ಶ್ರೀನಿವಾಸ ವಿವಿಯಲ್ಲಿ ಎಐ ಸ್ವಯಂಚಾಲಿತ ವಾಹನ, ರಿಸೆಪ್ಷನ್ ರೋಬೋಟ್ ಅನಾವರಣ
ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯದ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯಲ್ಲಿ ವಿದ್ಯಾರ್ಥಿಗಳು ಅಭಿವೃದ್ಧಿಪಡಿಸಿದ ಕೃತಕ ಬುದ್ಧಿಮತ್ತೆ (AI) ಆಧಾರಿತ ಸ್ವಯಂಚಾಲಿತ ವಿದ್ಯುತ್ ವಾಹನ ‘ಶ್ರೀ ವಾಹನ್’ ಹಾಗೂ ಎಐ ರಿಸೆಪ್ಷನ್ ರೋಬೋಟ್ ‘ಶ್ರೀನಿಬೋಟ್’ ಅನ್ನು ಗುರುವಾರ ಮುಕ್ಕ ಕ್ಯಾಂಪಸ್‌ನಲ್ಲಿ ಯಶಸ್ವಿಯಾಗಿ ಪ್ರದರ್ಶಿಸಲಾಯಿತು. ವಿಶ್ವವಿದ್ಯಾಲಯದ ಆರ್ಥಿಕ ಸಹಕಾರ ಹಾಗೂ ಅಧ್ಯಾಪಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಈ ಯೋಜನೆಗಳನ್ನು ಅಭಿವೃದ್ಧಿಪಡಿಸಿದ್ದು, ಸಂಶೋಧನೆ, ನವೋದ್ಯಮ ಮತ್ತು ತಂತ್ರಜ್ಞಾನಾಧಾರಿತ ಶಿಕ್ಷಣದತ್ತ ವಿಶ್ವವಿದ್ಯಾಲಯದ ಬದ್ಧತೆಯನ್ನು ಪ್ರತಿಬಿಂಬಿಸುತ್ತವೆ. ‘ಶ್ರೀ ವಾಹನ್’ ಲಿಡಾರ್, ಎಐ ವಿಷನ್, ಜಿಪಿಎಸ್ ಮತ್ತು…
