ಕಾಸರಗೋಡು ಗುಡುಗು ಮಿಂಚು ಸಹಿತ ಬಿರುಸಿನ ಮಳೆಗೆ ಸಾಧ್ಯತೆ
ಕಾಸರಗೋಡು/ತಿರುವನಂತಪುರ: ರಾಜ್ಯದಲ್ಲಿ ಮಳೆಯ ಮುನ್ಸೂಚನೆಯಲ್ಲಿ ಬದಲಾವಣೆ ಮಾಡಲಾಗಿದ್ದು, ನಾಲ್ಕು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕೋಝಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ನಾಳೆ ಕಣ್ಣೂರು ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಮುಂದುವರಿಯಲಿದೆ. ಈ ಜಿಲ್ಲೆಗಳಲ್ಲಿ ಅಲ್ಲಲ್ಲಿ ಬಿರುಸಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ 3 ಗಂಟೆಗಳ ಹವಾಮಾನ ಮುನ್ಸೂಚನೆರಾಜ್ಯದ ಎರ್ನಾಕುಲಂ, ತ್ರೆಶೂರ್, ಪಾಲ್ಘಾಟ್ (ಪಾಲಕ್ಕಾಡ್), ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್, ಕಣ್ಣೂರು ಮತ್ತು…
