“ಪುತ್ತೂರು ಕ್ಷೇತ್ರಕ್ಕೆ ಮೂರು ವರ್ಷದಲ್ಲಿ ₹2709 ಕೋಟಿ ಅನುದಾನ: 629 ಕಾಮಗಾರಿಗಳಿಗೆ ಟೆಂಡರ್, 20 ದಿನದಲ್ಲಿ ಕೆಲಸ ಆರಂಭ – ಶಾಸಕ ಅಶೋಕ್ ರೈ”

ಪುತ್ತೂರು; ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ 23-24ರಲ್ಲಿ ರೂ.1479.59 ಕೋಟಿ, 24-25ರಲ್ಲಿ 529 ಕೋಟಿ ಹಾಗೂ 25-26ರ ಜನವರಿ ತನಕ 251.06 ಕೋಟಿ ಸನುದಾನವೂ ಸೇರಿ ಒಟ್ಟು ರೂ.2259.56 ಕೋಟಿ ಅನುದಾನ ಮಂಜೂರುಗೊಂಡಿದೆ. ರಸ್ತೆಗಳ ಅಭಿವೃದ್ಧಿಗಾಗಿ ಸರ್ಕಾರ ಶಾಸಕರಿಗೆ ನೀಡಿದ ರೂ.50 ಕೋಟಿಯಲ್ಲಿ 550 ರಸ್ತೆ ಕಾಮಗಾರಿ, 79 ಶ್ರದ್ಧಾಕೇಂದ್ರಗಳು ಸೇರಿದಂತೆ ಒಟ್ಟು 629 ಕಾಮಗಾರಿ ಟೆಂಡರ್ ಹಂತದಲ್ಲಿದೆ. ಈ ಕಾಮಗಾರಿಗಳ ನಿರ್ವಹಣೆಗೆ 5 ಗುತ್ತಿಗೆದಾರರಿಗೆ ತಲಾ 10 ಕೋಟಿಯಂತೆ ವಿಭಾಗಿಸಿ ನೀಡಲಾಗಿದೆ. ಈಗಾಗಲೇ ಶೇ.13 ಅನುದಾನ ಮಂಜೂರುಗೊಂಡಿದೆ….

Read More

ಕಾವೂರಿನ ಟೆಕ್ಕಿ ಶರ್ಮಿಳಾ ಸಾವಿನ ರಹಸ್ಯ ಬಯಲು . ಉಸಿರುಗಟ್ಟಿಸಿ ಕೊಂದ ಕೇರಳ ಮೂಲದ 18ರ ಹರೆಯದ ವಿದ್ಯಾರ್ಥಿ ಬಂಧನ

ಮಂಗಳೂರು :ಕಾವೂರಿನ ಟೆಕ್ಕಿ ಶರ್ಮಿಳಾ ಸಾವಿನ ರಹಸ್ಯ ಬಯಲಾಗಿದ್ದು, ಉಸಿರುಗಟ್ಟಿಸಿ ಕೊಂದಿದ್ದ ಕೇರಳ ಮೂಲದ 18ರ ಹರೆಯದ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ.ಲೈಂಗಿಕವಾಗಿ ಸಹಕರಿಸಲು ನಿರಾಕರಿಸಿದ ಮಂಗಳೂರಿನ ಕಾವೂರು ನಿವಾಸಿ ಟೆಕ್ಕಿ ಶರ್ಮಿಳಾ (35) ಳನ್ನು ಕೊಂದಿದ್ದ 18 ವರ್ಷದ ಯುವಕನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಶರ್ಮಿಳಾ ಕಳೆದ ವಾರ ಬೆಂಗಳೂರಿನ ತಮ್ಮ ಫ್ಲಾಟ್‌ನಲ್ಲಿ ಬೆಂಕಿ ಅವಘಡದಲ್ಲಿ ಮೃತಪಟ್ಟಿದ್ದಾರೆ ಎಂದು ಮೊದಲು ಶಂಕಿಸಲಾಗಿತ್ತು. ಶರ್ಮಿಳಾ ಅವಿವಾಹಿತೆಯಾಗಿದ್ದು ಸುಬ್ರಹ್ಮಣ್ಯ ಲೇಔಟ್‌ನ ಸಂಕಲ್ಪ ನಿಲಯದಲ್ಲಿ ಎರಡು ಬೆಡ್ರೂಮ್ ಫ್ಲಾಟ್‌ನಲ್ಲಿ ವಾಸವಿದ್ದರು. ಬೆಂಗಳೂರಿನ ಪ್ರಮುಖ…

Read More

“ಬಾಂಗ್ಲಾದೇಶಿ ಎಂದು ಆರೋಪಿಸಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನ ಮೇಲೆ ಹಲ್ಲೆ: ಮಂಗಳೂರಿನ ಕಾವೂರಿನಲ್ಲಿ ನಾಲ್ವರು ವಿರುದ್ಧ ಪ್ರಕರಣ”

ಮಂಗಳೂರು:ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನನ್ನು ಬಾಂಗ್ಲಾದೇಶಿ ಪ್ರಜೆ ಎಂದು ಆರೋಪಿಸಿ, ನಾಲ್ವರು ವ್ಯಕ್ತಿಗಳು ಹಲ್ಲೆ ನಡೆಸಿದ ಘಟನೆ ಮಂಗಳೂರಿನ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜಾರ್ಖಂಡ್ ಮೂಲದ ಗಿರಿಜಾ ಅನ್ಸಾರಿ ಕಳೆದ 10–15 ವರ್ಷಗಳಿಂದ ವಲಸೆ ಕಾರ್ಮಿಕನಾಗಿ ಜೀವನ ನಡೆಸುತ್ತಿದ್ದು, ಸ್ಥಳೀಯರಾದ ಈ ನಾಲ್ವರು ಆರೋಪಿಗಳು ಸತತವಾಗಿ “ನೀನು ಬಾಂಗ್ಲಾದೇಶದ ಪ್ರಜೆ” ಎಂದು ಆರೋಪಿಸಿ ದಾಖಲೆ ತೋರಿಸು ಎಂದು ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ. ತಾನು ಬಾಂಗ್ಲಾದೇಶಿ ಅಲ್ಲ ಎಂದು ಹೇಳಿದಾಗಲೂ ಅವನ ತಲೆಯ ಮೇಲೆ…

Read More

ಬಾಂಗ್ಲಾದೇಶಿ ಪ್ರಜೆ ಎಂದು ವಲಸೆ ಕಾರ್ಮಿಕನಿಗೆ ಹಲ್ಲೆ; ಕೇಸ್ ದಾಖಲು

ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನನ್ನು ಬಾಂಗ್ಲಾದೇಶಿ ಪ್ರಜೆ ಎಂದು ಆರೋಪಿಸಿ, ನಾಲ್ವರು ವ್ಯಕ್ತಿಗಳು ಹಲ್ಲೆ ನಡೆಸಿದ ಘಟನೆ ಮಂಗಳೂರಿನ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಜಾರ್ಖಂಡ್ ಮೂಲದ ಗಿರಿಜಾ ಅನ್ಸಾರಿ ಕಳೆದ 10–15 ವರ್ಷಗಳಿಂದ ವಲಸೆ ಕಾರ್ಮಿಕನಾಗಿ ಜೀವನ ನಡೆಸುತ್ತಿದ್ದು, ಸ್ಥಳೀಯರಾದ ಈ ನಾಲ್ವರು ಆರೋಪಿಗಳು ಸತತವಾಗಿ “ನೀನು ಬಾಂಗ್ಲಾದೇಶದ ಪ್ರಜೆ” ಎಂದು ಆರೋಪಿಸಿ ದಾಖಲೆ ತೋರಿಸು ಎಂದು ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ. ತಾನು ಬಾಂಗ್ಲಾದೇಶಿ ಅಲ್ಲ ಎಂದು ಹೇಳಿದಾಗಲೂ ಅವನ ತಲೆಯ ಮೇಲೆ ಹೊಡೆದು…

Read More

ಬಂದ್ಯೋಡ್ ನಲ್ಲಿ ಅಗ್ನಿ ದುರಂತ: ಪೀಠೋಪಕರಣ–ಎಲೆಕ್ಟ್ರಾನಿಕ್ ವಸ್ತುಗಳು ಭಸ್ಮ

ಬಂದ್ಯೋಡ್ : ಬಂದ್ಯೋಡ್ ನಲ್ಲಿ ಸಿರಿಯಾಲ್ ಖದೀಜಾ ಅವರ ಒಡೆತನದ ಮನೆಯಲ್ಲಿ ನಿನ್ನೆ ಸಂಜೆ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಬೆಂಕಿಯಿಂದ ಮನೆಯಲ್ಲಿದ್ದ ಪೀಠೋಪಕರಣಗಳು ಹಾಗೂ ಎಲೆಕ್ಟ್ರಾನಿಕ್ ವಸ್ತುಗಳು ಸಂಪೂರ್ಣವಾಗಿ ನಾಶವಾಗಿದ್ದು, ಸುಮಾರು ನಾಲ್ಕು ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ನಯ ಬಜಾರ್‌ನಿಂದ ಆಗಮಿಸಿದ ಅಗ್ನಿಶಾಮಕ ದಳ ಮತ್ತು ಸ್ಥಳೀಯರು ತಕ್ಷಣ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಪ್ರಾಥಮಿಕ ತನಿಖೆಯ ಪ್ರಕಾರ ಶಾಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರಬಹುದೆಂದು ಶಂಕಿಸಲಾಗಿದೆ. ಘಟನೆ ವೇಳೆ ಮನೆಯಲ್ಲಿ…

Read More

ಜನವರಿ 13 ರಿಂದ 22 ರ ತನಕ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಉತ್ಸವದ ಅಂಗವಾಗಿ ಧಾರ್ಮಿಕ ಹಾಗೂ ಸಾಂಸ್ಕೃತಿಕ ಉತ್ಸವ , 140 ಕ್ಕೂ ಅಧಿಕ ತಂಡಗಳು, 3೦೦೦ ಅಧಿಕ ಕಲಾವಿದರು ಭಾಗಿಯಾಗುವ ನಿರೀಕ್ಷೆ … !

ಮಂಗಳೂರು:ಮಲ್ಲಿಕಾ ಕಲಾ ಕಲಾವೃಂದವು ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಉತ್ಸವದ ಅಂಗವಾಗಿ ದೇವಳದ ನೂತನ ವೇದಿಕೆಯಲ್ಲಿ 76ನೇ ವರ್ಷದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಉತ್ಸವವು ಜನವರಿ 13 ರಿಂದ 22 ರ ತನಕ 10 ದಿನಗಳ ಕಾಲ ನಡೆಯಲಿದೆ ಎಂದು ಕಾರ್ಯಧ್ಯಕ್ಷರಾದ ಸುಧಾಕರ್ ರಾವ್ ಪೇಜಾವರ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ , 10 ದಿನಗಳ ಕಾರ್ಯಕ್ರಮದಲ್ಲಿ ಸುಮಾರು 140 ಕ್ಕೂ ಅಧಿಕ ತಂಡಗಳು 3೦೦೦ ಅಧಿಕ…

Read More

ಅಯ್ಯಪ್ಪ ಸ್ವಾಮಿಗಳ ಪೂಜೆ ವೇಳೆ ದನಕ್ಕೆ ಚೂರಿ ಇರಿತ ಪ್ರಕರಣ:ರಸ್ತೆಗೆ ದನ ಬಿಟ್ಟವರ ಮೇಲೂ ಸುಮೊಟೋ ಕೇಸು

ಮಂಗಳೂರು :ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯಕ್ತಿಯ ಚರುಮುರಿ ಸ್ಟಾಲ್ ಬಳಿ ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿದ ಪ್ರಕರಣದಲ್ಲಿ ರಸ್ತೆಗೆ ದನ ಬಿಟ್ಟವರ ಮೇಲೂ ಸುಮೊಟೋ ಕೇಸು ದಾಖಲಾಗಿದೆ.ಎಡಪದವು ಬಳಿಯ ಪೂಪಾಡಿಕಲ್ಲು ಎಂಬಲ್ಲಿ ಅಯ್ಯಪ್ಪ ಮಾಲಾಧಾರಿಗಳ ಪೂಜಾ ಕಾರ್ಯಕ್ರಮಕ್ಕೆ ಮುಸ್ಲಿಂ ವ್ಯಕ್ತಿಯೊಬ್ಬ ಚರುಮುರಿ ಹಾಕಿದ್ದು ಈ ವೇಳೆ ಅಲ್ಲಿಗೆ ಬಂದ ದನದ ಮುಖಕ್ಕೆ ಚೂರಿಯಿಂದ ಇರಿದ ಘಟನೆ ನಡೆದಿತ್ತು. ಚರುಮುರಿ ಸ್ಟಾಲ್ ಇರಿಸಿದ್ದಾಗ ಅಲ್ಲಿಗೆ ದನವೊಂದು ಬಂದಿದ್ದು ಟೊಮೆಟೋ ತಿನ್ನಲು ಮುಂದಾಗಿತ್ತು….

Read More

ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ನ ಮೇಲ್ಛಾವಣಿ ಕದ್ದವರು ಕಾಂಗ್ರೆಸ್ ಬ್ರದರ್ಸ್‌: ಶಾಸಕ ಸುನಿಲ್ ಕುಮಾರ್ ಟೀಕೆ

ಉಡುಪಿ: ಪರಶುರಾಮ ಥೀಮ್ ಪಾರ್ಕ್ ಕಟ್ಟಡದಲ್ಲಿ ತಾಮ್ರದ ಹೊದಿಕೆ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಕಳ ನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕಳವಾರು ನಿವಾಸಿ ಆರೀಫ್ ಯಾನೆ ಮುನ್ನ (37) ಹಾಗೂ ಕಾವೂರು ನಿವಾಸಿ ಅಬ್ದುಲ್ ಹಮೀದ್ (32) ಬಂಧಿತ ಆರೋಪಿಗಳು. ಆರೋಪಿಗಳ ಬಂಧನದ ಬೆನ್ನಲ್ಲೇ ಕಾರ್ಕಳ ಶಾಸಕ ಸುನಿಲ್ ಕುಮಾರ್ ಟ್ವೀಟ್ ಮೂಲಕ ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ‘ಪರಶುರಾಮ ಥೀಂ ಪಾರ್ಕ್ ಮೇಲ್ಛಾವಣಿ ಕದ್ದವರು ಕಾಂಗ್ರೆಸ್ ಬ್ರದರ್ಸ್‌’ ಎಂದು ಟೀಕಿಸಿದ್ದಾರೆ.ಪರಶುರಾಮ ಥೀಂ ಪಾರ್ಕ್…

Read More

ಬಂಟ್ವಾಳ: ತಾಲೂಕಿನ ಮಾಣಿ ಗ್ರಾಮದ ಗ್ರಾಮ ದೈವಕ್ಕೆ ಸಂಬಂಧಪಟ್ಟಂತೆ 1001 ಗಣಗಳಿಗೆ “ವನಭೊಜನ ” ಕಾರ್ಯಕ್ರಮ

ಬಂಟ್ವಾಳ: ತಾಲೂಕಿನ ಮಾಣಿ ಗ್ರಾಮದ ಗ್ರಾಮ ದೈವಕ್ಕೆ ಸಂಬಂಧಪಟ್ಟಂತೆ 1001 ಗಣಗಳಿಗೆ “ವನಭೊಜನ ” ಕಾರ್ಯಕ್ರಮ ನಡೆಯಿತು.ಅನಾದಿಕಾಲದಿಂದಲೂ ನಡೆದುಕೊಂಡು ಬಂದಂತೆ ಮಾಣಿ ಶ್ರೀ ಉಳ್ಳಾಲ್ತಿ ದೈವದ ಮೆಚ್ಚಿ ಜಾತ್ರೆಯ ಮೊದಲು ಮಾಣಿ ಗ್ರಾಮದ ಉಳ್ಳಾಲ್ತಿ  ದೇವಸ್ಥಾನದ ವಠಾರದಲ್ಲಿ ಹಾಗೂ ಅರೆಬೆಟ್ಟುವಿನಲ್ಲಿ ಒಂದೇ ದಿನ ವನಭೊಜನ ಕಾರ್ಯಕ್ರಮ ನಡೆಯುತ್ತದೆ. ಅರೆಬೆಟ್ಟು ಗುತ್ತುವಿನಲ್ಲಿ ವರ್ಷಂಪ್ರತಿ ಯಂತೆ ಜರಗುವ ಕಂಬಳಕೋರಿಯಂದು ಈ ಎರಡು ಗ್ರಾಮದ ವನಭೋಜನಕ್ಕೆ ದಿನ ನಿಗದಿಯಾಗುತ್ತದೆ.ಅ ಪ್ರಕಾರ ಒಂದೇ ದಿನ ಎರಡು ಕಡೆಗಳಲ್ಲೂ ವನಭೋಜನಕ್ಕೆ ಮೀಸಲಿರಿಸಿದ ಜಾಗದಲ್ಲಿ ಮಾಣಿಗುತ್ತು ಮತ್ತು…

Read More

ಜಿಲ್ಲೆಯ ಬಿಜೆಪಿ ಶಾಸಕರು ಎಸ್ಪಿ ಮತ್ತು ಕಮೀಷನರ್ ನನ್ನು ಎತ್ತಂಗಡಿ ಮಾಡಲು ಆಡಳಿತ ಪಕ್ಷ ಹುನ್ನಾರ ನಡೆಸುತ್ತಿದೆ ಎಂಬ ಹೇಳಿಕೆ ಶುದ್ಧ ಸುಳ್ಳು : ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್.ಆರ್ ಪೂಜಾರಿ

ಮಂಗಳೂರು:ಈ ಜಿಲ್ಲೆಯಲ್ಲಿ ಶಾಂತಿ , ಸಮೃದ್ಧಿ ,ಸ್ಥಾಪನೆಗೆ ಶ್ರಮಿಸುತ್ತಿರುವ ಎಸ್ಪಿ ಮತ್ತು ಕಮೀಷನರ್ ನನ್ನು ಎತ್ತಂಗಡಿ ಮಾಡಲು ಆಡಳಿತ ಪಕ್ಷ ಪ್ರಯತ್ನ ಮಾಡುತ್ತಾ ಇದೆ ಎಂದು ನಮ್ಮ ಜಿಲ್ಲೆಯ ಬಿಜೆಪಿ ಶಾಸಕರು ಅಲ್ಲಿಲ್ಲಿ ಪತ್ರಿಕಾ ಹೇಳಿಕೆಯನ್ನು ನೀಡುತ್ತಾ ಬಂದಿದ್ದಾರೆ . ಅವರಿಗೆ ನಾನೊಂದು ಸ್ಪಷ್ಟತೆಯನ್ನು ನೀಡಲು ಬಯಸುತ್ತೇನೆ. ಈ ಜಿಲ್ಲೆಯಲ್ಲಿ ಅಶಾಂತಿ ಉಂಟಾದ ಸಮಯದಲ್ಲಿ ದಕ್ಷ ಅಧಿಕಾರಿಗಳನ್ನು ಇಲ್ಲಿಗೆ ಕಳಿಸಿದ್ದು ಸಿದ್ದರಾಮ್ಯರ ನೇತೃತ್ವದ ಸರ್ಕಾರ ಎಂದು ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್.ಆರ್ ಪೂಜಾರಿ ಸ್ಪಷ್ಟನೆ ನೀಡಿದರು…

Read More
error: Content is protected !!