ಉಚಿತ ಬಸ್ ಸೇವೆ ಮಂಜೇಶ್ವರ ವ್ಯಾಪ್ತಿಗೆ ಇಲ್ಲ: ಶಾಸಕರ ವಿರುದ್ಧ ಬಿಜೆಪಿ ವಾಗ್ದಾಳಿ
ಮಿಯಪದವು, ಜೂ.12: ಕೇರಳ ಸರ್ಕಾರದ ಉಚಿತ ಬಸ್ ಸೇವೆ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಜನರಿಗೆ ಸಮರ್ಪಕವಾಗಿ ಲಭ್ಯವಾಗುತ್ತಿಲ್ಲ ಎಂದು ಆರೋಪಿಸಿರುವ ಬಿಜೆಪಿ ಮಂಜೇಶ್ವರ ಮಂಡಲ ಸಮಿತಿ, ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಸ್ಥಳೀಯ ಶಾಸಕರು ಬೇಜವಾಬ್ದಾರಿ ತೋರಿದ್ದಾರೆ ಎಂದು ಟೀಕಿಸಿದೆ. ಮಂಡಲ ಸಭೆಯಲ್ಲಿ ಮಾತನಾಡಿದ ಬಿಜೆಪಿ ಮುಖಂಡರು, ಅಧಿಕಾರಕ್ಕೆ ಬರಲು ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ಶಾಸಕರು ವಿಫಲರಾಗಿದ್ದು, ಮಂಜೇಶ್ವರ ಜನತೆಗೆ ಮತ್ತೊಮ್ಮೆ ನಿರಾಸೆ ಮೂಡಿಸಿದ್ದಾರೆ ಎಂದು ಆರೋಪಿಸಿದರು. ಪ್ರಾದೇಶಿಕ ಬಸ್‌ಗಳಲ್ಲಿ ಮಾತ್ರ ಉಚಿತ ಪ್ರಯಾಣ ವ್ಯವಸ್ಥೆ ಕಲ್ಪಿಸಲಾಗಿದ್ದು, ಕಾಸರಗೋಡು–ಮಂಗಳೂರು…
