ಮಂಜೇಶ್ವರ ಗ್ರಾಮ ಪಂಚಾಯತ್ ಅಧಿಕೃತ ವೆಬ್‌ಸೈಟ್ ಲೋಕಾರ್ಪಣೆ: ಇನ್ನು ಮುಂದೆ ಸಾರ್ವಜನಿಕ ಸೇವೆಗಳು ಆನ್‌ಲೈನ್‌ನಲ್ಲಿ ಲಭ್ಯ
ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯತ್‌ನ ಆಡಳಿತವನ್ನು ಮತ್ತಷ್ಟು ಪಾರದರ್ಶಕಗೊಳಿಸುವ ಮತ್ತು ಸಾರ್ವಜನಿಕರಿಗೆ ಸೇವೆಗಳನ್ನು ಸುಲಭವಾಗಿ ತಲುಪಿಸುವ ನಿಟ್ಟಿನಲ್ಲಿ, ಪಂಚಾಯತ್‌ನ ಅಧಿಕೃತ ವೆಬ್‌ಸೈಟ್ ಅನ್ನು ಪಂಚಾಯತು ಅಧ್ಯಕ್ಷ ಬಶೀರ್ ಕನಿಲ ಅಧಿಕೃತವಾಗಿ ಲೋಕಾರ್ಪಣೆ ಗೊಳಿಸಿದರು. ಈ ಸಂದರ್ಭ ಉಪಾಧ್ಯಕ್ಷೆ ಫಾತಿಮತ್ ಝವುರಾ ಹಾಗೂ ಪಂಚಾಯತ್ ಸದಸ್ಯರುಗಳು ಸಿಬ್ಬಂದಿಗಳು ಸೇರಿದಂತೆ ಹಲವಾರು ಮಂದಿ ಪಾಲ್ಗೊಂಡರು. ಈ ಡಿಜಿಟಲ್ ಉಪಕ್ರಮದ ಮೂಲಕ ಇನ್ನು ಮುಂದೆ ಪಂಚಾಯತ್‌ಗೆ ಸಂಬಂಧಿಸಿದ ವಿವಿಧ ಸೇವೆಗಳನ್ನು ನಾಗರಿಕರು ಮನೆಯಲ್ಲೇ ಕುಳಿತು ಪಡೆಯಬಹುದಾಗಿದೆ.ಪ್ರಮುಖವಾಗಿ ಜನನ ಪ್ರಮಾಣಪತ್ರ, ಮರಣ ಪ್ರಮಾಣಪತ್ರ…
