ಜೂನ್ 7ರಂದು ಸುಂಕದಕಟ್ಟೆಯಲ್ಲಿ ಬಿಎಂಎಸ್ ವರ್ಕಾಡಿ ಪಂಚಾಯತ್ ಸಮ್ಮೇಳನ

ಉಪ್ಪಳ, ಜೂ. 6:ಭಾರತೀಯ ಮಜ್ದೂರ್ ಸಂಘ (ಬಿಎಂಎಸ್) ವರ್ಕಾಡಿ ಪಂಚಾಯತ್ ಸಮಿತಿಯ ವತಿಯಿಂದ ಜೂನ್ 7ರಂದು ಆದಿತ್ಯವಾರ ಸಂಜೆ 3 ಗಂಟೆಗೆ ಸುಂಕದಕಟ್ಟೆಯ ಬಿ.ಜೆ.ಪಿ. ಕಾರ್ಯಾಲಯದಲ್ಲಿ ಪಂಚಾಯತ್ ಸಮ್ಮೇಳನ ನಡೆಯಲಿದೆ. ಈ ಕುರಿತು ಸಂಘದ ಅಧ್ಯಕ್ಷೆ ವನಿತಾ ಜೆ. ನಾಯಕ್ ಹಾಗೂ ಕಾರ್ಯದರ್ಶಿ ರವೀಂದ್ರ ಕುಲಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. “ಶ್ರಮವೇ ಆರಾಧನೆ” ಎಂಬ ಧ್ಯೇಯವಾಕ್ಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಮಜ್ದೂರ್ ಸಂಘವು ಕಾರ್ಮಿಕರು ತಮ್ಮ ಕರ್ತವ್ಯವನ್ನು ರಾಷ್ಟ್ರಸೇವೆಯೆಂದು ಭಾವಿಸಿ ಕಾರ್ಯನಿರ್ವಹಿಸುವ ಮನೋಭಾವ ಬೆಳೆಸುವ ಉದ್ದೇಶ ಹೊಂದಿದೆ. ಕಾರ್ಮಿಕರು, ಮಾಲಕರು…

Read More

ಕಳ್ಳತನ ಮತ್ತು ಪರಾರಿ ಪ್ರಕರಣ: ಆರೋಪಿಗೆ ಜೈಲು ಶಿಕ್ಷೆ

ಮಂಗಳೂರು:ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಗೂ ಪೊಲೀಸ್ ವಶದಿಂದ ಪರಾರಿಯಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರಲ್ಲಿ ಶಿಕ್ಷೆ ಪ್ರಕಟಗೊಂಡಿದೆ. ಸುಳ್ಯ ಪೊಲೀಸ್ ಠಾಣಾ 96/2006 ಕಲಂ: 457, 380 ಐ.ಪಿ.ಸಿ ಹಾಗೂ 103/2018 ಕಲಂ:224 ಐ.ಪಿ.ಸಿ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಎ ಎಮ್ ಅಜೀಜ್ ಎಂಬಾತನ ವಿರುದ್ದ ಎಸ್ ಸಿ ಜೆ ಮತ್ತು ಜೆ ಎಮ್‌ಎಫ್ ಸಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ ನ್ಯಾಯಾದೀಶರು ಆರೋಪಿ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ, ಅ.ಕ್ರ: 103/2018 ರಲ್ಲಿ ಒಂದು ವರ್ಷಗಳ ಸಾದಾ ಕಾರಗೃಹ ವಾಸ…

Read More

ಸಿಇಟಿ ಫಲಿತಾಂಶ ಪ್ರಕಟ: ಇಂಜಿನಿಯರಿಂಗ್‌ನಲ್ಲಿ ತನೀಶಾ ಕಾರ್ತಿಕ್ ರಾಜ್ಯ ಪ್ರಥಮ, ಕರಾವಳಿ ವಿದ್ಯಾರ್ಥಿಗಳಿಂದ ಗಮನಾರ್ಹ ಸಾಧನೆ

ಬೆಂಗಳೂರು, ಜೂ. 6: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಪದವಿ ಕೋರ್ಸ್‌ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯ ಫಲಿತಾಂಶವನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ಶುಕ್ರವಾರ ಪ್ರಕಟಿಸಿದರು. ಈ ಬಾರಿ ಸಿಇಟಿಗೆ 3,30,646 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದು, 3,09,014 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇವರಲ್ಲಿ 2,92,782 ವಿದ್ಯಾರ್ಥಿಗಳು ಅರ್ಹತೆ ಪಡೆದಿದ್ದಾರೆ. ಇಂಜಿನಿಯರಿಂಗ್ ವಿಭಾಗದಲ್ಲಿ ಬೆಂಗಳೂರಿನ ಆರ್.ವಿ. ಪಿಯು ಕಾಲೇಜಿನ ವಿದ್ಯಾರ್ಥಿನಿ ತನೀಶಾ ಕಾರ್ತಿಕ್ 99.44 ಶೇಕಡಾ…

Read More

ಬಂಟ್ವಾಳದಲ್ಲಿ ಎಂಡಿಎಂಎ ಸಾಗಾಟ ಪತ್ತೆ: ಮೂವರು ಬಂಧನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂ.ಡಿ.ಎಂ.ಎ ಸಾಗಾಟ ಪತ್ತೆಯಾಗಿದ್ದು, ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಟ್ವಾಳ ನಗರ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಸಂದೀಪ್‌ ಕುಮಾರ್‌ ಶೆಟ್ಟಿರವರು ಠಾಣಾ ಸಿಬ್ಬಂದಿಗಳೊಂದಿಗೆ ಮೆಲ್ಕಾರ್ ಪ್ಲೈಒವರ್ ಬಳಿ ಕಾರೊಂದನ್ನು ತಪಾಸಣೆಗಾಗಿ ನಿಲ್ಲಿಸಿದ್ದರು. ಈ ಕಾರಿನಲ್ಲಿ ಚಾಲಕ ಹಾಗೂ ಇಬ್ಬರು ಪ್ರಯಾಣಿಕರಿರುತ್ತಾರೆ. ಕಾರನ್ನು ಪರಿಶೀಲಿಸಿದಾಗ ಮನೋದ್ರೇಕಕಾರಿ ವಸ್ತು ಸೇವನೆ ಮಾಡಲು ಬಳಸುವ ಸಾಧನ ಕಂಡುಬಂದಿದ್ದು, ಈ ಬಗ್ಗೆ ಅವರನ್ನು ವಿಚಾರಿಸಿದಾಗ ಎ,ಜುಬೈರ್, ಮುಹಮ್ಮದ್ ಸವಾದ್ ಹಾಗೂ ಬಿ.ಎಮ್. ರಶೀದ್ ಯಾನೆ ಮಾರಿಮುತ್ತು ಎಂಬುದಾಗಿ…

Read More

ನೀಟ್ ಅಕ್ರಮ ಆರೋಪ: ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ಶಿಕ್ಷಣ ಕ್ಷೇತ್ರದಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ತಡೆಯುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಸದಸ್ಯರು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದರು. ಪಕ್ಷದ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಶಿಕ್ಷಣ ಕ್ಷೇತ್ರದ ಅಕ್ರಮಗಳು ಮತ್ತು ಪರೀಕ್ಷಾ ಹಗರಣಗಳ ವಿರುದ್ಧ ಒಂದು ತಿಂಗಳಿನಿಂದ…

Read More

ನಕಾರಾತ್ಮಕ ಚಿಂತನೆ ಬಿಟ್ಟು ಸಕಾರಾತ್ಮಕ ಮನೋಭಾವ ಬೆಳೆಸಿಕೊಳ್ಳಿ: ಡಾ. ಬಿ.ಎ. ವಿವೇಕ ರೈ

ಉಡುಪಿ: ನಕಾರಾತ್ಮಕ ಚಿಂತೆಯನ್ನು ಬಿಟ್ಟು ಸಕಾರಾತ್ಮಕವಾಗಿ ಚಿಂತನೆ ಮಾಡುವುದು ಅತೀ ಮುಖ್ಯ. ಇದು ನಮ್ಮ ಬದುಕಿನಲ್ಲಿ ರೂಪಿಸಿಕೊಳ್ಳಬೇಕಾದ ಮನೋಧರ್ಮ. ಈ ಮೂಲಕ ಬದುಕು ಕಟ್ಟಿಕೊಂಡರೆ ಶ್ರೇಯಸ್ಸು ಪಡೆಯಲು ಸಾಧ್ಯ ಎಂದು ಹಿರಿಯ ವಿದ್ವಾಂಸ, ವಿಶ್ರಾಂತ ಕುಲಪತಿ ಡಾ.ಬಿ.ಎ.ವಿವೇಕ ರೈ ಹೇಳಿದ್ದಾರೆ. ಉಡುಪಿ ಯಕ್ಷಗಾನ ಕಲಾರಂಗದ ವತಿಯಿಂದ ಕಲಾರಂಗದ ಐವೈಸಿ ಸಭಾಭವನದಲ್ಲಿ ಯಕ್ಷಗಾನದ ಯುವ ಕಲಾವಿದರಿಗೆ ಆಯೋಜಿಸಿದ್ದ ನಾಲ್ಕು ದಿನಗಳ ಸನಿವಾಸ ಯಕ್ಷಗಾನ ಮಾರ್ಗದರ್ಶಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು.ಯುವಜನತೆ ಫೇಸ್‌ಬುಕ್‌ಗಳಂತಹ…

Read More

ಪದವಿನಂಗಡಿಯಲ್ಲಿ ₹6 ಲಕ್ಷ ಮೌಲ್ಯದ ಎಂಡಿಎಂಎ ವಶ: ಸಿಸಿಬಿ ಕಾರ್ಯಾಚರಣೆಯಲ್ಲಿ ಆರೋಪಿಯ ಬಂಧನ

ಮಂಗಳೂರು, ಜೂನ್ 6:ಪದವಿನಂಗಡಿ ಪರಿಸರದಲ್ಲಿರುವ ಮನೆಯಿಂದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಎಂಡಿಎಂಎ ಮಾದಕವಸ್ತು ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯಿಂದ ಸುಮಾರು ₹6 ಲಕ್ಷ ಮೌಲ್ಯದ 60 ಗ್ರಾಂ ಎಂಡಿಎಂಎ ಮಾದಕವಸ್ತು, ಜಿಪ್-ಲಾಕ್ ಕವರ್ಗಳು, ಒಂದು ಮೊಬೈಲ್ ಫೋನ್ ಹಾಗೂ ಡಿಜಿಟಲ್ ತೂಕಮಾಪನ ಯಂತ್ರವನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಬಂಧಿತ…

Read More

ವಿದ್ಯಾರ್ಥಿಗಳನ್ನು ಗುರಿಯಾಗಿಸಿ ಡ್ರಗ್ಸ್ ಮಾರಾಟ: ಆರೋಪಿ ಬಂಧನ

ಮಂಗಳೂರು : ಮಂಗಳೂರು ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಎಂಡಿಎಂಎ (MDMA) ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಮಂಗಳೂರು ನಗರ ಅಪರಾಧ ವಿಭಾಗ (CCB) ಪೊಲೀಸರು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಬಂಧಿಸಿದ್ದಾರೆ. ಅವರಿಂದ ಒಟ್ಟು 164 ಗ್ರಾಂ ಎಂಡಿಎಂಎ ಮಾದಕವಸ್ತುವನ್ನು ವಶಪಡಿಸಿಕೊಂಡಿದ್ದಾರೆ.ವಶಪಡಿಸಿಕೊಂಡ ಮಾದಕವಸ್ತುವಿನ ಒಟ್ಟು ಮೌಲ್ಯ ಸುಮಾರು ₹16,40,000 ಎಂದು ಅಂದಾಜಿಸಲಾಗಿದೆ. ಬೆಂಗಳೂರು ನಗರದಿಂದ ಎಂಡಿಎಂಎ ಮಾದಕವಸ್ತುವನ್ನು ಖರೀದಿಸಿ ಮಂಗಳೂರು ನಗರಕ್ಕೆ ತಂದು ಹೊಯಿಗೆ ಬಜಾರ್ ಪರಿಸರದಲ್ಲಿರುವ ಮನೆಯಿಂದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿರುವ…

Read More

ಡಿಬಿಎಲ್ ಕಳಪೆ ಕಾಮಗಾರಿಗೆ ಮಂಗಳೂರು–ಮೂಡುಬಿದಿರೆ ಹೆದ್ದಾರಿ ಬಲಿ? ಮಿಜಾರಿನಲ್ಲಿ ಮಳೆಗೆ ರಸ್ತೆ ಕೊಚ್ಚಿ ಹೋಗಿ ಅಪಾಯದ ಸ್ಥಿತಿ

ಮೂಡುಬಿದಿರೆ, ಜೂನ್ 6:ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ಗುತ್ತಿಗೆದಾರ ಸಂಸ್ಥೆ ಡಿಬಿಎಲ್ (DBL) ಕೈಗೊಂಡಿರುವ ಅವೈಜ್ಞಾನಿಕ ಹಾಗೂ ಕಳಪೆ ಕಾಮಗಾರಿಯಿಂದಾಗಿ ಮಿಜಾರು ಸಮೀಪ ಹೆದ್ದಾರಿಯ ಒಂದು ಭಾಗ ಭಾರೀ ಮಳೆಗೆ ಕೊಚ್ಚಿ ಹೋಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಸ್ಥಳೀಯರ ಆರೋಪದ ಪ್ರಕಾರ, ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೂ ಮುನ್ನ ವೈಜ್ಞಾನಿಕ ರೀತಿಯಲ್ಲಿ ಸರ್ವೀಸ್ ರಸ್ತೆ ನಿರ್ಮಿಸದೇ, ನೀರು ಹರಿಯುವ ದೊಡ್ಡ ಸೇತುವೆ ಅಗತ್ಯವಿದ್ದ ಸ್ಥಳದಲ್ಲಿ ಅತೀ ಚಿಕ್ಕ ಮೋರಿ ನಿರ್ಮಿಸಲಾಗಿದೆ. ಇದರ ಪರಿಣಾಮ ಮಳೆನೀರು ಸರಾಗವಾಗಿ ಹರಿಯದೆ ರಸ್ತೆಯ…

Read More

ಬೆಂಗ್ರೆ ಜಲಮೂಲದಲ್ಲಿ ಮೀನುಗಳ ಸಾಮೂಹಿಕ ಸಾವು: ಸ್ಥಳೀಯರಲ್ಲಿ ಆತಂಕ

ಮಂಗಳೂರು: ನಗರದ ಬೆಂಗ್ರೆ ಪ್ರದೇಶದ ಜಲಮೂಲದಲ್ಲಿ ಮೀನುಗಳು ಸಾಮೂಹಿಕವಾಗಿ ಸಾವನ್ನಪ್ಪುತ್ತಿರುವುದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಹೆಚ್ಚುತ್ತಿರುವ ಮಾಲಿನ್ಯ ಹಾಗೂ ನೀರಿನಲ್ಲಿನ ಆಮ್ಲಜನಕದ ಕೊರತೆಯಿಂದ ಈ ಪರಿಸ್ಥಿತಿ ಉಂಟಾಗಿದೆ ಎಂದು ಹೇಳಲಾಗಿದೆ. ಸಂಸ್ಕರಿಸದ ಕೊಳಚೆ ನೀರು ನೇರವಾಗಿ ಜಲಮೂಲಕ್ಕೆ ಸೇರುತ್ತಿರುವುದು ಮತ್ತು ಹತ್ತಿರದ ಪ್ರದೇಶಗಳಿಂದ ರಾಸಾಯನಿಕ ತ್ಯಾಜ್ಯಗಳು ನೀರಿನಲ್ಲಿ ಬೆರೆಯುತ್ತಿರುವುದೇ ಮೀನುಗಳ ಸಾವಿಗೆ ಪ್ರಮುಖ ಕಾರಣಗಳಾಗಿವೆ. ಇದರಿಂದ ಜಲಚರಗಳ ಜೀವಕ್ಕೆ ಅಪಾಯ ಉಂಟಾಗಿದ್ದು, ಪರಿಸರ ಸಮತೋಲನಕ್ಕೂ ಧಕ್ಕೆಯಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಮಾಲಿನ್ಯ ನಿಯಂತ್ರಣಕ್ಕೆ ಮುಂದಾಗಬೇಕು…

Read More
error: Content is protected !!