ಪುತ್ತೂರು ವಿದ್ಯಾರ್ಥಿನಿ ಪ್ರಕರಣ ತೀರ್ಪಿಗೆ ಶಾಕ್: ಮಹಿಳಾ ಆಯೋಗ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ
ಉಡುಪಿ: ಪುತ್ತೂರಿನ ವಿದ್ಯಾರ್ಥಿನಿಯ ಅತ್ಯಾಚಾರ ಹಾಗೂ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯ ಕೊಟ್ಟಿರುವ ತೀರ್ಮಾನದ ಬಗ್ಗೆ ನನಗೆ ಶಾಕ್ ಆಗಿದೆ. ಸಂತ್ರಸ್ತೆಗೆ ಕೇವಲ ಪರಿಹಾರ ನೀಡುವುದರಿಂದ ನ್ಯಾಯ ಸಿಗಲು ಸಾಧ್ಯವಿಲ್ಲ ಎಂದು ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ತಿಳಿಸಿದ್ದಾರೆ. ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ್ಯಾಯಾಲಯದ ತೀರ್ಮಾನದ ಬಗ್ಗೆ ಮತ್ತೆ ಮೇಲ್ಮನವಿ ಸಲ್ಲಿಸಬೇಕಾಗಿದೆ. ಈ ಪ್ರಕರಣವನ್ನು ಸುಪ್ರೀಂ ಕೋರ್ಟ್‌ಗೆ ತೆಗೆದುಕೊಂಡು ಹೋಗಬೇಕಾಗುತ್ತದೆ. ನಾವು ಎಲ್ಲ ಹಂತದಲ್ಲೂ ಸಂತ್ರಸ್ತೆಯ ಪರವಾಗಿ…
