ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ: ಔಷಧ ವಿಭಾಗದ ಮುಖ್ಯಸ್ಥನ ವಿರುದ್ಧ ಪ್ರಕರಣ ದಾಖಲು
ಬೆಳ್ತಂಗಡಿ, ಜೂನ್ 12: ಬೆಳ್ತಂಗಡಿ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಔಷಧ ವಿಭಾಗದ ಮುಖ್ಯಸ್ಥರಾಗಿರುವ ಚಂದ್ರಶೇಖರ್ ವಿರುದ್ಧ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಆಸ್ಪತ್ರೆಯ ಮಹಿಳಾ ಸಿಬ್ಬಂದಿಯೊಬ್ಬರಿಗೆ ಔಷಧಾಲಯದ ಉಗ್ರಾಣದಲ್ಲಿ ಲೈಂಗಿಕ ಕಿರುಕುಳ ನೀಡಿರುವುದಲ್ಲದೆ, ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಕೆಲಸದಿಂದ ತೆಗೆದುಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಮಹಿಳಾ ಸಿಬ್ಬಂದಿಯ ದೂರಿನ ಆಧಾರದಲ್ಲಿ ಗುರುವಾರ ಪ್ರಕರಣ ದಾಖಲಿಸಲಾಗಿದೆ. ಮೂಲತಃ ಬೆಳ್ತಂಗಡಿ…
