ವಲ್ಲಿ ವಗ್ಗ ಸಂಬಂದಗಳನ್ನು ಬೆಸೆಯುವ ದರ್ಜಿಯಂತೆ – ಮೆಲ್ವಿನ್ ರೊಡ್ರಿಗಸ್

“ನಾನು ಕೊಂಕಣಿಯಲ್ಲಿ ಬರೆಯಲು ಆರಂಭಿಸುವಾಗಲೂ ವಲ್ಲಿ ವಗ್ಗ ಬರೆಯುತ್ತಿದ್ದರು, ಈಗಲೂ ಸಾತತ್ಯದಿಂದ ಬರೆಯುತ್ತಿದ್ದಾರೆ. ಕಿರಿಯರಾದ ನಮಗೆ ವಲ್ಲಿ ವಗ್ಗ ದೊಡ್ಡಣ್ಣನಂತೆ ಮಾತ್ರವಲ್ಲ, ಅಭಿಪ್ರಾಯ ಭೇದಗಳಿರುವ ಕೊಂಕಣಿ ಲೇಖಕರನ್ನು ಒಗ್ಗೂಡಿಸಿ, ಸಂಬಂದಗಳನ್ನು ದಾರದಲ್ಲಿ ಪೋಣಿಸುವ ದರ್ಜಿಯಂತೆ. ಕೊಂಕಣಿ ಸಾಹಿತ್ಯ ಮತ್ತು ಸಂಘಟನೆಗೆ ಅವರ ಸೇವೆ ಸ್ತುತರ್ಹ್ಯ. ಆರು ದಶಕಗಳಿಂದ ಸತತವಾಗಿ ಸಾಹಿತ್ಯ ರಚನೆಯಲ್ಲಿ ತೊಡಗಿರುವ ಅವರ ಸಾಹಿತ್ಯವನ್ನು ಸಂಭ್ರಮಿಸುವುದೇ ಅವರಿಗೆ ನಾವು ಸಲ್ಲಿಸಬಹುದಾದ ಶ್ರೇಷ್ಠ ಗೌರವ” ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ, ಹೊಸ ದೆಹಲಿಯ ಕಾರ್ಯಕಾರಿ ಸಮಿತಿಯ ಸದಸ್ಯರೂ,…

Read More

NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಐವರು ಆರೋಪಿಗಳಿಗೆ ಮತ್ತೆ 7 ದಿನ ಸಿಬಿಐ ಕಸ್ಟಡಿ

ಹೊಸದಿಲ್ಲಿ, NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿರುವ ಐವರು ಆರೋಪಿಗಳನ್ನು ಮತ್ತೆ ಏಳು ದಿನಗಳ ಕಾಲ ಸಿಬಿಐ ವಶಕ್ಕೆ ಒಪ್ಪಿಸಿ ದಿಲ್ಲಿಯ ವಿಶೇಷ ನ್ಯಾಯಾಲಯ ಗುರುವಾರ ಆದೇಶ ನೀಡಿದೆ. ನಾಸಿಕ್‌ನ ಶುಭಂ ಖೈರ್ನಾರ್, ಜೈಪುರದ ಮಂಗಿಲಾಲ್ ಬಿವಾಲ್, ವಿಕಾಸ್ ಬಿವಾಲ್, ದಿನೇಶ್ ಬಿವಾಲ್ ಹಾಗೂ ಗುರುಗ್ರಾಮದ ಯಶ್ ಯಾದವ್ ಬಂಧಿತ ಆರೋಪಿಗಳಾಗಿದ್ದಾರೆ. ಮೇ 3ರಂದು ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ (ಎನ್‌ಟಿಎ) ನಡೆಸಿದ NEET ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ…

Read More

ತೈವಾನ್ ವಿಚಾರದಲ್ಲಿ ಅಮೆರಿಕಕ್ಕೆ ಚೀನಾ ಖಡಕ್ ಎಚ್ಚರಿಕೆ: ‘ಸಂಘರ್ಷಕ್ಕೆ ಕಾರಣವಾಗಬಹುದು’ ಎಂದ ಕ್ಸಿ ಜಿನ್‌ಪಿಂಗ್

ಬೀಜಿಂಗ್: ತೈವಾನ್ ಸರಿಯಾಗಿ ನಿರ್ವಹಿಸದಿದ್ದರೆ ಅಮೆರಿಕ ಮತ್ತು ಚೀನಾ ನಡುವೆ ಸಂಘರ್ಷ ಉಂಟಾಗಬಹುದು ಎಂದು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಬೀಜಿಂಗ್‌ನಲ್ಲಿ ನಡೆದ ಮಹತ್ವದ ದ್ವಿಪಕ್ಷೀಯ ಶೃಂಗಸಭೆಯಲ್ಲಿ ಮಾತನಾಡಿದ ಕ್ಸಿ, ತೈವಾನ್ ವಿಷಯವು ಅಮೆರಿಕಾ–ಚೀನಾ ಸಂಬಂಧಗಳಲ್ಲೇ ಅತ್ಯಂತ ಹೆಚ್ಚು ಸೂಕ್ಷ್ಮ ಹಾಗೂ ಪ್ರಮುಖ ವಿಚಾರವಾಗಿದೆ ಎಂದು ಹೇಳಿದರು. “ತೈವಾನ್ ವಿಚಾರವನ್ನು ತಪ್ಪಾಗಿ ನಿರ್ವಹಿಸಿದರೆ ಉಭಯ ದೇಶಗಳ ನಡುವೆ ಸಂಘರ್ಷ ಉಂಟಾಗಬಹುದು. ಪರಿಸ್ಥಿತಿಗೆ ತಳ್ಳಬಹುದು” ಎಂದು…

Read More

ಆರಂಭದ ಮಳೆ

ಪ್ರಕೃತಿಯ ಮರುಜನ್ಮ ಮತ್ತು ವೈಜ್ಞಾನಿಕ ಪಲ್ಲಟಗಳ ವಿಶ್ಲೇಷಣೆ ಬೇಸಿಗೆಯ ಸುಡುವ ತಾಪಕ್ಕೆ ಬೆಂದು ಕೆಂಪಾಗಿರುವ ಭೂಮಿಯ ಒಡಲನ್ನು ತಣಿಸಲು ಬರುವ ಮೊದಲ ಮಳೆ ಕೇವಲ ಹನಿಗಳ ಸಂಗಮವಲ್ಲ; ಅದು ವಾತಾವರಣದ ಅನಂತ ಆಕಾಶದಲ್ಲಿ ನಡೆಯುವ ಭೌತಿಕ ಸಂಘರ್ಷ ಮತ್ತು ಮಣ್ಣಿನ ಅಂತರಾಳದಲ್ಲಿ ಘಟಿಸುವ ರಾಸಾಯನಿಕ ಬದಲಾವಣೆಗಳ ಅದ್ಭುತ ಫಲಿತಾಂಶ. ಕಾದ ಕಾವಲಿಯಂತಾದ ನೆಲದ ಮೇಲೆ ಮೇಘಮಾಲೆಯ ಮೊದಲ ಸ್ಪರ್ಶವಾದಾಗ ಏಳುವ ಆ ಹಬೆ, ಹೊಸ ಮನ್ವಂತರಕ್ಕೆ ನಾಂದಿ ಹಾಡುತ್ತದೆ. ಈ ಆರಂಭದ ಮಳೆಯು ಸೃಷ್ಟಿಯ ಜೈವಿಕ ಗಡಿಯಾರವಿದ್ದಂತೆ;…

Read More

“ಒಪ್ಪಂದ ಇಲ್ಲವೇ ವಿನಾಶ” : ಇರಾನ್‌ಗೆ ಟ್ರಂಪ್ ಎಚ್ಚರಿಕೆ

ಬೀಜಿಂಗ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ಗೆ ಮತ್ತೊಮ್ಮೆ ಕಠಿಣ ಎಚ್ಚರಿಕೆ ನೀಡಿದ್ದು, “ಒಪ್ಪಂದ ಮಾಡಿಕೊಳ್ಳಿ, ಇಲ್ಲದಿದ್ದರೆ ಸಂಪೂರ್ಣ ವಿನಾಶ ಎದುರಿಸಿ” ಎಂದು ಹೇಳಿದ್ದಾರೆ. ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರೊಂದಿಗೆ ನಡೆದ ಮಾತುಕತೆ ಬಳಿಕ ಫ್ಯಾಕ್ಸ್ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಟ್ರಂಪ್ ಈ ಹೇಳಿಕೆಯನ್ನು ನೀಡಿದ್ದಾರೆ. ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನ ಪರಿಸ್ಥಿತಿಯ ನಡುವೆ ಅವರು ಮಾತನಾಡಿದರು, ಇರಾನ್‌ಗೆ ಅಣ್ವಸ್ತ್ರ ಅಭಿವೃದ್ಧಿಗೆ ಅಮೆರಿಕ ಅವಕಾಶ ನೀಡುವುದಿಲ್ಲ ಸ್ಪಷ್ಟಪಡಿಸಿದರು. “ಇರಾನ್ ಅಂತ್ಯದ ಹಂತದಲ್ಲಿದೆ. ಒಪ್ಪಂದ ಮಾಡಿಕೊಳ್ಳಬಹುದು ಅಥವಾ…

Read More

ಇಂಧನ ದರ ಶಾಕ್: ಬೆಂಗಳೂರಿನಲ್ಲಿ ಪೆಟ್ರೋಲ್ ₹106 ದಾಟಿತು, ಡೀಸೆಲ್ ದರದಲ್ಲೂ ಭಾರೀ ಏರಿಕೆ

ಬೆಂಗಳೂರು, ಮೇ 15: ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಪ್ರತಿ ಲೀಟರ್‌ಗೆ ಸುಮಾರು ₹3ರಷ್ಟು ಹೆಚ್ಚಳ ಮಾಡಲಾಗಿದೆ. ತೈಲ ಕಂಪನಿಗಳು ಶುಕ್ರವಾರ ಬೆಳಗ್ಗೆ ಹೊಸ ದರಗಳನ್ನು ಪ್ರಕಟಿಸಿದ್ದು, ತಕ್ಷಣದಿಂದಲೇ ಜಾರಿಗೆ ಬಂದಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ ₹94.77ರಿಂದ ₹97.77ಕ್ಕೆ ಏರಿಕೆಯಾದರೆ, ಡೀಸೆಲ್ ದರ ₹87.67ರಿಂದ ₹90.67ಕ್ಕೆ ಹೆಚ್ಚಳವಾಗಿದೆ.ಇನ್ನು ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರ್‌ಗೆ ₹3.27 ಏರಿಕೆಯಾಗಿದ್ದು, ಡೀಸೆಲ್ ದರ ಲೀಟರ್‌ಗೆ ₹3.12 ಹೆಚ್ಚಳವಾಗಿದೆ. ಈ ಹಿಂದೆ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ ₹102.90…

Read More

2026-27 ಶೈಕ್ಷಣಿಕ ಸಾಲು: ಬಂಟ್ವಾಳದಲ್ಲಿ ‘ದಾಖಲಾತಿ ಅಂದೋಲನ’ ಆರಂಭ — ಮೇ 15ರಿಂದ ಹಂತ ಹಂತವಾಗಿ ಅಭಿಯಾನ

ಬಂಟ್ವಾಳ: 2026-2027 ನೇ ಶೈಕ್ಷಣಿಕ ಸಾಲಿಗೆ ಮಕ್ಕಳ ದಾಖಲಾತಿಯನ್ನು ಹೆಚ್ಚಿಸಲು ಮಕ್ಕಳ ದಾಖಲಾತಿ ಜಾಗೃತಿ ಅಭಿಯಾನ ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಂಟ್ವಾಳ ತಾಲೂಕು ಶಿಕ್ಷಣಾಧಿಕಾರಿ ಮಾಲತಿ ಹೇಳಿದರು. ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ವಲಯದಲ್ಲಿ ಬ್ಲಾಕ್ ಮಟ್ಟ, ಹೋಬಳಿ ಮಟ್ಟ ಹಾಗೂ ಕ್ಲಸ್ಟರ್ ಮಟ್ಟ ಎಂಬ ಮೂರು ವಿಭಾಗದಲ್ಲಿ ದಾಖಲಾತಿಯನ್ನು ಕೈಗೊಂಡಿದ್ದು, ಮೇ.15 ರಂದು ಬ್ಲಾಕ್ ಮಟ್ಟದ, ಮೇ. 18 ರಂದು ಹೋಬಳಿ ಮಟ್ಟ ಹಾಗೂ ಮೇ. 20 ರಂದು…

Read More

ಸರಕಾರಿ ಶಾಲೆಗಳ ದಾಖಲಾತಿ ಹೆಚ್ಚಿಸಲು ಪುತ್ತೂರಿನಲ್ಲಿ ಆಂದೋಲನ

ಪುತ್ತೂರು: ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿಯನ್ನು ಹೆಚ್ಚಿಸುವ ದೃಷ್ಟಿಯಿಂದ ಪುತ್ತೂರು ತಾಲೂಕು ಮಟ್ಟದಲ್ಲಿ ದಾಖಲಾತಿ ಆಂದೋಲನವನ್ನು ಆಯೋಜಿಸಲಾಗುತ್ತಿದ್ದು, ತಾಲೂಕಿನಲ್ಲಿ ಕಳೆದ ವರ್ಷಕ್ಕಿಂತ 5 ಶೇ. ಹೆಚ್ಚು ದಾಖಲಾತಿಯ ಗುರಿ ಹೊಂದಲಾಗಿದೆ ಎಂದು ಪುತ್ತೂರು ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ವಿಷ್ಣುಪ್ರಸಾದ್ ಸಿ. ತಿಳಿಸಿದರು. ಅವರು ಗುರುವಾರ ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಶಿಕ್ಷಣದಿಂದ ಯಾವುದೇ ಮಗು ವಂಚಿತವಾಗಬಾರದು ಹಾಗೂ ಸರಕಾರಿ ಶಾಲೆಗಳಲ್ಲಿ ದಾಖಲಾತಿಯನ್ನು ಹೆಚ್ಚಿಸುವ ದೃಷ್ಟಿಯಿಂದ ಈ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಸರಕಾರಿ ಶಾಲೆಗಳಲ್ಲಿ ಸಿಗುವ ಗುಣಮಟ್ಟದ ಶಿಕ್ಷಣದ ಜತೆಗೆ ವಿವಿಧ…

Read More

ಮೋದಿ ಮಿತವ್ಯಯ ಕರೆಗೆ ಸ್ಪಂದನೆ: ಬಸ್‌ನಲ್ಲಿ ಪುತ್ತೂರಿಗೆ ಬಂದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆದ ಯುದ್ಧದ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ನೀಡಿರುವ ಮಿತವ್ಯಯ ಕರೆ ಪಾಲನೆ ಮಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಮೇ.14ರಂದು ಸಾರಿಗೆ ಬಸ್‌ನಲ್ಲಿ ಪುತ್ತೂರಿಗೆ ಆಗಮಿಸಿದರು. ಪುತ್ತೂರು ಬಿಜೆಪಿ ನಗರ ಮಂಡಲದ ಪ್ರಧಾನ ಕಾರ್ಯದರ್ಶಿಯಾಗಿರುವ ಮಣಿಕಂಠ ಅವರ ವಿವಾಹದ ಅತಿಥಿ ಸತ್ಕಾರಕ್ಕೆ ಆಗಮಿಸಿದ ಅವರು ಮಂಗಳೂರು ಬಿಜೈ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಸಾರಿಗೆ ಬಸ್‌ನಲ್ಲಿ ಪದಾಧಿಕಾರಿಗಳು ಸಾಮೂಹಿಕವಾಗಿ ಪುತ್ತೂರಿಗೆ ಆಗಮಿಸಿದ್ದಾರೆ. ಬಸ್ ನಿಲ್ದಾಣದಿಂದ ಆಟೋ ರಿಕ್ಷಾದಲ್ಲಿ ಅತಿಥಿ…

Read More

ಮಂಜೇಶ್ವರ ಗೋವಿಂದ ಪೈ-ಕೆದಂಬಾಡಿ ರಸ್ತೆಯಲ್ಲಿ ಗುಂಡಿ, ನೀರು ನಿಂತು ಜನರ ಆಕ್ರೋಶ

​ಮಂಜೇಶ್ವರ: ರಾಜ್ಯ ಸರ್ಕಾರದ ಕಿಫ್ಬಿ ಯೋಜನೆಯಡಿ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ಮಂಜೇಶ್ವರ ಗೋವಿಂದ ಪೈ – ಕೆದಂಬಾಡಿ ರಸ್ತೆ ಕಾಮಗಾರಿ ಮುಗಿದ ಬೆನ್ನಲ್ಲೇ ಅವ್ಯವಸ್ಥೆಯ ತಾಣವಾಗಿ ಮಾರ್ಪಟ್ಟಿದೆ. 2027ರ ತನಕ ರಸ್ತೆಯ ನಿರ್ವಹಣಾ ವಾರಂಟಿ ಅವಧಿ ಇದ್ದರೂ, ಗುತ್ತಿಗೆದಾರನ ಬೇಜವಾಬ್ದಾರಿತನ ಹಾಗೂ ಅಧಿಕಾರಿಗಳ ಮೌನ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕಿಫ್ಬಿ ಫಂಡ್‌ನಿಂದ ಮಂಜೂರಾದ 5 ಕೋಟಿ 24 ಲಕ್ಷ ರೂ. ವೆಚ್ಚದಲ್ಲಿ ಈ ರಸ್ತೆಯ ಕಾಮಗಾರಿಯು 2024ರಲ್ಲಿ ಪೂರ್ಣಗೊಂಡಿತ್ತು. ನಿಯಮದಂತೆ ಸತತ ಮೂರು ವರ್ಷಗಳ ಕಾಲ…

Read More
error: Content is protected !!