ಕೇಂದ್ರ ಬಜೆಟ್ 2047ರ ಮೋದಿ ಕನಸಿನ ‘ವಿಕಸಿತ ಭಾರತ’ದತ್ತ ಇಟ್ಟಿರುವ ಧೃಡ ಹೆಜ್ಜೆ : ಕ್ಯಾಪ್ಟನ್ ಗಣೇಶ್ ಕಾರ್ಣಿಕ್

ಉಡುಪಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ರೂ.53.5 ಲಕ್ಷ ಕೋಟಿ ಗಾತ್ರದ 9ನೇ ಬಜೆಟ್ ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ‘ವಿಕಸಿತ ಭಾರತ’ದತ್ತ ಇಟ್ಟಿರುವ ಇನ್ನೊಂದು ಧೃಡ ಹೆಜ್ಜೆಯಾಗಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು. ಕೇಂದ್ರ ಬಜೆಟ್ 2026ರ ಕುರಿತು ಬಿಜೆಪಿ ಉಡುಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.ಜಗತ್ತು ಆರ್ಥಿಕ ಅನಿಶ್ಚಿತತೆಯ ತಲ್ಲಣಗಳಲ್ಲಿ ಮುಳುಗಿರುವ ಈ ಸಂದರ್ಭದಲ್ಲಿ ದೇಶದ ಜನತೆಯ ಮನಸ್ಸಿನಲ್ಲಿ…

Read More

ಪುತ್ತೂರಿನ ಹಳೆ ನ್ಯಾಯಾಲಯ ಕಟ್ಟಡದಲ್ಲಿ ಬಾಡಿಗೆ ಕಟ್ಟಡದಲ್ಲಿರುವ ಸರ್ಕಾರಿ ಇಲಾಖೆಗಳ ಸ್ಥಳಾಂತರಕ್ಕೆ ಪುತ್ತೂರಿನ ಸಹಾಯಕ ಆಯುಕ್ತರಿಗೆ ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಮನವಿ.

ಪುತ್ತೂರು: ಪುತ್ತೂರಿನಲ್ಲಿ ನೂತನ ನ್ಯಾಯಾಲಯ ಸಂಕೀರ್ಣ ಉದ್ಘಾಟನೆಯಾದ ಹಿನ್ನೆಲೆಯಲ್ಲಿ, ಹಳೆ ನ್ಯಾಯಾಲಯ ಕಟ್ಟಡ ಸಂಕೀರ್ಣದಲ್ಲಿ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಸರ್ಕಾರಿ ಇಲಾಖೆಗಳಿಗೆ ಸ್ಥಳಾವಕಾಶ ಕಲ್ಪಿಸಬೇಕೆಂದು ಸಹಾಯಕ ಆಯುಕ್ತರು, ಪುತ್ತೂರು ಉಪವಿಭಾಗ ಅವರಿಗೆ ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಮನವಿ ಸಲ್ಲಿಸಿದ್ದಾರೆ. ಮನವಿಯಲ್ಲಿ, ನೂತನ ನ್ಯಾಯಾಲಯ ಸಂಕೀರ್ಣದಲ್ಲಿ ಪುತ್ತೂರು ತಾಲೂಕಿನ ಎಲ್ಲಾ ನ್ಯಾಯಾಲಯಗಳ ಕಾರ್ಯಚಟುವಟಿಕೆಗಳಿಗೆ ಅಗತ್ಯವಿರುವ ಸಮರ್ಪಕ ಕಟ್ಟಡ ಹಾಗೂ ಮೂಲಸೌಕರ್ಯಗಳು ಲಭ್ಯವಿರುವುದರಿಂದ, ಪುತ್ತೂರು ಹೃದಯ ಭಾಗದಲ್ಲಿರುವ ಕಿಲ್ಲೆ ಮೈದಾನದ ಹಳೆ ನ್ಯಾಯಾಲಯ ಕಟ್ಟಡವನ್ನು ಈಗಾಗಲೇ…

Read More

ರಸ್ತೆ ಅಪಘಾತಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಪುತ್ತೂರಿನ ಪಂಚಾಕ್ಷರಿ ಲೈಟಿಂಗ್ಸ್ ಮಾಲಕ ಗಣೇಶ್ ಗೌಡ ನಿಧನ.

ಪುತ್ತೂರು: 2 ತಿಂಗಳ ಹಿಂದೆ ಬದಿಯಡ್ಕದಲ್ಲಿ ರಸ್ತೆ ಅಪಘಾತಗೊಂಡು ತೀವ್ರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬನ್ನೂರು ಕರ್ಮಲ ನಿವಾಸಿ ಪಂಚಾಕ್ಷರಿ ಲೈಟಿಂಗ್ಸ್‌ನ ಮಾಲಕ ಗಣೇಶ್ ಗೌಡ ಫೆ.3ರಂದು ಬೆಳಗ್ಗೆ ನಿಧನರಾದರು. ಡಿ.6ರಂದು ಬದಿಯಡ್ಕದಲ್ಲಿ ಲೈಟಿಂಗ್ಸ್ ವಿಚಾರದಲ್ಲಿ ಹೋದ ಅವರು ಸ್ಕೂಟ‌ರ್ ಅಪಘಾತಗೊಂಡು ತೀವ್ರ ಗಾಯಗೊಂಡಿದ್ದರು. ಗಾಯಾಳುವನ್ನು ಸ್ಥಳೀಯರು ಸೇರಿ ಕಾಸರಗೋಡು ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದ ಅವರು ಫೆ.3ರಂದು ಬೆಳಗ್ಗೆ ನಿಧನರಾದರು. ಮೃತರು ಪತ್ನಿ, ಪುತ್ರರಾದ ಪ್ರದೀಪ್…

Read More

ಉರ್ವ ರಾಮ ಮಂದಿರ ಬಳಿ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ; ಶಾಸಕ ವೇದವ್ಯಾಸ ಕಾಮತ್ ನೇತೃತ್ವ

ಮ.ನ.ಪಾ ವ್ಯಾಪ್ತಿಯ 27ನೇ ಬೋಳೂರು ವಾರ್ಡಿನ ಉರ್ವ ರಾಮ ಮಂದಿರದ ಬಳಿ ಶಾಸಕರ ಸ್ಥಳೀಯಾಭಿವೃದ್ಧಿ ನಿಧಿಯ ಮೂಲಕ ನಡೆಯಲಿರುವ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆಯು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಶಾಸಕರು, ನಿಕಟಪೂರ್ವ ಮ.ನ.ಪಾ ಸದಸ್ಯರಾದ ಜಗದೀಶ್ ಶೆಟ್ಟಿ ಬೋಳೂರು ಸಹಿತ ಸ್ಥಳೀಯ ಪ್ರಮುಖರ ವಿಶೇಷ ಮನವಿಯ ಮೇರೆಗೆ ಉರ್ವ ಮೈದಾನದ ಹಿಂಬದಿ ಇರುವ ಪುರಾತನ ರಾಮ ಮಂದಿರ ಹಾಗೂ ಕೊರಗಜ್ಜನ ಕ್ಷೇತ್ರದ ಈ ಪರಿಸರದಲ್ಲಿ ಮೇಲ್ಚಾವಣಿಯ ಕಾಮಗಾರಿಗೆ ಶಿಲನ್ಯಾಸ…

Read More

ಸ್ಕೂಟಿಗೆ ಡಿಕ್ಕಿಯಾದ ಇನ್ನೋವಾ ಕಾರು: ಪವಾಡಸದೃಶ ರೀತಿಯಲ್ಲಿ ಬದುಕುಳಿದ ಸವಾರರು

ಹಿರಿಯಡಕ: ಸ್ಕೂಟಿಗೆ ಡಿಕ್ಕಿಯಾದ ಇನ್ನೋವಾ ಕಾರು: ಪವಾಡಸದೃಶ ರೀತಿಯಲ್ಲಿ ಬದುಕುಳಿದ ಇಬ್ಬರು ಸವಾರರು ಅಪಘಾತದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆಅತೀ ವೇಗದಿಂದ ಬಂದ ಇನ್ನೋವಾ ಕಾರು ಚಾಲಕನೋರ್ವ ಹಿಂದಿನಿಂದ ಸ್ಕೂಟಿಗೆ ಡಿಕ್ಕಿ ಹೊಡೆದ ಘಟನೆ ಹಿರಿಯಡಕ ಪೇಟೆಯಲ್ಲಿ ಸಂಭವಿಸಿದೆ. ಇನ್ನೋವಾ ಕಾರು ಡಿಕ್ಕಿಯಾದ ರಭಸಕ್ಕೆ ಸ್ಕೂಟರ್ ಸವಾರ ರಸ್ತೆಗೆ ಎಸೆಯಲ್ಪಟ್ಟಿದ್ದು, ಪವಾಡಸದೃಶ ರೀತಿಯಲ್ಲಿ ಬದುಕುಳಿದಿದ್ದಾರೆ. ಸ್ಕೂಟಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಪಲ್ಟಿಯಾಗಿ ಬಿದ್ದಿದ್ದಾನೆ. ಅಪಘಾತದ ಭಯಾನಕ ದೃಶ್ಯ…

Read More

ನೂತನ ಕಾರ್ಮಿಕ ಸಂಹಿತೆಗೆ ವಿರೋಧ: ಫೆ.12ರಂದು ಉಡುಪಿ ಜಿಲ್ಲೆಯಾದ್ಯಂತ ಪ್ರತಿಭಟನೆ

ಉಡುಪಿ: ಕೇಂದ್ರ ಸರಕಾರದ ನಾಲ್ಕು ನೂತನ ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಕರೆ ನೀಡಿರುವ ಒಂದು ದಿನ ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರವನ್ನು ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಫೆ.12ರಂದು ಉಡುಪಿ ಜಿಲ್ಲೆಯಾದ್ಯಂತ ನಡೆಸಲಾಗುವುದು ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಸುರೇಶ್ ಕಲ್ಲಾಗರ ತಿಳಿಸಿದ್ದಾರೆ. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಯ ಕಾರ್ಮಿಕ ಸಂಘಟನೆ ಬಿಎಂಎಸ್‌ನ್ನು ಹೊರತು ಪಡಿಸಿ ದೇಶದ ಎಲ್ಲಾ 10 ಪ್ರಮುಖ…

Read More

ಮಲ್ಪೆ : 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಸೆರೆ

ಉಡುಪಿ: ಮಲ್ಪೆ ಬೀಚ್ ನಲ್ಲಿ ನಡೆದ ಕಳವು ಪ್ರಕರಣ ಸಂಬಂಧಿಸಿದಂತೆ 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಮಹಿಳಾ ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಆಶಾ ಯಾನೆ ಸುಮಿತ್ರ ಕೃಷ್ಣ ಮತ್ತು ರೇಖಾ ದಾನಪ್ಪ ಬಂಧಿತ ಆರೋಪಿಗಳು. ಈ ಇಬ್ಬರು ಆರೋಪಿಗಳು ಸುಮಾರು 11 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ವಾರೆಂಟ್ ಜಾರಿ ಮಾಡಲಾಗಿತ್ತು. ಮಲ್ಪೆ ಠಾಣಾ ಸಿಬ್ಬಂದಿಗಳಾದ ಸುರೇಶ್ ಕುಮಾರ್, ವಿಶ್ವನಾಥ್ ಮತ್ತು ಸಿಂಚನ ಅವರು ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಹೊಸ ಮನೆ ಎಂಬಲ್ಲಿ ಜ. 31ರಂದು ಆರೋಪಿಗಳನ್ನು…

Read More

ಮಂಗಲ್ಪಾಡಿ: ಕುಕ್ಕರ್ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗೆ ರ‍್ಯಾಗಿಂಗ್

ಮಂಗಲ್ಪಾಡಿ: ಮಂಗಲ್ಪಾಡಿಯ ಕುಕ್ಕರ್ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಯ ಮೇಲೆ ರ್ಯಾಗಿಂಗ್ ನಡೆಸಿ ಕ್ರೂರವಾಗಿ ಹಲ್ಲೆ ಮಾಡಿದ ಘಟನೆ ಬೆಳಕಿಗೆ ಬಂದಿದೆ.ಮಧ್ಯಾಹ್ನದ ಊಟ ಸೇವಿಸುವ ವೇಳೆ ವಿದ್ಯಾರ್ಥಿ ಮಹಮ್ಮದ್ ಬಿಷ್ರಾನ್ ಮೇಲೆ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ. ಕಣ್ಣಿಗೆ ಗಾಯಗೊಂಡ ವಿದ್ಯಾರ್ಥಿಯನ್ನು ತಕ್ಷಣ ಮಂಗಲ್ಪಾಡಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.ಈ ಕುರಿತು ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

Read More

ಕಾರ್ಕಳ: ಪತ್ನಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಪತಿ: ಚಿಕಿತ್ಸೆ ಫಲಕಾರಿಯಾಗದೆ ಪತ್ನಿ ಸಾವು

ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ನೂರಾಳ್ ಬೆಟ್ಟು ಗ್ರಾಮದ ಗುಮ್ಮೆಟ್ಟು ನಿವಾಸಿ ಗೀತಾ ಅವರ ಮೇಲೆ ಪತಿ ಸುನೀಲ್ ಕುಮಾರ್ ಮಾರಣಾಂತಿಕ ಹಲ್ಲೆ ನಡೆಸಿದ್ದು ಆರೋಪಿ ಪತ್ನಿ ಗೀತಾ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಕಳೆದ ಮಂಗಳವಾರ ಗೀತಾ ಹಾಗೂ ಅವರ ಪತಿ ಸುನೀಲ್ ಕುಮಾ‌ರ್ ನಡುವೆ ಸಾಂಸಾರಿಕ ವಿಚಾರವಾಗಿ ಗಲಾಟೆ ನಡೆದಿದ್ದು, ಈ ಸಂದರ್ಭ ಸುನೀಲ್ ಕುಮಾರ್ ಗೀತಾ ಅವರನ್ನು ಕೊಲ್ಲುವ ಉದ್ದೇಶದಿಂದ ಯಾವುದೋ ಆಯುಧದಿಂದ ಹಣೆಗೆ ಹಾಗೂ ಗದ್ದಕ್ಕೆ ಹೊಡೆದು ಗಂಭೀರ ಗಾಯಗೊಳಿಸಿದ್ದಾನೆ ಎಂದು…

Read More

ಫೆ.7-8;ಉಚಿತ ಶ್ರವಣ ತಪಾಸಣಾ ಶಿಬಿರ

ಮಂಗಳೂರು, ಫೆ.3; ಟೀಮ್ ಈಶ್ವರ್ ಮಲ್ಪೆ ಅವರ ವೈದ್ಯಕೀಯ ತಂಡ ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತ ರ ಸಂಘದ ಸಹಯೋಗದೊಂದಿಗೆ ಮಂಗಳೂರು ಪ್ರೆಸ್ ಕ್ಲಬ್ ,ಪತ್ರಿಕಾ ಭವನ ಟ್ರಸ್ಟ್ ಸಹಕಾರ ದೊಂದಿಗೆ ಕಳೆದ ಸಲದಂತೆ ಈ ಬಾರಿಯೂ ದಿನಾಂಕ 7-02-2026. ಮತ್ತು 8-02-2026 ‌‌‌‌‌ರಂದು ಉಚಿತ ಶ್ರವಣ ತಪಾಸಣಾ ಶಿಬಿರ (ಸಮಯ ಬೆಳಗ್ಗೆ 9.30ರಿಂದ ಸಂಜೆ 4.30ರವರೆಗೆ ಮಂಗಳೂರಿನ ಪತ್ರಿಕಾ ಭವನದಲ್ಲಿ ನಡೆಸಲಿದೆ.ಈ ಶಿಬಿರದಲ್ಲಿ ಉಚಿತವಾಗಿ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಕಾರ್ಯಕ್ರಮ…

Read More
error: Content is protected !!