ಮೇ 18ರಂದು ಕೇರಳ ನೂತನ ಸಚಿವ ಸಂಪುಟ ಪ್ರಮಾಣವಚನ; ಸಿಎಂ ಆಗಿ ವಿ.ಡಿ. ಸತೀಶನ್ ಪ್ರಮಾಣವಚನ

ತಿರುವನಂತಪುರ: ಕೇರಳದ ನೂತನ ಸಚಿವ ಸಂಪುಟದ ಪ್ರಮಾಣವಚನ ಸ್ವೀಕಾರ ಸಮಾರಂಭ ಮೇ 18ರಂದು ನಡೆಯಲಿದ್ದು, ಇದೇ ವೇಳೆ ಮುಖ್ಯಮಂತ್ರಿ ಸ್ಥಾನಕ್ಕೆ ವಿ.ಡಿ. ಸತೀಶನ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಿನ್ನೆ ಸಂಜೆ ನಡೆದ ಕಾಂಗ್ರೆಸ್ ವಿಧಾನಸಭಾ ಪಕ್ಷದ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಮೇ 21ರಂದು ವಿಧಾನಸಭೆ ಸಮಾವೇಶಗೊಳ್ಳಲಿದ್ದು, ಆ ಸಂದರ್ಭದಲ್ಲಿ ನೂತನ ಶಾಸಕರು ಸಹ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ತಿರುವನಂತಪುರದ ಸೆಂಟ್ರಲ್ ಕ್ರೀಡಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಲಿದ್ದಾರೆ.ಇದರ ಜೊತೆಗೆ…

Read More

ಉಚಿತ ಬಸ್ ಪ್ರಯಾಣ ಜಾರಿಗೆ ವಿಳಂಬ: ಮಹಿಳೆಯರಿಗೆ ವಂಚನೆ ಎಂದ ಬಿಜೆಪಿ.ಕಾಸರಗೋಡಿನಲ್ಲಿ ಪ್ರತಿಭಟನೆ, ಟಿಕೆಟ್ ರಹಿತ ಪ್ರಯಾಣ ಯತ್ನ

ಕಾಸರಗೋಡು: ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಮಹಿಳೆಯರ ಉಚಿತ ಬಸ್ ಪ್ರಯಾಣ ಯೋಜನೆಯನ್ನು ಮೇ 15ರಿಂದ ಜಾರಿಗೆ ತರದಿರುವುದು ಮಹಿಳಾ ಸಮುದಾಯಕ್ಕೆ ಮಾಡಿದ ವಂಚನೆ ಎಂದು ಎಂ.ಎಲ್. ಅಶ್ವಿನಿ ಆರೋಪಿಸಿದರು. ಭಾರತೀಯ ಜನತಾ ಪಾರ್ಟಿ ಕಾಸರಗೋಡು ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದವರೆಗೆ ಹಮ್ಮಿಕೊಂಡಿದ್ದ ಪ್ರತಿಭಟನಾ ಮೆರವಣಿಗೆ ಹಾಗೂ ‘ಟಿಕೆಟ್ ರಹಿತ ಪ್ರಯಾಣ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೇರಳದೊಂದಿಗೆ ಚುನಾವಣೆ ನಡೆದ ಇತರೆ ನಾಲ್ಕು ರಾಜ್ಯಗಳಲ್ಲಿ ಸರ್ಕಾರ ರಚನೆ ಮತ್ತು ಸಚಿವ ಸಂಪುಟ ಸಭೆಗಳು ಈಗಾಗಲೇ…

Read More

ಮೇ 17ರಿಂದ ಕದ್ರಿ ಉದ್ಯಾನವನದಲ್ಲಿ ರಾಜ್ಯ ಮಟ್ಟದ ಗೇರು ಮೇಳ …! ವೀಕ್ಷಣೆಗೆ ಬರುವ ಸಾರ್ವಜನಿಕರಿಗೆ ಉಚಿತ ಗೇರು ಗಿಡ ….. ?

ಮಂಗಳೂರು:ಕರ್ನಾಟಕ ಗೇರು ಅಭಿವೃದ್ಧಿ ನಿಗಮ ನಿಯಮಿತ ಹಾಗೂ ಕರ್ನಾಟಕ ಅರಣ್ಯ ಇಲಾಖೆ ಸಹಯೋಗದಲ್ಲಿ ‘ಕರ್ನಾಟಕ ಗೇರು ಮೇಳ ಮತ್ತು ಕಾರ್ಯಾಗಾರ-2026’ ಮೇ 17 ಮತ್ತು 18ರಂದು ನಗರದ ಕದ್ರಿ ಉದ್ಯಾನವನದಲ್ಲಿ ನಡೆಯಲಿದ್ದು ಮೇಳ ವೀಕ್ಷಣೆಗೆ ಬಂದ ಅಗತ್ಯ ಇರುವ ಸಾರ್ವಜನಿಕರಿಗೆ ಉಚಿತವಾಗಿ ಗೇರು ಗಿಡ ವಿತರಿಸಲಾಗುದೆಂದು ನಿಗಮದ ಅಧ್ಯಕ್ಷೆ ಮಮತಾ ಡಿ. ಗಟ್ಟಿ ತಿಳಿಸಿದರು. ತಮ್ಮ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 17ರಂದು ಬೆಳಿಗ್ಗೆ 11 ಗಂಟೆಗೆ ಸ್ಪೀಕರ್ ಯು.ಟಿ. ಖಾದರ್ ಗೇರು ಮೇಳವನ್ನು…

Read More

ಮೇ 17ರಿಂದ ವಿಶ್ವ ಕೊಂಕಣಿ ಸಮಾರೋಹ-2026

ವಿಶ್ವ ಕೊಂಕಣಿ ಕೇಂದ್ರ ವತಿಯಿಂದ ನಗರದ ಶಕ್ತಿನಗರದಲ್ಲಿರುವ ವಿಶ್ವ ಕೊಂಕಣಿ ಕೇಂದ್ರದಲ್ಲಿ ಮೇ 17 ಮತ್ತು 18ರಂದು ಎರಡು ದಿನಗಳ ‘ವಿಶ್ವ ಕೊಂಕಣಿ ಸಮಾರೋಹ-2026’ ಆಯೋಜಿಸಲಾಗಿದೆ ಎಂದು ಕೇಂದ್ರದ ಅಧ್ಯಕ್ಷ ಸಿ.ಎ. ನಂದಗೋಪಾಲ ಶೆಣೈ ತಿಳಿಸಿದ್ದಾರೆ. ನಗರದ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 17ರಂದು ಬೆಳಿಗ್ಗೆ ನವದೆಹಲಿಯ ಕೇಂದ್ರ ಸಾಹಿತ್ಯ ಅಕಾಡೆಮಿ ನೇತೃತ್ವದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಗೋವಾದ ಕಲೆ ಮತ್ತು ಸಂಸ್ಕೃತಿ ಪೋಷಕಿ ಹಾಗೂ ಶಿಕ್ಷಣ ತಜ್ಞೆ ಸುಲಕ್ಷಣಾ ಸಾವಂತ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ…

Read More

ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ನಾಲ್ಕು ಮಂದಿ ಕಾರ್ಮೆಲೈಟ್ ಗುರುಗಳಿಗೆ ಪವಿತ್ರ ಗುರುದೀಕ್ಷೆ

ಮಂಗಳೂರಿನ ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ 2026ರ ಮೇ 14ರಂದು ನಡೆದ ಭವ್ಯ ಸಮಾರಂಭದಲ್ಲಿ ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅತೀ ವಂದನೀಯ ಡಾ. ಪೀಟರ್ ಪೌಲ್ ಸಲ್ಡಾನ್ಹಾ ಅವರು ನಾಲ್ವರು ಡಿಸ್ಕಾಲ್ಡ್ ಕಾರ್ಮೆಲೈಟ್ ಡೀಕನ್‌ಗಳಾದ ವಂ. ಆಲ್ವಿನ್ ಡಿಸೋಜಾ, ವಂ. ಲೋಯ್ ಜಾಕ್ಸನ್ ಕ್ರಾಸ್ತಾ, ವಂ. ಎಲ್ಸ್ಟನ್ ಮೊಂತೇರೊ ಮತ್ತು ವಂ.ಹಿಲರಿ ರೊಡ್ರಿಗಸ್ ಅವರಿಗೆ ಪವಿತ್ರ ಗುರುದೀಕ್ಷೆ ನೀಡಿದರು. ಈ ಸಂದರ್ಭದಲ್ಲಿ ಪ್ರವಚನ ನೀಡಿದ ಬಿಷಪ್ ಅವರು, ಗುರುತ್ವವು ಮಾನವಕುಲದ ರಕ್ಷಣೆಗಾಗಿ ತನ್ನನ್ನೇ ಅರ್ಪಿಸಿಕೊಂಡ ದೇವಕುರಿ ಯೇಸುಕ್ರಿಸ್ತರನ್ನು…

Read More

ಸಮಾನತೆ ಹಾಳು ಮಾಡುತ್ತಿದೆ ಕಾಂಗ್ರೆಸ್ ಸರ್ಕಾರದ ಹಿಜಾಬ್ ನೀತಿ: ಭರತ್ ಶೆಟ್ಟಿ ಆರೋಪ

ಮಂಗಳೂರು: ರಾಜ್ಯ ಸರ್ಕಾರ ಶಾಲೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಿರುವ ಕ್ರಮಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ತೀವ್ರ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಈ ನಿರ್ಧಾರ ಶಿಕ್ಷಣ ಕ್ಷೇತ್ರದಲ್ಲಿ ಗೊಂದಲ ಹಾಗೂ ವಿಭಜನೆಗೆ ಕಾರಣ ಎಂದು ಅವರು ಆರೋಪಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, “ಶಾಲೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡುವ ಮೂಲಕ ರಾಜ್ಯ ಸರ್ಕಾರ ಅನಗತ್ಯ ಸಂಘರ್ಷಕ್ಕೆ ಎಡೆ ಮಾಡಿಕೊಟ್ಟಿದೆ. ಇದು ಕಾಂಗ್ರೆಸ್ನ ಮುಸ್ಲಿಂ ತುಷ್ಠೀಕರಣದ…

Read More

ಕುಂದಾಪುರ: ಸಿಡಿಲು ಬಡಿದು ಕಾರ್ಮಿಕ ಮೃತ್ಯು- ಇನ್ನೋರ್ವನಿಗೆ ಗಂಭೀರ‌ ಗಾಯ

ಉಡುಪಿ: ರಾಷ್ಟ್ರೀಯ ಹೆದ್ದಾರಿ-66ರ ಅರಾಟೆ ಸೇತುವೆ ಸಮೀಪ ಗುರುವಾರ ಸಂಜೆ ಸಿಡಿಲು ಬಡಿದು ಕಾರ್ಮಿಕನೊಬ್ಬ ಮೃತಪಟ್ಟ ದಾರುಣ ಘಟನೆ ನಡೆದಿದೆ.ಪಂಜಾಬ್ ಮೂಲದ ಕಾರ್ಮಿಕ ಅಶುತೋಷ್ (35) ಮೃತ ವ್ಯಕ್ತಿ. ಮತ್ತೋರ್ವ ಕಾರ್ಮಿಕ ಲವಜೋತ್ ಸಿಂಗ್ (28) ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅರಾಟೆ ಹಳೆ ಸೇತುವೆಯ ದುರಸ್ತಿ ಕಾಮಗಾರಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದು, ಗುರುವಾರ ಸಂಜೆ ಪಂಜಾಬ್ ಮೂಲದ ಕಾರ್ಮಿಕರು ಕಾಮಗಾರಿಯಲ್ಲಿ ತೊಡಗಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಸಂಜೆ ವೇಳೆಗೆ ತಾಲೂಕಿನಲ್ಲಿ ಗುಡುಗು-ಮಿಂಚು ಸಹಿತ ಭಾರೀ…

Read More

ರಾಜ್ಯದಲ್ಲಿ ನಾಲ್ಕು ದಿನ ಭಾರಿ ಮಳೆ ಸಾಧ್ಯತೆ : ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು,: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ಕೊಡಗು, ಮಂಡ್ಯ, ರಾಮನಗರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಗುಡುಗು, ಮಿಂಚು…

Read More

‘ಯುವಜನರು ತಂತ್ರಜ್ಞಾನ ಬೆಳವಣಿಗೆಗೆ ಸಂಶೋಧನೆಗೆ ಒತ್ತು ನೀಡಬೇಕು”

ಮಂಗಳೂರು,ಭಾರತದಲ್ಲಿ ತಂತ್ರಜ್ಞಾನ ಅತೀ ವೇಗವಾಗಿ ಬೆಳೆಯುತ್ತಿದ್ದು, ಅದರಂತೆ ಸಮಾಜ ಬದಲಾಗಬೇಕಾಗಿದೆ. ದೇಶದ ಅಭಿವೃದ್ಧಿಗೆ ತಂತ್ರಜ್ಞಾನ ಬೆಳೆವಣಿಗೆ ಹೆಚ್ಚು ಪ್ರಾಮುಖ್ಯತೆ ವಹಿಸಿದ್ದು ಯುವಜನರು ಇನ್ನಷ್ಟು ತಂತ್ರಜ್ಞಾನದಲ್ಲಿ ಸಂಶೋಧನೆ ಮಾಡಿ ಹೊಸ ಆವಿಷ್ಕಾರ ಮಾಡಬೇಕಾಗಿದೆ ಎಂದು ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ಉಪ ನಿರ್ದೇಶಕ ಉಲ್ಲಾಸ್ ಕೆ.ಟಿ ಹೇಳಿದರು. ಅವರು ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ಮೇರಾ ಯುವ ಭಾರತ್ ದಕ್ಷಿಣ ಕನ್ನಡ, ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಪುತ್ತೂರು, ರಾಷ್ಟ್ರೀಯ ಸೇವಾ ಯೋಜನೆ ಮತ್ತು…

Read More

ವಲ್ಲಿ ವಗ್ಗ ಸಂಬಂದಗಳನ್ನು ಬೆಸೆಯುವ ದರ್ಜಿಯಂತೆ – ಮೆಲ್ವಿನ್ ರೊಡ್ರಿಗಸ್

“ನಾನು ಕೊಂಕಣಿಯಲ್ಲಿ ಬರೆಯಲು ಆರಂಭಿಸುವಾಗಲೂ ವಲ್ಲಿ ವಗ್ಗ ಬರೆಯುತ್ತಿದ್ದರು, ಈಗಲೂ ಸಾತತ್ಯದಿಂದ ಬರೆಯುತ್ತಿದ್ದಾರೆ. ಕಿರಿಯರಾದ ನಮಗೆ ವಲ್ಲಿ ವಗ್ಗ ದೊಡ್ಡಣ್ಣನಂತೆ ಮಾತ್ರವಲ್ಲ, ಅಭಿಪ್ರಾಯ ಭೇದಗಳಿರುವ ಕೊಂಕಣಿ ಲೇಖಕರನ್ನು ಒಗ್ಗೂಡಿಸಿ, ಸಂಬಂದಗಳನ್ನು ದಾರದಲ್ಲಿ ಪೋಣಿಸುವ ದರ್ಜಿಯಂತೆ. ಕೊಂಕಣಿ ಸಾಹಿತ್ಯ ಮತ್ತು ಸಂಘಟನೆಗೆ ಅವರ ಸೇವೆ ಸ್ತುತರ್ಹ್ಯ. ಆರು ದಶಕಗಳಿಂದ ಸತತವಾಗಿ ಸಾಹಿತ್ಯ ರಚನೆಯಲ್ಲಿ ತೊಡಗಿರುವ ಅವರ ಸಾಹಿತ್ಯವನ್ನು ಸಂಭ್ರಮಿಸುವುದೇ ಅವರಿಗೆ ನಾವು ಸಲ್ಲಿಸಬಹುದಾದ ಶ್ರೇಷ್ಠ ಗೌರವ” ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ, ಹೊಸ ದೆಹಲಿಯ ಕಾರ್ಯಕಾರಿ ಸಮಿತಿಯ ಸದಸ್ಯರೂ,…

Read More
error: Content is protected !!