Headlines

ಮಕ್ಕಳ ಜೀವದೊಂದಿಗೆ ಆಟ: ಮಗುಚಿಬಿದ್ದ ಶಾಲಾ ಆಟೋ: ಏಳು ವಿದ್ಯಾರ್ಥಿಗಳು ಗಾಯ

ಮಂಜೇಶ್ವರ /​ಕಾಸರಗೋಡು : ಶಾಲಾ ಮಕ್ಕಳ ರಕ್ಷಣೆಯನ್ನು ಗಾಳಿಗೆ ತೂರಿ, ಮಿತಿಗಿಂತ ಅಧಿಕ ಮಕ್ಕಳನ್ನು ತುಂಬಿಕೊಂಡು ತೆರಳುತ್ತಿದ್ದ ಆಟೋರಿಕ್ಷಾವೊಂದು ಪಲ್ಟಿಯಾಗಿ ಏಳು ವಿದ್ಯಾರ್ಥಿಗಳು ಹಾಗೂ ಚಾಲಕ ಗಾಯಗೊಂಡಿರುವ ಭೀಕರ ಘಟನೆ ನಗರದ ಎಂ.ಜಿ. ರಸ್ತೆಯ ಫೋರ್ಟ್ ರಸ್ತೆಯಲ್ಲಿ ಬೆಳಿಗ್ಗೆ ನಡೆದಿದೆ.ಅಪರಿಮಿತ ವೇಗ ಹಾಗೂ ಮಿತಿಮೀರಿದ ಮಕ್ಕಳ ಭಾರವೇ ಈ ದುರ್ಘಟನೆಗೆ ಕಾರಣವೆಂದು ಸಿಸಿಟಿವಿ ದೃಶ್ಯಗಳಿಂದ ತಿಳಿದುಬಂದಿದೆ. ಮೆಡೋನಾ ಮತ್ತು ಟೌನ್ ಮುನ್ಸಿಪಲ್ ಶಾಲೆಯ ಮುದ್ದು ಮಕ್ಕಳು ಗಾಯಾಳುಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಆಟೋಗಳಲ್ಲಿ ಮಕ್ಕಳ ಜೀವದೊಂದಿಗೆ ಆಟವಾಡುವ ಚಾಲಕರ…

Read More

ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ: ಮಂಗಳೂರಿನಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಪ್ರಧಾನ ಮಂತ್ರಿ ನಿವಾಸದ ಬಳಿ ಪ್ರತಿಭಟನೆ ನಡೆಸಿದ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಲೋಕಸಭಾ ಸದಸ್ಯೆ ಪ್ರಿಯಾಂಕಾ ಗಾಂಧಿ ಅವರನ್ನು ಪೊಲೀಸರು ವಶಕ್ಕೆ ಪಡೆದಿರುವುದನ್ನು ವಿರೋಧಿಸಿ ಮಂಗಳೂರಿನ ಲಾಲ್‌ಬಾಗ್‌ನ ನಗರ ಪಾಲಿಕೆ ಕಚೇರಿ ಮುಂಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ನಿಂದ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಕಾಂಗ್ರೆಸ್ ಧುರೀಣ ಪದ್ಮರಾಜ್ ಆರ್ ಪೂಜಾರಿ ಈ ಸಂದರ್ಭದಲ್ಲಿ ಮಾತನಾಡಿದರು. ಇದೇ ವೇಳೆ…

Read More

ಉಡುಪಿ: 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಬಂಧನ

ಉಡುಪಿ: 2002ರಲ್ಲಿ ನಡೆದ ರಸ್ತೆ ಅಪಘಾತ ಪ್ರಕರಣದಲ್ಲಿ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕನನ್ನು ಪಡುಬಿದ್ರಿ ಪೊಲೀಸರು ಮಹಾರಾಷ್ಟ್ರದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 2002ರ ಸೆಪ್ಟೆಂಬರ್ 7ರಂದು ಬೆಳಿಗ್ಗೆ 8.30ರ ಸುಮಾರಿಗೆ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಬಡಾ ಗ್ರಾಮದ ಮೂಳೂರು ಮಸೀದಿ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಹಾರಾಷ್ಟ್ರ ನೋಂದಣಿಯ ಮಿನಿ ಗೂಡ್ಸ್ ಲಾರಿ (MH12FA6993)ಯನ್ನು ಚಾಲಕ ವಿಲಾಸ್ ಶಿಂಧೆ ಅತೀವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ…

Read More

ಕಡಬ ಸಮುದಾಯ ಆರೋಗ್ಯ ಕೇಂದ್ರದ ಅಭಿವೃದ್ಧಿಗೆ ಐದು ಕೋಟಿ ರೂ ಪ್ರಸ್ತಾವನೆ: ಶಾಸಕಿ ಭಾಗೀರಥಿ ಮುರುಳ್ಯ

ಕಡಬ ಸಮುದಾಯ ಆರೋಗ್ಯ ಕೇಂದ್ರವನ್ನು ಸಮಗ್ರ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಐದು ಕೋಟಿ ರೂ ಅನುದಾನಕ್ಕೆ ್ಲ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.ಅವರು ಮಂಗಳವಾರ ಸಂಜೆ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಇಲ್ಲಿನ ಡಯಾಲಿಸಿಸ್ ಕೇಂದ್ರದ ಸಮಸ್ಯೆಯನ್ನು ಪರಿಶೀಲಿಸಿದ ಬಳಿಕ ಪತ್ರಕರ್ತರೊಂದಿಗೆ ಮಾನಾಡಿದರು. ನಮ್ಮ ಜಿಲ್ಲೆಯವರಾದ, ಕಡಬದ ಸಂಬoಧ ಹೊಂದಿರುವ ಯು.ಟಿ ಖಾದರ್ ಅವರು ಆರೋಗ್ಯ ಸಚಿವರಾಗಿರುವುದರಿಂದ ಮತ್ತು ಕಡಬದ ಬಗ್ಗೆ ಅವರಿಗೆ ವಿಶೇಷ ಕಾಳಜಿ ಇರುವುದರಿಂದ…

Read More

ಹಿರಿಯ ದಲಿತ ಮುಖಂಡ ಎಂ. ದೇವದಾಸ್ ಬಜ್ಪೆ ಅವರ ನಿಧನಕ್ಕೆ ಎಸ್ಡಿಟಿಯು ರಾಜ್ಯಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ ಸಂತಾಪ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಡಿ.ಎಸ್.ಎಸ್.)ಯ ಸಂಸ್ಥಾಪಕರಲ್ಲಿ ಪ್ರಮುಖರೂ, ರಾಜ್ಯ ಸಂಘಟನಾ ಸಂಚಾಲಕರಾಗಿದ್ದ ಹಾಗೂ ಹಿರಿಯ ಹೋರಾಟಗಾರರಾದ ಎಂ. ದೇವದಾಸ್ ಅವರ ನಿಧನದ ಸುದ್ದಿ ತೀವ್ರ ದುಃಖವನ್ನುಂಟು ಮಾಡಿದೆ ಎಂದು ಎಸ್ಡಿಟಿಯು ಕರ್ನಾಟಕ ರಾಜ್ಯಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ ಅವರು ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ನ್ಯಾಯ, ಸಮಾನತೆ ಹಾಗೂ ಶೋಷಿತ ಸಮುದಾಯಗಳ ಹಕ್ಕುಗಳಿಗಾಗಿ ಎಂ. ದೇವದಾಸ್ ಅವರು ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು. ಕರ್ನಾಟಕ ದಲಿತ ಸಂಘರ್ಷ ಸಮಿತಿಯನ್ನು ಬಲಿಷ್ಠ ಜನಾಂದೋಲನವಾಗಿ ರೂಪಿಸುವಲ್ಲಿ ಅವರು ಮಹತ್ವದ ಪಾತ್ರವಹಿಸಿದ್ದರು. ಅಲ್ಲದೆ ಬಜ್ಪೆ…

Read More

ಹೊಸಂಗಡಿಯ ಅಮ್ಮ ಲಾಟರಿ ಏಜೆನ್ಸಿಗೆ ಮತ್ತೆ ಕೋಟಿ ಅದೃಷ್ಟ

ಮಂಜೇಶ್ವರ: ಜುಲೈ 21ರಂದು ನಡೆದ ಸ್ತ್ರೀಶಕ್ತಿ ಲಾಟರಿಯ ಡ್ರಾದಲ್ಲಿ ಮೊದಲ ಬಹುಮಾನವಾದ ₹1 ಕೋಟಿ ಕಣ್ಣೂರು ಜಿಲ್ಲೆಯ ಪಯ್ಯನ್ ಲಾಟರಿ ಏಜೆನ್ಸಿ ಮೂಲಕ ಮಾರಾಟವಾದ ಟಿಕೆಟ್‌ಗೆ ದೊರೆತಿದೆ.SZ 204699 ಸಂಖ್ಯೆಯ ಟಿಕೆಟ್‌ಗೆ ಅದೃಷ್ಟ ಒಲಿದಿದೆ. ಈ ಟಿಕೆಟ್ ನ್ನು ಪಯ್ಯನ್ ಲಾಟರಿಯ ಸಬ್ ಏಜೆಂಟ್ ಆಗಿರುವ ಹೊಸಂಗಡಿಯ ಅಮ್ಮ ಲಾಟರಿ ಏಜೆನ್ಸಿ ಮೂಲಕ ಮಾರಾಟ ಮಾಡಲಾಗಿತ್ತು. ಬಳಿಕ ಅದನ್ನು ಮಜೀರ್ಪಳ್ಳ ಅರಸು ಲಾಟರಿ ಮಾರಾಟಗಾರರಿಗೆ ಹಸ್ತಾಂತರಿಸಲಾಗಿದ್ದು, ಅಲ್ಲಿಂದಲೇ ಅದೃಷ್ಟಶಾಲಿಯ ಕೈ ಸೇರಿದೆ.2026ರ ಮೇ 19ರಂದು ನಡೆದ ಸ್ತ್ರೀಶಕ್ತಿ…

Read More

ಕೊಡ್ಲಮೊಗರಿನಲ್ಲಿ ವಿ. ಎಸ್. ಅಚ್ಚುತಾನಂದನ್ ಪ್ರಥಮ ಸಂಸ್ಮರಣಾ ದಿನಾಚರಣೆ

ಕಾಂ. ವಿ. ಎಸ್. ಅಚ್ಚುತಾನಂದನ್ ಅವರ ಪ್ರಥಮ ಸಂಸ್ಮರಣಾ ದಿನಾಚರಣೆಯ ಅಂಗವಾಗಿ ಕೊಡ್ಲಮೊಗರುದಲ್ಲಿ ಪಕ್ಷದ ಹಿರಿಯ ನಾಯಕರಿಗೆ ಗೌರವಾರ್ಪಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಕಾಂ. ಸಿ. ಎಚ್. ಕುಂಜ್ಞಬು ಉದ್ಘಾಟಿಸಿದರು. ಕಾಂ. ಸಿ. ಜಿ. ಮ್ಯಾಥ್ಯು ಅಧ್ಯಕ್ಷತೆ ವಹಿಸಿದ್ದರು. ಕಾಂ. ಕೆ. ಆರ್. ಜಯಾನಂದ ಸೇರಿದಂತೆ ಪಕ್ಷದ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿ, ವಿ. ಎಸ್. ಅಚ್ಚುತಾನಂದನ್ ಅವರ ಆದರ್ಶಗಳು ಮತ್ತು ಜನಪರ ಸೇವೆಯನ್ನು ಸ್ಮರಿಸಿದರು. ಈ ಸಂದರ್ಭದಲ್ಲಿ ಪಕ್ಷದ…

Read More

ದೇರಂಬಳ ಸೇತುವೆ ಪುನರ್ ನಿರ್ಮಾಣಕ್ಕೆ ಆಗ್ರಹ; ಜಿಲ್ಲಾಧಿಕಾರಿಗೆ ಎಂ.ಎಲ್. ಅಶ್ವಿನಿ ಮನವಿ

ಮಂಗಲ್ಪಾಡಿ ಮತ್ತು ಮೀಂಜ ಪಂಚಾಯತುಗಳನ್ನು ಸಂಪರ್ಕಿಸುವ ದೇರಂಬಳ ಕಾಲ್ನಡಿಗೆಯ ಕಾಂಕ್ರೀಟ್ ಸೇತುವೆ ಸಂಪೂರ್ಣ ಶಿಥಿಲಗೊಂಡು ಕುಸಿದಿದ್ದು, ಹೊಸ ಸೇತುವೆ ನಿರ್ಮಾಣವಾಗದ ಕಾರಣ ಸ್ಥಳೀಯರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಈ ಬಗ್ಗೆ ಬಿಜೆಪಿ ಕಾಸರಗೋಡು ಜಿಲ್ಲಾಧ್ಯಕ್ಷೆ ಎಂ. ಎಲ್. ಅಶ್ವಿನಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಜನರ ಸಂಚಾರಕ್ಕೆ ಮೂಲಭೂತ ಸೌಲಭ್ಯ ಒದಗಿಸದಿರುವುದು ನಾಗರಿಕರ ಮೇಲಿನ ಅನ್ಯಾಯ ಹಾಗೂ ಜನದ್ರೋಹ ಎಂದು ಆರೋಪಿಸಿದ್ದಾರೆ. ಪ್ರತಿದಿನ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಮಹಿಳೆಯರು ಮತ್ತು ಸಾರ್ವಜನಿಕರು ಬಳಸುವ ಈ ಮಾರ್ಗದ ಸೇತುವೆ ಕುಸಿದ ಪರಿಣಾಮ,…

Read More

₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: ಕೆಲಸಗಾರನ ಬಂಧನ

ಮಂಗಳೂರು: ಮಂಗಳೂರು ನಗರದ ಮೇರಿಹಿಲ್ ಬಾಂದೋಟ್ಟು ಎಂಬಲ್ಲಿ ಮನೆಯೊಂದರ ಹಿಂಭಾಗದ ಕೊಠಡಿಯ ಛಾವಣಿ ಬದಲಾವಣೆ ಹಾಗೂ ನಂತರ ಹಾಲ್ನಲ್ಲಿ ಫಾಲ್ಸ್ ಸೀಲಿಂಗ್ ಕಾಮಗಾರಿಯನ್ನು ಮೇಸ್ತ್ರಿ ಹಾಗೂ ಸಹಾಯಕ ಕೆಲಸದಾರರ ಮೂಲಕ ದಿನಾಂಕ 06-07-2026 ರಿಂದ 6-07-2026 ನಡೆಸಿದ್ದರು. ಆ ಅವಧಿಯಲ್ಲಿ ಮನೆಯ ಕೋಟೆಯ ಟೇಬಲ್ ಡ್ರಾವರ್ನಲ್ಲಿ ಸಣ್ಣ ಪರ್ಸ್ನಲ್ಲಿ ಇಟ್ಟುಕೊಂಡಿದ್ದ 20 ಗ್ರಾಂ ತೂಕದ ಚಿನ್ನದ ಕಡಗ, 17 ಗ್ರಾಂ ತೂಕದ ಚಿನ್ನದ ಚೈನ್, 8 ಗ್ರಾಂ ತೂಕದ ಉಂಗುರ, 4 ಗ್ರಾಂ ತೂಕದ ಚಿನ್ನದ ಉಂಗುರ…

Read More

ಸಾರ್ವಜನಿಕ ಆರೋಗ್ಯದ ಮೇಲಿನ ದಾಳಿಯನ್ನು ಹಿಮ್ಮೆಟ್ಟಿಸಿ: ಸಿಪಿಐ(ಎಂ) ಬೋಳಾರ ಶಾಖೆಯಿಂದ ಮಾನವ ಸರಪಳಿ

ಆರೋಗ್ಯ ಕ್ಷೇತ್ರದಲ್ಲಿ ಸರ್ಕಾರ ಅನುಸರಿಸುತ್ತಿರುವ ಖಾಸಗೀಕರಣ ನೀತಿಗಳು ಜನರ ಆರೋಗ್ಯ ಹಕ್ಕಿನ ಮೇಲಿನ ನೇರ ದಾಳಿಯಾಗಿದ್ದು, ಜನರ ತೆರಿಗೆ ಹಣದಿಂದ ನಿರ್ಮಾಣ ಗೊಂಡಿರುವ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಕಾರ್ಪೊರೇಟ್ ಲಾಭಕ್ಕಾಗಿ ದುರ್ಬಲಗೊಳಿಸುವ ಪ್ರಯತ್ನಗಳನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೋಳಾರ ಶಾಖೆಯ ನೇತೃತ್ವದಲ್ಲಿ ಮಂಗಳಾದೇವಿಯ ನಗರ ಆರೋಗ್ಯ ಕೇಂದ್ರದ ಎದುರು 19/07/2026 ರಂದು ನಡೆದ ಮಾನವ ಸರಪಳಿ ಕಾರ್ಕ್ರಮ ಮತ್ತು ಪ್ರತಿಭಟನೆಯಲ್ಲಿ ಆಗ್ರಹಿಸಲಾಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಿಪಿಐ(ಎಂ) ರಾಜ್ಯ ಸಮಿತಿ ಸದಸ್ಯ ಸುನಿಲ್…

Read More
error: Content is protected !!