ರಾಮಕ್ಷತ್ರಿಯ ಸೇವಾ ಸಂಘದಿಂದ ಸೆಪ್ಟೆಂಬರ್ 28ರಂದು “ಅಭಿನಂದನಾ ಸಮಾರಂಭ” ಕಾರ್ಯಕ್ರಮ.

ಮಂಗಳೂರು: ರಾಮಕ್ಷತ್ರಿಯ ಸೇವಾ ಸಂಘ (ರಿ.), ಮಂಗಳೂರು ವತಿಯಿಂದ “ಅಭಿನಂದನಾ ಸಮಾರಂಭ” ಕಾರ್ಯಕ್ರಮವನ್ನು ಸೆಪ್ಟೆಂಬರ್ 28ರಂದು ಆದಿತ್ಯವಾರ ಬೆಳಿಗ್ಗೆ 10 ಗಂಟೆಗೆ ಮೋರ್ಗನ್ಸ್ ಗೇಟ್‌ನ ಪಾಲೆಮಾರ್ ಗಾರ್ಡನ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ತಿಳಿಸಿದರು. ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 75 ವರ್ಷಗಳ ಪರಂಪರೆಯ ಈ ಸಂಘವು ಸಮಾಜಮುಖಿ ಚಟುವಟಿಕೆಗಳ ಮೂಲಕ ವೈದ್ಯಕೀಯ ಸಹಾಯ, ವಿದ್ಯಾಧನ, ರಕ್ತದಾನ, ಪ್ರತಿಭಾ ಪುರಸ್ಕಾರ ಮತ್ತು ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ ಎಂದು…

Read More

ಕಾಳಭೈರವನಿಗೆ ಬೆಳ್ಳಿ ಪ್ರಭಾವಳಿ ಸಮರ್ಪಣೆ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಶ್ರೀ ಕಾಳಭೈರವ ದೇವರಿಗೆ ಕುದ್ರೋಳಿ ಕ್ಷೇತ್ರದ ಸ್ಥಾಪಕ ಅಧ್ಯಕ್ಷರಾದ ಸಾವ್‌ಕಾರ್ ಕೊರಗಪ್ಪರವರ ಪುತ್ರ ದಿ.ಸೋಮಸುಂದರಂ ಕುಟುಂಬಸ್ಥರು ಸುಮಾರು 9 ಲಕ್ಷ ರೂಪಾಯಿ ವೆಚ್ಚದಲ್ಲಿ 6 ಕೆ.ಜಿ. ತೂಕ ಬೆಳ್ಳಿಯ ಪ್ರಭಾವಳಿಯನ್ನು ಕೊಡುಗೆಯಾಗಿ ನೀಡಿದ್ದು, ಶುಕ್ರವಾರ ಸಮರ್ಪಿಸಲಾಯಿತು. ದಿ.ಸೋಮಸುಂದರಂರವರು ಸುಮಾರು 34 ವರ್ಷ ಕ್ಷೇತ್ರದಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಅವರ ಕಿರಿಯ ಪುತ್ರ ಜೈರಾಜ್ ಎಚ್.ಸೋಮಸುಂದರಂ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕ್ಷೇತ್ರದ ಅಧ್ಯಕ್ಷ ಜೈರಾಜ್ ಎಚ್.ಸೋಮಸುಂದರಂ, ಕಾರ್ಯದರ್ಶಿ ಮಾಧವ ಸುವರ್ಣ, ಕೋಶಾಧಿಕಾರಿ…

Read More

ಮಂಜೇಶ್ವರ ಗ್ರಾಮ ಪಂಚಾಯತ್ ಮತ್ತು ಕುಟುಂಬಶ್ರೀ ಸಿಡಿಎಸ್ ಸಂಯುಕ್ತ ಆಶ್ರಯದಲ್ಲಿ ‘ಉದ್ಯೋಗ ಮೇಳ’

ಮಂಜೇಶ್ವರ ಗ್ರಾಮ ಪಂಚಾಯತ್ ಮತ್ತು ಕುಟುಂಬಶ್ರೀ ಸಿಡಿಎಸ್ ಸಂಯುಕ್ತವಾಗಿ ವಿಜ್ಞಾನಕೇರಳ ಯೋಜನೆಯ ಭಾಗವಾಗಿ ಉದ್ಯೋಗ ಮೇಳ ಮಂಜೇಶ್ವರದಲ್ಲಿ ಆಯೋಜಿಸಲಾಯಿತು.ಮಂಜೇಶ್ವರ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮೊಹಮ್ಮದ್ ಸಿದ್ಧಿಕ್ ಅವರು ಉದ್ಘಾಟನೆ ನೆರವೇರಿಸಿದರು. ಗ್ರಾಮ ಪಂಚಾಯತ್ ಸದಸ್ಯರಾದ ಮುಂತಾಜ್ ಸಮೀರ, ರಾಜೇಶ್ ಅವರು ಶುಭಾಶಯ ಸಂದೇಶಗಳನ್ನು ನೀಡಿ ಮಾತನಾಡಿದರು. ಅದೇ ರೀತಿ ವಾರ್ಡ್ ಸದಸ್ಯರಾದ ಲಕ್ಷ್ಮಣನ್, ವಿನಯ ಭಾಸ್ಕರ್, ಆದರ್ಶ್, ಮುಸ್ತಫಾ ಅವರು ಸಹ ಪಾಲ್ಗೊಂಡರು.ಸುಮಾರು 200 ಉದ್ಯೋಗಾಕಾಂಕ್ಷಿಗಳು ಮೇಳದಲ್ಲಿ ಭಾಗವಹಿಸಿದರು. 20 ಕ್ಕೂ ಹೆಚ್ಚು ಕಂಪನಿಗಳು ಪಾಲ್ಗೊಂಡ ಈ…

Read More

ಸೆಪ್ಟೆಂಬರ್ 30 ರಂದು ಕುಡ್ಲದ ಪಿಲಿಪರ್ಬ- 4 ನೇ ಆವೃತ್ತಿ:-

ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಮಾಜಿ ಸಂಸದ ಶ್ರೀ ನಳಿನ್ ಕುಮಾ‌ರ್ ಕಟೀಲ್ ಮಾರ್ಗದರ್ಶನದಲ್ಲಿ ಕುಡ್ಲದ ಪಿಲಿಪರ್ಬದ ನಾಲ್ಕನೇ ಆವೃತ್ತಿಯ ಸ್ಪರ್ಧಾಕೂಟವು ಇದೇ ಸಪ್ಟೆಂಬರ್ 30 ರಂದು ಮಂಗಳೂರಿನ ಕೇಂದ್ರ ಮೈದಾನದಲ್ಲಿ ಬೆಳಗ್ಗೆ 9.30 ಕ್ಕೆ ಉದ್ಘಾಟನೆಗೊಳ್ಳಲಿದೆ ಎಂದು ಶಾಸಕ ಶ್ರೀ ಡಿ. ವೇದವ್ಯಾಸ್ ಕಾಮತ್ ರವರು ಹೇಳಿದರು. ನಂತರ ಮಾತನಾಡಿದ ಅವರು, ಬೆಳಿಗ್ಗೆ 10 ಗಂಟೆಗೆ ಸರಿಯಾಗಿ ಭವ್ಯ ವಿಶಾಲ ವೇದಿಕೆಯಲ್ಲಿ ಆರಂಭಗೊಳ್ಳಲಿರುವ ಸ್ಪರ್ಧಾಕೂಟದಲ್ಲಿ ಕರಾವಳಿ ಭಾಗದ ಅತ್ಯಂತ ಜನಪ್ರಿಯ ಎಂಬ ಹೆಗ್ಗಳಿಕೆ ಹೊಂದಿರುವ 10…

Read More

‘ ಟೈಮ್ ಪಾಸ್’ ಕನ್ನಡ ಚಲನಚಿತ್ರ ಅಕ್ಟೋಬರ್ 17 ರಂದು ‌ಕರ್ನಾಟಕದಾದ್ಯಂತ ಬಿಡುಗಡೆ.

ಶ್ರೀ ಚೇತನ ಸರ್ವಿಸಸ್ ಬ್ಯಾನರ್ ಮೂಲಕ ಗುಂಡೂರು ಶೇಖರ್, ಕಿರಣ್ ಕುಮಾರ್ ಶೆಟ್ಟಿ, ಎಂ.ಹೆಚ್‌.ಕೃಷ್ಣಮೂರ್ತಿ ನಿರ್ಮಾಣದ ಇಮ್ರಾನ್ ಪಾಷಾ, ವೈಸಿರಿ ಕೆ.ಗೌಡ, ರಕ್ಷಾರಾಮ್ ನಟನೆಯ’ ಟೈಮ್ ಪಾಸ್’ ಕನ್ನಡ ಚಲನಚಿತ್ರ ಇದೇ ಬರುವ ಅಕ್ಟೋಬರ್ 17 ರಂದು ‌ಕರ್ನಾಟಕದಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ದೇಶಕರಾದ ಚೇತನ್ ಜೋಡಿದಾರ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು . `ಟೈಮ್ ಪಾಸ್’ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಗೊಂಡು ಒಂದಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇತ್ತೀಚೆಗಷ್ಟೇ ಈ ಸಿನಿಮಾದ ಟೀಸರ್ ಬಿಡುಗಡೆಗೊಂಡಿದೆ. ಅದರ ಬಗ್ಗೆಯೂ…

Read More

ಶಿಕ್ಷಕರ ಕಾರ್ಯಚಟುವಟಿಕೆಗಳಿಗೆ, ಅವರ ಸಂಘಗಳ ಸಭೆಗಳಿಗೆ ತಮ್ಮ ಕಚೇರಿಯನ್ನು ನೀಡುವುದಾಗಿ ವಿಧಾನಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಭರವಸೆ

ಮಂಗಳೂರು :ಶಿಕ್ಷಕರ ಕಾರ್ಯಚಟುವಟಿಕೆಗಳಿಗೆ, ಅವರ ಸಂಘಗಳ ಸಭೆಗಳಿಗೆ ತಮ್ಮ ಕಚೇರಿಯನ್ನು ನೀಡುವುದಾಗಿ ವಿಧಾನಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಭರವಸೆ ನೀಡಿದ್ದಾರೆ. ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಮಹಾನಗರ ಪಾಲಿಕೆ ಕಟ್ಟಡದ ಮೊದಲ ಮಹಡಿಯಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಅವರ ಕಚೇರಿ ಗುರುವಾರದಂದು ವಿಧ್ಯುಕ್ತವಾಗಿ ಉದ್ಘಾಟನೆಯಾಯಿತು. ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ ಸೇರಿದಂತೆ ಅನೇಕ ಗಣ್ಯರು ಕಚೇರಿ ಉದ್ಘಾಟನೆ ಸಂದರ್ಭ ಉಪಸ್ಥಿತರಿದ್ದು ಶುಭ ಹಾರೈಸಿದರು. ಉದ್ಘಾಟನೆ ಬಳಿಕ ಮಾತನಾಡಿದ ಭೋಜೇಗೌಡ ಅವರು ತಾನು ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವುದರಿಂದ ಶಿಕ್ಷಕರ…

Read More

ಕೇಂದ್ರದ ಬಿಜೆಪಿ ಸರಕಾರವು ಜಿಎಸ್ ಟಿಯನ್ನು ಜಾರಿಗೆ ತಂದು ಜನಸಾಮಾನ್ಯರಿಗೆ ತೊಂದರೆಯನ್ನು ನೀಡಿದೆ-ಮಂಜುನಾಥ್ ಭಂಡಾರಿ

ಮಂಗಳೂರು: ಕೇಂದ್ರದ ಬಿಜೆಪಿ ಸರಕಾರವು ಜಿಎಸ್ ಟಿಯನ್ನು ಜಾರಿಗೆ ತಂದು ಜನಸಾಮಾನ್ಯರಿಗೆ ತೊಂದರೆಯನ್ನು ನೀಡಿದೆ. ಕಳೆದ 8 ವರ್ಷಗಳಲ್ಲಿ ಬಡ ಮತ್ತು ಮಧ್ಯಮ ವರ್ಗದ ಜನರು ಸಾಕಷ್ಟು ಸಮಸ್ಯೆ, ತೊಂದರೆಯನ್ನು ಅನುಭವಿಸಿದ್ದರು. ಜಿಎಸ್ ಟಿಯನ್ನು ಹೆಚ್ಚು ಮಾಡಿದ್ದು ಅವರೇ, ಈಗ ಕಡಿಮೆ ಮಾಡಿರುವುದೂ ಅವರೇ. ಇದಕ್ಕೆಲ್ಲಾ ಸಂಭ್ರಮದ ಆಚರಣೆಯ ಅಗತ್ಯ ಇದೆಯಾ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಪ್ರಶ್ನೆ ಮಾಡಿದ್ದಾರೆ. ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಜುನಾಥ ಭಂಡಾರಿ,…

Read More

ಕೊಲ್ಲಮೊಗ್ರು ಪಂಚಾಯತ್‌ ನಲ್ಲಿ ಕಳ್ಳರು ಯಾರು? ಅಂಗಡಿ ಮುಂಗಟ್ಟು ಬಂದ್ – ಗ್ರಾಮಸ್ಥರಿಂದ ಮುತ್ತಿಗೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗವಾದ ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನಲ್ಲಿನ ಸೊತ್ತುಗಳನ್ನು ಅಲ್ಲಿನ ಗುಮಾಸ್ತನೇ ಕಳವು ಮಾಡಿದ್ದರೂ ಆತನ ವಿರುದ್ಧ ಪಂಚಾಯತ್ ಸೂಕ್ತ ಕ್ರಮ ಜರುಗಿಸಿಲ್ಲ, ಪಂಚಾಯತ್ ಸಿಸಿ ಟಿವಿ ಅಳವಡಿಸಿ ಜನರ ಖಾಸಗಿ ವಿಡಿಯೋಗಳನ್ನು ಸೆರೆಹಿಡಿದು ಅದನ್ನು ವಾಟ್ಸ್ಯಾಪ್‌ನಲ್ಲಿ ಹರಿಯಬಿಡಲಾಗುತ್ತದೆ‌ ಎಂದು ಆರೋಪಿಸಿದ ಗ್ರಾಮಸ್ಥರು ಗುರುವಾರ ಬೆಳಗ್ಗೆ ಪಂಚಾಯತ್ ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಗ್ರಾಮ ಪಂಚಾಯತ್ ಗೆ ಸಂಬಂಧಪಟ್ಟ ಸಿಸಿ ಟಿವಿ ಪರಿಕರ, ಸೌಂಡ್ ಸಿಸ್ಟಮ್‌ ಗಳನ್ನು ಖಾಸಗಿ…

Read More

ಮಂಜೇಶ್ವರ: ಶಾಲಾ ಕೊಠಡಿಯ ಮೇಲ್ಛಾವಣಿ ಕುಸಿತ – ವಿದ್ಯಾರ್ಥಿಗಳು ಪವಾಡಸದೃಶ ಪಾರು

ಮಂಜೇಶ್ವರ: ಉದ್ಯಾವರ ಮಾಡದಲ್ಲಿರುವ ಕುಂಜತ್ತೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯೊಂದರಲ್ಲಿ ಭಾರೀ ಒಂದು ದುರಂತ ತಪ್ಪಿದ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಶಾಲೆಯ ಎರಡನೇ ತರಗತಿಯ ಮೇಲ್ಛಾವಣಿ ಆಕಸ್ಮಿಕವಾಗಿ ಕುಸಿದು ಬಿದ್ದಿದ್ದು, ಪಾಠಕ್ಕೆ ತಡವಾಗಿ ಬಂದ ವಿದ್ಯಾರ್ಥಿಗಳು ಪವಾಡಸದೃಶವಾಗಿ ಪಾರಾಗಿದ್ದಾರೆ. ಘಟನೆ ಬೆಳಿಗ್ಗೆ 8.45ರ ಸುಮಾರಿಗೆ ಸಂಭವಿಸಿದೆ. ಅಪಘಾತದ ಹೊತ್ತಿನಲ್ಲಿ ವಿದ್ಯಾರ್ಥಿಗಳು ತರಗತಿ ಕೊಠಡಿಗೆ ಇನ್ನೂ ತಲುಪಿರಲಿಲ್ಲ. ಒಂದು ವೇಳೆ ವಿದ್ಯಾರ್ಥಿಗಳು ಆಗಲೇ ತರಗತಿಯಲ್ಲಿ ಹಾಜರಿದ್ದರೆ, ಭಾರೀ ದುರಂತ ತಪ್ಪಿಸಿಕೊಳ್ಳಲಾಗುತ್ತಿರಲಿಲ್ಲ ಎಂಬುದು ಸ್ಪಷ್ಟವಾಗಿದೆ. ಈ ಸಮಯದಲ್ಲಿ, ಶಾಲೆಯ…

Read More

ಮಂಗಳೂರು ದಸರಾದಲ್ಲಿ ಮುದ್ದು ಶಾರದೆ ಕಲರವ

ಮಂಗಳೂರು: ಶೃಂಗೇರಿ ಶಾರದಾ ಪೀಠದ ವೈಭವ, ವೀಣೆಯ ನುಡಿಸುತ್ತಾ ಮುಗುಳ್ನಗುವ ಕಂದಮ್ಮಗಳು, ಕೈಯೊಲು ತಾವರೆ, ಪುಸ್ತಿಕೆಗಳಿಂದ ಶೋಭಿಸುವ ವಿದ್ಯಾಧಿದೇವತೆ. ಈ ಮಧ್ಯೆ ನವರೂಪಗಳಲ್ಲಿ ಶೋಭಿಸುವ ನವದುರ್ಗೆಯರು. ಇದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವದಲ್ಲಿ ಬುಧವಾರ ನಡೆದ ಮುದ್ದು ಶಾರದೆ ಮತ್ತು ನವದುರ್ಗೆಯರ ಸ್ಪರ್ಧೆಯ ಝಲಕ್.ಪಿ.ಕೆ.ಲೋಹಿತ್ ಸ್ಮರಣಾರ್ಥ ಪಿ.ಕೆ ದೂಜ ಪೂಜಾರಿ ಗ್ರೂಪ್ಸ್ ಪ್ರಾಯೋಜಕತ್ವದಲ್ಲಿ ಆಭರಣ ಜುವೆಲರ್ಸ್ ಮತ್ತು ಅದಿರಾ ಪ್ರಾಪರ್ಟಿಸ್ ಸಹಕಾರದೊಂದಿಗೆ ಈ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ನೂರಾರು ಮಂದಿ…

Read More
error: Content is protected !!