ಮಂಗಳೂರು ದಸರಾ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ.
ಮಂಗಳೂರು: ದಸರಾ ಹಬ್ಬ ಮಾತ್ರವಲ್ಲ, ನಂಬಿಕೆ, ಸಂಸ್ಕೃತಿ ಹಾಗು ಒಗಟ್ಟಿನ ಪ್ರತೀಕ. ಕುದ್ರೋಳಿಯಲ್ಲಿ ನಡೆಯುತ್ತಿರು ಈ ಉತ್ಸವ ಮಂಗಳೂರನ್ನು ಮತ್ತಷ್ಟು ವಿಭಿನ್ನವಾಗಿಸಿದೆ ಎಂದು ನವಮಂಗಳೂರು ಬಂದರು ಪ್ರಾಧಿಕಾರ ( ಎನ್ಎಂಪಿಎ) ಅಧ್ಯಕ್ಷ ಡಾ.ಎ.ವೆಂಕಟರಮಣ ಅಕ್ಕರಾಜು ಹೇಳಿದರು. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ದಸರಾ ಮಹೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಿ ಮಾತನಾಡಿದರು.ಮಂಗಳೂರು ದಸರಾ ಮೈಸೂರ ದಸರಾದಷ್ಟೇ ಪ್ರಸಿದ್ಧಿ ಪಡೆದಿದೆ. ಭಾರತೀಯ ಧರ್ಮ, ಸಂಸ್ಕೃತಿಯ ರಕ್ಷಣೆ ನಮ್ಮೆಲ್ಲರ ಕರ್ತವ್ಯ ಎಂದರು.ತಾಸೆ ಮತ್ತು ಡೋಲು ಬಡಿಯುವ ಮೂಲಕ ತುಳುನಾಡಿನ…