ಸಹ್ಯಾದ್ರಿ ಕಾಲೇಜಿನಲ್ಲಿ ಎಐ-ರೊಬೊಟಿಕ್ಸ್ ಲ್ಯಾಬ್ ಹಾಗೂ ಸಮಗ್ರ ಕೈಗಾರಿಕಾ ಕಾರ್ಯಕ್ಷೇತ್ರ ಉದ್ಘಾಟನೆ
ಮಂಗಳೂರು: ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಆಂಡ್ ಮ್ಯಾನೇಜ್‌ಮೆಂಟ್‌ನಲ್ಲಿ ಎಂಫಸಿಸ್ ಫೌಂಡೇಶನ್ ಸಹಯೋಗದೊಂದಿಗೆ ಮೇ 22ರಂದು “ಎಂಫಸಿಸ್ ಎಐ ಮತ್ತು ರೊಬೊಟಿಕ್ಸ್ ಲ್ಯಾಬ್” ಹಾಗೂ ಮೇ 23ರಂದು “ಸಮಗ್ರ ಕೈಗಾರಿಕಾ ಕಾರ್ಯಕ್ಷೇತ್ರ” ಉದ್ಘಾಟನಾ ಕಾರ್ಯಕ್ರಮಗಳು ನಡೆಯಲಿವೆ ಎಂದು ಕಾಲೇಜಿನ ಪ್ರಾಂಶುಪಾಲ ಎಸ್.ಎಸ್. ಇಂಜನಗೇರಿ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮೇ 22ರಂದು ಬೆಳಗ್ಗೆ 10 ಗಂಟೆಗೆ ನಡೆಯುವ ಎಂಫಸಿಸ್ ಎಐ ಮತ್ತು ರೊಬೊಟಿಕ್ಸ್ ಲ್ಯಾಬ್ ಉದ್ಘಾಟನೆಯನ್ನು ಉನ್ನತ ಶಿಕ್ಷಣ ಸಚಿವ…
