೀರೂರು ಶ್ರೀ

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆಸಲಾಗುತ್ತಿದೆ ಎಂಬ ಆರೋಪಗಳು ಆತಂಕಕಾರಿ ಬೆಳವಣಿಗೆಯಾಗಿದ್ದು, ಈ ಕುರಿತು ಸಮಗ್ರ ತನಿಖೆ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಬೇಕು ಎಂದು ಪರ್ಯಾಯ ಪೀಠಾಧಿಪತಿಗಳಾದ ಶೀರೂರು ಮಠದ ಶ್ರೀ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಅಭಿಪ್ರಾಯಪಟ್ಟಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳದಂತಹ ಮಹತ್ವದ ಧಾರ್ಮಿಕ ಕ್ಷೇತ್ರದ ಬಗ್ಗೆ ಷಡ್ಯಂತ್ರ ನಡೆಸಲು ನೂರಾರು ಕೋಟಿ ರೂಪಾಯಿಗಳ ಅವ್ಯವಹಾರ ನಡೆದಿದೆ ಎನ್ನುವ ಆರೋಪಗಳು ಕೇಳಿಬರುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಇಂತಹ ಆರೋಪಗಳ ಹಿಂದೆ…

Read More

ಕಲ್ಲರಕೋಡಿಯಲ್ಲಿ ನೂತನ ಪದವಿಪೂರ್ವ ಕಾಲೇಜು ಕಟ್ಟಡ ಉದ್ಘಾಟನೆ

ನರಿಂಗಾನ: ನರಿಂಗಾನ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲರಕೋಡಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಉನ್ನತೀಕರಿಸಿದ ಪದವಿಪೂರ್ವ ಕಾಲೇಜು ಕಟ್ಟಡದ ಉದ್ಘಾಟನಾ ಸಮಾರಂಭ ವಿಜೃಂಭಣೆಯಿಂದ ನಡೆಯಿತು. ನೂತನ ಕಾಲೇಜು ಕಟ್ಟಡವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ U. T. Khader ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಕಾಲೇಜು ಮಂಜೂರುಗೊಳಿಸುವುದಕ್ಕಿಂತ ಅದನ್ನು ಕಾರ್ಯರೂಪಕ್ಕೆ ತಂದು ಯಶಸ್ವಿಯಾಗಿ ನಡೆಸುವುದು ಮುಖ್ಯ ಎಂದು ಹೇಳಿದರು. “ಕಲ್ಲರಕೋಡಿಗೆ ಕಾಲೇಜು ಮಂಜೂರಾದ ಬಳಿಕ ಅದನ್ನು ಉಳಿಸಿ ಬೆಳೆಸುವುದು…

Read More
error: Content is protected !!