ರಾಜ್ಯದಲ್ಲಿ ಮುಂಗಾರು ಆರ್ಭಟ: 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ವಿಸ್ತರಣೆ

ಬೆಂಗಳೂರು, ಜೂ.10: ರಾಜ್ಯಾದ್ಯಂತ ನೈಋತ್ಯ ಮುಂಗಾರು ಮಾರುತಗಳ ಅಬ್ಬರ ಮುಂದುವರಿದಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಜೂನ್ 13ರವರೆಗೆ ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಈಗಾಗಲೇ ರೆಡ್ ಅಲರ್ಟ್ ನೀಡಲಾಗಿತ್ತು. ಆದರೆ ಮಳೆಯ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬುಧವಾರ ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಸೇರಿದಂತೆ ಒಟ್ಟು ಏಳು…

Read More

ಧರ್ಮಗಳಲ್ಲ, ಧರ್ಮವನ್ನು ದುರುಪಯೋಗಪಡಿಸಿಕೊಂಡು ಸಮಾಜ ವಿಭಜಿಸುವವರ ವಿರುದ್ಧ ವಿರೋಧ: ದೀಪಾ ಭಾಸ್ತಿ

ಮಂಗಳೂರು: ಹಿಂದೂ, ಕ್ರೈಸ್ತ, ಮುಸ್ಲಿಂ ಸೇರಿದಂತೆ ಯಾವುದೇ ಧರ್ಮಗಳು ಸಮಸ್ಯೆಯಲ್ಲ. ಆದರೆ ಕೆಲವರು ಧರ್ಮವನ್ನು ಅಸ್ತ್ರವನ್ನಾಗಿ ಬಳಸಿಕೊಂಡು ಸಮಾಜವನ್ನು ವಿಭಜಿಸುವ ಪ್ರಯತ್ನ ನಡೆಸುತ್ತಿರುವುದರ ವಿರುದ್ಧ ನನ್ನ ವಿರೋಧವಿದೆ ಎಂದು ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಹಾಗೂ ಲೇಖಕಿ ದೀಪಾ ಭಾಸ್ತಿ ಹೇಳಿದ್ದಾರೆ. ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಮಂಗಳವಾರ ಪಿ.ಪಿ. ಗೋಮತಿ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್, ಮಂಗಳೂರು ವಿಶ್ವವಿದ್ಯಾನಿಲಯ, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ನಡೆದ…

Read More

ವಿಟ್ಲ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ವಾರ್ಷಿಕ ಮಹಾಸಭೆ ಯಶಸ್ವಿ

ವಿಟ್ಲ, ಜೂನ್ 10: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲೆ, ವಿಟ್ಲ ಸ್ಥಳೀಯ ಸಂಸ್ಥೆಯ ವಾರ್ಷಿಕ ಮಹಾಸಭೆಯು ವಿಟ್ಲ ಪದವಿ ಪೂರ್ವ ಕಾಲೇಜಿನ ಸುವರ್ಣ ರಂಗ ಮಂದಿರದಲ್ಲಿ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮವನ್ನು ಪುತ್ತೂರು ರಾಮಕೃಷ್ಣ ವಿದ್ಯಾ ಸಂಸ್ಥೆಯ ಸಂಚಾಲಕ ಹೇಮನಾಥ ಶೆಟ್ಟಿ ಕಾವು ಉದ್ಘಾಟಿಸಿದರು. ಸ್ಥಳೀಯ ಸಂಸ್ಥೆ ವಿಟ್ಲ ಅಧ್ಯಕ್ಷ ಸುದರ್ಶನ ಪಡಿಯಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗೌರವಾಧ್ಯಕ್ಷ ಪ್ರಭಾಕರ ಶೆಟ್ಟಿ ದಂಬೆಕಾನ, ವಿಠ್ಠಲ ಎಜುಕೇಶನ್ ಸೊಸೈಟಿ ಸದಸ್ಯ…

Read More

ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರವನ್ನೂ ಕಲಿಸಿ“-ಉಮಾನಾಥ್ ಕೋಟ್ಯಾನ್

ಅಮ್ಮನ ನೆನಪಿಗಾಗಿ ಬಡಕುಟುಂಬಕ್ಕೆ ಮನೆ ನಿರ್ಮಿಸಿಕೊಟ್ಟ ಪುತ್ರರು! ಮಂಗಳೂರು: ಮೂಡುಶೆಡ್ಡೆ ಹೊಸಲಕ್ಕೆ ದಿ.ದೇವಕಿ ಸಂಜೀವ ಶೆಟ್ಟಿ ಅವರ ನಾಲ್ಕನೇ ವರ್ಷದ ಪುಣ್ಯ ಸ್ಮರಣೆಯ ಅಂಗವಾಗಿ ಅವರ ಪುತ್ರರು ಕೊರಗ ಸಮುದಾಯಕ್ಕೆ ಸೇರಿದ ಗಿರಿಜ ಎಂಬವರಿಗೆ ನೂತನವಾಗಿ ನಿರ್ಮಿಸಿದ ಮನೆಯ ಹಸ್ತಾಂತರ ಕಾರ್ಯಕ್ರಮ ಮಂಗಳವಾರ ನಡೆಯಿತುಅತಿಥಿಗಳು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮನೆಯ ಕೀಲಿ ಕೈ ಹಸ್ತಾಂತರಿಸಿದರು. ಬಳಿಕ ಮಾತಾಡಿದ ವಕೀಲ ಹೊಸಲಕ್ಕೆ ಉಮೇಶ್ ಶೆಟ್ಟಿ ಅವರು, “ಅಮ್ಮ ದಿವಂಗತ ದೇವಕಿ ಶೆಟ್ಟಿಯವರು ನೊಂದವರು, ಕಷ್ಟದಲ್ಲಿರುವವರಿಗೆ…

Read More

ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಶಕ್ತಿನಗರ ಕಾಲೇಜಿನ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ

ಶಕ್ತಿನಗರದ ನಾಲ್ಯಪದವು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎಂಆರ್‌ಪಿಎಲ್ ಸಿ‌ಎಸ್‌ಆರ್ ಯೋಜನೆಯಡಿಯಲ್ಲಿ ನಿರ್ಮಿಸಲಾದ ಬಾಲಕಿಯರ ಮತ್ತು ಬಾಲಕರ ಶೌಚಾಲಯಗಳು, ನೀರಿನ ಸಂಪು ಹಾಗೂ ಕುಡಿಯುವ ನೀರಿನ ಶುದ್ಧೀಕರಣ ಘಟಕಗಳ ಉದ್ಘಾಟನಾ ಸಮಾರಂಭವು ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಶಾಸಕರು, ವಿದ್ಯಾರ್ಥಿಗಳ ಆರೋಗ್ಯ ಹಾಗೂ ಸ್ವಚ್ಛತೆಯ ದೃಷ್ಟಿಯಿಂದ ಇಂತಹ ಮೂಲಭೂತ ಸೌಕರ್ಯಗಳು ಅತ್ಯಂತ ಅಗತ್ಯವಾಗಿದ್ದು, ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗಾಗಿ ನಮ್ಮ ಮನವಿಗೆ ಸ್ಪಂದಿಸಿ ಎಂಆರ್‌ಪಿಎಲ್ ನೀಡುತ್ತಿರುವ ಸಹಕಾರ ಶ್ಲಾಘನೀಯ. ಮುಂದಿನ ದಿನಗಳಲ್ಲಿ…

Read More

ಪೊಸೋಟು ಪ್ರದೇಶದಲ್ಲಿ ಜಲಾವೃತ ಭೀತಿ; ಶಾಶ್ವತ ಪರಿಹಾರಕ್ಕೆ ಒತ್ತಾಯ: ಒಳಚರಂಡಿ ವ್ಯವಸ್ಥೆ ಇಲ್ಲದೆ ಮಳೆಗಾಲದಲ್ಲಿ ಮತ್ತೆ ಜಲಾವೃತ ಭೀತಿ

ಮಂಜೇಶ್ವರ : ನೂತನವಾಗಿ ಕಾಮಗಾರಿ ಪೂರ್ಣಗೊಂಡ ಷಟ್ಪಥ ರಸ್ತೆಯ ನಿರ್ಮಾಣ ಕಾಮಗಾರಿಯನ್ನು ಕೈಗೊಂಡಿರುವ ಗುತ್ತಿಗೆದಾರರ ನಿರ್ಲಕ್ಷ್ಯ ಮತ್ತು ಅವೈಜ್ಞಾನಿಕ ಕೆಲಸದ ವೈಖರಿಯಿಂದಾಗಿ ಸ್ಥಳೀಯ ನಿವಾಸಿಗಳು ಮತ್ತು ವಿದ್ಯಾರ್ಥಿಗಳು ಮತ್ತೊಮ್ಮೆ ಆತಂಕದ ದಿನಗಳನ್ನು ಎದುರಿಸುತ್ತಿದ್ದಾರೆ. ಮಳೆಗಾಲದ ಆರಂಭದಲ್ಲೇ ಸುರಿಯುತ್ತಿರುವ ಮಳೆಗೆ ನೀರು ಹರಿದು ಹೋಗಲು ಸೂಕ್ತ ವ್ಯವಸ್ಥೆ ಇಲ್ಲದ ಕಾರಣ, ಪೊಸೋಟು ಮಲ್ಹರ್ ವಿದ್ಯಾಸಂಸ್ಥೆ ಮತ್ತು ಪರಿಸರದ ಮನೆಗಳು ಜಲಾವೃತವಾಗುವ ಭೀತಿಯಲ್ಲಿವೆ. ಪ್ರಮುಖ ಹೆದ್ದಾರಿ ಕಾಮಗಾರಿಯನ್ನು ನಿರ್ವಹಿಸುತ್ತಿರುವ ‘ಯುಲ್ ಸಿಸಿ’ ಕಂಪನಿಯು ರಸ್ತೆಯ ಇಕ್ಕೆಲಗಳಲ್ಲಿ ಮಳೆ ನೀರು ಸರಾಗವಾಗಿ…

Read More

ಬಂಟ್ವಾಳ: ಪ.ಜಾತಿ, ಪಂಗಡ ಕುಂದುಕೊರತೆ ಅಹವಾಲು ಸ್ವೀಕಾರ ಸಭೆ

ಬಂಟ್ವಾಳ ತಾಲೂಕು ಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕುಂದುಕೊರತೆ ಸಮಿತಿ ಸಭೆ ತಹಸೀಲ್ದಾರ್ ಮಂಜುನಾಥ್ ಅಧ್ಯಕ್ಷತೆಯಲ್ಲಿ ಬಂಟ್ವಾಳ ತಾಲೂಕು ಪಂಚಾಯಿತಿ ಎಸ್.ಜೆ.ಎಸ್.ವೈ.ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಸಭೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸಚಿನ್ ಕುಮಾರ್, ಪುರಸಭೆ ಮುಖ್ಯಾಧಿಕಾರಿ ತೀರ್ಥಪ್ರಸಾದ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ವಿನಯ ಕುಮಾರಿ, ಪುರಸಭೆ ಮುಖ್ಯಾಧಿಕಾರಿ ತೀರ್ಥಪ್ರಸಾದ್, ನಾನಾ ಇಲಾಖೆಗಳ ಅಧಿಕಾರಿಗಳು, ಪ.ಜಾತಿ, ಪ.ಪಂ ಮುಖಂಡರು ಉಪಸ್ಥಿತರಿದ್ದು, ನಾನಾ ವಿಷಯಗಳ ಕುರಿತು ಚರ್ಚೆ ನಡೆಸಿ, ಮಾಹಿತಿ ಪಡೆದುಕೊಂಡರು. ಪರಿಶಿಷ್ಟ ಜಾತಿ,…

Read More

ಅಂದರ್-ಬಾಹರ್ ಜೂಜಾಟದ ಮೇಲೆ ಪೊಲೀಸರ ದಾಳಿ: 7 ಮಂದಿ ಬಂಧನ, ₹13 ಲಕ್ಷಕ್ಕೂ ಅಧಿಕ ಮೌಲ್ಯದ ಸ್ವತ್ತು ಜಪ್ತಿ

ಹೆಬ್ರಿ, ಜೂನ್ 9: ಉಡುಪಿ ಜಿಲ್ಲೆಯ ಹೆಬ್ರಿ ಸಮೀಪದ ಹೊಸೂರು ಪ್ರದೇಶದಲ್ಲಿ ಅಂದರ್-ಬಾಹರ್ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಅಡ್ಡೆಯ ಮೇಲೆ ಹೆಬ್ರಿ ಪೊಲೀಸರು ದಾಳಿ ನಡೆಸಿ ಏಳು ಮಂದಿಯನ್ನು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ ಕುರಿತು ದೊರೆತ ಖಚಿತ ಮಾಹಿತಿಯ ಮೇರೆಗೆ ಕಾರ್ಕಳ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರ ಮಾರ್ಗದರ್ಶನದಲ್ಲಿ ಕಾರ್ಕಳ ವೃತ್ತ ನಿರೀಕ್ಷಕ ಸಂದೀಪ್ ಜಿ.ಎಸ್. ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿತು. ಈ ವೇಳೆ ಚಪ್ಪರ ಹಾಗೂ ಟಾರ್ಪಾಲ್ ಅಡಿಯಲ್ಲಿ ಟೇಬಲ್ ಸುತ್ತ ಕುಳಿತು ಹಣ ಪಣಕ್ಕೊಡ್ಡಿ…

Read More

ಪಿಕಪ್ ವಾಹನ ಡಿಕ್ಕಿ: ಸ್ಕೂಟರ್ ಸವಾರರಿಬ್ಬರು ದುರ್ಮರಣ

ಬೆಳ್ತಂಗಡಿ, ಜೂನ್ 9: ಮಚ್ಚಿನ ಗ್ರಾಮದ ಪಾಳ್ಯರ ಪ್ರದೇಶದಲ್ಲಿ ಪಿಕಪ್ ವಾಹನ ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟ ಘಟನೆ ಜೂನ್ 8ರಂದು ನಡೆದಿದೆ. ಮೃತರನ್ನು ಚಂದಪ್ಪ ಮೂಲ್ಯ (60) ಹಾಗೂ ಡಾಕಯ್ಯ ಗೌಡ ಎಂದು ಗುರುತಿಸಲಾಗಿದೆ. ಪೊಲೀಸ್ ಮಾಹಿತಿಯ ಪ್ರಕಾರ, ಪಿಕಪ್ ವಾಹನವು ಬಳ್ಳಮಂಜ ಕಡೆಯಿಂದ ಪಣಕಜೆ ಕಡೆಗೆ ಸಂಚರಿಸುತ್ತಿದ್ದ ವೇಳೆ, ಪಣಕಜೆಯಿಂದ ಬಳ್ಳಮಂಜ ಕಡೆಗೆ ಬರುತ್ತಿದ್ದ ಡಾಕಯ್ಯ ಗೌಡ ಚಲಾಯಿಸುತ್ತಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಡಾಕಯ್ಯ…

Read More

ಹೋಂಸ್ಟೇ ಬಾತ್‌ರೂಮ್‌ನಲ್ಲಿ ಅನಿಲ ಸೋರಿಕೆ: ಯುವತಿ ದುರ್ಮರಣ

ಸೋಮವಾರಪೇಟೆ: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಕಲ್ಮಂಡುವಿನ ಹೋಂಸ್ಟೇಯೊಂದರಲ್ಲಿ ವಾಟರ್ ಹೀಟರ್‌ನಿಂದ ಅನಿಲ ಸೋರಿಕೆಯಾಗಿ ಯುವತಿಯೊಬ್ಬರು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ ಬಡಾವಣೆಯ ನಿವಾಸಿ ವಿನೂತ (27) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಆಕೆ ಜಗನ್ನಾಥ್ ಹಾಗೂ ರೇಣುಕಾ ದಂಪತಿಯ ಪುತ್ರಿ. ತಮ್ಮ ಕಚೇರಿಯ ಸಹೋದ್ಯೋಗಿಗಳೊಂದಿಗೆ ಪ್ರವಾಸಕ್ಕೆ ಬಂದಿದ್ದ ವಿನೂತ ಅವರು ಹೋಂಸ್ಟೇಯಲ್ಲಿ ತಂಗಿದ್ದರು. ಸ್ನಾನ ಮಾಡಲು ಬಾತ್‌ರೂಮ್‌ಗೆ ತೆರಳಿದ್ದ ಅವರು ಬಹಳ ಸಮಯವಾದರೂ ಹೊರಬಾರದ ಹಿನ್ನೆಲೆಯಲ್ಲಿ ಸಹೋದ್ಯೋಗಿಗಳು ಹುಡುಕಾಟ ನಡೆಸಿದ್ದಾರೆ. ಈ ವೇಳೆ…

Read More
error: Content is protected !!