ಮಂಗಳೂರಿನಲ್ಲಿ ಹಿಜಾಬ್ ನಿಷೇಧಕ್ಕೆ ಆಗ್ರಹ:ಶಿವಸೇನೆ–ಹಿಂದೂ ಸಂಘಟನೆಗಳಿಂದ ಸರ್ಕಾರಕ್ಕೆ ಮನವಿ
ಮಂಗಳೂರು: ಹಿಜಾಬ್ ನಿಷೇಧವನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಶಿವಸೇನೆ ಹಾಗೂ ಸನಾತನ ಹಿಂದೂ ಸಂಘಟನೆಗಳ ಒಕ್ಕೂಟವು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಸರ್ಕಾರಕ್ಕೆ ಮನವಿ ಸಲ್ಲಿಸಿತು. ಸಂಘಟನೆಗಳ ಪ್ರತಿನಿಧಿಗಳು ಕರ್ನಾಟಕ ಗೃಹ ಸಚಿವರಿಗೆ ಉದ್ದೇಶಿಸಿದ ಮನವಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಸಲ್ಲಿಸಿದರು. ಹಿಜಾಬ್ ನಿಷೇಧವನ್ನು ಕಠಿಣವಾಗಿ ಜಾರಿಗೆ ತರಬೇಕು ಹಾಗೂ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ನಡೆಯುವ ಗೋಹತ್ಯೆಗೆ ಕಡಿವಾಣ ಹಾಕಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಈ ವೇಳೆ ಶಿವಸೇನೆ ಮುಖಂಡರಾದ ಆನಂದ್ ಶೆಟ್ಟಿ ಅಡ್ಯಾರ್, ಗಂಗಾಧರ್ ಕುಲ್ಕರ್ಣಿ…
