ಪಣೋಲಿಬೈಲು ಕ್ಷೇತ್ರಕ್ಕೆ ಭಕ್ತರ ಮಹಾಪೂರ; 4,180 ಅಗೇಲು ಸೇವೆ ಸಂದಾಯ

ಬಂಟ್ವಾಳ: ಕೋಲ ಹಾಗೂ ಅಗೇಲು ಸೇವೆಗೆ ಪ್ರಸಿದ್ದಿ ಪಡೆದಿರುವ ಆರಾಧನಾ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ರವಿವಾರ ಭಕ್ತರಿಂದ 4180 ಅಗೇಲು ಸೇವೆಗಳು ಸಂದಾಯವಾಗಿದೆ; ಇದು ಈ ವರ್ಷದಲ್ಲಿ ಸಂದಾಯವಾದ ಗರಿಷ್ಠ ಸಂಖ್ಯೆಯ ಅಗೇಲು ಸೇವೆಯಾಗಿದೆ. ಹೆಚ್ಚು ಸೇವೆ ಸಂದಾಯವಾದ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಭಕ್ತರ ಸಂಖ್ಯೆ ಅಧಿಕವಾಗಿತ್ತು. ಕ್ಷೇತ್ರದಲ್ಲಿ ವಾರದಲ್ಲಿ ಮೂರು ದಿನ ಅಗೇಲು ಸೇವೆ ಸಂದಾಯವಾಗುತ್ತಿದ್ದರೂ ರವಿವಾರ ರಜಾ ದಿನವಾದ ಕಾರಣ ಗರಿಷ್ಠ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಅಗೇಲು ಸೇವೆ ಸಲ್ಲಿಸುತ್ತಾರೆ. ಸಾಮಾನ್ಯ ದಿನಗಳಲ್ಲಿ…

Read More

ಉಡುಪಿಯಲ್ಲಿ ಭೀಕರ ಅಪಘಾತ: ಲಾರಿಗೆ ಹಿಂಬದಿಯಿಂದ ಟೆಂಪೋ ಡಿಕ್ಕಿ, ಚಾಲಕ ಸಾವು

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಕಿನ್ನಿಮೂಲ್ಕಿ ಸಮೀಪ ಸರಕು ಸಾಗಾಟದ ಲಾರಿಗೆ ಹಿಂಬದಿಯಿಂದ ಗೂಡ್ಸ್ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಟೆಂಪೋ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಭಾನುವಾರ ನಸುಕಿನ ಜಾವ ಸಂಭವಿಸಿದೆ.ಮೃತರನ್ನು ಶಿವಮೊಗ್ಗ ಮೂಲದ ಪ್ರಶಾಂತ್ ಪಿ. (29) ಎಂದು ಗುರುತಿಸಲಾಗಿದೆ. ಅಪಘಾತದ ತೀವ್ರತೆಗೆ ಟೆಂಪೋದ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕ ವಾಹನದೊಳಗೆ ಸಿಲುಕಿಕೊಂಡಿದ್ದರು. ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಟೆಂಪೋ ಡಿಕ್ಕಿ ಹೊಡೆದಿರಬಹುದೆಂದು ಶಂಕಿಸಲಾಗಿದೆ.ಅಪಘಾತದ ಬಳಿಕ ಟೆಂಪೋದಲ್ಲಿ ಸಿಲುಕಿದ್ದ ಚಾಲಕನ ಮೃತದೇಹವನ್ನು ಹೊರತೆಗೆಯಲು ಸಾಕಷ್ಟು ಹರಸಾಹಸ…

Read More

ಕುಕ್ಕೆ ಸುಬ್ರಹ್ಮಣ್ಯಕ್ಕೆ ಭಕ್ತ ಸಾಗರ: ಒಂದೇ ದಿನ 30 ಸಾವಿರಕ್ಕೂ ಅಧಿಕ ಭಕ್ತರ ದರ್ಶನ

ದಕ್ಷಿಣ ಭಾರತದ ಹೆಸರಾಂತ ನಾಗರಾಧನೆಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ರವಿವಾರ ರಾಜ್ಯದ ವಿವಿಧ ಭಾಗಗಳಿಂದ ಹಾಗೂ ಹೊರ ರಾಜ್ಯಗಳಿಂದ 30,000 ಕ್ಕಿಂತಲೂ ಅಧಿಕ ಭಕ್ತರು ಆಗಮಿಸಿ ಶ್ರೀ ದೇವರ ದರ್ಶನ,ತೀರ್ಥ ಪ್ರಸಾದ ಹಾಗೂ ಭೋಜನ ಸ್ವೀಕರಿಸಿರುವರು. ಮುಂಜಾನೆಯಿಂದಲೇ ಪವಿತ್ರ ತೀರ್ಥ ಸ್ನಾನಕ್ಕಾಗಿ ಕುಮಾರಧಾರ ಸ್ನಾನ ಘಟ್ಟದಲ್ಲಿ ಭಕ್ತರು ಮಿಂದು ಶ್ರೀ ದೇವಳದ ಹೊರಾಂಗಣ ಪ್ರವೇಶಿಸಿ ಸರತಿಯ ಸಾಲಿನಲ್ಲಿ ಶ್ರೀ ದೇವರ ದರ್ಶನ ಮಾಡಿರುವರು. ಭಕ್ತರಿಗೆ ಲಡ್ಡು ಪ್ರಸಾದ ಹಾಗೂ ಪಂಚಕಜ್ಜಾಯ ತೀರ್ಥ ಬಾಟಲಿ ಇತ್ಯಾದಿಗಳಿಗಾಗಿ ಶ್ರೀ ದೇವಳದ…

Read More

ಬಿ.ಕೆ. ಹರಿಪ್ರಸಾದ್‌ಗೆ ಸಚಿವ ಸ್ಥಾನ ನೀಡಬೇಕು: ಅಖಿಲ ಭಾರತ ಬಿಲ್ಲವ ಸಂಘಟನೆ ಆಗ್ರಹ

ಮಂಗಳೂರು: ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ರಚನೆಯಾಗಲಿರುವ ಸಚಿವ ಸಂಪುಟದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಅಖಿಲ ಭಾರತ ಬಿಲ್ಲವ ಸಂಘಟನೆ ಒತ್ತಾಯಿಸಿದೆ. ನಗರದ ಕುದ್ರೋಳಿಯ ಶ್ರೀ ಗೋಕರ್ಣನಾಥ ಕ್ಷೇತ್ರದ ಸಭಾಂಗಣದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೋಲೂರು ಆರ್ಯ ಈಡಿಗ ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ, ಬಿಲ್ಲವ ಸಮುದಾಯಕ್ಕೆ ರಾಜ್ಯ ಸಚಿವ ಸಂಪುಟದಲ್ಲಿ ಸೂಕ್ತ ಪ್ರಾತಿನಿಧ್ಯ ದೊರಕಬೇಕು ಎಂಬುದು ಸಮಾಜದ ಪ್ರಮುಖ ಬೇಡಿಕೆಯಾಗಿದೆ ಎಂದು ಹೇಳಿದರು….

Read More

ಶಾರ್ಜಾದಲ್ಲಿ ತಾಯಿ-ಮಗಳ ಸಾವಿಗೆ ಹೊಸ ತಿರುವು: ಪತಿ ನಿಹಿಲ್ ಪೊಲೀಸ್ ವಶಕ್ಕೆ

ಶಾರ್ಜಾದಲ್ಲಿ ಮಲಯಾಳಿ ಮಹಿಳೆ ಮತ್ತು ಆಕೆಯ ಪುಟ್ಟ ಮಗಳು ಸಾವನ್ನಪ್ಪಿದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯ ಪತಿ ನಿಹಿಲ್ ಅವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಕಣ್ಣೂರು ಮೂಲದ ಅರ್ಷಾ ಮತ್ತು ಆಕೆಯ ಮಗಳು ರುಹಿ ಮೃತಪಟ್ಟವರು. ಕಳೆದ ಬುಧವಾರ, ಶಾರ್ಜಾದ ಅಲ್ ನಹ್ದಾ ಪ್ರದೇಶದಲ್ಲಿರುವ ಬಹುಮಹಡಿ ಕಟ್ಟಡದಿಂದ ಕೆಳಗೆ ಬಿದ್ದು ಇಬ್ಬರೂ ಸಾವನ್ನಪ್ಪಿದ್ದರು. ಪ್ರಾಥಮಿಕ ಮಾಹಿತಿಯ ಪ್ರಕಾರ, ಅರ್ಷಾ ಮೊದಲು ತನ್ನ ಮಗುವನ್ನು ಮೇಲ್ಮಹಡಿಯಿಂದ ಕೆಳಗೆ ಎಸೆದು ಬಳಿಕ ತಾವೂ…

Read More

ಸತತ 2ನೇ ಬಾರಿ RCB ಗೆ ಐಪಿಎಲ್ ಚಾಂಪಿಯನ್ ಪಟ್ಟ

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 19ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ 5 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿ ಸತತ ಎರಡನೇ ಬಾರಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಭಾನುವಾರ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪ್ರಶಸ್ತಿ ಸುತ್ತಿನ ಹಣಾಹಣಿಯಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 155 ರನ್‌ಗಳನ್ನು ಕಲೆಹಾಕಿತು. ಗುಜರಾತ್ ಪರ ವಾಷಿಂಗ್ಟನ್ ಸುಂದರ್…

Read More

ಕನ್ನಡ ಭವನದ ಡಾ. ವಾಮನ್ ರಾವ್ ಬೇಕಲ್ -ಸಂದ್ಯಾರಾಣಿ ಟೀಚರ್ ದಂಪತಿಗಳಿಗೆ “ರಾಮಕ್ಷತ್ರಿಯ ಪೌರ ಸನ್ಮಾನ “

ಉಡುಪಿ : ಉಡುಪಿ ಜಿಲ್ಲೆಯ ನೀಲಾವರದ ಶಾರದಾ ಸಭಾಅಂಗಣ ದಲ್ಲಿ 31.5.2026,ಭಾನುವಾರ ಉಡುಪಿ ರಾಮಕ್ಷತ್ರಿಯ ಯುವ ಸಂಘ ನೇತೃತ್ವದಲ್ಲಿ ಉಡುಪಿ ರಾಮಕ್ಷತ್ರಿಯ ಸಂಘ, ಉಡುಪಿ ರಾಮಕ್ಷತ್ರಿಯ ಮಹಿಳಾ ಸಂಘ, ರಾಮಕ್ಷತ್ರಿಯ ವೆಲ್ಫೇರ್ ಟ್ರಸ್ಟ್, ನೀಲಾವರ ರಾಮಕ್ಷತ್ರಿಯ ಸಂಘ ಸಹಕಾರದಲ್ಲಿ, ನಾಡೋಜ ಡಾ. ಕೃಷ್ಣ ಪ್ರಸಾದ್ -ಡಾ ರಶ್ಮಿ ಕೃಷ್ಣ ಪ್ರಸಾದ್ ನೇತೃತ್ವದ ನೇತ್ರ ಜ್ಯೋತಿ ಸಮೂಹ ಸಂಸ್ಥೆ -ಡಾ ವಾಮನ್ ರಾವ್ ಬೇಕಲ್ -ಸಂಧ್ಯಾರಾಣಿ ಟೀಚರ್ ಸಾರತ್ಯದ ಕಾಸರಗೋಡು ಕನ್ನಡ ಭವನ ಮತ್ತು ಗ್ರಂಥಾಲಯ (ರಿ.)ಕನ್ನಡ ಭವನ…

Read More

ಸೈಂಟ್ ಆಗ್ನೆಸ್ ಕಾಲೇಜಿನ ಮಾಜಿ ವಿಭಾಗ ಮುಖ್ಯಸ್ಥೆ ಡಾ. ಸರಸ್ವತಿ ರಾವ್ ಇನ್ನಿಲ್ಲ

ಮಂಗಳೂರು, ಮೇ 31 :  ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ  37 ವರ್ಷಗಳ ಕಾಲ ಭೌತಶಾಸ್ತ್ರದ ಪ್ರಾಧ್ಯಾಪಕರಾಗಿಯೂ ವಿಭಾಗ ಮುಖ್ಯಸ್ಥರಾಗಿಯೂ ಸೇವೆ ಸಲ್ಲಿಸಿ 2015ರಲ್ಲಿ ನಿವೃತ್ತರಾಗಿದ್ದ ಡಾ.ಸರಸ್ವತಿ ಎಸ್.ರಾವ್ ಅಲ್ಪಕಾಲದ ಅಸ್ವಾಸ್ಥ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ಕೊನೆಯುಸಿರೆಳೆದರು. ಅವರಿಗೆ 71 ವರ್ಷ ವಯಸ್ಸಾಗಿತ್ತು. ಅಪಾರ ವಿದ್ಯಾರ್ಥಿಗಳ ಮೆಚ್ಚುಗೆಗೆ ಪಾತ್ರರಾಗಿದ್ದ ಅವರು ಸದಾ ನಗುಮೊಗದ ವ್ಯಕ್ತಿತ್ವವುಳ್ಳವರಾಗಿದ್ದರು. ಅತೀವ ಕುಟುಂಬ ಪ್ರೇಮವುಳ್ಳವರಾಗಿದ್ದು, ಬಂಧು ಬಾಂಧವರ ಪ್ರೀತಿ ಅಭಿಮಾನ ಗೌರವಕ್ಕೆ ಪಾತ್ರರಾದ ಡಾ. ಸರಸ್ವತಿ ರಾವ್ ನ್ಯಾನೋ ತಂತ್ರಜ್ಞಾನದ ಬಗ್ಗೆ ಸಂಶೋಧನೆ ನಡೆಸಿ…

Read More

ಪಂಚಾಯತ್ ರಾಜ್ ಬಲಪಡಿಸಿದ್ದು ಕಾಂಗ್ರೆಸ್; ದುರ್ಬಲಗೊಳಿಸಲು ಬಿಜೆಪಿ ಯತ್ನ: ಮಾಜಿ ಸಚಿವ ರಮಾನಾಥ ರೈ

ಬಂಟ್ವಾಳ: ಅಧಿಕಾರ ವಿಕೇಂದ್ರೀಕರಣದ ಉದ್ದೇಶದಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಮಂಡಿಸಿದ್ದ ಪಂಚಾಯತ್ ರಾಜ್ ತಿದ್ದುಪಡಿ ಕಾಯ್ದೆಗೆ ಬಿಜೆಪಿ ಅಡ್ಡಿಪಡಿಸಿತ್ತು. ಬಳಿಕ ಕಾಂಗ್ರೆಸ್ ಆಡಳಿತಾವಧಿಯಲ್ಲೇ ಪಂಚಾಯತ್ ರಾಜ್ ವ್ಯವಸ್ಥೆ ಅನುಷ್ಠಾನಗೊಂಡಿದ್ದು, ಗ್ರಾಮೀಣ ಜನರಿಗೆ ಅಧಿಕಾರ ಹಂಚಿಕೆಯಲ್ಲಿ ಕಾಂಗ್ರೆಸ್ ಮಹತ್ವದ ಪಾತ್ರ ವಹಿಸಿದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು. ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಸಮಾವೇಶದಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರ ಮಹಾತ್ಮಾ…

Read More

ಬಾಳುವ ಮುನ್ನವೇ ಬಾಡಿದ ಹೂವು: ಕೆರೆಗೆ ಬಿದ್ದು ಎರಡೂವರೆ ವರ್ಷದ ಬಾಲಕನ ಅಂತ್ಯ

​ಮಂಜೇಶ್ವರ: ಕಾರಡ್ಕ ಕಾರ್ಲೆಯಲ್ಲಿ ಆಟವಾಡುತ್ತಾ ಮನೆಯ ಅಂಗಳದಲ್ಲಿ ಸಂಭ್ರಮಿಸಬೇಕಿದ್ದ ಕಂದನೊಬ್ಬ ಕೆರೆಗೆ ಬಿದ್ದು ಸಾವನ್ನಪ್ಪಿದ್ದಾನೆ.ಲೋಹಿತ್ ಶೆಟ್ಟಿ-ದಿವ್ಯ ದಂಪತಿಯ ಎರಡೂವರೆ ವರ್ಷದ ಪುತ್ರ ದೇವನಂದ ಸಾವನ್ನಪ್ಪಿದ ದುರ್ದೈವಿ. ​ ನಾಪತ್ತೆಯಾಗಿದ್ದ ಬಾಲಕನಿಗಾಗಿ ಹುಡುಕಾಟ ನಡೆಸಿದಾಗ, ಮನೆಯಿಂದ 300 ಮೀಟರ್ ದೂರದ ತೆಂಗಿನ ತೋಟದ ಆವರಣವಿಲ್ಲದ ಕೆರೆಯಲ್ಲಿ ಶವ ಪತ್ತೆಯಾಗಿದೆ. ಆಟವಾಡುತ್ತಾ ಹೋಗಿದ್ದ ಮಗು, ನೀರಿನ ಸೆಳೆತಕ್ಕೆ ಸಿಲುಕಿ ಬಲಿಯಾಗಿರಬಹುದು ಎಂದು ಶಂಕಿಸಲಾಗಿದೆ. ಚೆಂಗಳದ ಸಹಕಾರಿ ಆಸ್ಪತ್ರೆಗೆ ಸಾಗಿಸಿದರೂ ಅಷ್ಟರಲ್ಲಾಗಲೇ ಮಗುವಿನ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಅಸುರಕ್ಷಿತ ಕೆರೆ…

Read More
error: Content is protected !!