ಶಿರ್ವದಲ್ಲಿ ಜಾನುವಾರು ವಧೆ ಪ್ರಕರಣ ಭೇದಿಸಿದ ಪೊಲೀಸರು; ಆರೋಪಿ ಬಂಧನ
ಉಡುಪಿ: ಕಾಪು ತಾಲೂಕಿನ ಶಿರ್ವ ಗ್ರಾಮದ ಕಲ್ಲೊಟ್ಟು ಸೇತುವೆ ಕೆಳಗಿನ ಪಾಪನಾಶಿನಿ ಹೊಳೆಯಲ್ಲಿ ಜಾನುವಾರಿನ ಅವಶೇಷಗಳನ್ನು ಎಸೆದ ಪ್ರಕರಣವನ್ನು ಶಿರ್ವ ಪೊಲೀಸರು ಭೇದಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಜೂನ್ 1ರಂದು ಹೊಳೆಯಲ್ಲಿ ಜಾನುವಾರದ ಅವಶೇಷಗಳು ಪತ್ತೆಯಾದ ಹಿನ್ನೆಲೆಯಲ್ಲಿ ಶಿರ್ವ ಪೊಲೀಸ್ ಠಾಣೆಯ ಪಿಎಸ್‌ಐ ಮಂಜುನಾಥ ಮರಬದ ಅವರು ಕಾಪು ಪಶುವೈದ್ಯಕೀಯ ಆಸ್ಪತ್ರೆಯ ಸಹಾಯಕ ನಿರ್ದೇಶಕರು ಹಾಗೂ ಜಿಲ್ಲಾ ಅಪರಾಧ ಪರಿಶೀಲನಾ ಅಧಿಕಾರಿಗಳ ಸಮ್ಮುಖದಲ್ಲಿ ಸ್ಥಳ ಮಹಜರು ನಡೆಸಿದ್ದರು. ಈ ವೇಳೆ ಜಾನುವಾರದ ಮೇಲ್ದವಡೆಯ ಭಾಗ, ಎರಡು ಗೆರಸುಗಳು, ಮಾಂಸ…
