ಬಂಟ್ವಾಳ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅಸ್ವಸ್ಥಗೊಂಡ ಮಹಿಳೆ – ಆಸ್ಪತ್ರೆಗೆ ದಾಖಲು

ಬಂಟ್ವಾಳ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮಹಿಳೆಯೋರ್ವರು ಅಸ್ವಸ್ಥಗೊಂಡ ಘಟನೆ ಇಂದು ಬೆಳಗ್ಗೆ ಬಂಟ್ವಾಳ ಸಮೀಪದ ಬಿ.ಸಿ.ರೋಡ್ ನಲ್ಲಿ ನಡೆದಿದೆ.ಟ್ರೈನ್ ನಂಬರ್ 16511ರಲ್ಲಿ ಬೆಂಗಳೂರಿಂದ ಹೊರಟು ತಲಚೇರಿಗೆ ಹೋಗುವ ಮಹಿಳೆಗೆ ರೈಲಿನಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ತಕ್ಷಣ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಯಿತು. ತಕ್ಷಣ ಕಾರ್ಯಪ್ರವೃತ್ತರಾದ ಅದೇ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಹಾಗೂ ಸ್ಥಳೀಯರ ಸಹಕಾರದೊಂದಿಗೆ ಆಂಬುಲೆನ್ಸ್ ಮೂಲಕ ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ಕಳುಹಿಸಲಾಯಿತು ಎಂದು ತಿಳಿದು ಬಂದಿದೆ.

Read More

ಭಾರತೀಯ ಮಜ್ದೂರ್ ಸಂಘದ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ವಿ. ರಾಧಾಕೃಷ್ಣನ್ ಜಿಲ್ಲೆಗೆ ಆಗಮನ

ಮಂಗಳೂರು, ಜೂನ್ 5: ಭಾರತೀಯ ಮಜ್ದೂರ್ ಸಂಘದ (ಬಿಎಂಎಸ್) ದಕ್ಷಿಣ ಹಾಗೂ ದಕ್ಷಿಣ ಮಧ್ಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ವಿ. ರಾಧಾಕೃಷ್ಣನ್ ಅವರು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ್ದು, ಜೂನ್ 7ರಂದು ನಡೆಯಲಿರುವ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸುವುದರ ಜೊತೆಗೆ ಜಿಲ್ಲೆಯ ವಿವಿಧ ಸಂಯೋಜಿತ ಯೂನಿಯನ್‌ಗಳ ಚಟುವಟಿಕೆಗಳ ಪರಿಶೀಲನೆ ನಡೆಸಲಿದ್ದಾರೆ. ಜಿಲ್ಲೆಗೆ ಆಗಮಿಸಿದ ಅವರನ್ನು ಭಾರತೀಯ ಮಜ್ದೂರ್ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ…

Read More

ಸಂಭ್ರಮದಿಂದ ನಡೆದ ಫಾತಿಮಾ ಆಂಗ್ಲ ಮಾಧ್ಯಮ ಶಾಲೆಯ ಶಾಲಾ ಪ್ರಾರಂಭೋತ್ಸವ

ಮೀಯಪದವು, ಜೂನ್ 1: ಫಾತಿಮಾ ಆಂಗ್ಲ ಮಾಧ್ಯಮ ಶಾಲೆಯ 2026-27ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವವು ಸೋಮವಾರ ಬೆಳಿಗ್ಗೆ 9.15ಕ್ಕೆ ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ನಡೆಯಿತು. ಶಾಲಾ ವಾದ್ಯಗೋಷ್ಠಿಯ ಭವ್ಯ ಮೆರವಣಿಗೆಯೊಂದಿಗೆ ಕಾರ್ಯಕ್ರಮದ ಅತಿಥಿಗಳು ಹಾಗೂ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳನ್ನು ಶಾಲಾ ಸಭಾಂಗಣಕ್ಕೆ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ವಿವಿಧ ಧಾರ್ಮಿಕ ಗ್ರಂಥಗಳ ವಾಚನ, ಪ್ರಾರ್ಥನಾ ವಿಧಿ ಹಾಗೂ ಆಕರ್ಷಕ ಸ್ವಾಗತ ನೃತ್ಯದ ಮೂಲಕ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಜೊತೆ ಕಾರ್ಯದರ್ಶಿ ವಂ….

Read More

ವಿಶ್ವ ಪರಿಸರ ದಿನಾಚರಣೆ: ‘ತಾಯಿಯ ಹೆಸರಲ್ಲಿ ಒಂದು ಗಿಡ’ ಕಾರ್ಯಕ್ಕೆ ಚಾಲನೆ…. !

ಮಂಗಳೂರು:ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ‘ತಾಯಿಯ ಹೆಸರಲ್ಲಿ ಒಂದು ಗಿಡ’ ನೆಡುವ ಕಾರ್ಯಕ್ರಮವನ್ನು ಗುರುವಾರ ಶಕ್ತಿನಗರದ ನಲ್ಯಪದವಿನ ಕುವೆಂಪು ಶತಮಾನೋತ್ಸವ ಉನ್ನತೀಕರಿಸಿದ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಶಾಲಾ ಆವರಣದಲ್ಲಿ ಗಿಡ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಲಾಯಿತು. ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಗಿಡಗಳನ್ನು ನೆಟ್ಟು ಪೋಷಿಸುವ ಮೂಲಕ ಹಸಿರು ಪರಿಸರ ನಿರ್ಮಾಣಕ್ಕೆ…

Read More

SDPI ಮುಖಂಡ, ಹಿರಿಯ ಸಾಮಾಜಿಕ ಧಾರ್ಮಿಕ ಧುರೀಣ ಹಾಜಿ ಇಬ್ರಾಹಿಂ ಸಾಗರ್ ಪುತ್ತೂರು ನಿಧನ: ಗಣ್ಯರಿಂದ ತೀವ್ರ ಸಂತಾಪ

ಪುತ್ತೂರು: ಸೋಶಿಯಲ್ ಡೆಮೋಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ಸದಸ್ಯರು, ಹಿರಿಯ ಉದ್ಯಮಿ ಹಾಗೂ ಪ್ರಮುಖ ಸಾಮಾಜಿಕ, ಧಾರ್ಮಿಕ ಮುಖಂಡರಾಗಿದ್ದ ಪುತ್ತೂರಿನ ಹಾಜಿ ಇಬ್ರಾಹಿಂ ಸಾಗರ್ (62) ರವರು ಇಂದು ಬೆಳಗಿನ ಜಾವ ಇಹಲೋಕ ತ್ಯಜಿಸಿದ್ದಾರೆ. ಕಳೆದ ಒಂದೂವರೆ ವರ್ಷದಿಂದ ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಡಯಾಲಿಸಿಸ್‌ಗೆ ಒಳಗಾಗಿದ್ದರು. ಇದರೊಂದಿಗೆ ಶ್ವಾಸಕೋಶ ಹಾಗೂ ಹೃದಯ ಸಂಬಂಧಿ ಕಾಯಿಲೆಯೂ ಉಲ್ಬಣಿಸಿದ್ದರಿಂದ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗಿನ ಜಾವ…

Read More

ಡಿ.ಕೆ. ಶಿವಕುಮಾರ್ ಮುಳ್ಳಿನ ಹಾಸಿಗೆಯಲ್ಲಿ ಮಲಗಿದ್ದಾರೆ: ಸದಾನಂದ ಗೌಡ ವ್ಯಂಗ್ಯ

ಪುತ್ತೂರು, ಜೂನ್ 5: ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ವಹಿಸಿಕೊಂಡಿರುವ ಸಮಯ ಸೂಕ್ತವಾಗಿದೆ ಎಂದು ತಮಗೆ ಅನಿಸುತ್ತಿಲ್ಲ. ಕಳೆದ ಮೂರು ವರ್ಷಗಳ ಆಡಳಿತದ ಹಾದಿಯನ್ನು ಮೀರಿ ಹೊಸ ದಿಕ್ಕಿನಲ್ಲಿ ಸಾಗಿದರೆ ಮಾತ್ರ ಅವರು ಯಶಸ್ವಿಯಾಗಬಹುದು. ಪ್ರಸ್ತುತ ಅವರು ಮುಳ್ಳಿನ ಹಾಸಿಗೆಯಲ್ಲಿ ಮಲಗಿರುವಂತಹ ಪರಿಸ್ಥಿತಿಯಲ್ಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅಭಿಪ್ರಾಯಪಟ್ಟರು. ಪುತ್ತೂರಿನ ಎವಿಜಿ ಇಂಗ್ಲಿಷ್ ಮೀಡಿಯಂ ಸ್ಕೂಲ್‌ನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಂದಿನ…

Read More

ಹೊಸ ಸರ್ಕಾರದ ಕಾರ್ಯವೈಖರಿ ಮೌಲ್ಯಮಾಪನಕ್ಕೆ ಇನ್ನೂ ಸಮಯ ಬೇಕು: ಸತೀಶ್ ಕುಂಪಲ

ಮಂಗಳೂರು:ರಾಜ್ಯದ ನೂತನ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಸರ್ಕಾರದ ಕಾರ್ಯವೈಖರಿಯನ್ನು ಮೌಲ್ಯಮಾಪನ ಮಾಡಲು ಇನ್ನೂ ಸಮಯವಿದ್ದು, ಕಾಂಗ್ರೆಸ್ ಪಕ್ಷದೊಳಗಿನ ಬೆಳವಣಿಗೆಗಳು ಹಾಗೂ ಭಿನ್ನಾಭಿಪ್ರಾಯಗಳು ಮುಂದಿನ ದಿನಗಳಲ್ಲಿ ಸ್ಪಷ್ಟವಾಗಲಿವೆ ಎಂದು ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ತಿಳಿಸಿದ್ದಾರೆ . ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು , ಕಳೆದ ಮೂರು ವರ್ಷಗಳ ಆಡಳಿತದಲ್ಲಿ ಹಲವು ಯೋಜನೆಗಳ ಅನುಷ್ಠಾನ ಸಮರ್ಪಕವಾಗಿರಲಿಲ್ಲ ಎಂಬುದನ್ನು ಮುಖ್ಯಮಂತ್ರಿ ಅವರ ಹೇಳಿಕೆಗಳೇ ಸೂಚಿಸುತ್ತವೆ ಎಂದು ಟೀಕಿಸಿದರು. ವಿದ್ಯಾರ್ಥಿಗಳು ಮತ್ತು ಯುವಕರಿಗಾಗಿ…

Read More

ವಿಟ್ಲ ಸರ್ಕಾರಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ವಿಟ್ಲ, ಜೂನ್ 5: ಶಾಲಾ ಶಿಕ್ಷಣ ಇಲಾಖೆ, ಪಿ.ಎಂ. ಶ್ರೀ ಸರಕಾರಿ ಪ್ರೌಢಶಾಲೆ (RMSA)ವಿಟ್ಲ – ಪ್ರಾಥಮಿಕ ವಿಭಾಗ ಬಂಟ್ವಾಳ ತಾಲೂಕು ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಪರಿಸರ ಸಂರಕ್ಷಣೆ ಹಾಗೂ ಹಸಿರು ಪರಿಸರ ನಿರ್ಮಾಣದ ಮಹತ್ವವನ್ನು ವಿದ್ಯಾರ್ಥಿಗಳಲ್ಲಿ ಮೂಡಿಸುವ ಉದ್ದೇಶದಿಂದ ಶಾಲಾ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಶ್ರೀ ರವಿಶಂಕರ್ ಸಿ. ವಹಿಸಿದ್ದರು. ವಿಟ್ಲ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾದ…

Read More

ಮಂಗಳೂರಿನಲ್ಲಿ ಬೀದಿ ವ್ಯಾಪಾರಿಗಳ ಹೆಸರಿನಲ್ಲಿ ಅಕ್ರಮ ಹಣ ವಸೂಲಿ-ಆರೋಪ

ಮಂಗಳೂರು ನಗರದ ಹೃದಯಭಾಗದಲ್ಲಿ ಬೀದಿ ಬದಿ ವ್ಯಾಪಾರಸ್ಥರ ಹೆಸರಿನಲ್ಲಿ ಅಕ್ರಮ ಹಣ ವಸೂಲಿ ನಡೆಯುತ್ತಿದ್ದು, ರಾತ್ರಿ ವೇಳೆ ನಿಯಮ ಬಾಹಿರವಾಗಿ ಕಾರ್ಯನಿರ್ವಹಿಸುತ್ತಿರುವ ಹೋಟೆಲ್‌ಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಕಾರ್ಯಕರ್ತೆ ಪ್ರಸನ್ನ ರವಿ ಆಗ್ರಹಿಸಿದ್ದಾರೆ.ಈ ಸಂಬಂಧ ನಗರ ಪೊಲೀಸ್ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಗೆ ದಾಖಲೆಗಳ ಸಮೇತ ದೂರು ಸಲ್ಲಿಸಿರುವುದಾಗಿ ಅವರು ತಿಳಿಸಿದ್ದಾರೆ.ನಗರದ ಸ್ಟೇಟ್ ಬ್ಯಾಂಕ್ ಪ್ರದೇಶದಿಂದ ರಾವ್ ಆಂಡ್ ರಾವ್ ಸರ್ಕಲ್ ಹಾಗೂ ಲೇಡಿಗೋಷನ್ ಆಸ್ಪತ್ರೆ ತನಕ ಶನಿವಾರ ಮತ್ತು ಭಾನುವಾರ ಫುಟ್‌ಪಾತ್‌ಗಳನ್ನು ಅತಿಕ್ರಮಿಸಿ ವ್ಯಾಪಾರ…

Read More

ಮಳೆಗಾಲ: ಹೊಸ ಕಾಮಗಾರಿ ಕೈಗೆತ್ತಿಕೊಳ್ಳದಂತೆ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ಮಳೆಗಾಲ ಆರಂಭವಾದ ಹಿನ್ನೆಲೆಯಲ್ಲಿ ಮಳೆಗಾಲದ ಅಗತ್ಯ ಕಾಮಗಾರಿ ಹೊರತುಪಡಿಸಿ ಯಾವುದೇ ಹೊಸ ರೀತಿಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳದಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ವಿಪತ್ತು ನಿರ್ವಹಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈಗಾಗಲೇ ಕೈಗೆತ್ತಿಕೊಳ್ಳಲಾದ ವಿವಿಧ ಯೋಜನೆಗಳಲ್ಲಿ ಅಗೆದಿರುವ ರಸ್ತೆಗಳನ್ನು ಕೂಡಲೇ ಯಥಾ ಸ್ಥಿತಿಗೆ ತಂದು ಮುಗಿಸಬೇಕು. ಮಳೆ ನೀರಿನ ಸರಾಗ ಹರಿವಿಗೆ ತೊಂದರೆಯಾಗಿರುವ ಒತ್ತುವರಿಗಳನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸುವಂತೆ ಕಠಿಣ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳು ಸೂಚಿಸಿದರು….

Read More
error: Content is protected !!