ಯೆನೆಪೊಯ ಆಸ್ಪತ್ರೆ ಎದುರು ಪಾರ್ಕಿಂಗ್ ಸಮಸ್ಯೆ: ತಕ್ಷಣ ಕ್ರಮಕ್ಕೆ ಸಾರ್ವಜನಿಕರ ಆಗ್ರಹ

ಮಂಗಳೂರು: ನಗರದ ಯೆನೆಪೊಯ ಆಸ್ಪತ್ರೆ ಕಟ್ಟಡದ ಎದುರು ಪಾರ್ಕಿಂಗ್ ಸಮಸ್ಯೆ ತೀವ್ರಗೊಂಡಿದ್ದು, ಸಾರ್ವಜನಿಕರು ಪೊಲೀಸ್ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ತಕ್ಷಣದ ಹಸ್ತಕ್ಷೇಪಕ್ಕೆ ಆಗ್ರಹಿಸಿದ್ದಾರೆ. ಆಸ್ಪತ್ರೆಯ ಎದುರು ವಾಹನ ನಿಲುಗಡೆಗಾಗಿ ಬಳಸಲಾಗುತ್ತಿದ್ದ ಜಾಗದಲ್ಲಿ ಅಂಗಡಿಗಳನ್ನು ನಿರ್ಮಿಸಿ ಬಾಡಿಗೆ ಹಾಗೂ ಮಾರಾಟಕ್ಕೆ ನೀಡಲಾಗಿರುವ ಪರಿಣಾಮ, ಇದೀಗ ವಾಹನಗಳನ್ನು ರಸ್ತೆಯ ಬದಿಯಲ್ಲೇ ನಿಲ್ಲಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯರು ದೂರಿದ್ದಾರೆ. ಇದರ ನಡುವೆ ಪಾರ್ಕಿಂಗ್‌ಗೆ ಮೀಸಲಿಟ್ಟ ಜಾಗ ಮತ್ತು ರಸ್ತೆ ಬದಿಯಲ್ಲಿ ಹಗ್ಗ ಕಟ್ಟಿ ವಾಹನಗಳನ್ನು ಮತ್ತಷ್ಟು ಮಧ್ಯ ರಸ್ತೆಯತ್ತ…

Read More

ನೇತ್ರಾವತಿ ನದಿಯಲ್ಲಿ ಯುವಕನ ಮೃತದೇಹ ಪತ್ತೆ: ಸಾವಿನ ಸುತ್ತ ಅನುಮಾನ

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಸಾವಿನ ಸುತ್ತ ಹಲವು ಅನುಮಾನಗಳು ವ್ಯಕ್ತವಾಗಿರುವ ಘಟನೆ ಬಿಸಿರೋಡು ಸಮೀಪದ ಪಾಣೆಮಂಗಳೂರು ಪ್ರದೇಶದಲ್ಲಿ ನಡೆದಿದೆ. ಗೂಡಿನ ಬಳಿ ನಿವಾಸಿ ಮಹಮ್ಮದ್ ಅವರ ಪುತ್ರ ಇರ್ಫಾನ್ (36) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಸುಮಾರು 9 ಗಂಟೆ ವೇಳೆಗೆ ಪಾಣೆಮಂಗಳೂರು ನೂತನ ಸೇತುವೆಯ ಕೆಳಭಾಗದಲ್ಲಿ ಮೃತದೇಹ ಪತ್ತೆಯಾಗಿದೆ. ಬಂಟ್ವಾಳ ಪುರಸಭೆಯ ಪೌರಕಾರ್ಮಿಕರು ತ್ಯಾಜ್ಯ ನಿರ್ವಹಣೆ ಕಾರ್ಯ ನಡೆಸುತ್ತಿದ್ದ ವೇಳೆ ನದಿಯಲ್ಲಿ ಮೃತದೇಹ ಕಂಡುಬಂದಿದ್ದು, ತಕ್ಷಣ ಬಂಟ್ವಾಳ ನಗರ…

Read More

ಶತಮಾನಗಳ ಬಂಟತನದ ಗರಿಮೆಯ ಪೆರ್ಲ ಬೀಡು: ಭಕ್ತಿ, ಕಲೆ ಹಾಗೂ ದೈವೀ ಪರಂಪರೆಯ ಮಹಾ ಸಂಗಮ

​ತುಳುನಾಡಿನ ಪವಿತ್ರ ಮಣ್ಣಿನಲ್ಲಿ ಬಂಟತನದ ಸೌರಭಕ್ಕೆ, ಶೌರ್ಯ-ತ್ಯಾಗಗಳಿಗೆ ಮತ್ತು ಅತಿಥಿ ಸತ್ಕಾರದ ಉದಾತ್ತ ಪರಂಪರೆಗೆ ತನ್ನದೇ ಆದ ವಿಶಿಷ್ಟ ಹಾಗೂ ಭವ್ಯ ಇತಿಹಾಸವಿದೆ. ಅಂತಹ ಶತಮಾನಗಳ ಇತಿಹಾಸದ ಹೆಜ್ಜೆಯ ಗುರುತುಗಳನ್ನು ಎದೆಯಲ್ಲಿಟ್ಟುಕೊಂಡು, ಬಂಟತನದ ಗತ್ತು ಹಾಗೂ ಗರಿಮೆಯ ಹೆಮ್ಮೆಯ ಮನೆತನವಾಗಿ ಕಂಗೊಳಿಸುತ್ತಿರುವ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಎಣ್ಮಕಜೆ ಗ್ರಾಮದ ‘ಪೆರ್ಲ ಬೀಡು’ ಅಂಗಳದಲ್ಲಿ ಮತ್ತೊಂದು ಸುವರ್ಣ ಅಧ್ಯಾಯ ದಾಖಲಾಗಿದೆ. ​ಇಲ್ಲಿನ ಭವ್ಯ ನೂತನ ಗೃಹಪ್ರವೇಶ ಹಾಗೂ ದೈವಗಳ ಬಿಂಬ ಪ್ರತಿಷ್ಠಾ ಕಲಶಾಭಿಷೇಕ ಮಹೋತ್ಸವವು ಕೇವಲ ಒಂದು…

Read More

ಮೇ 24ರಂದು ಕದ್ರಿ ಪಾರ್ಕ್‌ನಲ್ಲಿ ‘ಫಂಟೋಪಿಯಾ’ ಮೆಗಾ ಮನರಂಜನಾ ಉತ್ಸವ

ಮಂಗಳೂರು: ಯುವಜನತೆ ಹಾಗೂ ಕುಟುಂಬಗಳಿಗಾಗಿ ವಿಶೇಷವಾಗಿ ಆಯೋಜಿಸಲಾಗಿರುವ “ಫಂಟೋಪಿಯಾ – ಮೆಗಾ ಮನರಂಜನಾ ಉತ್ಸವ 2026” ಕಾರ್ಯಕ್ರಮವು ಮೇ 24ರಂದು ನಗರದ ಕದ್ರಿ ಪಾರ್ಕ್‌ನಲ್ಲಿ ಅದ್ದೂರಿಯಾಗಿ ನಡೆಯಲಿದೆ ಎಂದು ಪ್ರೆಸಿಡೆನ್ಸಿ ಪಿಯು ಕಾಲೇಜಿನ ಪ್ರಾಂಶುಪಾಲರಾದ ರಾಘವೇಂದ್ರ ಶೆಣೈ ತಿಳಿಸಿದರು. ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾರ್ಯಕ್ರಮವು ಸಂಜೆ 4ರಿಂದ ರಾತ್ರಿ 8ರವರೆಗೆ ನಡೆಯಲಿದೆ . ಈ ಸಮಾರಂಭಕ್ಕೆ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದರು . ಗೌರವ ಅತಿಥಿಗಳಾಗಿ…

Read More

ಕೇರಳ ವಿಧಾನಸಭೆಯಲ್ಲಿ ಕನ್ನಡದಲ್ಲಿ ಪ್ರಮಾಣವಚನ : ಶಾಸಕ ಅಶ್ರಫ್‌ಗೆ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಜಾಗೃತಿ ಸಮಿತಿಯಿಂದ ಅಭಿನಂದನೆ

ಕೇರಳ ವಿಧಾನಸಭೆಯ ಶಾಸಕರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮಂಜೇಶ್ವರ ಕ್ಷೇತ್ರದ ಯು.ಡಿ.ಫ್ ಶಾಸಕ ಎ.ಕೆ.ಎಂ. ಅಶ್ರಫ್ ಅವರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಜಾಗೃತಿ ಸಮಿತಿಯು ಅವರನ್ನು ಅಭಿನಂದಿಸಿ ಕನ್ನಡಾಭಿಮಾನವನ್ನು ಕೊಂಡಾಡಿತು. ಗಡಿನಾಡಿನ ಕನ್ನಡಿಗರ ಭಾವನೆಗಳಿಗೆ ಗೌರವ ಸೂಚಿಸುವ ರೀತಿಯಲ್ಲಿ ಕನ್ನಡ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿರುವುದು ಕನ್ನಡಿಗರಲ್ಲಿ ಸಂತಸ ಮೂಡಿಸಿದೆ ಎಂದು ಸಮಿತಿಯ ಪದಾಧಿಕಾರಿಗಳ ಪರವಾಗಿ ಹಸೈನಾರ್ ತಾಳಿತ್ತನೂಜಿ ಅಭಿನಂದನೆ ಸಲ್ಲಿಸಿದರು. ಗಡಿನಾಡಿನ ಕನ್ನಡಿಗರ ಹಕ್ಕುಗಳ ರಕ್ಷಣೆಗೆ ಸದಾ…

Read More

ಮೇ 24ರಂದು ಜಿಲ್ಲಾ ಮಟ್ಟದ ಭಜನಾ ಸ್ಪರ್ಧೆ

ಉಡುಪಿ: ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ವತಿಯಿಂದ ಪ್ರಥಮ ಬಾರಿಗೆ ವಿಪ್ರಬಾಂಧವರಿಗಾಗಿ ‘ಜಿಲ್ಲಾಮಟ್ಟದ ಭಜನಾ ಸ್ಪರ್ಧೆ’ಯನ್ನು ಮೇ 24ರಂದು ಗುಂಡಿಬೈಲಿನ ಬ್ರಾಹ್ಮ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ಪರಿಷತ್‌ನ ವಿಷ್ಣುಪ್ರಸಾದ್ ಪಾಡಿಗಾರ್ ತಿಳಿಸಿದ್ದಾರೆ. ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಪರ್ಧೆಯು ಬೆಳಿಗ್ಗೆ 9ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ ಎಂದರು.ಪುರುಷರ ವಿಭಾಗ, ಮಹಿಳೆಯರ ವಿಭಾಗ ಹಾಗೂ ಮಕ್ಕಳ ವಿಭಾಗ ಸೇರಿದಂತೆ ಮೂರು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದ್ದು, ವಿಜೇತರಿಗೆ ನಗದು ಬಹುಮಾನ ಹಾಗೂ ಪಾರಿತೋಷಕ ನೀಡಿ ಗೌರವಿಸಲಾಗುವುದು…

Read More

ಮಂಗಳೂರಿನಲ್ಲಿಯೇ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಯಾಗಬೇಕು : ಶಾಸಕ ವೇದವ್ಯಾಸ್ ಕಾಮತ್

ಮಂಗಳೂರು : ಮಂಗಳೂರಿನಲ್ಲಿಯೇ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಯಾಗಬೇಕು ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.ಕರಾವಳಿ ಭಾಗದ ಜನರಿಗೆ ಶೀಘ್ರಗತಿಯಲ್ಲಿ ನ್ಯಾಯದಾನ ಒದಗಿಸಲು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಯಾಗಬೇಕು ಎಂಬ ಮಂಗಳೂರು ವಕೀಲರ ಸಂಘದ ಹಲವು ವರ್ಷಗಳ ಬೇಡಿಕೆಯು ಎಲ್ಲಾ ರೀತಿಯಿಂದಲೂ ನ್ಯಾಯಯುತವಾಗಿದೆ. ಅಂತೆಯೇ ಇಡೀ ಮಂಗಳೂರಿನ ಜನತೆಯ ಪರವಾಗಿ ನನ್ನ ಆಗ್ರಹವೂ ಅದೇ ಆಗಿದ್ದು, ಅದರಲ್ಲಿ ಯಾವುದೇ ರಾಜಿಯಿಲ್ಲ ಎಂದು ಕಾಮತ್ ಮಂಗಳೂರಿನಲ್ಲಿ ಇಂದು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು. ಆರಂಭದಿಂದಲೂ…

Read More

ಬಕ್ರೀದ್ ಹಿನ್ನೆಲೆ ಅಕ್ರಮ ಗೋಸಾಗಾಟ ತಡೆಗೆ ವಿಶ್ವಹಿಂದೂ ಪರಿಷತ್ ಆಗ್ರಹ

ಬಕ್ರೀದ್ ಹಬ್ಬ ಸಮೀಪಿಸುತ್ತಿದ್ದು, ಈ ಸಂದರ್ಭದಲ್ಲಿ ಅಕ್ರಮ ಗೋಸಾಗಾಟ ಪ್ರಕ್ರಿಯೆಗಳು ಜಾಸ್ತಿಯಾಗಿ ನಡೆಯುತ್ತಿದ್ದು, ಪೋಲೀಸರು ಇದನ್ನು ತಡೆಯಲು ವಿಶೇಷ ಬಂದೋಬಸ್ತ್ ಏರ್ಪಡಿಸಬೇಕು ಎಂದು ವಿಶ್ವಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಘಟಕ ಆಗ್ರಹಿಸಿದೆ. ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾಧ್ಯಕ್ಷ ಡಾ.ಕೃಷ್ಣಪ್ರಸಾದ್ ಗೋವಂಶದ ಹತ್ಯೆ, ಸಾಗಾಟ ಮತ್ತು ಬಲಿ ಕಟ್ಟುನಿಟ್ಟಾಗಿ ತಡೆಯಬೇಕು ಹಾಗು ಗೋವಂಶದ ಬಲಿ ಕೊಟ್ಟ ಸ್ಥಳವನ್ನು ಮುಟ್ಟುಗೋಲು ಹಾಕುವ ಕಾನೂನನ್ನು ಜಾರಿಗೊಳಿಸಬೇಕೆಂದು ಆಗ್ರಹಿಸಿದ ಅವರು ಬಕ್ರಿದ್ ಹಬ್ಬ ಸಮೀಪಿಸುವ ಹಿನ್ನಲೆಯಲ್ಲಿ ಹೆಚ್ಚಿನ…

Read More

ಮಂಗಳೂರಿನಲ್ಲಿ ಧರೆ ಕುಸಿತ; ವ್ಯಕ್ತಿ ದುರ್ಮರಣ

ಮಂಗಳೂರು :ಧರೆ ಕುಸಿದು ಮಣ್ಣಿನಡಿ ಸಿಲುಕಿದ ವ್ಯಕ್ತಿ ಮೃತಪಟ್ಟಿದ್ದಾರೆ.ಕುಂಟಿಕಾನ ಬಳಿಯ ಲೋಹಿತ್ ನಗರದಲ್ಲಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಗುರುವಾರ (ಮೇ 21) ನಡೆದಿದೆ.ಉರ್ವ ಅಶೋಕನಗರ ನಿವಾಸಿ ಆಂಟನಿ ಮಸ್ಕರೇನ್ಹಸ್ (65) ಮೃತರು. ಸ್ಥಳಕ್ಕೆ ಧಾವಿಸಿದ ಕದ್ರಿ ಅಗ್ನಿಶಾಮಕ ಠಾಣೆ ಸಿಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿದರಾದರೂ ಅವರನ್ನು ಉಳಿಸಲಾಗಲಿಲ್ಲ. ಗುರುವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಮನೆಯೊಂದರ ಹಿಂಭಾಗದಲ್ಲಿ ಅವರಣ ಗೋಡೆ ನಿರ್ಮಾಣಕ್ಕೆ ಅಳತೆ ಮಾಡುತ್ತಿದ್ದಾಗ ಧರೆ ಜರಿದು ಅವಘಡ…

Read More

ಮೇ.26ಕ್ಕೆ ಹಕ್ಕುಪತ್ರ ವಿತರಣೆ: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಪುತ್ತೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಪುಣಚ ಗ್ರಾಮದ ಪರಿಶಿಷ್ಟ ಪಂಗಡದ ಮೂರು ಕುಟುಂಬಗಳಿಗೆ ಹಕ್ಕುಪತ್ರಕ್ಕಾಗಿ ನಾಲ್ಕು ದಿನಗಳಿಂದ ಬಂಟ್ವಾಳ ಮಿನಿವಿಧಾನ ಸೌಧದ ಕಚೇರಿಯ ಮುಂಭಾಗದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ನೇತ್ರತ್ವದಲ್ಲಿ ಮಾತುಕತೆ ನಡೆಸಿ ಕೊನೆಗೊಳಿಸಲಾಯಿತು. ಮೇ. 26 ರಂದು ಪೆರ್ನೆಯ ಗ್ರಾ.ಪಂ.ನಲ್ಲಿ ಮೂರು ಕುಟುಂಬಗಳಿಗೆ ಹಕ್ಕುಪತ್ರ ವಿತರಿಸುವ ಭರವಸೆಯನ್ನು ತಹಶಿಲ್ದಾರ್ ಮಂಜುನಾಥ್ ಅವರು ಬಂಟ್ವಾಳ ಶಾಸಕರಿಗೆ ಭರವಸೆಯನ್ನು ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನಾ ನಿರತ ಕುಟುಂಬಗಳು ಇವರ ಮಾತಿಗೆ ಗೌರವ ನೀಡಿ…

Read More
error: Content is protected !!