ಮಳೆಗಾಲದ ಕೃತಕ ನೆರೆಗೆ ಕಡಿವಾಣ: ಪಂಪ್‌ವೆಲ್, ಪಡೀಲ್ ಸಮಸ್ಯೆ ಪರಿಹಾರಕ್ಕೆ ಜಿಲ್ಲಾಡಳಿತದ ಕ್ರಮ

ಮಂಗಳೂರು, ಜೂನ್ 5: ಮಳೆಗಾಲ ಆರಂಭವಾದಾಗ ಮಂಗಳೂರು ನಗರವನ್ನು ವರ್ಷಂಪ್ರತಿ ಕಾಡುವ ಕೃತಕ ನೆರೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜಿಲ್ಲಾಡಳಿತ ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ವಿಶೇಷವಾಗಿ ಪಂಪ್‌ವೆಲ್ ಜಂಕ್ಷನ್ ಹಾಗೂ ಪಡೀಲ್ ರೈಲ್ವೆ ಅಂಡರ್‌ಪಾಸ್ ಪ್ರದೇಶಗಳಲ್ಲಿ ಮಳೆ ನೀರು ನಿಂತು ಸಂಚಾರಕ್ಕೆ ಉಂಟಾಗುವ ತೊಂದರೆ ನಿವಾರಣೆಗೆ ವಿವಿಧ ಕಾಮಗಾರಿಗಳು ಪ್ರಗತಿಯಲ್ಲಿವೆ. ನಗರದ ಪ್ರಮುಖ ಸಂಚಾರ ಕೇಂದ್ರವಾಗಿರುವ ಪಂಪ್‌ವೆಲ್‌ನಲ್ಲಿ ಭಾರೀ ಮಳೆಯ ಸಂದರ್ಭ ಫ್ಲೈಓವರ್ ಕೆಳಭಾಗದ ರಸ್ತೆ ಜಲಾವೃತಗೊಂಡು ವಾಹನ ಸಂಚಾರ ಅಸ್ತವ್ಯಸ್ತಗೊಳ್ಳುವುದು ಸಾಮಾನ್ಯವಾಗಿದೆ. ಹಲವು ಗಂಟೆಗಳ…

Read More

CPIM ಹಿರಿಯ ಸದಸ್ಯ, ಕಮ್ಯುನಿಸ್ಟ್ ಚಳುವಳಿಯ ಸಕ್ರಿಯ ಕಾರ್ಯಕರ್ತ ತಿಮ್ಮಯ್ಯ ಕೊಂಚಾಡಿ ನಿಧನ

CPIM ಪಕ್ಷದ ಹಿರಿಯ ಸದಸ್ಯರೂ,ಕಮ್ಯುನಿಸ್ಟ್ ಚಳುವಳಿಯ ಸಕ್ರಿಯ ಕಾರ್ಯಕರ್ತರಾದ ತಿಮ್ಮಯ್ಯ ಕೊಂಚಾಡಿ(70ವರ್ಷ)ಯವರು ಅಲ್ಪಕಾಲದ ಅಸೌಖ್ಯದಿಂದಾಗಿ ಯೆಯ್ಯಾಡಿ ಕೊಂಚಾಡಿಯಲ್ಲಿರುವ ತಮ್ಮ‌ ಸ್ವಗೃಹದಲ್ಲಿ ನಿಧನ ಹೊಂದಿದರು. 80ರ ದಶಕದ ಮೊದಲು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾಗಿದ್ದ ತಿಮ್ಮಯ್ಯ ಕೊಂಚಾಡಿಯವರು ಬಳಿಕ ಎಡಪಂಥೀಯ ಚಳುವಳಿಗೆ ಆಕರ್ಷಿತರಾಗಿ ಕಮ್ಯುನಿಸ್ಟ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ತನ್ನ ಜೀವಿತದ ಕೊನೆಯ ಗಳಿಗೆಯವರೆಗೂ ದುಡಿಯುವ ವರ್ಗದ ಏಳಿಗೆಗಾಗಿ ಅವಿಶ್ರಾಂತವಾಗಿ ಶ್ರಮಿಸಿದ್ದಾರೆ. ಬಸ್ ದರ ಏರಿಕೆ, ನೀರಿನ ದರಯೇರಿಕೆ, ಬಡ ನಿವೇಶನರಹಿತರಿಗಾಗಿ ನಡೆದ ಹೋರಾಟಗಳು ಸೇರಿದಂತೆ ಜಿಲ್ಲೆಯ ಅಸಂಖ್ಯಾತ ಹೋರಾಟಗಳಲ್ಲಿ…

Read More

‘ಹರಿತ ಕೇರಳ’ ಗುರಿಯತ್ತ ಮಂಜೇಶ್ವರ ಪಂಚಾಯತ್ ಹೆಜ್ಜೆ

​ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯತ್ ಕೃಷಿ ಭವನದ ನೇತೃತ್ವದಲ್ಲಿ ಪರಿಸರ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಬೆಳಿಗ್ಗೆ ಜಿ.ಎಲ್.ಪಿ.ಎಸ್ ಹೊಸಬೆಟ್ಟು ಶಾಲೆಯಲ್ಲಿ ನಡೆದ ಸಮಾರಂಭದಲ್ಲಿ ಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಬಶೀರ್ ಕನಿಲ ಅವರು ಪರಿಸರ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿದರು. ​ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಫಾತಿಮತ್ ಸುಹರಾ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ಸಂದರ್ಭದಲ್ಲಿ ವಾರ್ಡ್ ಸದಸ್ಯರಾದ ಶ್ರೀ ಮುಕ್ತಾರ್, ಶ್ರೀ ಇಲ್ಯಾಸ್ ಸೇರಿದಂತೆ ಗ್ರಾಮ ಪಂಚಾಯತ್‌ನ ಎಲ್ಲಾ ಎ.ಡಿ.ಸಿ ಸದಸ್ಯರು, ವಾರ್ಡ್…

Read More

ಬೀದಿ ವ್ಯಾಪಾರಸ್ಥರ ಹೆಸರಿನಲ್ಲಿ ಅಕ್ರಮ ಚಟುವಟಿಕೆಗಳಿಗೆ ಅವಕಾಶ ಸರಿಯಲ್ಲ : ಪ್ರಸನ್ನ ರವಿ ಆಗ್ರಹ

ಮಂಗಳೂರು: ಮಂಗಳೂರು ನಗರದ ಪುರಭವನದ ಫುಟ್‌ಪಾತ್‌ನಿಂದ ಸ್ಟೇಟ್ ಬ್ಯಾಂಕ್, ರಾವ್ ಆ್ಯಂಡ್ ರಾವ್ ಸರ್ಕಲ್ ಹಾಗೂ ಲೇಡಿಗೋಷನ್ ಆಸ್ಪತ್ರೆವರೆಗೆ ಶನಿವಾರ ಮತ್ತು ಭಾನುವಾರ ನಡೆಯುತ್ತಿರುವ ಬೀದಿ ವ್ಯಾಪಾರ ಚಟುವಟಿಕೆಗಳ ಕುರಿತು ಸಾಮಾಜಿಕ ಕಾರ್ಯಕರ್ತೆ ಪ್ರಸನ್ನ ರವಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು , ಬೀದಿ ವ್ಯಾಪಾರಸ್ಥರ ಜೀವನೋಪಾಯಕ್ಕೆ ತಾವು ವಿರೋಧಿಯಲ್ಲ, ಆದರೆ ಅವರಿಗೆ ಮಹಾನಗರ ಪಾಲಿಕೆ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಬೇಕು . ಬೀದಿ ಬದಿ ವ್ಯಾಪಾರಸ್ಥರ ಪರ ಹೋರಾಟ…

Read More

ಪ್ರಧಾನಿ ಮೋದಿ ಆಡಳಿತದ 12 ವರ್ಷಗಳ ಸಂಭ್ರಮ: ಜೂನ್ 21ರವರೆಗೆ ವಿವಿಧ ಕಾರ್ಯಕ್ರಮಗಳು – ಸತೀಶ್ ಕುಂಪಲ

ಮಂಗಳೂರು: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರ 12 ವರ್ಷಗಳ ಆಡಳಿತಾವಧಿಯ ಸಂಭ್ರಮಾಚರಣೆಗೆ ಸಂಬಂಧಿಸಿದಂತೆ ಬಿಜೆಪಿ ವತಿಯಿಂದ ವಿವಿಧ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯಲ್ಲಿ ಸಹ ವಿಶೇಷ ಕಾರ್ಯಕ್ರಮಗಳ ಇಂದಿನಿಂದ ಜೂನ್ 21 ರ ತನಕ ಆಚರಿಸಲಾಗುವುದೆಂದು ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ತಿಳಿಸಿದರು . ಅವರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , , 2014ರ ಮೇ 26ರಂದು ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನರೇಂದ್ರ ಮೋದಿ ಅವರು…

Read More

ರಾಮಲಿಂಗಾ ರೆಡ್ಡಿ ರಾಜೀನಾಮೆ: ಬೆಂಬಲಿಗರ ಆಕ್ರೋಶ, ಕಚೇರಿ ಎದುರು ಭಾರಿ ಪ್ರತಿಭಟನೆ

ಬೆಂಗಳೂರು: ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾ ರೆಡ್ಡಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಅವರ ಬೆಂಬಲಿಗರು ಬೆಂಗಳೂರಿನ ಕೋರಮಂಗಲದಲ್ಲಿರುವ ಕಚೇರಿ ಎದುರು ಭಾರಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ರಾಮಲಿಂಗಾ ರೆಡ್ಡಿ ಅವರಿಗೆ ಅನ್ಯಾಯವಾಗಿದೆ ಎಂದು ಘೋಷಣೆ ಕೂಗಿದ ಬೆಂಬಲಿಗರು, ಅವರ ನಿರ್ಧಾರಕ್ಕೆ ಬೆಂಬಲ ಸೂಚಿಸಿದರು. ಜಲಸಂಪನ್ಮೂಲ ಖಾತೆ ನೀಡಲಾಗಿದ್ದರೂ, ನಗರಾಭಿವೃದ್ಧಿ ಖಾತೆ ನಿರೀಕ್ಷಿಸಿದ್ದ ಅವರಿಗೆ ಖಾತೆ ಹಂಚಿಕೆಯಿಂದ ಅಸಮಾಧಾನ ಉಂಟಾಗಿದ್ದು, ಆತ್ಮಸಾಕ್ಷಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಎಂಬ ಕಾರಣ ನೀಡಿ ರಾಜೀನಾಮೆ ಸಲ್ಲಿಸಿದ್ದಾರೆ…

Read More

ಪೊಳಲಿಯಲ್ಲಿ ಅನಾಥ ಸ್ಥಿತಿಯಲ್ಲಿ ಮೃತಪಟ್ಟ ವ್ಯಕ್ತಿ; ವಾರಸುದಾರರಿಗಾಗಿ ಪೊಲೀಸರ ಮನವಿ

ಬಂಟ್ವಾಳ: ಪೊಳಲಿಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಇವರ ವಾರೀಸುದಾರರಿದ್ದಲ್ಲಿ ಪೊಲೀಸ್ ಠಾಣೆ ಸಂಪರ್ಕ ಮಾಡುವಂತೆ ಕೋರಲಾಗಿದೆ. ಒಂಟಿಯಾಗಿ ವಾಸಿಸುತ್ತಿದ್ದ ಡೊಂಬಯ್ಯ (೬೪) ಮೃತಪಟ್ಟವರು. ಶ್ರೀ ರಾಜ ರಾಜೇಶ್ವರಿ ದೇವಸ್ಥಾನದ ವಠಾರದಲ್ಲಿ ಕಳೆದ 7 – 8 ವರ್ಷದಿಂದ ಓಡಾಡಿಕೊಂಡು ಕೂಲಿ ಕೆಲಸ ಮಾಡಿ, ದೇವಸ್ಥಾನದ ವಠಾರದಲ್ಲಿಯೇ ರಾತ್ರಿ ಉಳಿದುಕೊಂಡಿದ್ದ ಡೊಂಬಯ್ಯ ಎಂಬವದು ಇತ್ತೀಚೆಗೆ ಅನಾರೋಗ್ಯದ ಕಾರಣದಿಂದ ದೇವಸ್ಥಾನದ ಅನ್ನಛತ್ರದಲ್ಲಿ ಊಟ ಮಾಡಿಕೊಂಡು, ದೇವಸ್ಥಾನದ ವಠಾರದಲ್ಲಿ ಬಿಕ್ಷೆ ಬೇಡಿ ಜೀವನ ನಡೆಸುತಿದ್ದರು.ಡೊಂಬಯ್ಯ ಜೂನ್ 3ರಂದು ಮದ್ಯಾಹ್ನ ದೇವಸ್ಥಾನದ ವಠಾರದಲ್ಲಿರುವ ಪಂಪ್‌…

Read More

ಅಮೆರಿಕ ಯೋಧರ ಹತ್ಯೆಯಾದರೆ ಮತ್ತೆ ಯುದ್ಧ: ಇರಾನ್‌ಗೆ ಟ್ರಂಪ್ ಎಚ್ಚರಿಕೆ

ವಾಷಿಂಗ್ಟನ್: ಅಮೆರಿಕದ ಸೈನಿಕರನ್ನು ಇರಾನ್ ಹತ್ಯೆಗೈದರೆ ಮತ್ತೆ ಸೇನಾ ಕಾರ್ಯಾಚರಣೆ ಆರಂಭಿಸಲು ಅದು ಸಾಕಷ್ಟು ಕಾರಣವಾಗಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ಶ್ವೇತಭವನದಲ್ಲಿ ಮಾತನಾಡಿದ ಅವರು, ಇರಾನ್‌ನ ಸೇನಾ ಸಾಮರ್ಥ್ಯ, ನೌಕಾಪಡೆ, ವಾಯುಪಡೆ ಹಾಗೂ ನಾಯಕತ್ವವನ್ನು ಅಮೆರಿಕ ಈಗಾಗಲೇ ತೀವ್ರವಾಗಿ ದುರ್ಬಲಗೊಳಿಸಿದೆ ಎಂದು ಹೇಳಿದರು. ಇರಾನ್‌ನ 159 ಹಡಗುಗಳು ಮುಳುಗಿದ್ದು, ಅದಕ್ಕೆ ಸಂಬಂಧಿಸಿದ ಚಿತ್ರಗಳು ತಮ್ಮ ಬಳಿ ಇವೆ ಎಂದರು. ಇದರ ನಡುವೆ, ಇರಾನ್ ವಿರುದ್ಧ ಮುಂದಿನ ಸೇನಾ ಕ್ರಮಕ್ಕೆ ಕಾಂಗ್ರೆಸ್ ಅನುಮತಿ…

Read More

‘ರೂಪಾಯಿಯ ಸಮಸ್ಯೆ’ ಕುರಿತು ಅಂಬೇಡ್ಕರ್ ಅಧ್ಯಯನ ಕೇಂದ್ರದಲ್ಲಿ ಉಪನ್ಯಾಸ

ಡಾ.ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರ, ವಿಶ್ವವಿದ್ಯಾನಿಲಯ ಕಾಲೇಜು, ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನೆ, ತರಬೇತಿ ಮತ್ತು ವಿಸ್ತರಣಾ ಕೇಂದ್ರ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ `ರೂಪಾಯಿಯ ಸಮಸ್ಯೆ, ಅದರ ಸಮಕಾಲೀನ ಮೌಲ್ಯವರ್ಧನೆ’ ಕುರಿತು ಉಪನ್ಯಾಸ ಕಾರ್ಯಕ್ರಮ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಿತು. ರೂಪಾಯಿಯ ಸಮಸ್ಯೆ, ಅದರ ಸಮಕಾಲೀನ ಮೌಲ್ಯವರ್ಧನೆ’ ಕುರಿತು ಉಪನ್ಯಾಸ ಕಾರ್ಯಕ್ರಮಕ್ಕೆರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ನಿವೃತ್ತ ಹೆಚ್ಚುವರಿ ನಿರ್ದೇಶಕ ಶಿವರುದ್ರಪ್ಪ ಎನ್.ಬಿ. ಚಾಲನೆ ನೀಡಿದರು.ಬಳಿಕ‌ ಮಾತನಾಡಿದ ಅವರು ಅಂತಾರಾಷ್ಟಿçÃಯ ಮಾರುಕಟ್ಟೆಯಲ್ಲಿ ಡಾಲರ್…

Read More

ದಕ್ಷಿಣ ಕನ್ನಡದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಆರಂಭ: ಜಿಲ್ಲಾಧಿಕಾರಿ ಎಚ್.ವಿ. ದರ್ಶನ್

ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆ ಆರಂಭಗೊಳ್ಳಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಚ್. ವಿ ದರ್ಶನ್ ತಿಳಿಸಿದ್ದಾರೆ. 2026ರ ಅಕ್ಟೋಬರ್ 1 ಅನ್ನು ಅರ್ಹತಾ ದಿನಾಂಕವಾಗಿ ಪರಿಗಣಿಸಿ ಪರಿಷ್ಕರಣೆ ನಡೆಯಲಿದೆ. ಜೂನ್ 30ರಿಂದ ಜುಲೈ 29ರವರೆಗೆ ಮತಗಟ್ಟೆ ಮಟ್ಟದ ಅಧಿಕಾರಿಗಳು (BLO) ಮನೆ-ಮನೆಗೆ ಭೇಟಿ ನೀಡಿ ಗಣತಿ ನಮೂನೆಗಳನ್ನು ವಿತರಿಸಿ…

Read More
error: Content is protected !!