ಮಲ್ಪೆ : 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಸೆರೆ

ಉಡುಪಿ: ಮಲ್ಪೆ ಬೀಚ್ ನಲ್ಲಿ ನಡೆದ ಕಳವು ಪ್ರಕರಣ ಸಂಬಂಧಿಸಿದಂತೆ 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಮಹಿಳಾ ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಆಶಾ ಯಾನೆ ಸುಮಿತ್ರ ಕೃಷ್ಣ ಮತ್ತು ರೇಖಾ ದಾನಪ್ಪ ಬಂಧಿತ ಆರೋಪಿಗಳು. ಈ ಇಬ್ಬರು ಆರೋಪಿಗಳು ಸುಮಾರು 11 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ವಾರೆಂಟ್ ಜಾರಿ ಮಾಡಲಾಗಿತ್ತು. ಮಲ್ಪೆ ಠಾಣಾ ಸಿಬ್ಬಂದಿಗಳಾದ ಸುರೇಶ್ ಕುಮಾರ್, ವಿಶ್ವನಾಥ್ ಮತ್ತು ಸಿಂಚನ ಅವರು ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಹೊಸ ಮನೆ ಎಂಬಲ್ಲಿ ಜ. 31ರಂದು ಆರೋಪಿಗಳನ್ನು…

Read More

ಮಂಗಲ್ಪಾಡಿ: ಕುಕ್ಕರ್ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗೆ ರ‍್ಯಾಗಿಂಗ್

ಮಂಗಲ್ಪಾಡಿ: ಮಂಗಲ್ಪಾಡಿಯ ಕುಕ್ಕರ್ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಯ ಮೇಲೆ ರ್ಯಾಗಿಂಗ್ ನಡೆಸಿ ಕ್ರೂರವಾಗಿ ಹಲ್ಲೆ ಮಾಡಿದ ಘಟನೆ ಬೆಳಕಿಗೆ ಬಂದಿದೆ.ಮಧ್ಯಾಹ್ನದ ಊಟ ಸೇವಿಸುವ ವೇಳೆ ವಿದ್ಯಾರ್ಥಿ ಮಹಮ್ಮದ್ ಬಿಷ್ರಾನ್ ಮೇಲೆ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ. ಕಣ್ಣಿಗೆ ಗಾಯಗೊಂಡ ವಿದ್ಯಾರ್ಥಿಯನ್ನು ತಕ್ಷಣ ಮಂಗಲ್ಪಾಡಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.ಈ ಕುರಿತು ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

Read More

ಕಾರ್ಕಳ: ಪತ್ನಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಪತಿ: ಚಿಕಿತ್ಸೆ ಫಲಕಾರಿಯಾಗದೆ ಪತ್ನಿ ಸಾವು

ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ನೂರಾಳ್ ಬೆಟ್ಟು ಗ್ರಾಮದ ಗುಮ್ಮೆಟ್ಟು ನಿವಾಸಿ ಗೀತಾ ಅವರ ಮೇಲೆ ಪತಿ ಸುನೀಲ್ ಕುಮಾರ್ ಮಾರಣಾಂತಿಕ ಹಲ್ಲೆ ನಡೆಸಿದ್ದು ಆರೋಪಿ ಪತ್ನಿ ಗೀತಾ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಕಳೆದ ಮಂಗಳವಾರ ಗೀತಾ ಹಾಗೂ ಅವರ ಪತಿ ಸುನೀಲ್ ಕುಮಾ‌ರ್ ನಡುವೆ ಸಾಂಸಾರಿಕ ವಿಚಾರವಾಗಿ ಗಲಾಟೆ ನಡೆದಿದ್ದು, ಈ ಸಂದರ್ಭ ಸುನೀಲ್ ಕುಮಾರ್ ಗೀತಾ ಅವರನ್ನು ಕೊಲ್ಲುವ ಉದ್ದೇಶದಿಂದ ಯಾವುದೋ ಆಯುಧದಿಂದ ಹಣೆಗೆ ಹಾಗೂ ಗದ್ದಕ್ಕೆ ಹೊಡೆದು ಗಂಭೀರ ಗಾಯಗೊಳಿಸಿದ್ದಾನೆ ಎಂದು…

Read More

ಫೆ.7-8;ಉಚಿತ ಶ್ರವಣ ತಪಾಸಣಾ ಶಿಬಿರ

ಮಂಗಳೂರು, ಫೆ.3; ಟೀಮ್ ಈಶ್ವರ್ ಮಲ್ಪೆ ಅವರ ವೈದ್ಯಕೀಯ ತಂಡ ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತ ರ ಸಂಘದ ಸಹಯೋಗದೊಂದಿಗೆ ಮಂಗಳೂರು ಪ್ರೆಸ್ ಕ್ಲಬ್ ,ಪತ್ರಿಕಾ ಭವನ ಟ್ರಸ್ಟ್ ಸಹಕಾರ ದೊಂದಿಗೆ ಕಳೆದ ಸಲದಂತೆ ಈ ಬಾರಿಯೂ ದಿನಾಂಕ 7-02-2026. ಮತ್ತು 8-02-2026 ‌‌‌‌‌ರಂದು ಉಚಿತ ಶ್ರವಣ ತಪಾಸಣಾ ಶಿಬಿರ (ಸಮಯ ಬೆಳಗ್ಗೆ 9.30ರಿಂದ ಸಂಜೆ 4.30ರವರೆಗೆ ಮಂಗಳೂರಿನ ಪತ್ರಿಕಾ ಭವನದಲ್ಲಿ ನಡೆಸಲಿದೆ.ಈ ಶಿಬಿರದಲ್ಲಿ ಉಚಿತವಾಗಿ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಕಾರ್ಯಕ್ರಮ…

Read More

ರಾಜ್ಯ ಮಹಿಳಾ ಜಾನಪದ ಕ್ರೀಡೋತ್ಸವ ಹಾಗೂ ಸಾಂಸ್ಕೃತಿಕ ಸಮ್ಮೇಳನ -ಮಹಿಳಾ ವೈಭವ 2026

ಮಂಗಳೂರು:ದೇಶದ 144 ಕೋಟಿ ಜನ ಸಂಖ್ಯೆಯ ಮಾನವ ಸಂಪತ್ತುಗಳ ಪೈಕಿ ಬಹುತೇಕ ಮಹಿಳೆಯರು ಇದ್ದಾರೆ. ಮಹಿಳೆಯರು ಸಮಾಜದಲ್ಲಿ ದೊಡ್ಡ ಶಕ್ತಿಯಾಗಿದ್ದಾರೆ. ಮಹಿಳೆಯರಿಗೆ ಸಮಾಜದಲ್ಲಿ ಅಪಾರ ಗೌರವವೂ ಇದೆ. ಪ್ರತೀ ವ್ಯಕ್ತಿಯ ಯಶಸ್ಸಿನ ಹಿಂದೆ ಮಹಿಳೆಯ ಪಾತ್ರ ಮಹತ್ವದ್ದಾಗಿದೆ. ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಮುನ್ನಡೆಯುತ್ತಿರುವುದು ಆಶಾದಾಯಕ ಬೆಳವಣಿಗೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಹೇಳಿದ್ದಾರೆ. ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ವತಿಯಿಂದ ಮಹಿಳಾ ಸಶಕ್ತಿಕರಣದ ಸಲುವಾಗಿ ನಗರದ ಪುರಭವನದಲ್ಲಿ ಸೋಮವಾರ…

Read More

ಸ್ಮಾರ್ಟ್ ಸಿಟಿ ಯೋಜನೆಯಡಿ ಎಮ್ಮೆಕೆರೆ ಈಜುಕೊಳ ಹೆಸರಿನಲ್ಲಿ ಬಹು ಕೋಟಿ ಗುಳುಂ : ಎ ಎ ಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎಸ್. ಎಲ್. ಪಿಂಟೊ

ಮಂಗಳೂರು:ಸ್ಮಾರ್ಟ್ ಸಿಟಿ ಯೋಜನೆಯಡಿ ಎಮ್ಮೆಕೆರೆ ಈಜುಕೊಳವನ್ನು 24.94 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಎಎಪಿ ಮಂಗಳೂರು ಸಂಶೋಧನಾ ತಂಡವು ಈ ಈಜು ಕೊಳದ ನಿರ್ಮಾಣದ ಸಮಯದಲ್ಲಿ ಅತಿಯಾಗಿ ಹೆಚ್ಚಿದ ವೆಚ್ಚಗಳು ಮತ್ತು ವ್ಯತ್ಯಾಸಗಳು ಮತ್ತು ನಿಯಮಗಳ ಉಲ್ಲಂಘನೆಯನ್ನು ಕಂಡುಹಿಡಿದಿದ್ದು ಇದು ಮೇಲ್ನೋಟಕ್ಕೆ ಕಾಮಗಾರಿಯಲ್ಲಿ ಭ್ರಷ್ಟಾಚಾರವಾಗಿರುವುದು ಸ್ಪಷ್ಟವಾಗಿ ಕಂಡು ಬರುತ್ತಿದ್ದು ಸತ್ಯಾ ಸತ್ಯತೆ ಹೊರ ಬರಲು ಲೋಕಾಯುಕ್ತ ಮಧ್ಯಪ್ರವೇಶವನ್ನು ಮಾಡಬೇಕೆಂದು ಆಮ್ ಆದ್ಮಿ ಪಕ್ಷ ಇದರ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎಸ್. ಎಲ್. ಪಿಂಟೊ ಆರೋಪಿಸಿದರು . ಅವರು ನಗರದ…

Read More

ಜೋಡಿ ಕೊಲೆಗೆ ಬೆಚ್ಚಿ ಬಿದ್ದ ಮಂಜೇಶ್ವರ …! : ಮಗಳ ಹತ್ಯೆ ತಡೆಯಲು ಹೋದ ಚಿಕ್ಕಪ್ಪನ ಪ್ರಾಣ ಹಾರಿತು ….?

ಕಾಸರಗೋಡು:ಮಂಜೇಶ್ವರ ತಾಲೂಕಿನ ತೂಮಿನಾಡು ಪ್ರದೇಶದಲ್ಲಿ ನಡೆದ ಭೀಕರ ಘಟನೆಯಲ್ಲಿ, ವ್ಯಕ್ತಿಯೊಬ್ಬ ತನ್ನ ಹದಿಹರೆಯದ ಮಗಳನ್ನು ಚಾಕುವಿನಿಂದ ಕೊಂದಿದ್ದು, ಆ ದಾಳಿಯನ್ನು ತಡೆಯಲು ಯತ್ನಿಸಿದ ಚಿಕ್ಕಪ್ಪನೂ ಗಂಭೀರ ಗಾಯಗಳಿಂದ ಇದೀಗ ಮೃತಪಟ್ಟಿದ್ದಾರೆ. ಇದರಿಂದ ಪ್ರಕರಣ ಜೋಡಿ ಕೊಲೆಯಾಗಿ ಮಾರ್ಪಟ್ಟಿದೆ. ಸೋಮವಾರ ಸಂಜೆ ನಡೆದ ಈ ಘಟನೆಯಲ್ಲಿ, ಉಮ್ಮರ್ ಫಾರೂಕ್ ಎಂಬವರು ತಮ್ಮ ಪುತ್ರಿ ಕೆ.ಯು. ಮರಿಯಮತ್ ಜುಮೈಲಾ (18) ಅವರ ಕುತ್ತಿಗೆಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಈ ವೇಳೆ ದಾಳಿಯನ್ನು ತಡೆಯಲು ಮುಂದಾದ ಷೇಕುಂಞ (50) ಎಂಬವರು…

Read More

ತುಕ್ಕು ಹಿಡಿದ ಪಂಜರ, ಅಶುದ್ಧ ಪರಿಸರ – ಪಿಲಿಕುಳ ಮೃಗಾಲಯದ ಮೇಲೆ ಹೈಕೋರ್ಟ್ ಅಕ್ರೋಶ

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿರುವ ಪಿಳಿಕುಳ ನಿಸರ್ಗಧಾಮವೆಂದರೆ ಮಕ್ಕಳ ಅಚ್ಚುಮೆಚ್ಚಿನ ತಾಣ. ಆದರೆ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿಯಿಂದ ಕರಾವಳಿಯ ಪ್ರಸಿದ್ಧ ಮೃಗಾಲಯದ ಅವ್ಯವವಸ್ಥೆ ಕಂಡು ಹೈ ಕೋರ್ಟ್ ನ್ಯಾಯಾಧೀಶರೇ ದಿಗ್ಭ್ರಮೆಗೊಂಡಿದ್ದಾರೆ.ತಕ್ಷಣ ಬಂದ್ ಮಾಡುವುದು ಒಳಿತು ಎಂದು ಹೈಕೋರ್ಟ್ ನ್ಯಾಯಾಧೀಶರು ಸೂಚನೆ ನೀಡಿದ್ದಾರೆ. ಇದೀಗ ಅಧಿಕಾರಿಗಳ ಬೇಜಾಬ್ದಾರಿಯಿಂದ ಮಂಗಳೂರಿನ ಪಿಲಿಕುಳ ಮೃಗಾಲಯಕ್ಕೆ ಸಂಕಷ್ಟ ಶುರುವಾಗಿದೆ. ಪಿಲಿಕುಳ ಮೃಗಾಲಯದಲ್ಲಿರುವ ಪ್ರಾಣಿಗಳ ಫೋಟೋ ನೋಡಿ ಹೈಕೋರ್ಟ್ ನ್ಯಾಯಧೀಶರು ಗರಂ ಆಗಿದ್ದಾರೆ. ಉದ್ಯಾನವನದ ಪ್ರಾಣಿಗಳ ದಯನೀಯ ಸ್ಥಿತಿ ಕಂಡು ಹೈಕೋರ್ಟ್ ಅಕ್ರೋಶ…

Read More

ಫೆ. 6ರಂದು ಬಹುನಿರೀಕ್ಷಿತ “ನಾನ್‌ವೆಜ್‌” ತುಳು ಸಿನಿಮಾ ಬಿಡುಗಡೆ … !

ಮಂಗಳೂರು: “ಜಯಕಿರಣ ಫಿಲಂಸ್ ಲಾಂಛನದಲ್ಲಿ , ಪ್ರಕಾಶ್ ಪಾಂಡೇಶ್ವರ್ ನಿರ್ಮಾಣದಲ್ಲಿ ಹಾಗೂ ಕೆ. ಸೂರಜ್ ಶೆಟ್ಟಿ ನಿರ್ದೇಶನದಲ್ಲಿ ಅದ್ಭುತವಾಗಿ ಸಿದ್ಧಗೊಂಡಿರುವ ನಾನ್‌ ವೆಜ್ ತುಳು ಸಿನಿಮಾ ಫೆಬ್ರವರಿ 6 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ, ಈ ಸಿನಿಮಾವನ್ನು ಎಲ್ಲ ಮಲ್ಟಿಪ್ಲೆಕ್ಸ್‌ನಲ್ಲೂ ಕೇವಲ 99 ರೂ.ಗೆ ನೋಡಬಹುದಾಗಿದೆ. ದುಬಾರಿ ಟಿಕೆಟ್‌ ಕೊಟ್ಟು ಸಿನಿಮಾ ನೋಡಲು ಸಾಧ್ಯವಾಗದವರು ಇಂಥದ್ದೊಂದು ಸುಂದರ ಹಾಗೂ ಅತ್ಯುತ್ತಮ ಸಿನಿಮಾವನ್ನು ನೋಡದೆ ಇರಬಾರದು ಎಂಬ ಉದ್ದೇಶದಿಂದ ಕೇವಲ 99 ರೂ. ಟಿಕೆಟ್‌ ನಿಗದಿಪಡಿಸಿದ್ದು, ಇದು ತುಳುಚಿತ್ರರಂಗದಲ್ಲಿ…

Read More

ಎಸ್.ಆರ್. ಎಫ್.ಸಿ ಪಲ್ಲೇದಪಡ್ಪು ನೇತೃತ್ವದಲ್ಲಿ ಕ್ರಿಕೆಟ್ ಪಂದ್ಯಕೂಟ.

ಪಲ್ಲೇದಪಡ್ಪು: ಗ್ರಾಮೀಣ ಪ್ರದೇಶದ ಯುವಕರನ್ನು ಒಟ್ಟುಸೇರಿಕೊಂಡು ಕ್ರೀಡಾಸಕ್ತರ ಅಂಡರ್ ಆರ್ಮ್ ಪಿ ಪಿ ಎಲ್ ಕ್ರಿಕೆಟ್ ಪಂದ್ಯಕೂಟ ವರ್ಕಾಡಿ ಪಂಚಾಯತ್ ಮೈದಾನ ಸುಂಕದಕಟ್ಟೆಯಲ್ಲಿ ಜರಗಿತು. ಕ್ರೀಡಾಕೂಟದ ಉದ್ಘಾಟನೆಯನ್ನು ಯುವ ಉದ್ಯಮಿ ಕಾರ್ತಿಕ್ ಎಂಟರ್ಪ್ರೈಸಸ್ ಮಾಲಕ ಪ್ರಕಾಶ್ ಪೊಯ್ಯತ್ತಬೈಲ್ ನೆರವೇರಿಸಿದರು. ಕ್ಲಬ್ ನ ಅಧ್ಯಕ್ಷರಾದ ವಜ್ರೇಶ್ ಕಣಿಯೂರುರವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ರಾಜರಾಜೇಶ್ವರಿ ಭಜನಾ ಮಂಡಳಿ ಪಲ್ಲೇದಪಡ್ಪು ಇದರ ಅಧ್ಯಕ್ಷರಾದ ಪುರುಷೋತ್ತಮ ಶೆಟ್ಟಿ,ಗೋಪಾಲ ಶೆಟ್ಟಿ ಬಗಂಬಿಲ,ರಮೇಶ್ ಆಚಾರ್ಯ,ರಾಜೇಶ್ ಪರಂದಳ,ಸುರೇಶ್,ಮನೋಜ್ ಶೆಟ್ಟಿ,ಚಂದ್ರ ಶೇಖರ ಪಜ್ವ ಮೊದಲಾದವರು ಉಪಸ್ಥಿತರಿದ್ದರು. ಸಂಜೆ ಜರಗಿದ…

Read More
error: Content is protected !!