ಕೇರಳ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಪ್ರಮಾಣವಚನ
ತಿರುವನಂತಪುರಂ, ಮೇ 18: ಕೇರಳದ ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನಾಯಕ ವಿ.ಡಿ. ಸತೀಶನ್ ಅವರು ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ತಿರುವನಂತಪುರಂನ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ಆರ್.ವಿ. ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಸತೀಶನ್ ಸೇರಿದಂತೆ 20 ಮಂದಿ ಸಚಿವರಿಗೆ ಹುದ್ದೆ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು. ನೂತನ ಸಚಿವ ಸಂಪುಟದಲ್ಲಿ ಕಾಂಗ್ರೆಸ್ ಪಕ್ಷದ 11 ಮಂದಿ ಶಾಸಕರು ಸ್ಥಾನ ಪಡೆದಿದ್ದು, ಭಾರತೀಯ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಪಕ್ಷದ ಐವರು ಸಚಿವರಾಗಿ ಸೇರ್ಪಡೆಯಾಗಿದ್ದಾರೆ….
