ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಕೋರ್ಸ್‌ಗೆ ಅರ್ಜಿ ಆಹ್ವಾನ
ಮಂಗಳೂರು, ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ವತಿಯಿಂದ ಜುಲೈ 1ರಿಂದ ಆರಂಭವಾಗಲಿರುವ ಆರು ತಿಂಗಳ ಅವಧಿಯ ರೆಗ್ಯುಲರ್ ಹಾಗೂ ದೂರಶಿಕ್ಷಣದ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ (ಡಿಸಿಎಂ) ಕೋರ್ಸ್‌ಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಸಾಮಾನ್ಯ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಹಾಗೂ ವಿವಿಧ ಸಹಕಾರ ಸಂಘಗಳು ಮತ್ತು ಬ್ಯಾಂಕ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಉದ್ಯೋಗಿಗಳು ಕೋರ್ಸ್‌ಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಲು ಜೂನ್…
