ಬಾಕಿ ಉಳಿಸಿದ ಕನಿಷ್ಟ ಕೂಲಿ ಪಾವತಿಗೆ ಆಗ್ರಹಿಸಿ ಬೀಡಿ ಡಿಪೋ ಗೆ ಮುತ್ತಿಗೆ.
ಮಂಗಳೂರು: ಬಾಕಿ ಉಳಿಸಿದ ಕನಿಷ್ಟ ಕೂಲಿ ಪಾವತಿಗೆ ಆಗ್ರಹಿಸಿ ಬೀಡಿ ಡಿಪೋ ಗೆ ಮುತ್ತಿಗೆ ಹಾಕಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.2018 ರಿಂದ 2024 ರ ವರಗಿನ ಬಾಕಿ ಉಳಿಸಿರುವ ಕನಿಷ್ಟ ವೇತನ, 2024 ರಲ್ಲಿ ಹೆಚ್ಚಳಗೊಂಡಿರುವ ತುಟ್ಟಿಭತ್ತೆ ಪಾವತಿಗೆ ಒತ್ತಾಯಿಸಿ “ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಬೀಡಿ ಕಾರ್ಮಿಕರ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ” ಆಶ್ರಯದಲ್ಲಿ ಈ ಪ್ರತಿಭಟನೆ ನಡೆಯಿತು. ಕುಪ್ಪೆಪದವು ಪ್ರದೇಶ ಬೀಡಿ ಕೆಲಸಗಾರರ ಸಂಘ, ಗುರುಪುರ, ಸುರತ್ಕಲ್ ಬೀಡಿ ಲೇಬರ್ ಯೂನಿಯನ್, ವಾಮಂಜೂರು…