ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮುಖ್ಯ ಸಲಹೆಗಾರರಾಗಿ ಸುನಿಲ್ ಕನುಗೋಲು ನೇಮಕ
ಸಂಪುಟ ಸಚಿವರ ಸ್ಥಾನಮಾನ; ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟ ಬೆಂಗಳೂರು, ಜೂನ್ 9: ರಾಜಕೀಯ ಹಾಗೂ ಚುನಾವಣಾ ತಂತ್ರಗಾರಿಕೆಯಲ್ಲಿ ಗುರುತಿಸಿಕೊಂಡಿರುವ ಸುನಿಲ್ ಕನುಗೋಲು ಅವರನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮುಖ್ಯ ಸಲಹೆಗಾರರನ್ನಾಗಿ ರಾಜ್ಯ ಸರ್ಕಾರ ಸೋಮವಾರ ನೇಮಕ ಮಾಡಿದೆ. ಮುಖ್ಯಮಂತ್ರಿಗಳ ಮುಖ್ಯ ಸಲಹೆಗಾರ ಹುದ್ದೆಗೆ ಸಂಪುಟ ಸಚಿವರ ಸ್ಥಾನಮಾನ ನೀಡಲಾಗಿದ್ದು, ಈ ಸಂಬಂಧ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ‘ಇನ್‌ಕ್ಲೂಸಿವ್ ಮೈಂಡ್ಸ್’ ಎಂಬ ರಾಜಕೀಯ ದತ್ತಾಂಶ ಮತ್ತು ಚುನಾವಣಾ ವಿಶ್ಲೇಷಣಾ ಸಂಸ್ಥೆಯ ಮುಖ್ಯಸ್ಥರಾಗಿರುವ ಸುನಿಲ್…
