ಮುಕ್ರಂಪಾಡಿಯಲ್ಲಿ ತೃತೀಯ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಗೆ ಸಿದ್ಧತೆ: ನೂತನ ಪದಾಧಿಕಾರಿಗಳ ಆಯ್ಕೆ

ಬಂಟ್ವಾಳ, ಜೂ.12: ಮುಕ್ರಂಪಾಡಿಯ ಸುಭದ್ರಾ ಕಲ್ಯಾಣ ಮಂಟಪದಲ್ಲಿ ನಡೆಯಲಿರುವ ತೃತೀಯ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮದ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಇತ್ತೀಚೆಗೆ ನಡೆಯಿತು. ಸಭೆಯಲ್ಲಿ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಗೌರವಾಧ್ಯಕ್ಷರಾಗಿ ಶ್ರೀಮತಿ ಪ್ರತಿಭಾ ಓಕುಣ್ಣಾಯ ಬೊಳ್ಳಿಂಬಳ ಹಾಗೂ ಶ್ರೀಮತಿ ರಜತಾ ಭಟ್ ಮುಕ್ರಂಪಾಡಿ ಅವರನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಶ್ರೀಮತಿ ವೀಣಾ ಬಲ್ಲಾಳ್ ಹಾಗೂ ಪ್ರಧಾನ ಕಾರ್ಯದರ್ಶಿಗಳಾಗಿ ಶ್ರೀಮತಿ ಪವಿತ್ರಾ ದೊಡ್ಡಡ್ಕ ಮತ್ತು ಶ್ರೀಮತಿ ಸ್ವಯಂಪ್ರಭಾ…

Read More

ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆಯಿಂದ ಅಪಘಾತಗಳ ಭೀತಿ: ಸಮಸ್ಯೆ ಪರಿಹಾರಕ್ಕೆ ಸಾರ್ವಜನಿಕರ ಒತ್ತಾಯ

ಬಂಟ್ವಾಳ, ಜೂ.12: ಗಡಿಯಾರ ಸಮೀಪ ನಿನ್ನೆ ನಡೆದ ಕಾರು ಅಪಘಾತದಲ್ಲಿ ಚಾಲಕ ಮೃತಪಟ್ಟ ಬೆನ್ನಲ್ಲೇ ರಾಷ್ಟ್ರೀಯ ಹೆದ್ದಾರಿಯ ನಿರ್ವಹಣೆ ಮತ್ತು ಕಾಮಗಾರಿ ಅವ್ಯವಸ್ಥೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. “ಹೆದ್ದಾರಿಯಲ್ಲಿ ಅಪಾಯಕಾರಿ ಕಲ್ಲು ಹಾಗೂ ತ್ಯಾಜ್ಯ ವಸ್ತುಗಳನ್ನು ತೆರವುಗೊಳಿಸದೆ ಅಮಾಯಕ ವಾಹನ ಸವಾರರ ಜೀವದೊಂದಿಗೆ ಚೆಲ್ಲಾಟ ನಡೆಸಲಾಗುತ್ತಿದೆ” ಎಂಬ ಬರಹಗಳೊಂದಿಗೆ ಹಲವು ಸಂದೇಶಗಳು ವೈರಲ್ ಆಗಿವೆ. ಬಿಸಿರೋಡು–ಅಡ್ಡಹೊಳೆ ನಡುವಿನ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಂಕ್ರೀಟ್ ರಸ್ತೆ ಕಾಮಗಾರಿ ಇನ್ನೂ ಸಂಪೂರ್ಣಗೊಂಡಿಲ್ಲ. ಅಲ್ಲಲ್ಲಿ ಹೊಂಡ-ಗುಂಡಿಗಳು, ಕಾಮಗಾರಿಗೆ ಸಂಬಂಧಿಸಿದ…

Read More

ಕೇರಳದಲ್ಲಿ ಮತ್ತೆ ನಿಫಾ ಆತಂಕ; ಶಂಕಿತ ಪ್ರಕರಣ ಪತ್ತೆ, ರಾಜ್ಯಾದ್ಯಂತ ಹೈ ಅಲರ್ಟ್

ತಿರುವನಂತಪುರ: ಕೇರಳದಲ್ಲಿ ಮತ್ತೊಮ್ಮೆ ನಿಫಾ ವೈರಸ್ ಆತಂಕ ಸೃಷ್ಟಿಯಾಗಿದ್ದು, ಕೋಯಿಕ್ಕೋಡ್ ಜಿಲ್ಲೆಯ 43 ವರ್ಷದ ವ್ಯಕ್ತಿಯಲ್ಲಿ ಸೋಂಕಿನ ಶಂಕೆ ವ್ಯಕ್ತವಾಗಿದೆ. ಪ್ರಾಥಮಿಕ ಪರೀಕ್ಷೆಯಲ್ಲಿ ನಿಫಾ ಸೋಂಕಿನ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತುರ್ತು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ರಾಜ್ಯಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ಕೇರಳ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ನಡೆಸಿದ ಪ್ರಾಥಮಿಕ ಪರೀಕ್ಷೆಯಲ್ಲಿ ಸೋಂಕಿನ ಶಂಕೆ ವ್ಯಕ್ತವಾಗಿದ್ದು, ಅಂತಿಮ ದೃಢೀಕರಣಕ್ಕಾಗಿ ರೋಗಿಯ ಮಾದರಿಯನ್ನು ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಗೆ (NIV) ಕಳುಹಿಸಲಾಗಿದೆ. ಅಂತಿಮ ವರದಿ ಶೀಘ್ರದಲ್ಲೇ…

Read More

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್: ಅನಿತಾ ಕಾಸರಗೋಡು ಬಂಧನ

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಬಿಲ್ಲವ ಹಾಗೂ ಬಂಟ್ಸ್ ಸಮುದಾಯಗಳ ಕುರಿತು ಅವಹೇಳನಕಾರಿ ಮತ್ತು ಪ್ರಚೋದನಕಾರಿ ಪೋಸ್ಟ್‌ಗಳನ್ನು ಪ್ರಕಟಿಸಿದ ಆರೋಪದಡಿ ಅನಿತಾ ಕಾಸರಗೋಡು ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸಮುದಾಯಗಳ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ರೀತಿಯ ಪೋಸ್ಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪೊಲೀಸರಿಗೆ ದೂರು ಸಲ್ಲಿಸಿದ್ದವು. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿನ…

Read More

ಮಕ್ಕಳ ಹಕ್ಕುಗಳ ಆಯೋಗದ ನೇಮಕಾತಿ ರದ್ದುಪಡಿಸಲು ಆಗ್ರಹ: ಅರ್ಹತಾ ಮಾನದಂಡ ಉಲ್ಲಂಘನೆ ಆರೋಪ

ಮಂಗಳೂರು, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರಾಗಿ ನೇಮಕಗೊಂಡಿರುವ ಕೆಲವರು ನಿಗದಿತ ಅರ್ಹತಾ ಮಾನದಂಡಗಳನ್ನು ಹೊಂದಿಲ್ಲ. ಹೀಗಾಗಿ ಅವರ ನೇಮಕಾತಿ ಅಧಿಸೂಚನೆಯನ್ನು ತಕ್ಷಣ ಹಿಂಪಡೆದು, ಕಾನೂನಿನ ಪ್ರಕಾರ ಅರ್ಹ ವ್ಯಕ್ತಿಗಳನ್ನು ನೇಮಕ ಮಾಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಮಕ್ಕಳ ಹಕ್ಕುಗಳ ಪರವಾಗಿ ಕಾರ್ಯನಿರ್ವಹಿಸುವ ಸಮಾನಾಸಕ್ತ ಸಂಘಟನೆಗಳು ಆಗ್ರಹಿಸಿವೆ. ನಗರದ ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಡಿ ಸಂಸ್ಥೆಯ ಸಂಚಾಲಕ ರೆನ್ನಿ ಡಿಸೋಜಾ, ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರ ನೇಮಕಾತಿಯಲ್ಲಿ…

Read More

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಗೆ ಖಾಸಗಿ ಬಸ್ ಮಾಲೀಕರ ವಿರೋಧ: ಮುಷ್ಕರದ ಎಚ್ಚರಿಕೆ

ತ್ರಿಶೂರ್: ಕೆಎಸ್‌ಆರ್‌ಟಿಸಿ ಸಾಮಾನ್ಯ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸುವ ಸರ್ಕಾರದ ನಿರ್ಧಾರಕ್ಕೆ ಖಾಸಗಿ ಬಸ್ ಮಾಲೀಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಬಜೆಟ್‌ನಲ್ಲಿ ಖಾಸಗಿ ಬಸ್ ವಲಯಕ್ಕೆ ಸೂಕ್ತ ಪರಿಹಾರ ಘೋಷಿಸದಿದ್ದರೆ ಮುಷ್ಕರ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಮಹಿಳಾ ಪ್ರಯಾಣಿಕರ ಸಂಖ್ಯೆಯೇ ಖಾಸಗಿ ಬಸ್‌ಗಳ ಆದಾಯದ ಪ್ರಮುಖ ಮೂಲವಾಗಿದ್ದು, ಉಚಿತ ಪ್ರಯಾಣ ಯೋಜನೆಯಿಂದ ಭಾರೀ ನಷ್ಟ ಉಂಟಾಗಲಿದೆ. ಇದರಿಂದ ಸೇವೆ ಮುಂದುವರಿಸುವುದು ಕಷ್ಟವಾಗಲಿದೆ ಎಂದು ಬಸ್ ಮಾಲೀಕರ ಸಂಘ ತಿಳಿಸಿದೆ. ಖಾಸಗಿ ಬಸ್‌ಗಳ ಸೇವೆ ಸ್ಥಗಿತಗೊಂಡರೆ…

Read More

ಬೀದಿ ಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ ಖಂಡಿಸಿ ಪ್ರತಿಭಟನೆ

ಮಂಗಳೂರು, ಜೂ.11: ಮಂಗಳೂರಿನ ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸುವ ಪ್ರಯತ್ನವನ್ನು ಖಂಡಿಸಿ ಹಾಗೂ ಸಾಂಪ್ರದಾಯಿಕ ಸಂಡೆ ಬಜಾರ್ ವ್ಯಾಪಾರಕ್ಕೆ ಅವಕಾಶ ನೀಡುವಂತೆ ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಸಂಘ (ರಿ), ಸಿಐಟಿಯು (CITU) ನೇತೃತ್ವದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಕಚೇರಿ ಮುಂಭಾಗ ಬುಧವಾರ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ನಗರಪಾಲಿಕೆ ಅಧಿಕಾರಿಗಳ ಮೇಲೆ ಒತ್ತಡ ಹೇರಿ ಬೀದಿ ಬದಿ ವ್ಯಾಪಾರಿಗಳ ವಿರುದ್ಧ ದಾಳಿ ನಡೆಸಲು ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿ ಪ್ರಸನ್ನ ರವಿ…

Read More

ಹೋರ್ಮುಜ್ ಜಲಸಂಧಿ ಸಮೀಪ ಹಡಗಿನ ಮೇಲೆ ದಾಳಿ: ಮೂವರು ಭಾರತೀಯ ನಾವಿಕರ ದುರ್ಮರಣ

ಟೆಹ್ರಾನ್, ಜೂ.11: ಹೋರ್ಮುಜ್ ಜಲಸಂಧಿ ಸಮೀಪ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯಲ್ಲಿ ಮೂವರು ಭಾರತೀಯ ನಾವಿಕರು ಮೃತಪಟ್ಟಿರುವುದು ದೃಢಪಟ್ಟಿದೆ. ಆರಂಭದಲ್ಲಿ ಇಬ್ಬರು ಮೃತಪಟ್ಟಿದ್ದು, ಮುಖ್ಯ ಇಂಜಿನಿಯರ್ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದ್ದರೂ, ಬಳಿಕ ಅವರ ಮೃತದೇಹ ಪತ್ತೆಯಾದ ಹಿನ್ನೆಲೆಯಲ್ಲಿ ಸಾವಿನ ಸಂಖ್ಯೆ ಮೂವರಿಗೆ ಏರಿಕೆಯಾಗಿದೆ. ಫಾರ್ವರ್ಡ್ ಸೀಮೆನ್ಸ್ ಯೂನಿಯನ್ ಆಫ್ ಇಂಡಿಯಾ (ಎಫ್‌ಎಸ್‌ಯುಐ) ಪ್ರಧಾನ ಕಾರ್ಯದರ್ಶಿ ಮನೋಜ್ ಯಾದವ್ ಅವರು, ದಾಳಿಗೊಳಗಾದ ಹಡಗಿನೊಂದಿಗೆ ಸಂಪರ್ಕಕ್ಕೆ ತೊಂದರೆ ಉಂಟಾಗಿದ್ದು, ಸಂಪೂರ್ಣ ಮಾಹಿತಿಯನ್ನು ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಮೃತರಾದ ಮೂವರು…

Read More

ಬಂಟ್ವಾಳ ಆಡಳಿತ ಸೌಧದ ಲಿಪ್ಟ್‌ನಲ್ಲಿ 45 ನಿಮಿಷ ಸಿಲುಕಿದ ಸಾರ್ವಜನಿಕರು: ತಪ್ಪಿದ ಭಾರೀ ಅನಾಹುತ

ಬಂಟ್ವಾಳ, ಜೂ.11: ಬಂಟ್ವಾಳ ಆಡಳಿತ ಸೌಧದಲ್ಲಿ ಸಾರ್ವಜನಿಕರ ಉಪಯೋಗಕ್ಕಾಗಿ ಅಳವಡಿಸಲಾಗಿರುವ ಲಿಪ್ಟ್‌ನಲ್ಲಿ ಇಬ್ಬರು ವ್ಯಕ್ತಿಗಳು ಸುಮಾರು 45 ನಿಮಿಷಗಳ ಕಾಲ ಸಿಲುಕಿಕೊಂಡು ಆತಂಕದ ಕ್ಷಣಗಳನ್ನು ಅನುಭವಿಸಿದ ಘಟನೆ ಮಧ್ಯಾಹ್ನ ನಡೆದಿದೆ. ಆಡಳಿತ ಸೌಧದ ಮೇಲಿನ ಮೂರು ಅಂತಸ್ತುಗಳಿಗೆ ತೆರಳಲು ಸಾರ್ವಜನಿಕರು ಲಿಪ್ಟ್ ಬಳಸುತ್ತಿದ್ದು, ಮಧ್ಯಾಹ್ನ ಸುಮಾರು 12.45ರಿಂದ 1.30ರ ಅವಧಿಯಲ್ಲಿ ಕಚೇರಿ ಕೆಲಸಕ್ಕೆ ಬಂದಿದ್ದ ಇಬ್ಬರು ಲಿಪ್ಟ್ ಒಳಗೆ ಸಿಲುಕಿಕೊಂಡಿದ್ದರು. ಲಿಪ್ಟ್‌ನೊಳಗಿದ್ದ ವ್ಯಕ್ತಿಗಳು ಮೊಬೈಲ್ ಮೂಲಕ ತಮ್ಮ ಸ್ನೇಹಿತರಿಗೆ ಮಾಹಿತಿ ನೀಡಿದ್ದು, ಬಳಿಕ ಅವರು ತಹಶೀಲ್ದಾರ್ ಅವರನ್ನು…

Read More

ಕೊರಗ ಜನಾಂಗದ ಸಮಸ್ಯೆಗಳಿಗೆ ಶೀಘ್ರ ಪರಿಹಾರಕ್ಕೆ ಆಗ್ರಹ: ತಹಶೀಲ್ದಾರ್ ಗೈರಿಗೆ ಸಭೆಯಲ್ಲಿ ಆಕ್ರೋಶ

ಬಂಟ್ವಾಳ, ಜೂ.11: ಆದಿವಾಸಿ ಕೊರಗ ಜನಾಂಗದವರ ತಾಲೂಕು ಮಟ್ಟದ ಅಭಿವೃದ್ಧಿ ಸಮಿತಿ ಸಭೆಯು ತಾ.ಪಂ. ಕಾರ್ಯನಿರ್ವಹಣಾಧಿಕಾರಿ (ಇ.ಒ.) ಸಚಿನ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಬಿಸಿರೋಡಿನ ತಾಲೂಕು ಪಂಚಾಯತ್ ಎಸ್.ಜಿ.ಎಸ್.ವೈ. ಸಭಾಂಗಣದಲ್ಲಿ ನಡೆಯಿತು. ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ವಿನಯ ಕುಮಾರಿ ಅವರ ಉಪಸ್ಥಿತಿಯಲ್ಲಿ ವಿವಿಧ ಇಲಾಖೆಗಳ ಯೋಜನೆಗಳು ಮತ್ತು ಕೊರಗ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚೆ ನಡೆಯಿತು. ಕೊರಗ ಜನಾಂಗಕ್ಕೆ ಸರ್ಕಾರದಿಂದ ಹಲವು ಯೋಜನೆಗಳಿದ್ದರೂ, ಮಾಹಿತಿ ಕೊರತೆ ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದ ಅವು ಕಟ್ಟಕಡೆಯ ಫಲಾನುಭವಿಗಳಿಗೂ…

Read More
error: Content is protected !!