Headlines

ಪಿಲಿಕುಳದಲ್ಲಿ ಸೆ.3–4ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಮಹೋತ್ಸವ

ಮಂಗಳೂರು: ಶ್ರೀಲ ಪ್ರಭುಪಾದರ ಇಸ್ಕಾನ್ ಗೋವರ್ಧನ ಹಿಲ್ಸ್ ಮಂಗಳೂರು, ಶ್ರೀ ಶ್ರೀ ಕೃಷ್ಣ ಬಲರಾಮ ಮಂದಿರ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಭಾಗಿತ್ವದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಮಹೋತ್ಸವ-2026 ಸೆಪ್ಟೆಂಬರ್ 3 ಮತ್ತು 4ರಂದು ಪಿಲಿಕುಳದ ಸೌಟ್ ಭವನದಲ್ಲಿ ನಡೆಯಲಿದೆ. ಎರಡು ದಿನಗಳ ಕಾಲ ನಡೆಯುವ ಈ ವೈಭವದ ಧಾರ್ಮಿಕ ಮತ್ತು ಸಾಂಸ್ಕೃತಿಕ ಮಹೋತ್ಸವದಲ್ಲಿ ಶ್ರೀ ಶ್ರೀ ಕೃಷ್ಣ ಬಲರಾಮರ ಮಂಗಳಾರತಿ, ಶೃಂಗಾರಾರತಿ, ಪುಷ್ಪಾಂಜಲಿ ಸೇವೆ, ತೊಟ್ಟಿಲು ಸೇವೆ, ಅಭಿಷೇಕ, ಹೋಮ, ಮಹಾಮಂಗಳಾರತಿ ಸೇರಿದಂತೆ ವಿವಿಧ ಧಾರ್ಮಿಕ…

Read More

ಸೆ.6ರಂದು ಮೂಡುಬಿದಿರೆಯಲ್ಲಿ ಶ್ರೀ ಲಕ್ಷ್ಮಣಾನಂದ ಸಹಕಾರ ಸಂಘದ 7ನೇ ಶಾಖೆ ಉದ್ಘಾಟನೆ 29 ವರ್ಷಗಳ ಯಶಸ್ವಿ ಪಯಣ; ₹500 ಕೋಟಿ ವಹಿವಾಟಿನತ್ತ ಸಂಘದ ಹೆಜ್ಜೆ

ಮಂಗಳೂರು: ರಾಮಕ್ಷತ್ರಿಯ ಸಮಾಜ ಬಾಂಧವರು ಸೇರಿ 1997ರಲ್ಲಿ ಸ್ಥಾಪಿಸಿದ ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ (ನಿ.) ಸಹಕಾರ ಕ್ಷೇತ್ರದಲ್ಲಿ ಯಶಸ್ವಿ ಪಯಣ ಮುಂದುವರಿಸುತ್ತಿದ್ದು, ಸಂಘದ 7ನೇ ನೂತನ ಶಾಖೆ ಸೆಪ್ಟೆಂಬರ್ 6ರಂದು ಮೂಡುಬಿದಿರೆಯಲ್ಲಿ ಉದ್ಘಾಟನೆಯಾಗಲಿದೆ. ಸುಮಾರು 29 ವರ್ಷಗಳ ಯಶಸ್ವಿ ಪಯಣ ಪೂರ್ಣಗೊಳಿಸಿರುವ ಸಂಘವು ಪ್ರಸ್ತುತ ಸುಮಾರು ₹500 ಕೋಟಿ ವಹಿವಾಟಿನ ಸಮೀಪದಲ್ಲಿದೆ. ಮೂಡುಬಿದಿರೆಯ ಸರ್ಕಾರಿ ಆಸ್ಪತ್ರೆ ರಸ್ತೆಯ ಪ್ರಭು ಕಾಂಪ್ಲೆಕ್ಸ್‌ನ ಮೊದಲ ಮಹಡಿಯಲ್ಲಿ ನೂತನ ಶಾಖೆ ಕಾರ್ಯಾರಂಭಗೊಳ್ಳಲಿದ್ದು, ಸೆಪ್ಟೆಂಬರ್ 6ರಂದು ಬೆಳಿಗ್ಗೆ 10.30ಕ್ಕೆ ಉದ್ಘಾಟನಾ…

Read More

“ಮರೆಯುತ್ತಿರುವವರನ್ನು ನಾವು ನೆನಪಿಸಿಕೊಳ್ಳೋಣ”; ಕದ್ರಿ ಪಾರ್ಕ್‌ನಲ್ಲಿ ಜಾಗೃತಿ ಕಾರ್ಯಕ್ರಮ

ಮಂಗಳೂರು: ವಯೋವೃದ್ಧರ ಕಲ್ಯಾಣಕ್ಕಾಗಿ ಕಾರ್ಯನಿರ್ವಹಿಸುತ್ತಿರುವ ಪೀಪಲ್ಸ್ ಅಸೋಸಿಯೇಷನ್ ಫಾರ್ ಜೆರಿಯಾಟ್ರಿಕ್ ಎಂಪವರ್‌ಮೆಂಟ್ (PAGE) ವತಿಯಿಂದ ವಿಶ್ವ ಅಲ್ಝೈಮರ್ಸ್ ತಿಂಗಳ ಆಚರಣೆಗೆ ಸೆಪ್ಟೆಂಬರ್ 1ರಂದು ಚಾಲನೆ ನೀಡಲಾಗುವುದು. ಬೆಳಗ್ಗೆ 7 ಗಂಟೆಯಿಂದ 10.30ರವರೆಗೆ ನಗರದ ಕದ್ರಿ ಪಾರ್ಕ್‌ನಲ್ಲಿ ಕಾರ್ಯಕ್ರಮ ನಡೆಯಲಿದ್ದು, “ಮರೆಯುತ್ತಿರುವವರನ್ನು ನಾವು ನೆನಪಿಸಿಕೊಳ್ಳೋಣ” ಎಂಬ ಸಂದೇಶದೊಂದಿಗೆ ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು PAGE ಅಧ್ಯಕ್ಷ ಡಾ. ಸಿ.ವಿ. ರಘುವೀರ್ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾಗತಿಕವಾಗಿ ಡಿಮೆನ್ಷಿಯಾ ಸಮಸ್ಯೆ ತೀವ್ರವಾಗಿ ಹೆಚ್ಚುತ್ತಿದ್ದು, ಭಾರತದಲ್ಲೂ…

Read More

ಪಿಂಚಣಿ ಪ್ರಸ್ತಾವನೆಗೆ ಕ್ರಮವಿಲ್ಲ; ಅಧಿಕಾರಿಯ ವಿರುದ್ಧ ಲೋಕಾಯುಕ್ತ ಮೆಟ್ಟಿಲೇರಿದ ವಿಧವೆ

ಮಂಗಳೂರು:ಪಿಂಚಣಿ ಮಂಜೂರಾತಿಗೆ ಸಂಬಂಧಿಸಿ ಕರ್ತವ್ಯ ನಿರ್ಲಕ್ಷ ತೋರಲಾಗಿದೆ ಎಂದಾರೋಪಿಸಿ ಮಂಗಳೂರು ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕರ ವಿರುದ್ದ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. ಬಂಟ್ವಾಳದ ಎಸ್.ವಿ.ಎಸ್. ಕಾಲೇಜಿನಲ್ಲಿ ಅನುದಾನಿತ ಹುದ್ದೆಯಲ್ಲಿ ಪರಿಚಾರಕರಾಗಿ ಕೆಲಸ ಮಾಡುತ್ತಿದ್ದ ಕಾಂತಪ್ಪ ಅವರ ಮರಣಾನಂತರದ ಕುಟುಂಬ ಪಿಂಚಣಿ ಮತ್ತು ಇತರ ಆರ್ಥಿಕ ಸೌಲಭ್ಯಗಳನ್ನು ಅವರ ಪತ್ನಿಗೆ ನಿರಾಕರಿಸಲಾಗಿತ್ತು. ಈ ಬಗ್ಗೆ ಮೃತ ಕಾಂತಪ್ಪ ಅವರ ಪತ್ನಿ ಗಿರಿಜಾ ಅವರು ಕಾಲೇಜು ಶಿಕ್ಷಣ ಇಲಾಖೆಯ ಉನ್ನತಾಧಿಕಾರಿಗಳಿಗೆ ದೂರು ನೀಡಿದ್ದರು. ಕಾಲೇಜು ಶಿಕ್ಷಣ ಆಯುಕ್ತರ ಕಚೇರಿಯು…

Read More

ಪುತ್ತೂರಿನಲ್ಲಿ ವಿಹಿಂಪ, ಬಜರಂಗದಳ, ಹಿಂದು ಜಾಗರಣ ವೇದಿಕೆ ‘ಚಲೋ

ಪುತ್ತೂರು: ಕೆಲ ದಿನಗಳ ಹಿಂದೆ ಪುತ್ತೂರಿನ ದರ್ಬೆಯ ಅಂಗಡಿಯೊಂದರಲ್ಲಿ ನಡೆದ ಘಟನೆ ಖಂಡಿಸಿ ಹಾಗೂ ಐದು ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್‌, ಬಜರಂಗದಳ ಹಾಗೂ ಹಿಂದು ಜಾಗರಣ ವೇದಿಕೆ ಆಶ್ರಯದಲ್ಲಿ ಆ.31 ರಂದು ಪುತ್ತೂರು ಚಲೋ ಜನಜಾಗೃತಿ ಆಂದೋಲನ ನಡೆಯಿತು. ದರ್ಬೆಯ ಪ್ರವಾಸಿ ಮಂದಿರದ ಪಕ್ಕದಿಂದ ಮೆರವಣಿಗೆ ಆರಂಭವಾಗಿ, ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು. ಅಂಜನಾ ಪೈ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಿ…

Read More

ರಾಷ್ಟ್ರೀಯ ಮಟ್ಟದ ಅಂತರ್‌ಕಾಲೇಜು ಉತ್ಸವ ‘AIKYAM-2026’

ಮಂಗಳೂರು: ಸಂತ ಆಗ್ನೆಸ್ ಕಾಲೇಜು (ಸ್ವಾಯತ್ತ) ಪದವಿ ವಿಭಾಗದ ವತಿಯಿಂದ ಪದವಿಪೂರ್ವ ಹಾಗೂ ಪದವಿ ಕಾಲೇಜು ವಿದ್ಯಾರ್ಥಿಗಳಿಗಾಗಿ ಒಂದು ದಿನದ ರಾಷ್ಟ್ರೀಯ ಮಟ್ಟದ ಅಂತರ್‌ಕಾಲೇಜು ಉತ್ಸವ ‘AIKYAM-2026’ ಸೆಪ್ಟೆಂಬರ್ 17ರಂದು ನಡೆಯಲಿದೆ. ಉತ್ಸವದಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ, ಸೃಜನಶೀಲತೆ ಹಾಗೂ ವೃತ್ತಿಪರ ಕೌಶಲ್ಯಗಳನ್ನು ಪ್ರದರ್ಶಿಸಲು ಅವಕಾಶ ಕಲ್ಪಿಸಲಾಗಿದ್ದು, ಸಾಂಸ್ಕೃತಿಕ, ಶೈಕ್ಷಣಿಕ ಮತ್ತು ಕೌಶಲ್ಯಾಧಾರಿತ ವಿವಿಧ ಸ್ಪರ್ಧೆಗಳು ಆಯೋಜಿಸಲಾಗಿವೆ. ಸ್ಪರ್ಧೆಯಲ್ಲಿ ಭಾಗವಹಿಸಲು ನೋಂದಾಯಿಸಿಕೊಳ್ಳಲು ಸೆಪ್ಟೆಂಬರ್ 10 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ aikyam2627@gmail.com ಸಂಪರ್ಕಿಸುವಂತೆ ಉತ್ಸವದ…

Read More

ಉಡುಪಿಯಲ್ಲಿ ಅಷ್ಟಮಂಗಲ ಪ್ರಶ್ನೆಯಲ್ಲಿ ಕಾಳಸರ್ಪ ಯೋಗ ಪ್ರಸ್ತಾಪ: ದೇಶ-ಲೋಕಕ್ಕೆ ಅನಾಹುತದ ಭೀತಿ! |

ಉಡುಪಿ: ಶ್ರೀಕೃಷ್ಣ ಮಠದಲ್ಲಿ ಇತ್ತೀಚೆಗೆ ನಡೆದ ಅಷ್ಟಮಂಗಲ ಪ್ರಶ್ನೆಯಲ್ಲಿ ಕಾಳಸರ್ಪ ಯೋಗದ ಪರಿಣಾಮದಿಂದ ಜಗತ್ತಿನಲ್ಲಿ ವಿವಿಧ ಅನಾಹುತಗಳು ಸಂಭವಿಸುವ ಸಾಧ್ಯತೆಗಳ ಬಗ್ಗೆ ಪ್ರಸ್ತಾಪವಾಗಿದೆ ಎಂದು ಮಠದ ಪ್ರಮುಖರು ತಿಳಿಸಿದ್ದಾರೆ.ಮಠದ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸುವ ಉದ್ದೇಶದಿಂದ ಅಷ್ಟಮಂಗಲ ಪ್ರಶ್ನೆ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ರಾಹು ಮತ್ತು ಕೇತುಗಳ ಮಧ್ಯೆ ಉಳಿದ ಎಲ್ಲ ಗ್ರಹಗಳು ಬರುವ ಕಾಳಸರ್ಪ ಯೋಗದ ಕುರಿತು ಚರ್ಚೆಯಾಗಿದ್ದು, ಇದರ ಪರಿಣಾಮ ಭೂಮಂಡಲದ ಮೇಲೆ ಇರಬಹುದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ ಎನ್ನಲಾಗಿದೆ. ಪ್ರಾಕೃತಿಕ ವಿಕೋಪಗಳು, ರಾಜಕೀಯ ಅಸ್ಥಿರತೆ,…

Read More

ಅಷ್ಟಮಿಗೆ ಸಮುದ್ರ ಜೀವಿಯ ವೇಷದಲ್ಲಿ ರವಿ ಕಟಪಾಡಿ; ಮಕ್ಕಳ ಕ್ಯಾನ್ಸರ್ ಚಿಕಿತ್ಸೆಗೆ ನೆರವು

ಉಡುಪಿ: ಕೃಷ್ಣ ಜನ್ಮಾಷ್ಟಮಿ ಸಂದರ್ಭದಲ್ಲಿ ಕಳೆದ 14 ವರ್ಷಗಳಿಂದ ವಿವಿಧ ವೇಷ ಧರಿಸಿ ಹಣ ಸಂಗ್ರಹಿಸಿ ಅನಾರೋಗ್ಯ ಪೀಡಿತ ಮಕ್ಕಳ ಚಿಕಿತ್ಸೆಗೆ ನೆರವಾಗುತ್ತಿರುವ ಸಮಾಜಸೇವಕ ರವಿ ಕಟಪಾಡಿ ಹಾಗೂ ಅವರ ತಂಡ, ಈ ಬಾರಿ ಸಂಗ್ರಹವಾಗುವ ಹಣವನ್ನು ಕ್ಯಾನ್ಸರ್‌ನಿಂದ ಬಳಲುತ್ತಿರುವ ಪುಟಾಣಿ ಮಕ್ಕಳ ಚಿಕಿತ್ಸೆಗೆ ವಿನಿಯೋಗಿಸಲು ನಿರ್ಧರಿಸಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ರವಿ ಕಟಪಾಡಿ, ‘ಕಳೆದ 10 ವರ್ಷಗಳಲ್ಲಿ ನಮ್ಮ ತಂಡವು ಕೃಷ್ಣ ಜನ್ಮಾಷ್ಟಮಿ ಸಂದರ್ಭದಲ್ಲಿ ವೇಷ ಧರಿಸಿ ಸಂಗ್ರಹಿಸಿದ ಒಟ್ಟು ₹1.85 ಕೋಟಿ…

Read More

ಮೂಡ ಮಾಸ್ಟರ್ ಪ್ಲಾನ್‌ಗೆ ಮೊದಲ ಆದ್ಯತೆ: ಸಂತೋಷ್ ಕುಮಾರ್ ಶೆಟ್ಟಿ

ಮಂಗಳೂರು: ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಮೂಡ) ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿರುವ ಸಂತೋಷ್ ಕುಮಾರ್ ಶೆಟ್ಟಿ, ಬಹುಕಾಲದಿಂದ ನೆನೆಗುದಿಗೆ ಬಿದ್ದಿರುವ ಮೂಡ ಮಾಸ್ಟರ್ ಪ್ಲಾನ್‌ಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಹೇಳಿದ್ದಾರೆ. ಮೂಡ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಸ್ಟರ್ ಪ್ಲಾನ್‌ಗೆ ಸಂಬಂಧಿಸಿದ ಸಣ್ಣಪುಟ್ಟ ತೊಡಕುಗಳನ್ನು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಂಬಂಧಪಟ್ಟವರೊಂದಿಗೆ ಚರ್ಚಿಸಿ ಶೀಘ್ರವೇ ಅಂತಿಮಗೊಳಿಸುವ ಪ್ರಯತ್ನ ನಡೆಸಲಾಗುವುದು ಎಂದರು. ಮೂಡವು ಕೇವಲ ನಿವೇಶನ ಹಂಚಿಕೆಗೆ ಸೀಮಿತವಾಗದೆ, ಮಂಗಳೂರಿನ ಸಮಗ್ರ ಅಭಿವೃದ್ಧಿ ಹಾಗೂ…

Read More

ಭಾರತ್‌ ಜೋಡೋ ಯುವ ಸಂಘಟನೆಗೆ ಯುವಕರ ನೋಂದಣಿಗೆ ಕಾಂಗ್ರೆಸ್‌ನಿಂದ ಆಂದೋಲನ ರೂಪದ ಕಾರ್ಯಕ್ರಮ: ಐವನ್‌ ಡಿʼಸೋಜಾ

ಮಂಗಳೂರು: ದಕ್ಷಿಣ ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ವಾರ್ಡ್‌ನಲ್ಲೂ ಭಾರತ್‌ ಜೋಡೋ ಯುವ ಸಂಘಟನೆಯನ್ನು ರಚಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಯುವಕರನ್ನು ನೋಂದಾಯಿಸುವ ನಿಟ್ಟಿನಲ್ಲಿ ಕಾಂಗ್ರೆಸ್‌ ಪಕ್ಷದಿಂದ ಆಂದೋಲನ ರೂಪದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಹಾಗೂ ಕಾಂಗ್ರೆಸ್‌ ಪಕ್ಷದ ಯುವ ಸಂಘಟನೆಯ ಉಸ್ತುವಾರಿ ಐವನ್‌ ಡಿʼಸೋಜಾ ತಿಳಿಸಿದ್ದಾರೆ. ಪ್ರತಿ 10 ಸಾವಿರ ಜನಸಂಖ್ಯೆಗೆ ಒಂದು ಭಾರತ್‌ ಜೋಡೋ ಯುವ ಸಂಘಟನೆಯನ್ನು ರಚಿಸುವ ಮೂಲಕ ಯುವಕರಲ್ಲಿ ಕ್ರೀಡೆ, ಸಾಂಸ್ಕೃತಿಕ, ಸಾಂಪ್ರದಾಯಿಕ ಹಾಗೂ ಸಾಮಾಜಿಕ ಚಟುವಟಿಕೆಗಳಿಗೆ ಉತ್ತೇಜನ…

Read More
error: Content is protected !!