ಅ.2ರಂದು ಭಾರತರತ್ನ ಎಂ.ಎಸ್. ಸುಬ್ಬ ಲಕ್ಷ್ಮಿ ಅವರ 110ನೇ ವರ್ಷದ ಸಂಭ್ರಮಾಚರಣೆ
ಮಂಗಳೂರು: ಭಾರತರತ್ನ ಎಂ.ಎಸ್. ಸುಬ್ಬಲಕ್ಷ್ಮಿ ಅವರ 110ನೇ ವರ್ಷದ ಸಂಭ್ರಮಾಚರಣೆಯ ಅಂಗವಾಗಿ ಮಣಿ ಕೃಷ್ಣ ಸ್ವಾಮಿ ಅಕಾಡೆಮಿ ಹಾಗೂ ರಾಮಕೃಷ್ಣ ಮಠದ ಸಹಯೋಗದಲ್ಲಿ ಅಕ್ಟೋಬರ್ 2ರಂದು ವಿಶೇಷ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಘಟಕ ಶ್ರೀ ವಿಭು ರಾವ್ ತಿಳಿಸಿದರು. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ಟೋಬರ್ 2ರಂದು ಸಂಜೆ 5 ಗಂಟೆಗೆ ಮಂಗಳೂರಿನ ರಾಮಕೃಷ್ಣ ಮಠದ ನೂತನ ಅಮೃತ ಭವನ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜಿ ಮಹಾರಾಜ್…
