ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಕಾಮೆಂಟ್; ವ್ಯಕ್ತಿ ಬಂಧನಜಾತಿನಿಂದನೆ, ಜೀವ ಬೆದರಿಕೆ ಆರೋಪದಡಿ ಕಾರ್ಕಳ ಪೊಲೀಸರ ಕ್ರಮ
ಉಡುಪಿ, ಜೂ. 8: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಹಾಗೂ ಜಾತಿನಿಂದನಾತ್ಮಕ ಕಾಮೆಂಟ್ ಮಾಡಿ ಜೀವ ಬೆದರಿಕೆ ಒಡ್ಡಿದ ಆರೋಪದಡಿ ಕಾರ್ಕಳ ಪೊಲೀಸರು ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ. ಕಾರ್ಕಳ ತಾಲೂಕಿನ ಕೇರ್ವಾಶೆ ನಲ್ಕೆದಬೆಟ್ಟು ನಿವಾಸಿ ಸುಧೀರ ಬಂಗೇರ (48) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ‘ನಮ್ಮ ಕಾರ್ಲ’ ಎಂಬ ಫೇಸ್‌ಬುಕ್ ಖಾತೆಯಲ್ಲಿ ಪ್ರಕಟಗೊಂಡಿದ್ದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಕುರಿತ ಪೋಸ್ಟ್‌ಗೆ ಸುಧೀರ ಬಂಗೇರ ಅವಹೇಳನಕಾರಿ, ಜಾತಿನಿಂದನಾತ್ಮಕ…
