ಗಡಿನಾಡಿನಲ್ಲಿ ಕನ್ನಡ ಗ್ರಾಮದ ಪರಿಕಲ್ಪನೆ ಅಭಿನಂದನೀಯ: ಎಲ್.ಜಿ. ಜ್ಯೋತಿಶ್ವರ

ಕಾಸರಗೋಡು, ಜೂನ್ 5: ಕರ್ನಾಟಕದೊಳಗೆ ಎಲ್ಲಿಯೂ ಕಾಣಸಿಗದ ವಿಶಿಷ್ಟ ಕನ್ನಡ ಗ್ರಾಮ ಗಡಿನಾಡು ಕಾಸರಗೋಡಿನಲ್ಲಿ ನಿರ್ಮಾಣಗೊಂಡಿದ್ದು, ಸಾಹಿತ್ಯ, ಸಂಸ್ಕೃತಿ ಮತ್ತು ಕಲೆಗಳಿಗೆ ಆಶ್ರಯಧಾಮವಾಗಿ ಬೆಳೆದಿರುವುದು ಅಭಿನಂದನೀಯ ಎಂದು ಅಂತರರಾಷ್ಟ್ರೀಯ ಖ್ಯಾತಿಯ ಜಾಹೀರಾತು ಹಾಗೂ ವೈದ್ಯಕೀಯ ಸಂವಹನ ತಜ್ಞ ಎಲ್.ಜಿ. ಜ್ಯೋತಿಶ್ವರ ಅಭಿಪ್ರಾಯಪಟ್ಟರು. ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಸಂಸ್ಥಾಪಕ ಹಾಗೂ ಅಧ್ಯಕ್ಷ ಶಿವರಾಮ ಕಾಸರಗೋಡು ಅವರನ್ನು ಭೇಟಿ ಮಾಡಲು ಕನ್ನಡ ಗ್ರಾಮಕ್ಕೆ ಆಗಮಿಸಿದ್ದ ಜ್ಯೋತಿಶ್ವರ ದಂಪತಿಯನ್ನು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಮತ್ತು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು,…

Read More

ಜೋಕಟ್ಟೆ: 21 ವರ್ಷದ ಯುವತಿ ಕಾಣೆ, ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲು

ಮಂಗಳೂರು: ಪಶ್ಚಿಮ ಬಂಗಾಳ ಮೂಲದ 21 ವರ್ಷದ ಹಸೀನಾ ಖತೂನ್ ಅವರು ಮೇ 29ರಂದು ಕಾಣೆಯಾಗಿರುವ ಘಟನೆ ವರದಿಯಾಗಿದೆ. ಅವರು ಜೋಕಟ್ಟೆ ಹಳೇ ಮಸೀದಿ ಸಮೀಪದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಈ ಸಂಬಂಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಹಸೀನಾ ಖತೂನ್ ಅವರ ಎತ್ತರ ಸುಮಾರು 5 ಅಡಿ 2 ಇಂಚು ಇದ್ದು, ಸಾಧಾರಣ ಶರೀರ, ಬಿಳಿ ಮೈಬಣ್ಣ ಹಾಗೂ ದುಂಡು ಮುಖ ಹೊಂದಿದ್ದಾರೆ. ಅವರ ಎಡ ತುಟಿಯ ಕೆಳಭಾಗದಲ್ಲಿ ಕಪ್ಪು…

Read More

ಪುತ್ತಿಗೆಯಲ್ಲಿ ಪಂಚಾಯತ್ ಆಸ್ತಿ ಲೂಟಿ: ಮರಗಳ್ಳತನಕ್ಕೆ ಡಿವೈಎಫ್‌ಐ ಆಕ್ರೋಶ

​ಕಾಸರಗೋಡು: ಪುತ್ತಿಗೆ ಪಂಚಾಯತ್ ವ್ಯಾಪ್ತಿಯ ಎಡನಾಡು ಕೋರ್ನಕಂಡದಲ್ಲಿ, ಪಂಚಾಯತ್ ಆಡಳಿತಕ್ಕೆ ಸೇರಿದ ಸುಮಾರು 50 ವರ್ಷಗಳ ಹಳೆಯ ಮರಗಳನ್ನು ಅಕ್ರಮವಾಗಿ ಕಡಿದು ಸಾಗಿಸಲಾಗಿದೆ. ಸುಮಾರು 1 ಲಕ್ಷ ರೂ. ಮೌಲ್ಯದ ಮಾವು, ಹಾಲೆ ಮತ್ತು ಅಕೇಶಿಯಾ ಮರಗಳನ್ನು ಮೇ 26ರಂದು ಸದ್ದಿಲ್ಲದೆ ಕಳ್ಳತನ ಮಾಡಲಾಗಿದೆ.ಖಾಸಗಿ ಜಮೀನಿನ ಮರಗಳನ್ನು ಕಡಿಯುವ ನೆಪದಲ್ಲಿ ಪಂಚಾಯತ್ ಒಡೆತನದ ತೋಡಿನ ಬದಿಯಲ್ಲಿದ್ದ ಮರಗಳನ್ನೂ ಕಡಿದು ಸಾಗಿಸಲಾಗಿದೆ ಎಂದು ಪಂಚಾಯತ್ ಕಾರ್ಯದರ್ಶಿ ಸುದೀಶ್ ಅವರು ನೀಡಿದ ದೂರಿನ ಮೇರೆಗೆ ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ….

Read More

ಕುವೈತ್ ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ: ಭಾರತೀಯನೊಬ್ಬ ಬಲಿ

ಕುವೈತ್ ಸಿಟಿ, ಜೂನ್ 4: ಇರಾನ್ ಮತ್ತು ಅಮೆರಿಕ ನಡುವಿನ ಮಿಲಿಟರಿ ಉದ್ವಿಗ್ನತೆ ತೀವ್ರಗೊಳ್ಳುತ್ತಿರುವ ನಡುವೆಯೇ, ಕುವೈತ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇಂದು ಇರಾನ್ ಡ್ರೋನ್ ದಾಳಿ ನಡೆಸಿದೆ. ದಾಳಿಯಲ್ಲಿ ಭಾರತೀಯ ನಾಗರಿಕನೊಬ್ಬ ಮೃತಪಟ್ಟಿರುವುದಾಗಿ ಕುವೈತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪ್ರಕಟಣೆ ನೀಡಿರುವ ರಾಯಭಾರ ಕಚೇರಿ, ಕುವೈತ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ದಾಳಿಯಲ್ಲಿ ಭಾರತೀಯ ಮೂಲದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವುದನ್ನು ದೃಢಪಡಿಸಿದೆ. ಮೃತರ ಕುಟುಂಬದೊಂದಿಗೆ ಸಂಪರ್ಕ ಸಾಧಿಸಲಾಗಿದ್ದು,…

Read More

ಚಿತ್ರದುರ್ಗ-ತುಮಕೂರು ಗಡಿಭಾಗದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಹುಳಿಯಾರು: ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಯ ಗಡಿಭಾಗದಲ್ಲಿ ಗುರುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಹಿರಿಯೂರು ಮಾರ್ಗವಾಗಿ ಹುಳಿಯಾರು ಕಡೆಗೆ ಬರುತ್ತಿದ್ದ ಕಾರಿಗೆ ಎದುರಿನಿಂದ ಬಂದ ಓಮಿನಿ ವಾಹನ ಡಿಕ್ಕಿ ಹೊಡೆದ ಪರಿಣಾಮ, ಮತ್ತೊಂದು ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರು ಆಂಧ್ರಪ್ರದೇಶ ಮೂಲದವರಾಗಿರುವ ಸಾಧ್ಯತೆ ಇದ್ದು, ಅವರ ಗುರುತು ಪತ್ತೆ ಕಾರ್ಯವನ್ನು ಪೊಲೀಸರು ಕೈಗೊಂಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು…

Read More

ಅಶ್ವತ ಎಲೆಯಲ್ಲಿ ಡಿ.ಕೆ. ಶಿವಕುಮಾರ್ ಭಾವಚಿತ್ರ; ಕಲಾವಿದ ಮಹೇಶ್ ಮರ್ಣೆಯವರಿಂದ ವಿಶಿಷ್ಟ ಅಭಿನಂದನೆ

ಉಡುಪಿ, ಜೂನ್ 4: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಅವರಿಗೆ ಉಡುಪಿಯ ಕಲಾವಿದ ಮಹೇಶ್ ಮರ್ಣೆ ಅವರು ವಿಶಿಷ್ಟ ಕಲಾಕೃತಿಯ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಲಾವಿದ ಮಹೇಶ್ ಮರ್ಣೆ ಅವರು ಅಶ್ವತ (ಅರಳಿ) ಎಲೆಯ ಮೇಲೆ ಡಿ.ಕೆ. ಶಿವಕುಮಾರ್ ಅವರ ಭಾವಚಿತ್ರವನ್ನು ಸೂಕ್ಷ್ಮವಾಗಿ ರಚಿಸಿ ಶುಭಾಶಯ ಕೋರಿದ್ದಾರೆ. ಅತ್ಯಂತ ನಿಖರತೆ ಹಾಗೂ ಕಲಾತ್ಮಕ ಕೌಶಲ್ಯದಿಂದ ಮೂಡಿಬಂದಿರುವ ಈ ಭಾವಚಿತ್ರ ಸಾರ್ವಜನಿಕರ ಗಮನ ಸೆಳೆದಿದ್ದು, ನೂತನ ಮುಖ್ಯಮಂತ್ರಿಗೆ…

Read More

ಕೇರಳ ಪ್ರವೇಶಿಸಿದ ನೈಋತ್ಯ ಮುಂಗಾರು; ನಾಲ್ಕು ತಿಂಗಳ ಮಳೆಗಾಲಕ್ಕೆ ಅಧಿಕೃತ ಚಾಲನೆ

ನವದೆಹಲಿ: ನೈಋತ್ಯ ಮುಂಗಾರು ಗುರುವಾರ ಕೇರಳವನ್ನು ಅಧಿಕೃತವಾಗಿ ಪ್ರವೇಶಿಸಿದ್ದು, ಇದರೊಂದಿಗೆ ಜೂನ್‌ನಿಂದ ಸೆಪ್ಟೆಂಬರ್‌ವರೆಗೆ ಸಾಗುವ ನಾಲ್ಕು ತಿಂಗಳ ಮಳೆಗಾಲಕ್ಕೆ ಚಾಲನೆ ದೊರೆತಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಪ್ರಕಟಿಸಿದೆ. ಸಾಮಾನ್ಯವಾಗಿ ಜೂನ್ 1ರ ಸುಮಾರಿಗೆ ಕೇರಳವನ್ನು ತಲುಪುವ ಮುಂಗಾರು ಈ ಬಾರಿ ಕೆಲ ದಿನಗಳ ವಿಳಂಬದೊಂದಿಗೆ ರಾಜ್ಯ ಪ್ರವೇಶಿಸಿದೆ. ಹವಾಮಾನ ಇಲಾಖೆಯು ಈ ಹಿಂದೆ ಮೇ 26ರಂದು ಮುಂಗಾರು ಕೇರಳಕ್ಕೆ ಆಗಮಿಸಲಿದೆ ಎಂದು ಅಂದಾಜಿಸಿತ್ತಾದರೂ, ವಿವಿಧ ವಾತಾವರಣೀಯ ಕಾರಣಗಳಿಂದ ಅದರ ಆಗಮನ ತಡವಾಯಿತು. ಐಎಂಡಿ ಪ್ರಕಟಣೆಯ…

Read More

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ: ಕನ್ನರ್ಪಾಡಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ಉಡುಪಿ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ಕೆ. ಕೃಷ್ಣಮೂರ್ತಿ ಆಚಾರ್ಯ ಅವರ ನೇತೃತ್ವದಲ್ಲಿ ಕನ್ನರ್ಪಾಡಿಯ ಜಯದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ದೇವಿಗೆ 136 ಅಟ್ಟೆ ಮಲ್ಲಿಗೆ ಹೂಗಳನ್ನು ಸಮರ್ಪಿಸಿ ವಿಶೇಷ ಆರತಿ ಬೆಳಗಲಾಯಿತು. ನೂತನ ಮುಖ್ಯಮಂತ್ರಿಯ ಯಶಸ್ವಿ ಆಡಳಿತ ಹಾಗೂ ರಾಜ್ಯದ ಅಭಿವೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ನಗರಸಭೆಯ ಮಾಜಿ ಅಧ್ಯಕ್ಷ ಯುವರಾಜ್, ಮಾಜಿ ಉಪಾಧ್ಯಕ್ಷೆ ಅಮೃತಾ ಕೃಷ್ಣಮೂರ್ತಿ, ಸದಾಶಿವ ಅಮೀನ್…

Read More

ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ ಅಪಾಯಕಾರಿ: ಶಿವರುದ್ರಪ್ಪ ಎನ್.ಬಿ.

ಮಂಗಳೂರು, ಜೂನ್ 4: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಡಾಲರ್ ಎದುರು ಭಾರತದ ರೂಪಾಯಿ ಮೌಲ್ಯ ನಿರಂತರವಾಗಿ ಕುಸಿಯುತ್ತಿದ್ದು, ಈ ಬೆಳವಣಿಗೆ ಮುಂದುವರಿದರೆ ಜನಸಾಮಾನ್ಯರ ಮೇಲೂ ಅದರ ನೇರ ಪರಿಣಾಮ ಬೀಳಲಿದೆ ಎಂದು ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ನಿವೃತ್ತ ಹೆಚ್ಚುವರಿ ನಿರ್ದೇಶಕ ಶಿವರುದ್ರಪ್ಪ ಎನ್.ಬಿ. ಎಚ್ಚರಿಸಿದರು. ನಗರದ ವಿಶ್ವವಿದ್ಯಾಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಬುಧವಾರ ಮಂಗಳೂರು ವಿಶ್ವವಿದ್ಯಾಲಯದ ಡಾ.ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರ, ವಿಶ್ವವಿದ್ಯಾಲಯ ಕಾಲೇಜು, ಡಾ.ಬಿ.ಆರ್. ಅಂಬೇಡ್ಕರ್ ಸಂಶೋಧನೆ, ತರಬೇತಿ ಮತ್ತು ವಿಸ್ತರಣಾ ಕೇಂದ್ರ…

Read More

ಬೈಕ್–ಸ್ಕೂಟರ್ ಡಿಕ್ಕಿ: ಬಂಟ್ವಾಳದಲ್ಲಿ 10 ವರ್ಷದ ಬಾಲಕಿ ಸಾವಿಗೆ ಶರಣು

ಬಂಟ್ವಾಳ: ಕಲ್ಲಡ್ಕದಿಂದ ಮಾಣಿಗೆ ತೆರಳುತ್ತಿದ್ದ ಬೈಕ್ ಗೆ ಸ್ಕೂಟರ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಹತ್ತು ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಎಂಬಲ್ಲಿ ಬುಧವಾರ ಸಂಜೆ ಸಂಭವಿಸಿದೆ. ಬಾಳ್ತಿಲ ಗ್ರಾಮದ ಹೇಮಂತ್ ಕುಮಾರ್ ಎಂಬವರ ಪುತ್ರಿ ನೈರುತಿ ಎಂ. ಸುವರ್ಣ (10) ಮೃತಪಟ್ಟ ಬಾಲಕಿ. ಬುಧವಾರ ಸಂಜೆ ಈ ಘಟನೆ ನಡೆದಿದ್ದು, ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಧ್ಯರಾತ್ರಿಯ ವೇಳೆ ಮೃತಪಟ್ಟಿದ್ದಾಳೆ. ನೆಟ್ಲ ಸದಾಶಿವ ದೇವಸ್ಥಾನದಲ್ಲಿ…

Read More
error: Content is protected !!