ರಾಜ್ಯಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ; ಜೂನ್ 9ರಿಂದ ಪರಿಷ್ಕೃತ ದರ ಜಾರಿ
ಉಡುಪಿ, ಜೂನ್ 8: ರಾಜ್ಯಾದ್ಯಂತ ಖಾಸಗಿ ಬಸ್‌ಗಳ ಪ್ರಯಾಣ ದರವನ್ನು ಶೇ.5ರಿಂದ 8ರಷ್ಟು ಹೆಚ್ಚಿಸಲಾಗಿದ್ದು, ಪರಿಷ್ಕೃತ ದರವು ಜೂನ್ 9ರಿಂದ ಜಾರಿಗೆ ಬರಲಿದೆ ಎಂದು ರಾಜ್ಯ ಖಾಸಗಿ ಮಜಲು ವಾಹನ ಬಸ್ ಮಾಲಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ನಗರದ ಡಯಾನ ಹೋಟೆಲ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡೀಸೆಲ್ ದರ ಏರಿಕೆ, ವಾಹನಗಳ ನಿರ್ವಹಣಾ ವೆಚ್ಚ, ಬಿಡಿಭಾಗಗಳ ಬೆಲೆ ಹಾಗೂ ನೌಕರರ ವೇತನ ಹೆಚ್ಚಳದಿಂದ ಬಸ್ ಉದ್ಯಮ ತೀವ್ರ ಆರ್ಥಿಕ ಒತ್ತಡಕ್ಕೆ…
