ಇಂದು ಕರಾವಳಿಯಾದ್ಯಂತ ಪಿದಾಯಿ ತುಳು ಚಿತ್ರ ತೆರೆಗೆ
ಮಂಗಳೂರು: ನಮ್ಮ ಕನಸು ಬ್ಯಾನರ್‌ನಲ್ಲಿ ಕೆ.ಸುರೇಶ್ ನಿರ್ಮಾಣ ಮಾಡಿದ, ರಮೇಶ್ ಶೆಟ್ಟಿಗಾರ್ ಬರೆದು, ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಸಂತೋಷ್ ಮಾಡ ನಿರ್ದೇಶನದಲ್ಲಿ ಮೂಡಿ ಬಂದ ತುಳು ಸಿನಿಮಾ ‘ಪಿದಾಯಿ’ ಇಂದು ಕರಾವಳಿಯಾದ್ಯಂತ ಬಿಡುಗಡೆಗೊಂಡಿದೆ. ಶಿಮ್ಲಾ, ಜಾರ್ಖಂಡ್ ಹಾಗೂ ಕ್ಯಾಲಿಫೋರ್ನಿಯಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅಧಿಕೃತವಾಗಿ ಆಯ್ಕೆಯಾಗುವುದರ ಜತೆಗೆ, 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರಥಮ ಬಾರಿಗೆ ತುಳು ಚಿತ್ರವೊಂದು ಭಾರತೀಯ ಚಲನಚಿತ್ರ ಹಾಗೂ ಕನ್ನಡ ಚಲನಚಿತ್ರ ಹೀಗೆ ಎರಡೂ ವಿಭಾಗಗಳಲ್ಲಿ ಸ್ಪರ್ಧೆಯಲ್ಲಿ ಪಾಲ್ಗೊಂಡು ಅಂತಿಮವಾಗಿ ಎರಡನೇ ಅತ್ಯುತ್ತಮ ಚಿತ್ರ…