ವಿಶ್ವ ರಾಮಕ್ಷತ್ರಿಯ ಮಹಾಸಂಘ ಪದಾಧಿಕಾರಿಗಳಿಗೆ ಕನ್ನಡ ಭವನದ “ಶ್ರೀ ಶ್ರೀ ಭಿಕ್ಷು ಡಾ. ಲಕ್ಷ್ಮಣಾನಂದ ಸ್ವಾಮೀಜಿ “ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ “ಪ್ರದಾನ.

ಕಾಸರಗೋಡು :ವಿಶ್ವ ರಾಮಕ್ಷತ್ರಿಯ ಮಹಾಸಂಘ (ರಿ.) ಕುಂದಾಪುರ ಇದರ ಅಧ್ಯಕ್ಷರು ಹಾಗೂ ಸಮಾಜ ಸೇವಕ, ಹಿರಿಯ ಸಂಘಟಕ ಶ್ರೀ ಎಚ್. ಆರ್ ಶಶಿಧರ್ ನಾಯ್ಕ್, ಉದ್ಯಮಿ, ಸಮಾಜಸೇವಕ, ವಿಶ್ವ ಸಂಘ ಉಪಾಧ್ಯಕ್ಷರಾದ ಶ್ರೀ ನಾಗರಾಜ್ ಕಲ್ಪತರು ಕುಂದಾಪುರ, ರಾಮಕ್ಷತ್ರಿಯ ಮಾಸಪತ್ರಿಕೆ ಸಂಪಾದಕರಾದ ಮಹಾಸಂಘ ಉಪಾಧ್ಯಕ್ಷರಾದ ಶ್ರೀ ಬಿ. ಎಮ್ ನಾಥ್ ಬೆಂಗಳೂರು, ವಿಶ್ವ ಮಹಾಸಂಘ ಕೋಶಾಧಿಕಾರಿ, ಧಾರ್ಮಿಕ ಮುಖಂಡ ಶ್ರೀ ಕರುಣಾಕರ ಉಡುಪಿ ಈ ಮೇಲಿನ ನಾಲ್ಕು ಮಂದಿಯ ಶ್ರೇಷ್ಠ ಸಮುದಾಯಿಕ, ಸಾಮಾಜಿಕ, ಧಾರ್ಮಿಕ ಕ್ಷೇತ್ರಗಳ ಸರ್ವತೋಮುಖ…

Read More

ಧರ್ಮತ್ತಡ್ಕ ಶಾಲೆಗೆ ಅಮಾನತುಗೊಂಡ ಶಿಕ್ಷಕ ಮರುಪ್ರವೇಶ: ಪೋಷಕರ ತೀವ್ರ ವಿರೋಧ

ಮಂಜೇಶ್ವರ : ಧರ್ಮತ್ತಡ್ಕದ ಎಂ.ಐ.ಎ.ಎಲ್.ಪಿ ಶಾಲೆಯಲ್ಲಿ ಅಮಾನತುಗೊಂಡಿದ್ದ ಶಿಕ್ಷಕ ಕೆ.ವಿ. ಜಯಪ್ರಸಾದ್ ಮರಳಿ ಶಾಲೆಗೆ ಹಾಜರಾಗಿರುವುದು ಮತ್ತೆ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ಡಿಇಒ ಆದೇಶದ ಮೇರೆಗೆ ಬದಿಯಡ್ಕ ಪೊಲೀಸರ ಸಮ್ಮುಖದಲ್ಲಿ ಶಿಕ್ಷಕರು ಹಾಜರಾತಿ ದಾಖಲಿಸಿದ್ದು, ಇದನ್ನು ವಿರೋಧಿಸಿ ಪೋಷಕರು ತೀವ್ರ ಪ್ರತಿಭಟನೆ ನಡೆಸಿದರು.ಮಕ್ಕಳನ್ನು ತರಗತಿಯಲ್ಲಿ ಕೂಡಿ ಹಾಕುವುದು ಮತ್ತು ಶೌಚಾಲಯಕ್ಕೆ ಹೋಗಲು ಅವಕಾಶ ನೀಡದಿರುವುದು ಸೇರಿದಂತೆ ಈ ಶಿಕ್ಷಕನ ವಿರುದ್ಧ ಗಂಭೀರ ಆರೋಪಗಳಿವೆ. ಸದ್ಯ ತಮ್ಮ ಬೇಡಿಕೆಗೆ ಮನ್ನಣೆ ಸಿಗದಿದ್ದರೆ ಮಕ್ಕಳನ್ನು ಶಾಲೆ ಬದಲಾಯಿಸುವುದಾಗಿ ಪೋಷಕರು ಎಚ್ಚರಿಕೆ ನೀಡಿದ್ದಾರೆ….

Read More

ಪುತ್ತೂರು: ಪುತ್ತೂರಿನಲ್ಲಿ ಎಂಟನೇ ಆವೃತ್ತಿಯ ಹಲಸು-ಹಣ್ಣು ಮೇಳ

ಪುತ್ತೂರು: ಪುತ್ತೂರಿನಲ್ಲಿ ಎಂಟನೇ ಆವೃತ್ತಿಯ ಹಲಸು-ಹಣ್ಣು ಮೇಳವು ಜೂ.5ರಿಂದ 7ರ ತನಕ ಪುತ್ತೂರು ಕಿಲ್ಲೆ ಮೈದಾನದಲ್ಲಿ ನಡೆಯಲಿದೆ. ನವತೇಜ ಟ್ರಸ್ಟ್ ಪುತ್ತೂರು ಇವರ ನೇತೃತ್ವ ಮತ್ತು ‘ಮುಳಿಯ ಮ್ಯಾನೇಜ್ ಫಾರ್ಮ್ ಲ್ಯಾಂಡ್‌’ ಇವರ ಪ್ರಾಯೋಜಕತ್ವದಲ್ಲಿ ಈ ಮೇಳ ನಡೆಯಲಿದೆ. ನವತೇಜ ಟ್ರಸ್ಟ್‌ನ ಅಧ್ಯಕ್ಷ ಅನಂತಪ್ರಸಾದ್ ನೈತ್ತಡ್ಕ ಮತ್ತು ನವತೇಜ ಟ್ರಸ್ಟ್‌ನ ಟ್ರಸ್ಟಿ ಸುಹಾಸ್ ಮರಿಕೆ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ 2014ರಲ್ಲಿ ನಾವು ಹಲಸಿನ ಮೇಳ ಆರಂಭಿಸಿದ್ದೇವು. ಇವತ್ತು 8ನೇ ಆವೃತ್ತಿಯಲ್ಲಿ ಹಲಸಿನ ಬೇಡಿಕೆ ಹೆಚ್ಚುತ್ತಿದೆ ಎಂದ ಅವರು…

Read More

ಬಿಳಿಗೆರೆ ಗ್ರಾಮ ಪಂಚಾಯಿತಿಯಲ್ಲಿ ವಿಶ್ವ ಪರಿಸರ ದಿನ ಆಚರಣೆ

ವಿಶ್ವ ಪರಿಸರ ದಿನದ ಅಂಗವಾಗಿ ಜಿಲ್ಲಾ ಪಂಚಾಯಿತಿ ಮೈಸೂರು , ತಾಲೂಕು ಪಂಚಾಯಿತಿ ಹುಣಸೂರು , ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಭಗೀರಥ ಸಂಸ್ಥೆಯ ಸಹಯೋಗದೊಂದಿಗೆ ಬಿಳಿಗೆರೆ ಗ್ರಾಮ ಪಂಚಾಯಿತಿಯಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು ಈ ಸಂದರ್ಭದಲ್ಲಿ ಪರಿಸರ ಸಂರಕ್ಷಣೆ, ಸ್ವಚ್ಛತೆ ಮತ್ತು ಜಲ ಸಂರಕ್ಷಣೆಯ ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಪರಿಸರ ಸಂರಕ್ಷಣೆಯ ಮಹತ್ವ, ಪ್ಲಾಸ್ಟಿಕ್ ತ್ಯಾಜ್ಯ ನಿಯಂತ್ರಣ, ಮರಗಳ ನೆಡುವಿಕೆ, ನೀರಿನ ಸಂರಕ್ಷಣೆ ಹಾಗೂ ಸ್ವಚ್ಛ ಪರಿಸರ…

Read More

ಸಂಸ್ಕಾರಯುತ ಶಿಕ್ಷಣ ಇಂದಿನ ಅಗತ್ಯ: ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ

ಪುತ್ತೂರು, ಜೂನ್ 5: ಜಗತ್ತು ವೇಗವಾಗಿ ಬದಲಾಗುತ್ತಿದ್ದು, ಹೊಸ ಕಲ್ಪನೆಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ನಿರಂತರ ಪ್ರಯತ್ನ ಅಗತ್ಯವಾಗಿದೆ. ಶಿಕ್ಷಣದ ಮಾಧ್ಯಮಕ್ಕಿಂತಲೂ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಒಳಗೊಂಡ ಶಿಕ್ಷಣವೇ ಇಂದಿನ ಅಗತ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಹೇಳಿದರು. ಅವರು ಬನ್ನೂರು ಕೃಷ್ಣನಗರದ ಅಲುಂಬುಡ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ವರ್ಷದ ಆರಂಭ-2026 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಶಿಕ್ಷಣ ನೀತಿಯು ಗುಲಾಮಗಿರಿಯ ಮನೋಭಾವದಿಂದ ಹೊರಬರಲು ಹಾಗೂ…

Read More

ಬಾಲಕಾರ್ಮಿಕರ ರಕ್ಷಣೆಗೆ ಅನಿರೀಕ್ಷಿತ ದಾಳಿ, ತಪಾಸಣೆ ಹೆಚ್ಚಿಸಲು ಜಿಲ್ಲಾಧಿಕಾರಿ ಸೂಚನೆ

ಮಂಗಳೂರು,:ಅಂಗಡಿಗಳು, ಕಾರ್ಖಾನೆಗಳಿಗೆ, ತೋಟಗಳು, ಇತರೆ ಕೃಷಿ ಸೇರಿದಂತೆ ಅಥವಾ ಅಪಾಯಕಾರಿ ಕೆಲಸಗಳಲ್ಲಿ ಬಾಲಕಾರ್ಮಿಕರನ್ನು ತೊಡಗಿಸಿಕೊಳ್ಳದಂತೆ ನಿಯಮಿತ ದಾಳಿ ನಡೆಸಿ, ತಪಾಸಣೆಯನ್ನು ಹೆಚ್ಚಿಸಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಕಾರ್ಯಕಾರಿ ಸಮಿತಿ ಹಾಗೂ ಟಾಸ್ಕ್ ಫೋರ್ಸ್ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಾಲಕಾರ್ಮಿಕ ಪದ್ಧತಿ ಕುರಿತು ಕಾನೂನು ಅರಿವು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನಜಾಗೃತಿ ಮೂಡಿಸಬೇಕು. ಜಿಲ್ಲಾ ಮತ್ತು…

Read More

ನೂತನ ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಸಾರಥಿ ಬಿ.ಕೆ. ಹರಿಪ್ರಸಾದ್‌ ಅವರಿಗೆ ಶಾಸಕ ಡಾ.ಮಂಜುನಾಥ ಭಂಡಾರಿ ಅಭಿನಂದನೆ

ಮಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರದ ಸೂತ್ರ ಹಿಡಿದಿರುವ ಜನಪ್ರಿಯ ನಾಯಕ ಮಾನ್ಯ ಡಿ.ಕೆ.ಶಿವಕುಮಾರ್ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ನೂತನ ಅಧ್ಯಕ್ಷರಾಗಿ ಪದಗ್ರಹಣ ಮಾಡಿರುವ ಹಿರಿಯ ಮುತ್ಸದ್ದಿ ಮಾನ್ಯ ಬಿ.ಕೆ. ಹರಿಪ್ರಸಾದ್ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, “ಮಾನ್ಯ ಡಿ.ಕೆ. ಶಿವಕುಮಾರ್ ಅವರ ಅದ್ವಿತೀಯ ರಾಜಕೀಯ ಮುತ್ಸದ್ದಿತನ, ಸಂಘಟನಾ ಶಕ್ತಿ ಹಾಗೂ ಅಪಾರ…

Read More

ಶಿಕ್ಷಣಕ್ಕೆ ಉತ್ತೇಜನ ನೀಡಿದ ಡಿ.ಕೆ. ಶಿವಕುಮಾರ್ ಸರ್ಕಾರ: ಕೀರ್ತನ್ ಗೌಡ ಕೊಡಪಾಲ

ರಾಜ್ಯದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಜಾರಿಗೆ ತರಲಾಗಿರುವ ಉಚಿತ ಬಸ್ ಪ್ರಯಾಣ ಯೋಜನೆ ವಿದ್ಯಾರ್ಥಿ ಸಮುದಾಯಕ್ಕೆ ದೊಡ್ಡ ವರದಾನವಾಗಿದೆ ಎಂದು ಎನ್‌ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷ ಕೀರ್ತನ್ ಗೌಡ ಕೊಡಪಾಲ ತಿಳಿಸಿದ್ದಾರೆ. ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಕೈಗೊಂಡಿರುವ ಈ ಮಹತ್ವದ ನಿರ್ಧಾರದಿಂದ ಸಾವಿರಾರು ವಿದ್ಯಾರ್ಥಿಗಳಿಗೆ ನೇರ ಪ್ರಯೋಜನವಾಗಲಿದೆ. ವಿಶೇಷವಾಗಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪ್ರತಿದಿನ ಶಿಕ್ಷಣ ಸಂಸ್ಥೆಗಳಿಗೆ ತೆರಳಲು ಎದುರಿಸುತ್ತಿದ್ದ ಪ್ರಯಾಣ ವೆಚ್ಚದ ಸಮಸ್ಯೆಗೆ ಈ ಯೋಜನೆ ಪರಿಣಾಮಕಾರಿ ಪರಿಹಾರವಾಗಿದೆ…

Read More

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಮಹಿಳೆ ಸೇರಿ ಮೂವರು ಹತ್ಯೆ, ಏಳು ಮನೆಗಳಿಗೆ ಬೆಂಕಿ

ಗುವಾಹಟಿ: ಈಶಾನ್ಯ ರಾಜ್ಯ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಕಾಂಗ್ಪೋಕ್ಪಿ ಜಿಲ್ಲೆಯಲ್ಲಿ ಶುಕ್ರವಾರ ಬೆಳಗಿನ ಜಾವ ನಡೆದ ದಾಳಿಯಲ್ಲಿ ಮಹಿಳೆ ಸೇರಿದಂತೆ ಮೂವರು ಕುಕಿ ಸಮುದಾಯದ ಗ್ರಾಮಸ್ಥರು ಹತ್ಯೆಯಾಗಿದ್ದು, ಏಳು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ಕಾಂಗ್ಪೋಕ್ಪಿ ಜಿಲ್ಲೆಯ ಸೈತು-ಗಂಫಜೋಲ್ ಉಪವಿಭಾಗದ ಲೋಯಿಬೋಲ್ ಖುಲ್ಲೆನ್ ಗ್ರಾಮದಲ್ಲಿ ಬೆಳಗಿನ ಜಾವ ಸುಮಾರು 4 ಗಂಟೆ ವೇಳೆಗೆ ಈ ದುರ್ಘಟನೆ ಸಂಭವಿಸಿದೆ. ಹತ್ಯೆಯಾದವರನ್ನು ಲೆತ್ಖೊಂಗಮ್ ಹಾವೊಕಿಪ್, ಅವರ ಪತ್ನಿ ತಿನ್ಮರಿ ಹಾವೊಕಿಪ್ ಹಾಗೂ ಜಂಗ್ಮಿನ್ಲಾಲ್ ಹಾವೊಕಿಪ್ ಎಂದು ಗುರುತಿಸಲಾಗಿದೆ. ಘಟನೆಗೆ ಸಂಬಂಧಿಸಿ…

Read More

ಕೇರಳದಲ್ಲಿ ಭಾರೀ ಮಳೆ ಎಚ್ಚರಿಕೆ: ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್, ಜೂನ್ 8ರವರೆಗೆ ಮೀನುಗಾರಿಕೆ ನಿಷೇಧ

ತಿರುವನಂತಪುರ: ನೈಋತ್ಯ ಮುಂಗಾರು ಬಿರುಸುಗೊಂಡಿರುವ ಹಿನ್ನೆಲೆಯಲ್ಲಿ ಕೇರಳದಲ್ಲಿ ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಈಗಾಗಲೇ ವ್ಯಾಪಕ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್, ಕಣ್ಣೂರು ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಶನಿವಾರ ರೆಡ್ ಅಲರ್ಟ್ ಜಾರಿಯಲ್ಲಿರಲಿದೆ. ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್ ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಹಾಗೂ ಇತರ ಆರು ಜಿಲ್ಲೆಗಳಲ್ಲಿ…

Read More
error: Content is protected !!