ಕೂಟೇಲಿನಲ್ಲಿ ಭೀಕರ ಅಪಘಾತ: ಲಾರಿ ಡಿಕ್ಕಿಗೆ ಕಾರಿನಲ್ಲಿದ್ದ ಐವರಿಗೆ ಗಂಭೀರ ಗಾಯ
ಉಪ್ಪಿನಂಗಡಿ, ಜೂನ್ 2: ಕಾರೊಂದಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ಕೂಟೇಲು ಪ್ರದೇಶದಲ್ಲಿ ನಡೆದಿದೆ. ಕಾರ್ಕಳ ತಾಲೂಕಿನ ನಕ್ರೆ ನಿವಾಸಿಗಳಾದ ಕುಟುಂಬ ಸದಸ್ಯರು ಸುಬ್ರಹ್ಮಣ್ಯ ಕ್ಷೇತ್ರಕ್ಕೆ ವ್ಯಾಗನರ್ ಕಾರಿನಲ್ಲಿ ಯಾತ್ರೆ ಕೈಗೊಂಡಿದ್ದರು. ಕೂಟೇಲು ಸಮೀಪ ಕಾರು ಸಂಚರಿಸುತ್ತಿದ್ದ ವೇಳೆ ಅಡುಗೆ ಅನಿಲದ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಕಾರಿನ ಚಾಲಕ ದೀಪಕ್ ಹಾಗೂ ಯಾತ್ರಾರ್ಥಿಗಳಾದ ಗುರುರಾಜ್, ಧನುಷ್, ಭಾರತಿ ಮತ್ತು ಗೀತಾ…
